ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ - ವೈರಲ್ ಆಯ್ತು ಅಪರೂಪದ ವಿಡಿಯೋ..!

Posted by Vidyamaana on 2023-09-28 11:51:31 |

Share: | | | | |


ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ - ವೈರಲ್ ಆಯ್ತು ಅಪರೂಪದ ವಿಡಿಯೋ..!

ನವದೆಹಲಿ :  ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ ಮಂತ್ರಿಗೆ ಚಹಾ ತಂದು ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ.ಮೋದಿ ಅವರು ಟ್ವಿಟರ್ (ಎಕ್ಸ್‌) ನಲ್ಲಿ ಆಸಕ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದು, ಇದರಲ್ಲಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರದರ್ಶನದಲ್ಲಿ ವಿವಿಧ ರೋಬೋಟ್ ಸ್ಟಾಲ್‌ಗಳಲ್ಲಿ ಹಲವಾರು ರೋಬೋಟಿಕ್ ಕ್ರಿಯೆಗಳನ್ನು ವೀಕ್ಷಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ಮತ್ತು ಸಿಎಂಗೆ ರೋಬೋಟ್ ಚಹಾವನ್ನು ನೀಡಿದೆ‌.ನೈಸರ್ಗಿಕ ವಿಕೋಪಗಳು ಅಥವಾ ಅಗ್ನಿ ಅವಘಡಗಳ ಸಂದರ್ಭದಲ್ಲಿ ಮಾನವರಿಗೆ ರೋಬೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಪ್ರಧಾನಿ ಮೋದಿ ಅವರು ನೋಡಿದ್ದಾರೆಂದು ಈ ಕ್ಲಿಪ್ ತೋರಿಸಿದೆ.ರೋಬೋಟ್ ಇಂಜಿನಿಯರ್‌ಗಳು ಪಿಎಂ ಮೋದಿಯವರಿಗೆ ರೋಬೋಟ್‌ಗಳು ಹೇಗೆ ಜೀವನದ ವಿವಿಧ ಹಂತಗಳಲ್ಲಿ ಶಕ್ತರಾಗಿ ದೊಡ್ಡ ಪಾತ್ರವನ್ನು ವಹಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ.

ವೈರಲ್ ಆಯ್ತು ಅಪರೂಪದ ವಿಡಿಯೋ..!


ರೊಬೊಟಿಕ್ಸ್‌ ನೊಂದಿಗೆ ಭವಿಷ್ಯದ ಅಂತ್ಯವಿಲ್ಲದ ಸಾಧ್ಯತೆಗಳನ್ನು ಅನ್ವೇಷಿಸುವುದು! ಎಂದು ಟ್ವಿಟರ್ (ಎಕ್ಸ್) ಪೋಸ್ಟ್‌ ನಲ್ಲಿ ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

Posted by Vidyamaana on 2023-10-24 07:36:47 |

Share: | | | | |


ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ  ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇದೀಗ ನ್ಯಾಂಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ, ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿಗೆ ಎಲ್ಲರೂ ಸಮಾನರು. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಸರ್ಕಾರ ನಮ್ಮ ಇಲಾಖೆ ಆಸ್ಪದ ನೀಡುವುದಿಲ್ಲ. ಹಲವು ಕಡೆ  ಕಳ್ಳ ಬೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಸ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಭೇಟೆ ಸಾಕಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಹಾಗೂ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ

ಉಮೇಶ್‌ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ ನಕಾರ

Posted by Vidyamaana on 2024-02-27 12:40:36 |

Share: | | | | |


ಉಮೇಶ್‌ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್‌ ರೆಡ್ಡಿಗೆ ಪೆರೋಲ್‌ ನೀಡಲು ಹೈಕೋರ್ಟ್‌ ನಿರಾಕರಿಸಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್‌ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್‌ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದೆ.


ಆಸ್ಪಾಕ್ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಆದ್ದರಿಂದ ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂಕೋರ್ಟ್ ಅರ್ಜಿದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


1998 ರ ಫೆ. 28 ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿಉಮೇಶ್‌ ರೆಡ್ಡಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಸುಪ್ರೀಂಕೋರ್ಟ್‌ ಮಾರ್ಪಾಡು ಮಾಡಿ ಆದೇಶಿಸಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಪೆರೋಲ್‌ ಸೇರಿದಂತೆ ಯಾವುದೇ ರೀತಿಯ ಅರ್ಜಿ ಸಲ್ಲಿಸಬೇಕು ಎಂದಾದರೆ ಕನಿಷ್ಟ 30 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿತ್ತು.

ನನ್ನ ಮಗನೆಲ್ಲಿ– ಹೆಣಗಳ ರಾಶಿಗಳ ನಡುವೆ ಮಗನನ್ನು ಹುಡುಕುತ್ತಿರುವ ತಂದೆ

Posted by Vidyamaana on 2023-06-04 05:11:56 |

Share: | | | | |


ನನ್ನ ಮಗನೆಲ್ಲಿ– ಹೆಣಗಳ ರಾಶಿಗಳ ನಡುವೆ ಮಗನನ್ನು ಹುಡುಕುತ್ತಿರುವ ತಂದೆ

         ದಶಕದ ಭೀಕರ ರೈಲು ದುರಂತಗಳಲ್ಲೇ ಒಂದು ಎಂದು ಹೇಳಲಾಗುತ್ತಿರುವ ಒಡಿಶಾ ತ್ರಿವಳಿ ರೈಲು ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿದು ಸರಿಸುಮಾರು 300 ಜೀವಗಳು ಅಪಘಾತಕ್ಕೆ ಬಲಿಯಾಗಿ ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಕಹಿ ಘಟನೆಯ ಬೆನ್ನಲ್ಲೇ ಇದೀಗ ಮೃತಪಟ್ಟ ಪ್ರಯಾಣಿಕರ ಕುಟುಂಬಸ್ಥರು ತಮ್ಮವರ ಶವಗಳನ್ನು ಹುಡುಕಲು ಒದ್ದಾಡುತ್ತಿರುವ ಒಂದೊಂದೇ ಘಟನೆಗಳು ಹೊರಜಗತ್ತಿಗೆ ಅನಾವರಣಗೊಳ್ಳುತ್ತಿದೆ.

ಕಣ್ಣಂಚಿನಲ್ಲಿ ನೀರು ತುಂಬಿಕೊಂಡು ಮಂಜಾದ ಕಣ್ಣಿನೊಂದಿಗೆ ಅಲ್ಲಿ ಸಾಲಾಗಿ ಮಲಗಿಸಿರುವ ನೂರಾರು ಹೆಣಗಳ ನಡುವೆ ತನ್ನ ಪುತ್ರನನ್ನು ಹುಡುಕುತ್ತಿರುವ ಈ ಬಡಪಾಯಿ ತಂದೆಯ ಸ್ಥಿತಿಯನ್ನು ಹೊರಜಗತ್ತಿಗೆ ಅನಾವರಣಗೊಳಿಸಿರುವ ವಿಡಿಯೋ ಒಂದು ಇದೀಗ ಎಲ್ಲೆಡೆ ಹರಿದಾಡುತ್ತಿದ್ದು, ನೋಡುಗರ ಕಣ್ಣಂಚಿನಲ್ಲೂ ನೀರುತರಿಸುವಂತಿದೆ.

ನಾವು ಚಿಕ್ಕವರಿದ್ದಾಗ ಚಿಕ್ಕ ವಸ್ತುಗಳನ್ನು ಮನೆಯಲ್ಲಿ ಕಳೆದುಕೊಂಡಾಗ ಇಡೀ ಮನೆಯನ್ನೇ ಹುಡುಕುವಂತೆ, ಯಾವುದೋ ಶುಭ ಸಮಾರಂಭಗಳಿಗೆ ಹೊರಟು ನಿಂತಾಗ ಬೀರುವಿನಿಂದ ಬಟ್ಟೆಯನ್ನು ಕಿತ್ತು ಕೆಳಗೆ ಹಾಕುವಂತೆ ಈ ತಂದೆಯೊಬ್ಬರು ಶವದ ರಾಶಿಯಲ್ಲಿ ತನ್ನ ಮಗನಿದ್ದಾನೆಯೇ ಎಂದು ಹುಡುಕಾಡುತ್ತಿರುವುದರ ಹಿಂದಿನ ಕಾತರ, ಉದ್ವೇಗ, ನೋವು ಆ ತಂದೆಗೆ ಮಾತ್ರ ತಿಳಿದಿರಲು ಸಾಧ್ಯ!

ಒಡಿಶಾದಲ್ಲಿ ರೈಲು ಅಪಘಾತದಿಂದ ಪ್ರಾಣ ಕಳೆದುಕೊಂಡ ತನ್ನ ಮಗನ ಮೃತದೇಹವನ್ನು ಈ ತಂದೆ ಶವಗಳಿಗೆ ಮುಚ್ಚಿದ ಮುಸುಕು ತೆಗೆದು ತೆಗೆದು ಹುಡುಕಿತ್ತಿದ್ದಾರೆ. ಈ ರೀತಿಯ ಸಾವು-ನೋವಿನ ಅನುಭವ ಯಾರಿಗೂ ಆಗುವುದು ಬೇಡ ಎಂದು ಹೇಳುವುದು ಸುಲಭ ಆದರೆ ಇಂತಹ ದುರಂತಗಳಾದ ಸಂದರ್ಭದಲ್ಲಿ ಸಂತ್ರಸ್ತರ ರಕ್ತ ಸಂಬಂಧಿಗಳು ಪಡುವ ಪಾಡು ಆ ದೇವರಿಗೇ ಪ್ರೀತಿ! ಆ ತಂದೆ ಮಗ ಕನಿಷ್ಠ ಗಾಳುವಾಗಿ ಬದುಕಿರಲಿ ಮತ್ತು ಶವಾಗಾರದ ಬದಲು ಆಸ್ಪತ್ರೆಯ ಬೆಡ್ ಮೇಲೆ ಈ ತಂದೆ ತನ್ನ ಮಗನನ್ನು ಭೆಟಿಯಾಗುವಂತಾಗಲಿ ಎಂಬುದಷ್ಟೇ ನಾವೀ ಸಂದರ್ಭದಲ್ಲಿ ಮಾಡಬಹುದಾದ ಹಾರೈಕೆ.

ಬಾಯ್‌ ಫ್ರೆಂಡ್‌ನೊಂದಿಗೆ ಶವವಾಗಿ ಪತ್ತೆಯಾದ ನೀಲಿ ಚಿತ್ರ ತಾರೆ

Posted by Vidyamaana on 2024-01-28 15:51:13 |

Share: | | | | |


ಬಾಯ್‌ ಫ್ರೆಂಡ್‌ನೊಂದಿಗೆ ಶವವಾಗಿ ಪತ್ತೆಯಾದ ನೀಲಿ ಚಿತ್ರ ತಾರೆ

ಅಮೆರಿಕದ ನೀಲಿ ಚಿತ್ರ ತಾರೆ ಜೆಸ್ಸಿ ಜೇನ್(43) ಮತ್ತು ಆಕೆಯ ಬಾಯ್‌ಫ್ರೆಂಡ್ ನಟ ಬ್ರೇಟ್ ಒಂದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಮಿತಿ ಮೀರಿ ಮಾದಕ ವಸ್ತು ಸೇವನೆ ಮಾಡಿದ್ದಕ್ಕಾಗಿ, ಇವರಿಬ್ಬರ ಜೀವ ಹೋಗಿದೆ ಎಂದು ವರದಿಯಾಗಿದೆ.ಜೆಸ್ಸಿ ಬ್ರೇಟ್ ಜೊತೆ ಲೀವ್ ಇನ್‌ ರಿಲೇಶಿನ್‌ಶಿಪ್‌ನಲ್ಲಿ ಇದ್ದಳು. ಹಾಗಾಗಿ ಈಕೆ ಬಾಯ್‌ಫ್ರೆಂಡ್ ಮನೆಯಲ್ಲಿಯೇ ಇರುತ್ತಿದ್ದಳು. ಇಬ್ಬರೂ ಅಗತ್ಯಕ್ಕಿಂತ ಹೆಚ್ಚು ಮಾದಕ ವಸ್ತುವನ್ನು ಸೇವಿಸಿದ್ದಕ್ಕೆ, ಇವರಿಬ್ಬರು ಸಾವನ್ನಪ್ಪಿದ್ದಾರೆಂದು ಅಂದಾಜಿಸಲಾಗಿದೆ.


ಇಬ್ಬರ ಶವವೂ ಒಂದೇ ಜಾಗದಲ್ಲಿ ಸಿಕ್ಕ ಕಾರಣ, ಸ್ಥಳೀಯ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಜೆಸ್ಸಿ 2003ರಲ್ಲಿ ನೀಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಟಿವಿ ಕಾರ್ಯಕ್ರಮಗಳಲ್ಲೂ ಆಕೆ ಭಾಗವಹಿಸಿದ್ದರು.

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

Posted by Vidyamaana on 2023-04-20 21:02:46 |

Share: | | | | |


ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು.

ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ.  ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.

Recent News


Leave a Comment: