ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

Posted by Vidyamaana on 2023-12-23 13:24:19 |

Share: | | | | |


ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ  ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

ಮಂಗಳೂರು: ಜೊತೆಯಲ್ಲಿ ಇದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದನ್ನು ಗಮನಿಸಿ ಯುವಕನನ್ನ ಹಿಂದೂ ಸಂಘಟನೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.


ಇಂದು ಸಂಜೆ ವೇಳೆಗೆ ಘಟನೆ ನಡೆದಿದ್ದು ಹಲ್ಲೆಗೆ ಯತ್ನ ಕೂಡಾ ನಡೆದಿದೆ ಎನ್ನಲಾಗಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.


ಹಲ್ಲೆಗೆ ಯತ್ನಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳದಿಂದ ಪರಾರಿಯಾಗಿದ್ದು, ಬಂದರು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

Posted by Vidyamaana on 2024-05-17 07:19:54 |

Share: | | | | |


ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

ಚಿತ್ರದುರ್ಗ, ಮೇ.17: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ (Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.

ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, 5 ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತತೆಯಲ್ಲಿತ್ತು. ಕೂಡಲೇ ಎಫ್‌ಎಸ್‌ಎಲ್ ಟೀಂ ಕರೆಸಿ ಸೂಕ್ತ ತನಿಖೆಗೆ ಆದೇಶ ನೀಡಲಾಯಿತು.

ತನಿಖಾ ತಂಡ ಹಾಗೂ FSL ತಂಡ ಸೇರಿ ಆ ಮನೆಯಿಂದ 71 ಸಾಕ್ಷ್ಯಗಳನ್ನು ಕಲೆ ಹಾಕಲಾಗಿತ್ತು. ಎಲ್ಲಾ ಸ್ಯಾಂಪಲ್ಸ್​ಗಳನ್ನು ದಾವಣಗೆರೆ, ಬೆಂಗಳೂರು ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಇದು ತುಂಬಾ ಸೆನ್ಸಿಬಲ್ ಕೇಸ್ ಆಗಿದ್ದರಿಂದ ರಿಪೋರ್ಟ್ ತಡವಾಗಿ ಬಂದಿದೆ.

ಉಳ್ಳಾಲದ ವ್ಯಕ್ತಿ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಸಾಲದ ಹೊರೆ ಸಾವಿನ ಹಿಂದೆ ಬೆಟ್ಟಿಂಗ್ ಜಾಲದ ಶಂಕೆ

Posted by Vidyamaana on 2023-09-12 21:00:34 |

Share: | | | | |


ಉಳ್ಳಾಲದ ವ್ಯಕ್ತಿ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ  ಸಾಲದ ಹೊರೆ ಸಾವಿನ ಹಿಂದೆ ಬೆಟ್ಟಿಂಗ್ ಜಾಲದ ಶಂಕೆ

ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ. 


ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ‌ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ‌ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ. 


ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.


ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.

ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

Posted by Vidyamaana on 2024-06-23 11:03:07 |

Share: | | | | |


ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

ಅರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.

ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

Posted by Vidyamaana on 2024-01-04 09:56:17 |

Share: | | | | |


ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ.ಪ್ರತಿವರ್ಷದಂತೆ ಈ ವರ್ಷವೂ ಅಯ್ಯಪ್ಪ ಮಾಲಾಧಾರಿಗಳು ಕೆಂಡಸೇವೆ ಮಾಡುತ್ತಿದ್ದರು.ಅಯ್ಯಪ್ಪ ಮಾಲಾಧಾರಿಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಕೆಂಡದ ಮೇಲೆ ಕುಪ್ಪಳಿಸುತ್ತಾ ಸಾಗಿದ್ದರು. ಈ ವೇಳೆ ಓರ್ವ ಮಾಲಾಧಾರಿ ಆಯತಪ್ಪಿ ನಿಗಿ ನಿಗಿ ಕೆಂಡದ ಮೇಲೆ ಬಿದ್ದಿದ್ದಾನೆ.


ನೆರೆದಿದ್ದ ಜನರು ತಕ್ಷಣ ಆತನ ರಕ್ಷಣೆಗೆ ಧಾವಿಸಿದ್ದಾರೆ. ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ ಸಿಕ್ತು ಜಾಮೀನು

Posted by Vidyamaana on 2023-12-26 20:50:48 |

Share: | | | | |


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ ಸಿಕ್ತು ಜಾಮೀನು

ಪುತ್ತೂರು: ತನ್ನ ಸಮುದಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಪಾಣಾಜೆಯ ನಿವಾಸಿ ಅಬ್ದುಲ್ ಶೆಹನಾದ್ ಸಮೀಮ್ ಎಂಬವರಿಗೆ  ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


ಘಟನೆಯ ಹಿನ್ನಲೆ : ತನ್ನ ಮನೆಯ ಸಮೀಪದ ವಾಸಿ ಅಪ್ರಾಪ್ತ ಬಾಲಕಿಯ ಮನೆಯಲ್ಲಿ 2021ನೇ ಅಕ್ಟೋಬರ್ ತಿಂಗಳಿನಲ್ಲಿ  ಆರೋಪಿಯು ಆಕೆಯನ್ನು  ಮರುಳು ಮಾಡಿ ಬಲತ್ಕಾರದಿಂದ             ರಂದು ಲೈಂಗಿಕ ಸಂಪರ್ಕ ನಡೆಸಿ, ಬೆದರಿಕೆ ಒಡ್ಡಿರುವುದಾಗಿದೆ. ಅಲ್ಲದೆ 

ದಿನಾಂಕ 23/10/2023 ರಂದು ರಾತ್ರಿ 07:00 ಗಂಟೆಗೆ ಅಪ್ರಾಪ್ತ ಬಾಲಕಿಯ ತಾಯಿ ಮನೆ ಹತ್ತಿರದಲ್ಲಿರುವ ಅಜ್ಜಿ ಮನೆಗೆ ಬೀಡಿ ಕಟ್ಟಲು ಹೋಗಿದ್ದು, ಆಗ ಅವರ ಮನೆಗೆ ಹೋಗಿ, ಅಪ್ರಾಪ್ತ ಬಾಲಕಿಯ  ಮೈ ಗೆ ಕೈ ಹಾಕಿ , ಆಕೆ ಬೊಬ್ಬೆ ಹೊಡೆದಾಗ, ಈ ವಿಚಾರವನ್ನು ಬೇರೆಯವರಲ್ಲಿ ಹೇಳಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿ ಮನೆಯಿಂದ ಓಡಿ ಹೋಗಿರುವುದಾಗಿದೆ ಎಂದು ಆರೋಪಿಸಿ ಈ ಬಗ್ಗೆ

ಅಪ್ರಾಪ್ತ ಬಾಲಕಿಯು  ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಪೊಲೀಸರು  ಭಾರತೀಯ ದಂಡ ಸಂಖ್ಯೆಯ ಕಲಂ 376,354(A),506,  ಮತ್ತು ಪೋಕ್ಸೋ ಕಾಯ್ದೆಯ ಕಲಂ 4 ರನ್ವಯ ರಂತೆ ಪ್ರಕರಣ ದಾಖಲಿಸಿದ್ದರು. ನಂತರ ತನಿಖೆ ಮುಂದುವರಿಸಿ, ಆರೋಪಿಯನ್ನಲಾಗಿದ್ದ ಅಬ್ದುಲ್ ಶೆಹನಾದ್ ಸಮೀಮ್ ರವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿ ತದನಂತರ ನ್ಯಾಯಾಲಯಕ್ಕೆ ಹಾಜರು ಮಾಡಲಾಗಿ ಆತನಿಗೆ ನ್ಯಾಯಾಂಗ ಬಂದನ ವಿಧಿಸಲಾಗಿತ್ತು. 


               ಹೀಗಿರುವಾಗ,        ಆರೋಪಿಯು ತನ್ನ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ  ಶ್ರೀ ಮಹೇಶ್ ಕಜೆ ಮತ್ತು ಪುತ್ತೂರಿನ ವಕೀಲರಾದ ಶ್ರೀಮತಿ ರಮ್ಲತ್ ಅವರ ಮುಖಾಂತರ   ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ಆಕ್ಷೇಪವನ್ನು ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್ ವಿ ರವರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Recent News


Leave a Comment: