ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

Posted by Vidyamaana on 2023-04-20 20:51:39 |

Share: | | | | |


ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಚುನಾವಣಾಧಿಕಾರಿ ಗಿರೀಶ್ ನಂದನ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಹಾಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು

ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚಲನಚಿತ್ರ ನಟಿ ಶೃತಿ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ ಹಲವಾರು ಮಂದಿ ಕೇಂದ್ರ ಮತ್ತು ರಾಜ್ಯದ ನಾಯಕರು, ಸಾವಿರಾರು ಮಂದಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಗೊಂಬೆ ಕುಣಿತ, ಚೆಂಡೆ, ಶಲ್ಯ ಧರಿಸಿದ ಕಾರ್ಯಕರ್ತರು, ಮಹಿಳೆಯರು, ನಾಸಿಕ್ ಬ್ಯಾಂಡ್ ವಿಶೇಷ ಆಕರ್ಷಣೆಯಾಗಿತ್ತು..

ಅರ್ಲಪದವು ಗುತ್ತಿಗೆದಾರ ವಿಜಯ್ ಕುಮಾರ್ ಆತ್ಮಹತ್ಯೆ

Posted by Vidyamaana on 2024-01-01 22:13:21 |

Share: | | | | |


ಅರ್ಲಪದವು ಗುತ್ತಿಗೆದಾರ ವಿಜಯ್ ಕುಮಾರ್ ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ, ಕುಟುಂಬಸ್ಥರನ್ನು ಅಗಲಿದ್ದಾರೆ.

ಕನ್ಯಾನ : ಶ್ರೀ ಕ್ಷೇತ್ರ ಕುಟ್ಟಿತ್ತಡ್ಕದಲ್ಲಿ ಆಟಿಲಿ ಒರಿನಾಳ್

Posted by Vidyamaana on 2024-08-11 22:50:10 |

Share: | | | | |


ಕನ್ಯಾನ : ಶ್ರೀ ಕ್ಷೇತ್ರ ಕುಟ್ಟಿತ್ತಡ್ಕದಲ್ಲಿ ಆಟಿಲಿ ಒರಿನಾಳ್

ಕನ್ಯಾನ : ಶ್ರೀ ವಿಷ್ಣುಮೂರ್ತಿ ವಯನಾಟ್ ಕುಲವನ್ ಶ್ರೀ ಕ್ಷೇತ್ರ ಕುಟ್ಟಿತ್ತಡ್ಕದಲ್ಲಿ ಆಟಿಲಿ ಒರಿನಾಳ್ ಎಂಬ ಕಾರ್ಯಕ್ರಮವನ್ನು ಆಡಳಿತ ಮಂಡಳಿ ಕೋಶಾಧಿಕಾರಿಯಾದ ಆಶ್ವಿನ್ ಎಂ. ಕೆ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

Posted by Vidyamaana on 2023-09-01 01:56:48 |

Share: | | | | |


ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

ಹೊಸದಿಲ್ಲಿ: ಭಾರತೀಯ ರೈಲ್ವೇ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಜಯ ವರ್ಮಾ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.


ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಆಗಸ್ಟ್ 31 ರ ದಿನಾಂಕದ ಆದೇಶದಲ್ಲಿ, ಜಯ ಸಿನ್ಹಾ ಅವರು ಸೆಪ್ಟೆಂಬರ್ 1ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳಲಿದೆ. ಈ ಹಿಂದೆ ಅಧ್ಯಕ್ಷರು ಮತ್ತು ಸಿಇಒ ಆಗಿದ್ದ ಅನಿಲ್ ಕುಮಾರ್ ಲಹೋಟಿ ಅಧಿಕಾರವಧಿಯ ನಂತರ ಸಿನ್ಹಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಸಿನ್ಹಾ 35 ವರ್ಷಗಳಿಂದ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿಜಿಲೆನ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ಅಂಶಗಳನ್ನು ಒಳಗೊಂಡಂತೆ ರೈಲ್ವೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


ಬಾಲಸೋರ್ ರೈಲು ಅಪಘಾತದ ನಂತರ ಜಯಾ ಅವರು ಸದಸ್ಯರಾಗಿ (ಕಾರ್ಯಾಚರಣೆಗಳು ಮತ್ತು ವ್ಯವಹಾರ ಅಭಿವೃದ್ಧಿ) ರೈಲ್ವೆಯ ಮಾಧ್ಯಮ ತೊಡಗಿಸಿಕೊಳ್ಳುವಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಸುಮಾರು 300 ಜನರ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರದ ಸಂಕೀರ್ಣ ಸಿಗ್ನಲಿಂಗ್ ವ್ಯವಸ್ಥೆಯನ್ನು ಅವರು ವಿವರಿಸಿದ್ದರು.


ಸಿನ್ಹಾ ಅವರು ಬಾಂಗ್ಲಾದೇಶದ ಢಾಕಾದಲ್ಲಿರುವ ಭಾರತದ ಹೈ ಕಮಿಷನ್‌ನಲ್ಲಿ ರೈಲ್ವೇ ಸಲಹೆಗಾರರ ಪಾತ್ರವನ್ನು ವಹಿಸಿಕೊಂಡು ಅಲ್ಲಿ ಅವರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದರು. ಕೋಲ್ಕತ್ತಾ ಮತ್ತು ಢಾಕಾ ನಡುವೆ ಕಾರ್ಯನಿರ್ವಹಿಸುವ ಮೈತ್ರೀ ಎಕ್ಸ್‌ಪ್ರೆಸ್‌ನ ಉದ್ಘಾಟನೆಯು ಬಾಂಗ್ಲಾದೇಶದಲ್ಲಿ ಅವರ ಅಧಿಕಾರಾವಧಿಯಲ್ಲಿ ನಡೆಯಿತು. ಹೆಚ್ಚುವರಿಯಾಗಿ, ಅವರು ಪೂರ್ವ ರೈಲ್ವೆಯೊಳಗಿನ ಸೀಲ್ದಾ ವಿಭಾಗಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸ್ಥಾನವನ್ನು ಹೊಂದಿದ್ದರು.


2017 ರಲ್ಲಿ, ಜಯ ವರ್ಮ ಸಿನ್ಹಾ ಅವರು ಆಗ್ನೇಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು, ಅವರು ಆಗ್ನೇಯ ರೈಲ್ವೆಯ ಹಿರಿಯ ಉಪ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿದ್ದರು.

ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಪ್ರತೀ ಆದಿತ್ಯವಾರ ಸಂದರ್ಶನಕ್ಕೆ ಲಭ್ಯ.

Posted by Vidyamaana on 2023-11-25 02:45:17 |

Share: | | | | |


ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಪ್ರತೀ ಆದಿತ್ಯವಾರ ಸಂದರ್ಶನಕ್ಕೆ ಲಭ್ಯ.

ಪುತ್ತೂರು :ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ 

ಹಲವು ವರ್ಷಗಳಿಂದ ಮಕ್ಕಳ ಒಳರೋಗಿ ಮತ್ತು ಹೊರರೋಗಿ ವಿಭಾಗದ ಮತ್ತು ಎಮರ್ಜೆನ್ಸಿ ವಿಭಾಗದ ಮುಖ್ಯ ವೈದ್ಯರಾಗಿ ಸೇವೆ ಸಲ್ಲಿಸಿರು ಮತ್ತು ಪ್ರಸ್ತುತ ಕಕ್ಕಿಂಜೆಯಲ್ಲಿ ಆಸ್ಪತ್ರೆ ನಡೆಸುತ್ತಿರುವ ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಅವರು  ಪ್ರತೀ ಆದಿತ್ಯವಾರ ಬೆಳಿಗ್ಗೆ 10.30ರಿಂದ 12.30ರವರೆಗೆ ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಸಂದರ್ಶನಕ್ಕೆ ಲಭ್ಯರಿರುವರು. ಸಂದರ್ಶಿಸಲು ಇಚ್ಚಿಸುವವರು ಮುಂಚಿತವಾಗಿ ಅಪಾಯಿಂಟ್ಮೆಂಟ್ ಪಡೆಯಬೇಕಾಗುತ್ತದೆ ಎಂದು ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನ ಚೀಫ್ ಫಿಸಿಶಿಯನ್ ಮತ್ತು ಆಯುರ್ವೇದ ತಜ್ಞರು ಆಗಿರುವ ಡಾ. ಸುಜಯ್ ತಂತ್ರಿ ಕೆಮ್ಮಿಂಜೆಯವರು ತಿಳಿಸಿದ್ದಾರೆ.

ಮಾಹಿತಿಗೆ ಕರೆ ಮಾಡಿ 9036156242, 9844638242

ಗಂಡನ ಅಗಲಿಕೆಯ ನೋವು: ನೇಣು ಬಿಗಿದುಕೊಂಡು ತಾಯಿ, ಮಗ ಆತ್ಮಹತ್ಯೆ

Posted by Vidyamaana on 2024-07-13 18:43:13 |

Share: | | | | |


ಗಂಡನ ಅಗಲಿಕೆಯ ನೋವು: ನೇಣು ಬಿಗಿದುಕೊಂಡು ತಾಯಿ, ಮಗ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದ ಆರ್.ಎನ್.ಝೆಡ್ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಮೃತರನ್ನು ಪುಲಿವರ್ತ (13) ವರ್ಷ ಹಾಗೂ ರಮ್ಯಾಜಿ (40) ಎಂದು ಗುರುತಿಸಲಾಗಿದೆ.

ಮನೆಯ ಫ್ಯಾನಿಗೆ ಸೀರೆಯನ್ನು ಬಿಗಿದು ಮೊದಲು 13 ವರ್ಷದ ಮಗನನ್ನು ನೇಣಿನ ಕುಣಿಕೆಗೆ ಹಾಕಿ ಕೊಲೆ ಮಾಡಿದ್ದಾಳೆ. ಮಗ ಸತ್ತ ನಂತರ ಆತನ ಹೆಣವನ್ನು ಕೆಳಗಿಳಿಸಿ, ನಂತರ ತಾನು ಅದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಜೀವ ಬಿಟ್ಟಿದ್ದಾಳೆ. ಈ ಘಟನೆಯ ಬಗ್ಗೆ ನೋಡುಗರು ಹಾಗೂ ಕೇಳುಗರಿಗೆ ಕರುಳು ಕಿವುಚುವಂತಹ ವಾತಾವರಣ ನಿರ್ಮಿಸಿದೆ.

Recent News


Leave a Comment: