ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

Posted by Vidyamaana on 2023-06-14 02:05:46 |

Share: | | | | |


ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012 ರಲ್ಲಿ ದಾಖಲಾಗಿದ್ದ ಗುರುವಾಯನಕೆರೆಯಲ್ಲಿ ಅಪಘಾತವಾಗಿ ಓರ್ವನ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ  ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ  ವಾರಂಟ್ಆರೋಪಿ ಸಯ್ಯದ್ ಅಬಸಾರ್ ಎಂಬವರ ಮಗ ಸಯ್ಯದ್ ಶಬೀರ್ (33) ಎಂಬಾತನನ್ನು ಜೂನ್ 12 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವ್ರಷಭ ಹಾಗು ಬಸವರಾಜ್ ರವರು  ಬೆಂಗಳೂರು  ಪೀಣ್ಯದಿಂದ ವಶಕ್ಕೆ ಪಡೆದು ಜೂನ್ 13 ರಂದು ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಷರತ್ತುಬದ್ದ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

Posted by Vidyamaana on 2023-10-12 22:11:32 |

Share: | | | | |


ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


    ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಗುರುತಿಸಲಾಗಿದೆ.


    ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಬಿಟ್ಟು  ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ  ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ  ಡಸ್ಟರ್  ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


    ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ  ಎಂದು ಹೇಳಲಾಗಿದೆ.


     ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

Posted by Vidyamaana on 2023-09-08 21:29:28 |

Share: | | | | |


ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

ಪುತ್ತೂರು: ಸರಣಿ ಅಪರಾಧ ಪ್ರಕರಣಗಳು, ಬೆಚ್ಚಿಬೀಳಿಸುವ ದರೋಡೆಯಂತಹ ಪ್ರಕರಣಗಳು, ಬೆನ್ನುಬೆನ್ನಿಗೇ ಸಾಲಾಗಿ ನಿಂತಿರುವ ಹಬ್ಬಗಳು... ಸೂಕ್ಷ್ಮ ಪ್ರದೇಶಗಳಲ್ಲಿ ಮೊದಲ ಸಾಲಿನಲ್ಲಿ ಗುರುತಿಸಿಕೊಂಡಿದೆ ಪುತ್ತೂರು. ಹಾಗಾಗಿ ಆರಕ್ಷಕ ಸಿಬ್ಬಂದಿ ಅಥವಾ ಪೊಲೀಸ್ ವ್ಯವಸ್ಥೆ ಸರ್ವಸನ್ನದ್ಧ ವಾಗಿ ಇರಬೇಕತ್ತು. ಆದರೆ ಹಾಗಿಲ್ಲ ಎನ್ನುವುದೇ ಇಲ್ಲಿನ ವಾಸ್ತವ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಹುದ್ದೆಯಾದ ಪಿ.ಎಸ್.ಐ (ಸಬ್ ಇನ್ಸ್‌ಪೆಕ್ಟರ್) ಹುದ್ದೆಯೇ ಖಾಲಿ ಇರುವುದು ದುರಂತವೇ ಸರಿ.

ಪುತ್ತೂರು ನಗರ ಠಾಣೆಯಲ್ಲಿ ಒಟ್ಟು 4 ಹುದ್ದೆಗಳಿದ್ದು, ಅದರಲ್ಲಿ 3 ಹುದ್ದೆಗಳು ಖಾಲಿಯಾಗಿವೆ. ಅಂದರೆ ಒಂದು ಹುದ್ದೆ ಮಾತ್ರ ಭರ್ತಿಯಾಗಿದೆ.

ಪಿ.ಎಸ್.ಐ. ಶ್ರೀಕಾಂತ್ ರಾಥೋಡ್ ಅವರ ವರ್ಗಾವಣೆ ಬಳಿಕ ಕಾನೂನು ಸುವ್ಯವಸ್ಥೆಯ ಹುದ್ದೆಯೂ ತೆರವಾಗಿದ್ದು, ಖಾಲಿ ಇರುವ ಹುದ್ದೆಗಳ ಜವಾಬ್ದಾರಿಯೆಲ್ಲಾ ಪೊಲೀಸ್ ನಿರೀಕ್ಷಕ (ಇನ್ಸ್‌ಪೆಕ್ಟರ್)ರ ಮೇಲೆ ಬಿದ್ದಿದೆ‌.

ಇದನ್ನು ಕಳ್ಳರು ಗಮನಿಸಿದಂತಿದೆಯೋ ಏನೋ!? ಪುತ್ತೂರೇ ಬೆಚ್ಚಿಬೀಳಿಸುವಂತಹ ಘಟನೆಗಳು ಒಂದರ ಬೆನ್ನಿಗೆ ಇನ್ನೊಂದರಂತೆ ಬಂದೆರಗುತ್ತಿದೆ. ಸರಣಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳ ಕೊರತೆ ಇದ್ದು, ಕೃತ್ಯ ಘಟಿಸಿದ ಬಳಿಕವಷ್ಟೇ ಕ್ರಮ ಕೈಗೊಳ್ಳುವ ಭರವಸೆ ನೀಡುವಂತಾಗಿದೆ. ಶಾಸಕರೂ ಇದರ ಬಗ್ಗೆ ಮುತುವರ್ಜಿ ವಹಿಸಿ, ತಕ್ಷಣ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸುವ ಜರೂರತ್ತು ಇದೆ.


ವಾರದೊಳಗೆ ಭರ್ತಿ: ಶಾಸಕ ಅಶೋಕ್ ರೈ

ಪಿ.ಎಸ್.ಐ. ಹುದ್ದೆ ಖಾಲಿ ಆಗಿರುವ ಬಗ್ಗೆ ಮಾಹಿತಿ ಇದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ಅಧಿಕಾರಿಗಳು ಬರಲು ಕೇಳುವುದೇ ಇಲ್ಲ. ಹಾಗಾಗಿ ಪೊಲೀಸ್ ಠಾಣೆಯ ಪ್ರಮುಖ ಹುದ್ದೆಗಳೆಲ್ಲ ಖಾಲಿಯಾಗಿವೆ. ವಾರದೊಳಗೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

- ಅಶೋಕ್ ಕುಮಾರ್ ರೈ, ಶಾಸಕರು, ಪುತ್ತೂರು

ಭಾರತದಲ್ಲಿ ಭಾನುವಾರದ ರಜೆ ರದ್ದು ? ಮಹತ್ವದ ಮುನ್ಸೂಚನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-05-28 20:39:20 |

Share: | | | | |


ಭಾರತದಲ್ಲಿ ಭಾನುವಾರದ ರಜೆ ರದ್ದು ? ಮಹತ್ವದ ಮುನ್ಸೂಚನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಾರದ ರಜಾದಿನವನ್ನು ಭಾನುವಾರದಿಂದ ಶುಕ್ರವಾರಕ್ಕೆ ಬದಲಾಯಿಸುವ ಜಾರ್ಖಂಡ್ ಜಿಲ್ಲೆಯ ಪ್ರಯತ್ನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾತನಾಡಿದ್ದಾರೆ. ದುಮ್ಕಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಭಾರತದಲ್ಲಿ ಭಾನುವಾರದ ರಜಾದಿನವು ಬ್ರಿಟಿಷ್ ವಸಾಹತುಶಾಹಿ ಅವಧಿಯಲ್ಲಿ ಬೇರುಗಳನ್ನು ಹೊಂದಿದೆ ಮತ್ತು ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಿದರು.

ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 8) ವಿದ್ಯುತ್ ನಿಲುಗಡೆ

Posted by Vidyamaana on 2023-06-08 00:43:16 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 8) ವಿದ್ಯುತ್ ನಿಲುಗಡೆ

ಪುತ್ತೂರು: ತಂತಿ ಬದಲಾವಣೆ, ಜೆಒಎಸ್‌ ದುರಸ್ತಿ ಮತ್ತು ರಸ್ತೆ ಅಗಲೀಕರಣ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ಉಪ್ಪಿನಂಗಡಿ ಓಲ್ಡ್, ರಾಮಕುಂಜ ವಾಟರ್‌ಸಭೆ ಫೀಡರ್‌ನಲ್ಲಿ ಜೂ.8ರಂದು ಬೆಳಿಗ್ಗೆ 10ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಅದುದರಿಂದ 110/33/11 ಕೆಇ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಬೆಳ್ಳಿಪ್ಪಾಡಿ, ಚಿಕ್ಕಮುನ್ನೂರು, ಕೋಡಿಂಬಾಡಿ, ಬನ್ನೂರು, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ, ಬಜತ್ತೂರು ಮತ್ತು ಕೊಯಿಲ ಗ್ರಾಮದ ವಿದ್ಯುತ್‌ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ ಭೇಟಿ.

Posted by Vidyamaana on 2023-04-30 05:22:52 |

Share: | | | | |


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ  ಭೇಟಿ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾನುವಾರ ಬೆಳಿಗ್ಗೆ  ಬನ್ನೂರು, ಉಪ್ಪಿನಂಗಡಿ, ನಿಡ್ಪಳ್ಳಿ ಚರ್ಚ್ ಗಳಿಗೆ  ಭೇಟಿ ನೀಡಿದರು.

Recent News


Leave a Comment: