ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಬಹರೈನ್ ನಲ್ಲಿ ಅಪಘಾತ: ಭಾರತ ಮೂಲದ ಐವರು ಮೃತ್ಯು

Posted by Vidyamaana on 2023-09-03 15:23:02 |

Share: | | | | |


ಬಹರೈನ್ ನಲ್ಲಿ ಅಪಘಾತ: ಭಾರತ ಮೂಲದ ಐವರು ಮೃತ್ಯು

ಮನಾಮಾ: ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ ನಿವಾಸಿಗಳು ಹಾಗೂ ತೆಲಂಗಾಣದ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.


ವಿ.ಪಿ.ಮಹೇಶ್ (33), ಮಲಪ್ಪುರಂನ ನಿವಾಸಿ ಜಗತ್ ವಾಸುದೇವನ್ (26), ತ್ರಿಶೂರ್ ನ ಚಾಲಕುಡಿಯ ಜಾರ್ಜ್ (28), ಕಣ್ಣೂರಿನ ಅಖಿಲ್ ರಘು (28), ತೆಲಂಗಾಣದ ಸುಮನ್ ರಾಜಣ್ಣ (27) ಮೃತರು ಎಂದು ಗುರುತಿಸಲಾಗಿದೆ.


ಸಲ್ಮಾಬಾದ್ ನ ಗಲ್ಫ್ ಏರ್ ಕ್ಲಬ್ ನಲ್ಲಿ ಮುಹರಕ್ ಅಲ್ ಹಿಲಾಲ್ ಆಸ್ಪತ್ರೆ ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಪಾಲ್ಗೊಂಡ ನಂತರ ಐವರು ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.


ಐವರು ಆಸ್ಪತ್ರೆ ಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು‌‌ ಬಂದಿದೆ.

ಹರೀಶ್ ಪೂಂಜಾ ಇನ್ನೂ ಬಚ್ಚಾ ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ - ಸಿಎಂ ಸಿದ್ದರಾಮಯ್ಯ

Posted by Vidyamaana on 2023-10-28 15:33:11 |

Share: | | | | |


ಹರೀಶ್ ಪೂಂಜಾ ಇನ್ನೂ ಬಚ್ಚಾ ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ - ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಸಿದ್ದರಾಮಯ್ಯರ ಬಗ್ಗೆ ಹರೀಶ್ ಪೂಂಜಾ ಫೇಸ್‌ಬುಕ್‌ ಪೇಜ್ ನಲ್ಲಿ ಕಲೆಕ್ಷನ್ ಮಾಸ್ಟರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಆಗಮಿಸಿದ್ದ ಸಿ.ಎಂ ಸಿದ್ದರಾಮಯ್ಯ ಹರೀಶ್ ಪೂಂಜಾ ಅವರನ್ನು ಬಚ್ಚಾ ಎಂದು ಕರೆದಿದ್ದಾರೆ‌.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ, ನಾನು 83ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನ ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದಿದ್ದಾರೆ

ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

Posted by Vidyamaana on 2024-06-22 14:26:00 |

Share: | | | | |


ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಮಂಗಳೂರು : ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ ಮಂದಿಗೆ ಚಾಕು ತೋರಿಸಿ ಬೆದರಿಸಿ ಬಳಿಕ ಮನೆಮಂದಿಯನ್ನು ಕಟ್ಟಿಹಾಕಿ ಮನೆಯಲ್ಲಿದ್ದ ನಗ ನಗದು ದೋಚಿ ಪರಾರಿಯಾಗಿದ್ದಾರೆ,

ಬೆಳ್ತಂಗಡಿ : ಚಾರ್ಮಾಡಿ ಅಕ್ರಮ ಮರಳು ಸಾಗಾಟ

Posted by Vidyamaana on 2023-07-16 16:31:27 |

Share: | | | | |


ಬೆಳ್ತಂಗಡಿ : ಚಾರ್ಮಾಡಿ ಅಕ್ರಮ ಮರಳು ಸಾಗಾಟ

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.


ಚಾರ್ಮಾಡಿಯಲ್ಲಿ  ವಾಹನಗಳನ್ನು  ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ ಸುಲ್ತಾನ್ ಎಂಬ ಹೆಸರಿನ ಲಾರಿಯೊಂದನ್ನು ನಿಲ್ಲಿಸಿ ತಪಾಸಣೆ ಮಾಡುವಾಗ ಅದರಲ್ಲಿ ಯಾವುದೇ ಸರಕಾರಕ್ಕೆ ಉಪ ಖನಜ ಪಾವತಿ ಮಾಡದೆ ಪರವಾನಿಗೆ ಪಡೆಯದೆ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.


ಲಾರಿ ಚಾಲಕ ಅನ್ಸರ್ ಎಂಬಾತನಲ್ಲಿ ಮರಳು ಸಾಗಾಟದ ಪರವಾನಿಗೆ ಹಾಗೂ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳಿಲ್ಲ ಎಂದಿದ್ದು ಅದರಂತೆ ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು  ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.


ತಪಾಸಣೆ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ , ಸಿಬ್ಬಂದಿಗಳಾದ ಪ್ರಶಾಂತ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಗೆ ಕಿರುಕುಳ

Posted by Vidyamaana on 2023-06-12 10:15:19 |

Share: | | | | |


ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಗೆ ಕಿರುಕುಳ

ಬೆಂಗಳೂರು :ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರು: ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.ಬೆಂಗಳೂರು ನಗರದ ಚಿಕ್ಕಪಟೇಟೆಯಲ್ಲಿ ವ್ಯಾಪ್ತಿಯಲ್ಲಿ ನಡೆಯುವ ಸಂಡೇಬಜಾರ್ ನಲ್ಲಿ ಈ ಘಟನೆ ನಡೆದಿದ್ದು, ವಿದೇಶಿ ಯೂಟ್ಯೂಬರ್​ ಮೇಲೆ ವ್ಯಾಪಾರಿಯೊಬ್ಬರು ಹಲ್ಲೆ ಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೈರಲ್ ವಿಡಿಯೋದಲ್ಲಿ ಉತ್ಸಾಹದಿಂದಲೇ ನೆದರ್ಲ್ಯಾಂಡ್​ನ ಪೆಡ್ರೋ ಮೊಟಾ ಎಂಬ ವ್ಯಕ್ತಿ ವಿಡಿಯೋ ಮಾಡುತ್ತಿದ್ದ. ಈ ವೇಳೆ ತಾನ್ನು ಇಷ್ಟು ದೊಡ್ಡ ಮಾರುಕಟ್ಟೆಯಲ್ಲಿ ತಾನು ಏನಾದರೂ ಖರೀದಿ ಮಾಡಿಯೇ ತೀರುತ್ತೇನೆ ಎಂದು ಹೇಳುವಾಗಲೇ ಸ್ಥಳೀಯ ವ್ಯಾಪಾರಿಯೋರ್ವ ಆತನ ಕೈ ಹಿಡಿದು ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಅಗ್ರಹಿಸಿದ್ದಾನೆ.ಆದರೆ ಆತನ ಮಾತು ಅರ್ಥವಾಗದ ವಿದೇಶಿ ಯೂಟ್ಯೂಬರ್ ಅಲ್ಲಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ.


ಆದರೂ ಆತನನ್ನು ಆ ವ್ಯಾಪಾರಿ ಮತ್ತು ಇತರರು ಅಟ್ಟಾಡಿಸಿದ್ದಾರೆ. ಆದರೆ ಕೆಲವೇ ಕ್ಷಣಗಳ ಅಂತರದಲ್ಲಿ ವಿದೇಶಿ ಯೂಟ್ಯೂಬರ್ ಪಾರಾಗಿದ್ದಾನೆ. ಈ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಗಮನಕ್ಕೂ ತರಲಾಗಿದೆವಿಡಿಯೋದಲ್ಲಿ ಏನಿದೆ..?


ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ವಿದೇಶಿ ಪ್ರಜೆ ಲೈವ್ ವಿಡಿಯೋ ಮಾಡುತ್ತ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಆತನ ವಿರುದ್ಧ ದಿಕ್ಕಿನಿಂದ ಬಂದ ಓರ್ವ ವ್ಯಕ್ತಿ ಆತನನ್ನು ತಡೆದು ನಿಲ್ಲಿಸಿದ್ದಾನೆ. ಆಗ ವಿದೇಶಿ ಪ್ರಜೆ ‘ನಮಸ್ತೆ, ನಮಸ್ಕಾರ್’ ಎಂದು ಮಾತನಾಡಿಸಲು ಮುಂದಾಗಿದ್ದಾರೆ. ಆಗ, ಕೈಹಿಡಿದುಕೊಂಡಿದ್ದ ವ್ಯಕ್ತಿ ಕೈ ತೋರಿಸುತ್ತ ‘ಏನ್ ನಮಸ್ಕಾರ್..?ಏನಿದು’ ಎಂದು ಪ್ರಶ್ನೆ ಮಾಡಿ, ವಿಡಿಯೋ ರೆಕಾರ್ಡಿಂಗ್ ನಿಲ್ಲಿಸು ಎಂದಿದ್ದಾರೆ. ನಂತರ, ಒಂದಷ್ಟು ಮಂದಿ ಯೂಟ್ಯೂಬರ್ ಸುತ್ತುವರಿದಿದ್ದಾರೆ. ಕೂಡಲೇ ಆತ ಪರಾರಿಯಾಗಿ ಅವರಿಂದ ತಪ್ಪಿಸಿಕೊಂಡಿದ್ದಾರೆಘಟನೆಯ ಕುರಿತು ಮುದಾಸಿರ್ ಅಹಮದ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಘಟನೆ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.


ಘಟನೆಯ ಕುರಿತು ಬೆಂಗಳೂರುನಗರ ಪೊಲೀಸರು ರಿ ಟ್ವೀಟ್​ ಮಾಡಿ, ಅಗತ್ಯ ಕ್ರಮಕ್ಕಾಗಿ ನಿಮ್ಮ ಮನವಿಯನ್ನು ಪಶ್ಚಿಮ ವಿಭಾಗದ ಡಿಸಿಪಿಯವರ ಗಮನಕ್ಕೆ ತರಲಾಗಿದೆ ಎಂದು ಬರೆದಿದ್ದಾರೆ.ಆರೋಪಿ ಬಂಧನ: ಕಾಟನ್ ಪೇಟೆ ಠಾಣಾ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ನವಾಬ್​ ಹಯಾತ್​ ಶರೀಫ್ ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆತಪ್ಪಿತಸ್ಥರ ವಿರುದ್ಧ ಕ್ರಮ ಇನ್ನು ಈ ವೈರಲ್ ವಿಡಿಯೋವನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಕುರಿತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದ್ದೇವೆ ಎಂದು ಭರವಸೆ ನೀಡಿದ್ದಾರೆಕಳೆದ ವರ್ಷ ಡಿಸೆಂಬರ್ನಲ್ಲಿ, ದಕ್ಷಿಣ ಕೊರಿಯಾದ ಯೂಟ್ಯೂಬರ್ಗೆ ಮುಂಬೈ ಬೀದಿಯಲ್ಲಿ ಇಬ್ಬರು ವ್ಯಕ್ತಿಗಳು ಲೈವ್ ಸ್ಟ್ರೀಮಿಂಗ್ ಮಾಡುವಾಗ ಕಿರುಕುಳ ನೀಡಿದ್ದರು.ಘಟನೆಯ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮೊಬೀನ್ ಚಂದ್ ಮೊಹಮ್ಮದ್ ಶೇಖ್ ಮತ್ತು ಮೊಹಮ್ಮದ್ ನಕೀಬ್ ಸದ್ರೇಲಂ ಅನ್ಸಾರಿ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೊರಿಯನ್ ಯೂಟ್ಯೂಬರ್ಗೆ ಸಂಪೂರ್ಣ ರಕ್ಷಣೆಯನ್ನು ಭರವಸೆ ನೀಡಿತ್ತು.

ಮಗನ ಉತ್ತರಕ್ರಿಯೆ ನಡೆದ ಎರಡೇ ದಿನದಲ್ಲಿ ತಂದೆ ಆತ್ಮಹತ್ಯೆಗೆ ಶರಣು

Posted by Vidyamaana on 2024-01-16 15:32:09 |

Share: | | | | |


ಮಗನ ಉತ್ತರಕ್ರಿಯೆ ನಡೆದ ಎರಡೇ ದಿನದಲ್ಲಿ ತಂದೆ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.‌


ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು. 


ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು.‌ ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ. 


ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ

Recent News


Leave a Comment: