ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಬೆಳ್ತಂಗಡಿ: ಮಹಿಳೆಯ ಶವ ಬಾವಿಯಲ್ಲಿ ಪತ್ತೆ

Posted by Vidyamaana on 2023-11-03 18:35:01 |

Share: | | | | |


ಬೆಳ್ತಂಗಡಿ: ಮಹಿಳೆಯ ಶವ ಬಾವಿಯಲ್ಲಿ ಪತ್ತೆ

ಬೆಳ್ತಂಗಡಿ : ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸರು ಪತಿ ಸುಧಾಕರ್ ನಾಯ್ಕ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಜ್ಯೋತಿನಗರದ ನಿವಾಸಿ ಟ್ಯಾಪಿಂಗ್ ಕೆಲಸ ಮಾಡುತ್ತಿರುವ ಪತಿ ಸುಧಾಕರ್ ಮತ್ತು ಪತ್ನಿ ಶಶಿಕಲಾ ನಡುವೆ ಗಲಾಟೆ ನಡೆದು ನಂತರ ಶಶಿಕಲಾ ವನ್ನು ಕೊಲೆ ಮಾಡಿ ಬಾವಿಗೆ ಹಾಕಿರುವ ಆರೋಪ ಪತ್ನಿ ಕುಟುಂಬದವರಿಂದ ಕೇಳಿಬರುತ್ತಿದೆ.


ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

Posted by Vidyamaana on 2024-03-22 22:08:17 |

Share: | | | | |


ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಸ್ವೀಕರಿಸಿದ ಪ್ರಧಾನಿ ಮೋದಿ

ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಭೂತಾನ್‌ನ (Bhutan) ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು (Order of the Druk Gyalpo) ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು. ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌

ಅಶೋಕಣ್ಣಡ ಪನ್ಪೆ ಪುತ್ತೂರಿನಲ್ಲೊಂದು ಹೊಸ ಟ್ರೆಂಡ್

Posted by Vidyamaana on 2023-06-13 06:53:21 |

Share: | | | | |


ಅಶೋಕಣ್ಣಡ ಪನ್ಪೆ  ಪುತ್ತೂರಿನಲ್ಲೊಂದು ಹೊಸ ಟ್ರೆಂಡ್

ಪುತ್ತೂರು: ಪುತ್ತೂರಿನಲ್ಲಿ ಇದೀಗ ‘ಅಶೋಕಣ್ಣಡ ಪನ್ಪೆ” ಎಂಬ ಹೊಸ ಟ್ರೆಂಡ್ ಶುರುವಾಗಿದೆ. ಯಾವುದೇ ಸಮಸ್ಯೆ ಎದುರಾದರೂ, ಜನರು ಅಶೋಕ್ ರೈ ಹೆಸರು ಹೇಳುತ್ತಿದ್ದಾರೆ. ಇಂತಹ ಅನೇಕ ನಿದರ್ಶನಗಳು ನಮ್ಮ ಕಣ್ಣ ಮುಂದೆ ಸಿಕ್ಕಿದೆ. ಇದೀಗ ಕುಡಿಯುವ ನೀರು ಪಡೆಯಲು ಇದೇ ಟ್ರೆಂಡ್ ನಿವಾಸಿಗಳಿಗೆ ಸಹಕಾರಿಯಾಗಿದೆ.

ಪುತ್ತೂರು ನಗರಸಭೆ ವ್ಯಾಪ್ತಿಯ ಪಡ್ನೂರು ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಕುಡಿಯುವ ನೀರಿಗೂ ತಾತ್ವಾರ. ಸರಿಯಾಗಿ ಕುಡಿಯುವ ನೀರೇ ಬರುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳ ಕೂಗು. ಆದರೆ ನೀರು ಬಿಡುವವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರ ಗಮನ ಸೆಳೆದರೂ ಸ್ಪಂದನೆ ಸಿಗದಾಯಿತು.

ಕೊನೆ ಬಾರಿಯೆಂಬಂತೆ ನೀರು ಬಿಡುವವರನ್ನು ಸಂಪರ್ಕಿಸಿದ ಮಹಿಳೆಯೋರ್ವರಿಗೆ ಶೂನ್ಯ ಸ್ಪಂದನೆ ಸಿಕ್ಕಿತು. “ನನ ನಿಕ್ಲೆಡ ಪಂಡ್’ದ್ ದಾಲ ಪ್ರಯೋಜನ ಇಲ್ಲ. ಯಾನ್ ಎಂಎಲ್ಎ ಅಶೋಕಣ್ಣಡನೇ ಪನ್ಪೆ” (ಇನ್ನು ನಿಮ್ಮಲ್ಲಿ ಹೇಳಿ ಪ್ರಯೋಜನವಿಲ್ಲ. ನಾನು ಅಶೋಕಣ್ಣನಲ್ಲಿಯೇ ಹೇಳುತ್ತೇನೆ) ಎಂದು ಮಹಿಳೆ ಉಸುರಿದ್ದರಷ್ಟೇ. ಸಂಜೆ ವೇಳೆಗೇ ನೀರು ಬಂದಿತ್ತು.

ಅಷ್ಟು ಸಮಯದಿಂದ ಬಾರದ ಕುಡಿಯುವ ನೀರು, ಶಾಸಕರ ಹೆಸರು ಹೇಳುತ್ತಿದ್ದಂತೆ ಬಂದದ್ದು ಹೇಗೆ? ಎಲ್ಲರಿಗೂ ಆಶ್ಚರ್ಯವೋ ಆಶ್ಚರ್ಯ. ಹಾಗಾದರೆ ಕುಡಿಯುವ ನೀರಿಗೆ ಕೊರತೆ ಬಂದಿದೆ ಎಂದಲ್ಲ. ನೀರು ಬಿಡುವವರಲ್ಲಿ ಏನೋ ಸಮಸ್ಯೆ ಇದೆ ಎಂದಾಯ್ತು. ಶಾಸಕ ಅಶೋಕ್ ಕುಮಾರ್ ರೈ ಅವರ ಹೆಸರು ಹೇಳುತ್ತಿದ್ದಂತೆ ನೀರು ಆಗಮಿಸಿದೆ.

ನಾನು ಎಲ್ಲರ ಸ್ಪೀಕರ್ : ಸಚಿವ ಝಮೀರ್ ಹೇಳಿಕೆಗೆ ಯು.ಟಿ. ಖಾದರ್ ಆಕ್ಷೇಪ

Posted by Vidyamaana on 2023-11-18 15:07:05 |

Share: | | | | |


ನಾನು ಎಲ್ಲರ ಸ್ಪೀಕರ್ : ಸಚಿವ ಝಮೀರ್ ಹೇಳಿಕೆಗೆ ಯು.ಟಿ. ಖಾದರ್ ಆಕ್ಷೇಪ

ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಝಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.



ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮರೀಲ್ : ಆಟೋ ರಿಕ್ಷಾ ಚಾಲಕ ಮನೋಜ್ ರವರ ಪತ್ನಿ ಸಂಧ್ಯಾ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-05-28 18:03:28 |

Share: | | | | |


ಮರೀಲ್ : ಆಟೋ ರಿಕ್ಷಾ ಚಾಲಕ ಮನೋಜ್ ರವರ ಪತ್ನಿ ಸಂಧ್ಯಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ. 

ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ (45 ವ.) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

Recent News


Leave a Comment: