ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

Posted by Vidyamaana on 2024-06-06 18:58:41 |

Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

ಚಂಡೀಗಢ: ನೂತನ ಸಂಸದೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರೋದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಡಿಕೇರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಒಂದೇ ಒಂದು ಶಬ್ದ ಮಾತನಾಡದ ಯದುವೀ‌ರ್ ಒಡೆಯ‌ರ್

Posted by Vidyamaana on 2024-07-07 16:15:52 |

Share: | | | | |


ಮಡಿಕೇರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಒಂದೇ ಒಂದು ಶಬ್ದ ಮಾತನಾಡದ ಯದುವೀ‌ರ್ ಒಡೆಯ‌ರ್

ಮಡಿಕೇರಿ: ಇಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದೂ ಮಾತನಾಡದೇ ಮೌನವಾಗಿದ್ದರು.

ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

Posted by Vidyamaana on 2023-11-02 18:15:15 |

Share: | | | | |


ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್‌ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು.


ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು.


ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ ಮಹಿಳೆಯರಿಗೆ ಹೊಲಿಗೆ ತರಬೇತಿ , ಚಾಲನಾ ತರಬೇತಿ, ಮೆಡಿಕಲ್ ಕ್ಯಾಂಪ್, ಬಡವರಿಗೆ ಆರ್ಥಿಕ ನೆರವು ಸೇರಿದಂತೆ ಅನೇಕ ಬಡವರ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ಮೂಲಕ ತರಬೇತಿ ಪಡೆದ ಅನೇಕ ಮಂದಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾಭಿಮಾನಿಗಳಾಗಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಟ್ರಸ್ಟ್‌ನಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಬಾರಿಯ ದೀಪಾವಳಿಯಲ್ಲೂ ಬಡವರಿಗೆ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಗ್ರಾಮಸ್ಥರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


ವೇದಿಕೆಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಬನ್ನೂರು ನವೋದಯ ಯುವಕಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ರೈ, ಕಾರ್ಯದರ್ಶಿ ರೋಹಿತ್ ರೈ, ಚಂಧ್ರಾಕ್ಷ, ದಿನೇಶ್ ಸಾಲಿಯಾನ್, ಸಾಹಿರಾ ಬಾನು ಸೇರಿದಂತೆ ಟ್ರಸ್ಟ್‌ನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಮೇ 27 ರವರೆಗೆ ಪೊಲೀಸ್‌ ಕಸ್ಟಡಿಗೆ

Posted by Vidyamaana on 2024-05-24 17:55:44 |

Share: | | | | |


ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ   ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಮೇ 27 ರವರೆಗೆ ಪೊಲೀಸ್‌ ಕಸ್ಟಡಿಗೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮೂಡಲದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗೆ ಮೇ 27ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

Posted by Vidyamaana on 2024-03-23 15:17:51 |

Share: | | | | |


ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

ಕಾಸರಗೋಡು:  ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಶಿರಾಡಿ ಘಾಟಿಯಲ್ಲಿ ಇನ್ನೋವಾ ಕಾರು ಭೀಕರ ಅಪಘಾತ:ಮೇಲ್ಕಾರ್ ಮೂಲದ ತಾಯಿ-ಮಗ ಮೃತ್ಯು; ಹಲವರಿಗೆ ಗಂಭೀರ

Posted by Vidyamaana on 2024-05-21 11:07:56 |

Share: | | | | |


ಶಿರಾಡಿ ಘಾಟಿಯಲ್ಲಿ ಇನ್ನೋವಾ ಕಾರು ಭೀಕರ ಅಪಘಾತ:ಮೇಲ್ಕಾರ್ ಮೂಲದ ತಾಯಿ-ಮಗ ಮೃತ್ಯು; ಹಲವರಿಗೆ ಗಂಭೀರ

ಸಕಲೇಶಪುರ: ಲಾರಿ ಮತ್ತು ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ

Recent News


Leave a Comment: