ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

Posted by Vidyamaana on 2023-10-20 18:37:44 |

Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.


ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.


ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು ಎಂದು ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.


ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು,ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.


ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದಾಖಲಿಸಿಕೊಂಡಿದ್ದಾರೆ.

ಯುವತಿ ನಾಪತ್ತೆ - ಹುಡುಕಾಟದಲ್ಲಿದ್ದ ತಂದೆಗೆ ಕಾರು ಡಿಕ್ಕಿ

Posted by Vidyamaana on 2024-08-01 18:28:57 |

Share: | | | | |


ಯುವತಿ ನಾಪತ್ತೆ - ಹುಡುಕಾಟದಲ್ಲಿದ್ದ ತಂದೆಗೆ ಕಾರು ಡಿಕ್ಕಿ

ಮಂಗಳೂರು : ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್‌ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.ಕೆಲಿಸ್ತಾ ಫೆರಾವೊ (18) ನಾಪತ್ತೆಯಾದವರು. ಎಸೆಸೆಲ್ಸಿ ಬಳಿಕ ಆಟೊಮೊಬೈಲ್‌ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದ ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು.

ಕೊಡಾಜೆ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣ

Posted by Vidyamaana on 2023-07-02 09:48:42 |

Share: | | | | |


ಕೊಡಾಜೆ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣ

ವಿಟ್ಲ: ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯ ಬಾಕಿಲದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಪ್ರತಾಪ್ (33)ರವರ ಸಹೋದರ ಪ್ರದೀಪ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ಎಂಬಲ್ಲಿ ಪ್ರತಾಪ್‌ ಎಂಬವರು ತನ್ನ ಪತ್ನಿಯೊಂದಿಗೆ ವಾಸವಾಗಿದ್ದು, ಪತ್ನಿ ಯಾವುದೋ ವ್ಯಕ್ತಿಯೊಂದಿಗೆ ಕೆಲವು ಸಮಯದಿಂದ ಮೊಬೈಲ್‌ ಪೋನ್‌ನಿಂದ ಮೆಸೆಜ್‌ ಮಾಡುತ್ತಿದ್ದುದರಿಂದ ಗಂಡ-ಹೆಂಡಿತಿಯೊಳಗೆ ಆಗಾಗ ಜಗಳವಾಗುತ್ತಾ ಸರಿಯಾಗಿ ಸಂಸಾರ ನಡೆಯದೆ ಇದ್ದುದರಿಂದ ಪ್ರತಾಪ್‌ ರವರ ಮಾನಸಿಕ ನೆಮ್ಮದಿ ಹಾಳಾಗಿತ್ತು. ಇದೇ ಕಾರಣದಿಂದ ಜು. 1ರಂದು ಮನೆಯ ಊಟದ ಕೋಣೆಯ ಸೀಲಿಂಗ್‌ ಫ್ಯಾನಿಗೆ ನೈಲಾನ್‌ ಸೀರೆಯನ್ನು ಕಟ್ಟಿ ಅದರ ಇನ್ನೊಂದು ತುದಿಯನ್ನು ನೇಣು ಕುಣಿಕೆಯನ್ನಾಗಿ ಮಾಡಿಕೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದನ್ನು ಕಂಡ ಅವರ ಪತ್ನಿ ಇಸ್ತ್ರಿಪೆಟ್ಟಿಗೆಯ ವೈಯರ್‌ನ್ನು ಅದೇ ಫ್ಯಾನಿಗೆ ಕಟ್ಟಿ ಅದರ ಇನ್ನೊಂದು ತುದಿಯನ್ನು ನೇಣು ಕುಣಿಕೆಯನ್ನು ಮಾಡಿಕೊಂಡು ಕುತ್ತಿಗೆಗೆ ನೇಣು ಹಾಕಿಕೊಂಡ ವಿಚಾರವನ್ನು ತಿಳಿದ ನೆರೆಕರೆಯವರು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದಾಗ ಪ್ರತಾಪರವರು ಮೃತಪಟ್ಟಿದ್ದು ವೀಣಾರವರನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಪ್ರತಾಪ್‌ರವರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಾಪ್ ಸಾಯುವ ಮುನ್ನ ಮಕ್ಕಳಿಗಾಗಿ ತಂದಿದ್ದ ಚಿಕನ್‌ ಚಿಲ್ಲಿ ಮನೆಯೊಳಗೆ ಪತ್ತೆಯಾಗಿತ್ತು. ಇದು ಪೂರ್ವನಿರ್ಧರಿತ ಆತ್ಮಹತ್ಯೆ ಎನ್ನುವುದನ್ನು ನಿರೂಪಿಸಿದಂತಿತ್ತು.


ಅಮ್ಮನಿಗೆ ಹೇಳಿದ ಕೊನೆ ಮಾತು!!!

ಸಹೋದರ ನೀಡಿದ ದೂರಿನಲ್ಲಿ, ಪ್ರತಾಪ್ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೂ ಇತ್ತು. ಪ್ರತಾಪ್ ಸಾಯುವ ಎರಡು ದಿನದ ಮೊದಲು ತನ್ನ ತಾಯಿಯ ಜೊತೆ, ತಾನು ಇನ್ನೆರಡು ದಿನದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

Posted by Vidyamaana on 2023-08-19 13:18:46 |

Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

ಪುತ್ತೂರು: ರಿಫಾಯಿಯ್ಯ ದಫ್ ಕಮೀಟಿ ಅಜ್ಜಿಕಟ್ಟೆ ಇದರ ಸಭೆ ಜೂ.30ರಂದು ನಡೆಯಿತು. ಜಮಾತಿನ ಗೌರವ್ಯಾಧ್ಯಕ್ಷ ಇಬ್ರಾಹಿಂ ಮುಲಾರ್, ಅಧ್ಯಕ್ಷ ಅಬೂಬಕ್ಕರ್ ಮುಲಾರ್ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ವೇದಿಕೆಯಲ್ಲಿ ದಫ್ ಕಮಿಟಿಯ ಅಧ್ಯಕ್ಷ ಸುಲೈಮಾನ್ ಮುಲಾರ್,ಪ್ರಮುಖ ಕಾರ್ಯದರ್ಶಿ ಆಶ್ರಫ್ ಕುರಿಯ ಹಾಗೂ SKSSF ಅಧ್ಯಕ್ಷ ಉಸ್ಮಾನ್ ಅಜ್ಜಿಕಟ್ಟೆ ಉಪಸ್ಥಿತಿಯಲ್ಲಿ 2023..24 ನೇ ಸಾಲಿನ ನೂತನ ಕಮಿಟಿಯನ್ನು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಹಸೈನಾರ್ ಅಜ್ಜಿಕಟ್ಟೆ, ಉಪಾಧ್ಯಕ್ಷರಾಗಿ ಮುಸ್ತಾಫ ಮುಲಾರ್ ಮತ್ತು ಆಶ್ರಫ್ ಕುರಿಯ, ಪ್ರ. ಕಾರ್ಯದರ್ಶಿಯಾಗಿ ನಿಝರ್ ಅಜ್ಜಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಆಸಿಫ್ ಕುರಿಯ ಎ ಆರ್ ಮತ್ತು ಫವಾಜ್ ಕುರಿಯ,ಕೋಶಾಧಿಕಾರಿಯಾಗಿ ರಝಕ್ ಮುಲಾರ್ ಆಯ್ಕೆಯಾದರು. ಸದಸ್ಯರಾಗಿ ಸುಲೈಮಾನ್ ಮುಲಾರ್,ಅಬ್ದುಲ್ ಕುಂಞ ಕುರಿಯ,ಜಬ್ಬಾರ್ ಕುರಿಯ,ಹುಸೈನಾರ್ ಅಜ್ಜಿಕಟ್ಟೆ,ಮಹಮ್ಮದ್ (ಮಮ್ಮು) ಅಜ್ಜಿಕಟ್ಟೆ,ಇಬ್ರಾಹಿಂ ವೆಲ್ಡಿಂಗ್,ಝಾಯಿದ್ ಬೊಲ್ಲಗುಡ್ಡೆ,ಮಜೀದ್ ಕೋಡಿಜಾಲ್ ಆಯ್ಕೆಯಾದರು

ರಿಕ್ಷಾ ಚಾಲಕ ಇಕ್ಬಾಲ್ ಹೃದಯಾಘಾತದಿಂದ ನಿಧನ

Posted by Vidyamaana on 2024-09-03 17:21:30 |

Share: | | | | |


ರಿಕ್ಷಾ ಚಾಲಕ ಇಕ್ಬಾಲ್ ಹೃದಯಾಘಾತದಿಂದ ನಿಧನ

ಮಂಗಳೂರು :: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಸೆ 03 ಮಂಗಳವಾರ ವರದಿಯಾಗಿದೆ.ಮೂಲತಃ ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಮೃತ ಚಾಲಕ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು

ಪುತ್ತೂರು :ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಠಾಣೆಯ ಹೆಚ್.ಸಿ.ಅದ್ರಾಮ ಎನ್ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

Posted by Vidyamaana on 2024-08-15 13:51:35 |

Share: | | | | |


ಪುತ್ತೂರು :ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಠಾಣೆಯ ಹೆಚ್.ಸಿ.ಅದ್ರಾಮ ಎನ್ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಪುತ್ತೂರು:ದ.ಕ.ಜಿಲ್ಲೆಯ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅದ್ರಾಮ ಎನ್. ಸೇರಿದಂತೆ ರಾಜ್ಯದ 126 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಯತೀಶ್ ಎನ್: 2016ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಯತೀಶ್ ಎನ್. ಅವರು ಶಿವಮೊಗ್ಗದಲ್ಲಿ ಎ ಎಸ್ ಪಿ ಯಾಗಿ ಬಳಿಕ ಗದಗ, ಮಂಡ್ಯದಲ್ಲಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೆ ಮಂಡ್ಯದಿಂದ ವರ್ಗಾವಣೆಗೊಂಡು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಇವರು ಬೆಂಗಳೂರು ನಿವಾಸಿಯಾಗಿದ್ದಾರೆ. ತನ್ನ ಕರ್ತವ್ಯದ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿರುವ ಆದ್ರಾಮ ಎನ್.ಅವರು

Recent News


Leave a Comment: