ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

Posted by Vidyamaana on 2023-05-02 10:12:45 |

Share: | | | | |


ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

ಪುತ್ತೂರು: ಪಕ್ಷಕ್ಕೆ ತನಗೆ ಎಲ್ಲಾ ಹುದ್ದೆಗಳನ್ನು ನೀಡಿದೆ. ಪಕ್ಷಕ್ಕೆ ತಾನು ಬದ್ಧನಾಗಿರದೇ ಇದ್ದರೆ, ತಾನು ಪ್ರಾಣಿಯಂತೆ. ಆದ್ದರಿಂದ ಪಕ್ಷದಿಂದ ಹೊರಹೋದವರು ತನ್ನ ಮಿತ್ರನೂ ಅಲ್ಲ, ಪಾಲದಾರನೂ ಅಲ್ಲ ಎಂದು ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಪುತ್ತೂರಿನ ಬಿಜೆಪಿ‌‌ ಚುನಾವಣಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭ, ನಿಮ್ಮ ಆಪ್ತಮಿತ್ರ ಅಶೋಕ್ ರೈ ಅವರು ಕಾಂಗ್ರೆಸಿಗೆ ಸೇರಿದ್ದಾರೆ ಎಂದಾಗ, ತಾನು ಆಪ್ತಮಿತ್ರನಲ್ಲ. ಆಪ್ತಮಿತ್ರ ವಿಷ್ಣುವರ್ಧನ್ ಎಂದಾಗ ಎಲ್ಲರೂ ನಗೆಗಡಲಲ್ಲಿ ತೆಲಿದರು.

ನಾನು ಈಗ್ಲೂ ಹೇಳ್ತೇನೆ, ಬಿಜೆಪಿಯಲ್ಲಿ ಇರುವವರಿಗೆ ನಾನು ಆಪ್ತ ಮಿತ್ರ, ಪಕ್ಷದವರಿಗೆ ನಾನು ಪಾಲುದಾರ. ಪಕ್ಷ ಬಿಟ್ಟು ಹೋದವರಿಗೆ ನಾನು ಆಪ್ತ ಮಿತ್ರನೂ ಅಲ್ಲ, ಪಾಲುದಾರನೂ ಅಲ್ಲ. ಅಶೋಕ್ ರೈಗೆ ನಾನು ಸಹಕಾರ ಮಾಡಿದ್ದೇನೆ ಎನ್ನುವುದನ್ನು ರುಜುವಾತು ಪಡಿಸಿದರೆ, ನೀವು ಹೇಳಿದಂತೆ ನಾನು ಕೇಳ್ತೆನೆ ಎಂದು ಡಿ.ವಿ ಸದಾನಂದ ಗೌಡ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ, ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ‌.ಜಿ. ಜಗನ್ನಿವಾಸ್ ರಾವ್, ಗೋಪಾಲಕೃಷ್ಣ ಹೇರಳೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ : ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ

Posted by Vidyamaana on 2023-06-22 08:27:57 |

Share: | | | | |


ಕಡಬ : ಖಾತೆ ಬದಲಾವಣೆಗೆ  ಲಂಚಕ್ಕೆ ಬೇಡಿಕೆ

ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 


ಜೂನ್ 22 ರಂದು(ಇಂದು) ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸೈಮನ್ , ಡಿವೈಎಸ್ಪಿ ಚೆಲುವರಾಜ್ , ಡಿವೈಎಸ್ಪಿ ಕಲಾವತಿ , ಇನ್ಸ್‌ಪೆಕ್ಟರ್ ಅಮಾನುಲ್ಲಾ ,ಇನ್ಸ್‌ಪೆಕ್ಟರ್ ವಿನಯಕ ಬಿಲ್ಲವ, ನೇತೃತ್ವದ ಸಿಬ್ಬಂದಿಗಳು ಕಾರ್ಯಾಚರಣೆ ಭಾಗವಹಿಸಿದ್ದರು.

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ನೇಣಿಗೆ ಶರಣು

Posted by Vidyamaana on 2024-05-26 14:44:09 |

Share: | | | | |


ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ನೇಣಿಗೆ ಶರಣು

ಶಿವಮೊಗ್ಗ,(ಮೇ 26) : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ.

30 ವರ್ಷದ ಅಕ್ಷತಾ ಆತ್ಮಹತ್ಯೆ,ಗೆ ಶರಣಾದ ಗೃಹಿಣಿ. ಇಂದು(ಮೇ 26) ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಅರ್ಧ ಗಂಟೆ ಕಾಲ ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದ ಪದ್ಮರಾಜ್

Posted by Vidyamaana on 2024-04-26 11:05:12 |

Share: | | | | |


ಅರ್ಧ ಗಂಟೆ ಕಾಲ ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದ ಪದ್ಮರಾಜ್

ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಮತ್ತು ಮಗಳ ಜೊತೆ ಮತ ಚಲಾಯಿಸಿದರು. 

ಮತಗಟ್ಟೆಯತ್ತ ಬರುವಾಗಲೇ ಮತದಾರರಿಗೆ ಕೈಮುಗಿಯುತ್ತಲೇ ಒಳಬಂದ ಪದ್ಮರಾಜ್, ಸರತಿ ಸಾಲಿನಲ್ಲಿ ಅರ್ಧ ಗಂಟೆ ಕಾಲ ನಿಂತು ಮತ ಚಲಾಯಿಸಿದರು.

KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ ಬಸ್ ಸಮೇತ ಠಾಣೆಗೊಯ್ದ ಚಾಲಕ

Posted by Vidyamaana on 2023-10-15 15:15:48 |

Share: | | | | |


KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ ಬಸ್ ಸಮೇತ ಠಾಣೆಗೊಯ್ದ ಚಾಲಕ

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ.ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.ಇವರಿಬ್ಬರ ನಡುವೆ ಕೆಲ ಹೊತ್ತು ವಾಗ್ವಾದ ನಡೆದ ಬಳಿಕ ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.


ಕಡೆಗೂ ಪ್ರಯಾಣಿಕ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ಸನ್ನೇ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿದ್ದಾನೆ.


ಎಸ್.ಐ.ಬುದ್ದಿಮಾತು :

ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.


ಬಡವರ ಗೋಳು ಕೇಳುವವರು ಯಾರು?


ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ, ಮೀನು ಕೊಂಡುಹೋಗಲು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಈತ ಮಾಡಿದ್ದಾನೆ.


ಒಂದು ಕೆ.ಜಿ.ಕೋಳಿಗೋಸ್ಕರ ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.


ಬಡವರು ಕೋಳಿ ಮಾಂಸ ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.


ಕೋಳಿ,ಮೀನು ತರುವಂತಿಲ್ಲ:

ಬಸ್ ನಲ್ಲಿ ಕೋಳಿ, ಮೀನು ಮಾಂಸ ತರುವಂತಿಲ್ಲ, ಜೀವ ಇರುವ ವಸ್ತುಗಳನ್ನು ತರಬಹುದು, ಮಾಂಸವಾದರೆ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

Posted by Vidyamaana on 2023-12-29 16:22:57 |

Share: | | | | |


ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.


ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.ಲಾರಿಯ ಕ್ಯಾಬಿನ್‍ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Recent News


Leave a Comment: