ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ರಸ್ತೆ ಅಪಘಾತ: ಗಾಯಾಳು ಪತ್ರಕರ್ತ ಪಾವ್ಲ್ ಬೆಂಜಮಿನ್‌ ಮೃತ್ಯು

Posted by Vidyamaana on 2023-07-13 10:01:24 |

Share: | | | | |


ರಸ್ತೆ ಅಪಘಾತ: ಗಾಯಾಳು ಪತ್ರಕರ್ತ ಪಾವ್ಲ್ ಬೆಂಜಮಿನ್‌ ಮೃತ್ಯು

ಮಂಗಳೂರು: ಬೆಂಗಳೂರಿನ ಸೈಂಟ್‌ ಪಾವ್ಲ್ ಸ್‌ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಪತ್ರಕರ್ತ ಪಾವ್ಲ್ ಬೆಂಜಮಿನ್‌ (27) ಅವರು ಜು.12ರಂದು ನಿಧನ ಹೊಂದಿದರು.ಮೈಸೂರು ಜಿಲ್ಲೆಯ ಕೊಳ್ಳೇಗಾಲ ಹನೂರು ಸಮೀಪದ ಲಾಸರದೊಡ್ಡಿ ನಿವಾಸಿಯಾಗಿದ್ದ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿದ್ದರು.


ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದರು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದರು 

ಮೃತರು ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ - ಸೂತ್ರಧಾರಿ ಚೈತ್ರಾ ಕುಂದಾಪುರ ಮೂವರು ಸಹಚರರ ಬಂಧನ

Posted by Vidyamaana on 2023-09-13 01:49:38 |

Share: | | | | |


MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ - ಸೂತ್ರಧಾರಿ ಚೈತ್ರಾ ಕುಂದಾಪುರ ಮೂವರು ಸಹಚರರ ಬಂಧನ

ಉಡುಪಿ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.


ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಇವರಿಗೆ ಚೈತ್ರಾ ಮತ್ತಾಕೆಯ ಸಹಚರರ ತಂಡ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿತ್ತು.ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ಚೈತ್ರಾಳ ತಂಡ ಮಹಾವಂಚನೆ ನಡೆಸಿತ್ತು.


ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ನಾಲೈದು ಜನರ ತಂಡದಿಂದ ಬೃಹನ್ನಾಟಕ ನಡೆಸಿದ್ದಳು. ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಳು. ಅಲ್ಲದೆ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್ ಬಳಿಕ ಹಂತ ಹಂತವಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಏಳು ಕೋಟಿ ರೂಪಾಯಿ ಸುಲಿಗೆ ಮಾಡಿತ್ತು.ಚೈತ್ರಾ ಅಲ್ಲದೇ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನೂ ಕೂಡ ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.


ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದ ಖದೀಮರು ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಎಸಗಿದ್ದರು. ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಮತ್ತು ಪ್ರಸಾದ್ ಈ ನಾಲ್ವರ ತಂಡ ಇದೀಗ ಪೋಲಿಸರ ಬಂಧನಕ್ಕೆ ಒಳಗಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

Posted by Vidyamaana on 2023-07-14 03:02:36 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

Posted by Vidyamaana on 2023-12-01 15:59:59 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.


ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

Posted by Vidyamaana on 2023-04-21 16:46:13 |

Share: | | | | |


ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಪುತ್ತೂರು : ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶುಕ್ರವಾರ ಭೇಟಿ ನೀಡಿದರು.


ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಆಶಾ ತಿಮ್ಮಪ್ಪ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು

ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

Posted by Vidyamaana on 2023-12-17 12:31:37 |

Share: | | | | |


ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

ಗದಗ : ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ.ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, ಭಾರೀ ಗೊಂದಲಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು, ಜಿಲ್ಲಾಡಳಿತ, ಕಾಂಗ್ರೆಸ್‌ ಮುಖಂಡರು ಕಕ್ಕಾಬಿಕ್ಕಿಯಾಗಿದ್ದರು.

Recent News


Leave a Comment: