ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

Posted by Vidyamaana on 2023-12-13 07:34:28 |

Share: | | | | |


ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.


ನೈಋತ್ಯ ರೈಲ್ವೆಯ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬ‌ರ್ 14 ರಿಂದ ಡಿಸೆಂಬರ್ 22 ರವರೆಗೆ ಬೇರೆ ಬೇರೆ ದಿನಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.


ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸೆಸ್ ಅನ್ನು ಡಿಸೆಂಬ‌ರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು-ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸೆಸ ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ 관령 16576) v 15, 18, 20 총 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್‌ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್: ಶಕುಂತಲಾ ವಿರುದ್ಧ FIR

Posted by Vidyamaana on 2023-10-14 13:11:58 |

Share: | | | | |


ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್: ಶಕುಂತಲಾ ವಿರುದ್ಧ FIR

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್ ಹಾಕಿದ ತುಮಕೂರು ಮೂಲದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬಾಕೆಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.


ಟ್ವಿಟ್ಟರ್ ಎಕ್ಸ್ನಲ್ಲಿ ಶಕುಂತಲಾ ನಟರಾಜ್ ಸುಳ್ಳು ಪೋಸ್ಟ್ ಹಾಕಿದ್ದು, ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದಳು.

ಪ್ರತಿ ಬಾರಿ ಹೇಳಿದ್ದರು ಈ ಸಲ ಕಪ್ ನಮ್ದೆ, ಇಲ್ಲಿದೆ ಕಪ್; ಕನ್ನಡದಲ್ಲೇ ಸಂಭ್ರಮ ಹಂಚಿಕೊಂಡ ಶೇಯಾಂಕ

Posted by Vidyamaana on 2024-03-18 09:53:47 |

Share: | | | | |


ಪ್ರತಿ ಬಾರಿ ಹೇಳಿದ್ದರು ಈ ಸಲ ಕಪ್ ನಮ್ದೆ, ಇಲ್ಲಿದೆ ಕಪ್; ಕನ್ನಡದಲ್ಲೇ ಸಂಭ್ರಮ ಹಂಚಿಕೊಂಡ ಶೇಯಾಂಕ

ನವದೆಹಲಿ : ಈ ಸಲ ಕಪ್ ನಮ್ದೆ, ಪ್ರತಿ ಭಾರಿ ಆರ್‌ಸಿಬಿ ಅಭಿಮಾನಿಗಳ ಈ ಘೋಷಣೆ ಜನಪ್ರಿಯವಾಗಿದೆ. ಆದರೆ ಅಂತಿಮ ಹಂತದಲ್ಲಿ ನಿರಾಸೆಯೊಂದಿಗೆ ಮರಳುವ ಅಭಿಮಾನಿಗಳು ಮತ್ತೆ ಮುಂದಿನ ಆವೃತ್ತಿಯಲ್ಲೇ ಇದೇ ಘೋಷಣೆ ಮೊಳಗಿಸಿ ತಂಡವನ್ನು ಹುರಿದುಂಬಿಸುತ್ತಿದ್ದರು. ಇದೀಗ ಮಹಿಳಾ ಆರ್‌ಸಿಬಿ ತಂಡ ಟ್ರೋಫಿ ಗೆದ್ದಿದೆ.ಗೆಲುವಿನ ಬಳಿಕ ಮೈದಾನದಲ್ಲಿ ಸಂಭ್ರಮ ಹಂಚಿಕೊಂಡ ತಂಡದಲ್ಲಿರುವ ಸ್ಟಾರ್ ಕನ್ನಡತಿ ಶ್ರೇಯಾಂಕಾ ಪಾಟೀಲ್, ಪ್ರತಿ ಬಾರಿ ಅಭಿಮಾನಿಗಳು ಈ ಸಲ ಕಪ್ ನಮ್ದೆ ಅಂತಾ ಹೇಳುತ್ತಾರೆ. ಇದೀಗ ನಾವು ಕಪ್ ಗೆದ್ದಿದ್ದೇವೆ ಎಂದಿದ್ದಾರೆ.


ಮಹಿಳಾ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಪ್ರದರ್ಶನ ನೀಡಿ 8 ವಿಕೆಟ್ ಗಲುವು ದಾಖಲಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ ಟ್ರೋಫಿ ಗೆದ್ದುಕೊಂಡಿದೆ. ಅದ್ಭುತ ಗೆಲುವಿನಿಂದ ಆರ್‌ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದರೆ. ಮಹಿಳೆಯರ ತಂಡ ಗೆದ್ದಾಯ್ತು, ಈ ಬಾರಿ ಪುರುಷರ ತಂಡವೂ ಗೆಲ್ಲಲಿದೆ ಅನ್ನೋ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಶ್ರೇಯಾಂಕಾ ಪಾಟೀಲ್ ನೀಡಿದ ಈ ಸಲ ಕಪ್ ಗೆದ್ದಿದ್ದೇವೆ ಅನ್ನೋ ಹೇಳಿಕೆ ಅಭಿಮಾನಿಗಳ ಸಂಭ್ರಮವನ್ನು ಡಬಲ್ ಮಾಡಿದೆ.ಫೈನಲ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ ಶ್ರೇಯಾಂಕಾ ಪಾಟೀಲ್ ಪರ್ಪಲ್ ಕ್ಯಾಪ್ ಗೆದ್ದುಕೊಂಡಿದ್ದಾರೆ. ವಿಶೇಷ ಅಂದರೆ ಗರಿಷ್ಠ ರನ್ ಸಿಡಿಸಿದ ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರಿ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ. ಶ್ರೇಯಾಂಕ ಪಾಟೀಲ್ ಅದ್ಬುತ ಪ್ರದರ್ಶನ ಆರ್‌ಸಿಬಿ ತಂಡಕ್ಕೆ ಗೆಲುವಿನ ಹಿರಿಮೆ ತಂದುಕೊಟ್ಟಿದೆ. ಇದರ ಜೊತೆಗೆ ಕಪ್ ನಮ್ದೆ ಕನ್ನಡದ ಘೋಷಣೆಯನ್ನು ದೆಹಲಿಯಲ್ಲಿ ಮೊಳಗಿಸಿದ್ದಾರೆ. ಮಹಿಳೆಯರ ಐಪಿಎಲ್‌ನಲ್ಲಿ ಕಪ್ ನಮ್ದಾಗಿದೆ. ಇದೀಗ ಪುರುಷರ ಕಪ್ ನಮ್ಮದಾಗಬೇಕಿದೆ ಅನ್ನೋ ಕೂಗು ಅಭಿಮಾನಿಗಳು ಮೊಳಗಿಸಿದ್ದಾರೆ.ಮಹಿಳಾ ಐಪಿಎಲ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಿತ್ತು. ಆದರೆ ಆರ್‌ಸಿಬಿ ಬೌಲಿಂಗ್ ದಾಳಿಗೆ ಉತ್ತರಿಸಲು ಸಾಧ್ಯವಾಗಲಿಲ್ಲ. ಆರಂಭಿಕರಿಬ್ಬರು ಹೋರಾಟ ನೀಡಿದರೆ, ಉಳಿದವರಿಗೆ ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ 113 ರನ್‌ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ಆಲೌಟ್ ಆಯಿತು. ಇದರೊಂದಿಗೆ ಆರ್‌ಸಿಬಿ 114 ರನ್ ಟಾರ್ಗೆಟ್ ಪಡೆದುಕೊಂಡಿತು.ಟಾರ್ಗೆಟ್ ಚೇಸ್ ಮಾಡಿದ ಆರ್‌ಸಿಬಿಗೆ ನಾಯಕಿ ಸ್ಮೃತಿ ಮಂಧನಾ ಹಾಗೂ ಸೋಫಿ ಡಿವೈನ್ ಆರಂಭ ನೆರವಾಯಿತು. ಬಳಿಕ ಎಲ್ಲಿಸ್ ಪೆರಿ, ರಿಚಾ ಘೋಷ್ ಹೋರಾಟದಿಂದ ಆರ್‌ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು 8 ವಿಕೆಟ್ ಭರ್ಜರಿ ಗೆಲುವು ಕಂಡಿತು. ಟ್ರೋಫಿ ಗೆದ್ದುಕೊಂಡಿತು.

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ

Posted by Vidyamaana on 2023-08-14 09:53:27 |

Share: | | | | |


ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ

ಪುತ್ತೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಬೇಕು, ಪ್ರಕರಣವನ್ನು ಮುಚ್ಚಿ ಹಾಕಿದ ಅಂದಿನ ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು, ಅದಕ್ಕಾಗಿ ಎಸ್ಐಟಿ ರಚಿಸಬೇಕೆಂದು ಆಗ್ರಹಿಸಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ನಡೆಸಲಾಗಿದೆ. 


ದರ್ಬೆ ವೃತ್ತದಿಂದ ಪುತ್ತೂರು ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಯಾತ್ರೆಯಲ್ಲಿ ಬಂದ ಮಹಿಳೆಯರು, ಕಾರ್ಯಕರ್ತರು ನ್ಯಾಯಕ್ಕಾಗಿ ಹೋರಾಟದ ಧ್ವನಿ ಮೊಳಗಿಸಿದರು. ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ 10 ನಿಮಿಷ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು ಬಳಿಕ ಸಾರ್ವಜನಿಕ ಸಮಾವೇಶ ನಡೆಯಿತು. 




ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷ ಕಳೆದರು ಆಕೆಯ ನೈಜ ಕೊಲೆಗಾರ ಯಾರು ಅನ್ನೋದು ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆತ ಅಲ್ಲ ಎಂದಾದರೆ, ಕ್ರೂರವಾಗಿ ಹಿಂಸಿಸಿ ಕೊಲೆಗೈದ ಪಾಪಿಗಳ ಬಂಧನ ಆಗಬೇಡವೇ.. ಸೌಜನ್ಯಾ ಪರ ಹೋರಾಟ ಈಗ ಆಂದೋಲನ ರೂಪ ಪಡೆದಿದ್ದು ಸಂಘರ್ಷಕ್ಕೂ ಕಾರಣವಾದೀತು. ಆದರೆ ಸಂಘರ್ಷಕ್ಕೆ ಸರಕಾರ ಆಸ್ಪದ ನೀಡಬಾರದು. 


ಅದಕ್ಕಾಗಿ ಮರು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು. ತನಿಖೆಗೆ ಒಳಪಡಿಸಬೇಕು.  ನ್ಯಾಯ ಸಿಗಬಹುದು ಎನ್ನುವ ನಂಬಿಕೆ ಜನರಲ್ಲಿದೆ. ಆಮೂಲಕ ನೈಜ ಆರೋಪಿಯನ್ನು ಪತ್ತೆ ಮಾಡಿ ಗಲ್ಲಿಗೇರಿಸಬೇಕು ಎಂದು ಮಹಾಲಿಂಗೇಶ್ವರನ ಸನ್ನಿಧಿಯ ಮುಂದೆ ನಿಂತು ಒತ್ತಾಯಿಸುತ್ತೇವೆ ಎಂದರು. 


ಕಾಲ್ನಡಿಗೆ ಜಾಥಾದಲ್ಲಿ ಸಾವಿರಾರು ಜನ ಭಾಗವಹಿಸಿ ಸೌಜನ್ಯಾ ಪರವಾಗಿ ಧ್ವನಿ ಎತ್ತಿದ್ದಾರೆ.

ನರಿಮೊಗರು ಕಾಂಗ್ರೆಸ್ ವಲಯಾಧ್ಯಕ್ಷ ಪ್ರಕಾಶ್ ನಿಧನ

Posted by Vidyamaana on 2024-06-11 20:34:39 |

Share: | | | | |


ನರಿಮೊಗರು ಕಾಂಗ್ರೆಸ್ ವಲಯಾಧ್ಯಕ್ಷ ಪ್ರಕಾಶ್ ನಿಧನ

ಪುತ್ತೂರು: ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಸಂಜೆ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಆ. 30 : ಅಕ್ಷಯ ಕಾಲೇಜಿನಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ

Posted by Vidyamaana on 2023-08-29 06:30:48 |

Share: | | | | |


ಆ. 30 : ಅಕ್ಷಯ ಕಾಲೇಜಿನಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ

ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜಿನ ಸಾಂಸ್ಕೃತಿಕ ಸಂಘ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಗಸ್ಟ್ 30ರಂದು ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣದಲ್ಲಿ ಶ್ರಾವಣೋತ್ಸವಂ ಓಣಂ ಆಚರಣೆ ಕಾರ್ಯಕ್ರಮ ನಡೆಯಲಿದೆ.

ಪ್ರಗತಿ ಎಜುಕೇಷನಲ್ ಫೌಂಡೇಷನಿನ ಸ್ಥಾಪಕ ಅಧ್ಯಕ್ಷ ಗೋಕುಲ್’ನಾಥ್ ಪಿ.ವಿ. ಕಾರ್ಯಕ್ರಮ ಉದ್ಘಾಟಿಸುವರು. ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸುವರು.

ಸಾಂಸ್ಕೃತಿಕ ಸಂಘದ ಸಂಯೋಜಕಿ ದೀಕ್ಷಾ ರೈ, ಐಕ್ಯೂಎಸಿ ಸಂಯೋಜಕ ರಾಕೇಶ್ ಕುಳದಪಾರೆ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Recent News


Leave a Comment: