ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Posted by Vidyamaana on 2023-03-09 07:37:57 |

Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

ಪುತ್ತೂರು: ರಾಜ್ಯ ಸರಕಾರದ 2018ನೇ ಸಾಲಿನ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿಗೆ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ ಡಾ. ಯು.ಪಿ. ಶಿವಾನಂದ್ ಆಯ್ಕೆಯಾಗಿದ್ದಾರೆ.

ಇವರಿಗೆ ಮಾರ್ಚ್ 13ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‌.

ವಿವಿಧ ಆಂದೋಲನಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಡಾ. ಯು.ಪಿ. ಶಿವಾನಂದ್ ಅವರು, ಕೃಷಿ ಜಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಶಿಕ್ಷಣ ಮತ್ತು ಉದ್ಯೋಗ ಮಾಹಿತಿ ಕೇಂದ್ರವನ್ನು ಆರಂಭಿಸಿರುವುದಲ್ಲದೇ, ಇಂತಹ ಹಲವು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ. ಬಲಾತ್ಕಾರದ ಬಂದ್ ವಿರುದ್ಧದ ಹೋರಾಟ, ಭ್ರಷ್ಟಾಚಾರ ವಿರುದ್ಧದ ಹೋರಾಟ, ವಾರಾಂತ್ಯ ಕರ್ಫ್ಯೂ, ಶುದ್ಧ ಕುಡಿಯುವ ನೀರಿಗಾಗಿ ಅಭಿಯಾನ ಮೊದಲಾದ ಹೋರಾಟಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದು, ರಾಜ್ಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರವಾಗಿದ್ದಾರೆ.

ಅನಂತಪುರ ದೇವಸ್ಥಾನದ ಚೇರ್‌ಮ್ಯಾನ್‌ ಆಗಿ ಕುಶಾಲಪ್ಪ ಪೂಜಾರಿ ಕಣ್ಣೂರು ಆಯ್ಕೆ

Posted by Vidyamaana on 2024-01-18 21:11:28 |

Share: | | | | |


ಅನಂತಪುರ ದೇವಸ್ಥಾನದ ಚೇರ್‌ಮ್ಯಾನ್‌ ಆಗಿ ಕುಶಾಲಪ್ಪ ಪೂಜಾರಿ ಕಣ್ಣೂರು ಆಯ್ಕೆ

ಕಾಸರಗೋಡು: ಇಲ್ಲಿನ ಕುಂಬಳೆ ಇತಿಹಾಸ ಪ್ರಸಿದ್ಧ ಕೇರಳ ಮಲಬಾರ್‌ ದೇವಸ್ವಾಂ ಬೋರ್ಡ್‌ ಅಧೀನದಲ್ಲಿರುವ  ಅನಂತಪುರ ಅನಂತಪದ್ಮನಾಭ ದೇವಸ್ಥಾನದ 2024-26ರ ಸಾಲಿನ ನೂತನ ಆಡಳಿತ ಮಂಡಳಿಯ ಆಯ್ಕೆ ನಡೆದಿದ್ದು ನೂತನ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಪೂಜಾರಿ ಕಣ್ಣೂರುರವರು ಆಯ್ಕೆಯಾಗಿದ್ದಾರೆ.

ಟ್ರಸ್ಟಿಗಳಾಗಿ ಪ್ರಸಾದ್ ಕೃಷ್ಣನಗರ ಕುಂಬಳೆ, ಜಯಪ್ರಕಾಶ್‌ ಶೆಟ್ಟಿ ನಾರಾಯಣಮಂಗಳಂ, ಸತೀಶ್‌ ಕುಂಬಳೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ನಿರ್ವಹಾಣಾಧಿಕಾರಿ ಸುನಿಲ್‌ ಕುಮಾರ್‌ ಉಪಸ್ಥಿತರಿದ್ದರು.

ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

Posted by Vidyamaana on 2023-05-13 17:05:46 |

Share: | | | | |


ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.

ಬಂಟ್ವಾಳ : ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮರ ಸಾಗಾಟ : ಸೊತ್ತುಗಳು ಪೊಲೀಸ್ ವಶ..!

Posted by Vidyamaana on 2023-09-14 16:29:06 |

Share: | | | | |


ಬಂಟ್ವಾಳ : ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮರ ಸಾಗಾಟ : ಸೊತ್ತುಗಳು ಪೊಲೀಸ್ ವಶ..!

ಬಂಟ್ವಾಳ : ಅಕ್ರಮ ಮರ-ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ವಲಯ ಅರಣ್ಯಾಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.


ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ಸಾಣೂರು ಎರ್ಮಾಳ್ ಪದವು ರಸ್ತೆಯ ಪಟ್ಟಾಜೆ ಎಂಬಲ್ಲಿ ಅಕ್ರಮವಾಗಿ ಕಾಡು ಜಾತಿಯ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಆರೋಪಿ ಸಹಿತ ವಾಹನ, ಮರದ ದಿಮ್ಮಿ ಮತ್ತು ಅನೇಕ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಅಂದಾಜು 3 ಲಕ್ಷ ಆಗಿದೆ ಎಂದು ತಿಳಿದು ಬಂದಿದೆ.


ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್. ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಇವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್ ಬಳೆಗಾರ ಅವರು ನಡೆಸಲಿದ್ದಾರೆ.


ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳೆಗಾರ, ಉಪವಲಯ ಅರಣ್ಯಾಧಿಕಾರಿ ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ ,ಶೋಭಿತ್ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಪಾಲ್ಗೊಂಡಿದ್ದರು.

ಡೆಲ್ಲಿಗೆ ಬರ್ಲಿಕ್ಕೆ ಹೇಳಿ ಈಶ್ವರಪ್ಪನವರಿಗೆ ಸಿಗದ ಶಾ

Posted by Vidyamaana on 2024-04-04 12:02:54 |

Share: | | | | |


ಡೆಲ್ಲಿಗೆ ಬರ್ಲಿಕ್ಕೆ ಹೇಳಿ ಈಶ್ವರಪ್ಪನವರಿಗೆ ಸಿಗದ ಶಾ

ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ.ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ ಈಶ್ವರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 6 10ರ ಫ್ಲೈಟ್ ಗೆ ಕೆ ಎಸ್ ಈಶ್ವರಪ್ಪ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಇವಳೆ ಸುದ್ದಿಗಾರನಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಸೋಲಲಿ ಎಂಬ ಪರೀಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ತಿಳಿಸಿದರು.

ಬೆಂಗಳೂರಿನಿಂದ ಬಳ್ಳಾರಿಗೆ ಅಜ್ಜಿ ಶವ ಕೊಂಡೊಯ್ಯುತ್ತಿದ್ದ ಕಾರು ಪಲ್ಟಿ: ಮೂವರು ಮೊಮ್ಮಕ್ಕಳ ಸಾವು

Posted by Vidyamaana on 2024-01-20 07:18:43 |

Share: | | | | |


ಬೆಂಗಳೂರಿನಿಂದ ಬಳ್ಳಾರಿಗೆ ಅಜ್ಜಿ ಶವ ಕೊಂಡೊಯ್ಯುತ್ತಿದ್ದ ಕಾರು ಪಲ್ಟಿ: ಮೂವರು ಮೊಮ್ಮಕ್ಕಳ ಸಾವು

ಚಿತ್ರದುರ್ಗ : ಅಜ್ಜಿಗೆ ಅನಾರೋಗ್ಯವೆಂದು ಚಿಕಿತ್ಸೆ ಕೊಡಿಸುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಮೃತ ದೇಹವನ್ನು ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಕೊಂಡೊಯ್ಯುವಾಗ ಚಿತ್ರದುರ್ಗದ ಬಳಿ ಕಾರಿನ ಟೈರ್ ಬ್ಲ್ಯಾಸ್ಟ್‌ ಆಗಿದ್ದು, ವೇಗದಲ್ಲಿದ್ದ ಕಾರು ಪಲ್ಟಿಯಾಗಿ ಅಜ್ಜಿಯ ಮೂವರು ಮೊಮ್ಮಕ್ಕಳು ಕೂಡ ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.ಅಜ್ಜಿಯ ಶವ ಕೊಂಡೊಯ್ಯುವಾಗ ಟೈಯರ್ ಬ್ಲಾಸ್ಟ್ ಕಾರು ಪಲ್ಟಿ, 3 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗದ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರು ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಅಜ್ಜಿಯ ಶವ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ಅಜ್ಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನು ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಉಳಿದ 3 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ರಾಂಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪಿಎಸ್‌ಐ ಪರಶುರಾಮ್ ಲಮಾಣಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹಗಳನ್ನು ಕೂಡ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಟೈರ್ ಬ್ಲಾಸ್ಟ್‌ ಆಗಿದ್ದೇ ಕಾರು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಮೃತರೆಲ್ಲರೂ‌ ಸಿರುಗುಪ್ಪ ಮೂಲದವರಾಗಿದ್ದಾರೆ. ಸುರೇಶ್ (40) , ಮಲ್ಲಿ (25), ಭೂಮಿಕ (9) ಮೃತ ದುರ್ದೈವಿಗಳು. ಇನ್ನು ನಾಗಮ್ಮ (31), ತಾಯಮ್ಮ (56), ಧನರಾಜ್ (39) ಹಾಗೂ ಚಾಲಕ ಶಿವು (26) ಗಂಭೀರ ಗಾಯಾಳುಗಳು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಮೃತ ದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಇನ್ನು ಅಪಘಾತವಾದ ಸ್ಥಳದಲ್ಲಿ ಸಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

Recent News


Leave a Comment: