ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಅಬಕಾರಿ ಉಪ ಆಯುಕ್ತ ಸ್ವಪ್ನ ಸೇರಿ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Posted by Vidyamaana on 2023-10-14 21:48:24 |

Share: | | | | |


ಅಬಕಾರಿ ಉಪ ಆಯುಕ್ತ ಸ್ವಪ್ನ ಸೇರಿ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ದಾವಣಗೆರೆ: ಅಬಕಾರಿ ಉಪ ಆಯುಕ್ತೆ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಅವರನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದಿದೆ.


ಹರಿಹರದ ಅಮರಾವತಿ ಬಳಿ ಸಿಎಲ್- 7 ಮದ್ಯದ ಅಂಗಡಿ ಪರವಾನಗಿ ಮಾಡಿಕೊಡಲು ಡಿ.ಜಿ. ರಘುನಾಥ ಎಂಬುವರು ಅರ್ಜಿ ಸಲ್ಲಿಸಿದ್ದರು. ಅಬಕಾರಿಗಳು ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.


ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ನಡೆಸಿದ ಈ ದಾಳಿಯಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಭು ಬ. ಸೂರಿನ, ಮಧುಸೂಧನ್, ಎಚ್.ಎಸ್. ರಾಷ್ಟ್ರಪತಿ, ಹಾವೇರಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಪಂಡಿತ್ ಅವರ ನೇತೃತ್ವದಲ್ಲಿ ಕಾನ್‌ಸ್ಟೆಬಲ್‌ಗಳಾದ ವೀರೇಶಯ್ಯ, ಆಂಜನೇಯ, ಜಂಷಿದಾ ಖಾನಂ, ಧನರಾಜ್, ಮಲ್ಲಿಕಾರ್ಜುನ, ಲಿಂಗೇಶ, ಬಸವರಾಜ, ಗಿರೀಶ್, ವಿನಾಯಕ, ಕೃಷ್ಣನಾಯ್ಕ, ಮೋಹನ್, ಕೋಟಿನಾಯ್ಕ, ಮಾಲತೇಶ ಅರಸೀಕೆರೆ, ಎಸ್.ಎಸ್.ಕಡಕೋಳ, ಮಹಾಂತೇಶ ಕಂಬಳಿ, ಮಹಾಂತೇಶ ಕಂಬಳಿ, ಲಕ್ಷ್ಮವ್ವ ಅನವೇರಿ, ಹರ್ಷಿಯಾ, ಸರೋಜಾ ಕಾರ್ಯಾಚರಣೆಯಲ್ಲಿದ್ದರು.

ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

Posted by Vidyamaana on 2023-06-22 01:51:24 |

Share: | | | | |


ಮಂಗಳೂರು: ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ SDPI ಸೇರ್ಪಡೆ

ಮಂಗಳೂರು : ಜೆಡಿಎಸ್ ಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.ಎಸ್.ಡಿ.ಪಿ. ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆ ಎಸ್.ಡಿ.ಪಿ.ಐಗೆ ಸೇರ್ಪಡೆಗೊಂಡರು.


ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ, ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ,ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ,ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಚಾರಣ ತೆರಳಿದ್ದ ಯುವಕ ಹೃದಯಘಾತದಿಂದ ಹರಿಯಾಣ ಮೂಲದ ಜತಿನ್ ನಿಧನ

Posted by Vidyamaana on 2023-12-25 14:52:36 |

Share: | | | | |


ಚಾರಣ ತೆರಳಿದ್ದ ಯುವಕ ಹೃದಯಘಾತದಿಂದ ಹರಿಯಾಣ ಮೂಲದ ಜತಿನ್ ನಿಧನ

ಕೊಡಗು:ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.ಹರಿಯಾಣ ಮೂಲದ ಜತಿನ್ (25) ಮೃತಪಟ್ಟ ಯುವಕ. ಜತಿನ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದನು. 5 ಮಂದಿ ಸ್ನೇಹಿತರ ಜೊತೆ ತಡಿಯಂಡಮೋಳ್ ಬೆಟ್ಟಕ್ಕೆ ಬಂದಿದ್ದನು.ಬೆಟ್ಟದ ಮೇಲೆ ತಲುಪಿದಾಗ ತೀವ್ರತರಹದ ಎದೆನೋವಿಗೆ ಒಳಗಾದ ಜತಿನ್ ಹೃದಯಾಘಾತದಿಂದ ಬೆಟ್ಟದ ಮೇಲೆ ಕೊನೆಯುಸಿರೆಳೆದಿದ್ದಾನೆ.ಸ್ಥಳಕ್ಕೆ ನಾಪೋಕ್ಲು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುರ್ಗಮ ಹಾದಿಯಲ್ಲೆ ಪ್ರವಾಸಿಗನ ಮೃತದೇಹ ಹೊತ್ತು ತಂದಿದ್ದಾರೆ.

ಸುಳ್ಯಕ್ಕೆ ಕಾಲಿಟ್ಟ ವಿದ್ಯಾಮಾತಾ ಅಕಾಡೆಮಿ – ನಾಳೆ (ಸೆ.28) ಶುಭಾರಂಭ

Posted by Vidyamaana on 2023-09-27 15:21:10 |

Share: | | | | |


ಸುಳ್ಯಕ್ಕೆ ಕಾಲಿಟ್ಟ ವಿದ್ಯಾಮಾತಾ ಅಕಾಡೆಮಿ – ನಾಳೆ (ಸೆ.28) ಶುಭಾರಂಭ

ಸುಳ್ಯ : ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆಯಾಗಿರುವ, ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ "ವಿದ್ಯಾಮಾತಾ ಅಕಾಡೆಮಿ"ಯ ಶಾಖಾ ಕಛೇರಿ ಇದೇ ಬರುವ ದಿನಾಂಕ 28 ಸೆಪ್ಟೆಂಬರ್ 2023 ಗುರುವಾರದಂದು ಬೆಳಿಗ್ಗೆ 10:00ಕ್ಕೆ ಸರಿಯಾಗಿ ಸುಳ್ಯದಲ್ಲಿ ಶುಭಾರಂಭಗೊಳ್ಳಲಿದೆ

ವಿದ್ಯಾಮಾತಾ ಅಕಾಡೆಮಿಯ ಮಾತೃ ಸಂಸ್ಥೆಯಾಗಿರುವ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ ಮೂರು ರಾಜ್ಯಮಟ್ಟದ ಉದ್ಯೋಗ ಮೇಳಗಳು, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸಿರುವ ಹೆಮ್ಮೆ ಇದೆ. ಹಾಗೆಯೇ ಕರಾವಳಿ ಜಿಲ್ಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಆಯ್ಕೆಯಾಗುವಂತೆ ಮಾಡಿರುವ ಹೆಮ್ಮೆ ವಿದ್ಯಾಮಾತಾ ಅಕಾಡೆಮಿಯದ್ದಾಗಿದೆ.

ಸಂಸ್ಥೆಯ ವೈಶಿಷ್ಟ್ಯತೆಗಳು :

* ಇಪ್ಪತ್ತಕ್ಕೂ ಹೆಚ್ಚಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆರು ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ ಅವಕಾಶ

* ಸದ್ಯ ಓದುತ್ತಿರುವ ವಿದ್ಯಾರ್ಥಿಗಳಿಗೆ / ಸದ್ಯ ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ದಿನನಿತ್ಯ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ಆನ್ಲೈನ್ ಮುಖಾಂತರ ತರಬೇತಿ ಪಡೆಯುವ ಅವಕಾಶ

* ನೇರ ತರಗತಿಗಳಲ್ಲಿ ಪಾಲ್ಗೊಳ್ಳುವವರಿಗೆ ವಾರದ 5 ದಿನ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 1:00ರವರೆಗೆ ಆರು ತಿಂಗಳ ತರಬೇತಿ

* ತರಬೇತಿ ಮುಗಿದರೂ ಎರಡು ವರ್ಷಗಳು ನಿರಂತರವಾಗಿ ಅರ್ಜಿ ಸಲ್ಲಿಕೆ, ಪ್ರವೇಶ ಪತ್ರ , ವಿಶೇಷ ತರಗತಿಗಳನ್ನು ಉಚಿತವಾಗಿ ನೀಡುವ ಮುಖಾಂತರ ಸರಕಾರಿ ಹುದ್ದೆಗೆ ಆಯ್ಕೆಯಾಗಲು ಸಂಪೂರ್ಣವಾಗಿ ವಿದ್ಯಾಮಾತಾ ಅಕಾಡೆಮಿಯು ಬೆಂಬಲವಾಗಿ ನಿಲ್ಲುತ್ತದೆ

* ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೂ ಉಚಿತ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ್, ದೈಹಿಕ ಸದೃಢತೆಯ ಮೈದಾನ ತರಬೇತಿ ನೀಡಲಾಗುವುದು

* ಅಧಿಕಾರಿಗಳು, ನಿವೃತ್ತರು, ದೇಶದ ಬೇರೆ ಬೇರೆ ಭಾಗಗಳ ವಿಶೇಷ ಸಂಪನ್ಮೂಲ ವ್ಯಕ್ತಿಗಳ ಮೂಲಕ ನಿರಂತರ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುವುದು

* ಪ್ರತಿವಾರ ಅಣಕು  ಪರೀಕ್ಷೆಗಳು, ಹಳೆಯ ಪ್ರಶ್ನೆ ಪತ್ರಿಕೆಗಳ ಪುನರ್ ವಿಮರ್ಶೆಯ ಮೂಲಕ ತರಬೇತಿಗೊಳಿಸಲಾಗುತ್ತದೆ

* ದೇಶ - ವಿದೇಶಗಳಲ್ಲಿ ಉತ್ತಮ  ಕಂಪನಿಗಳ ಉದ್ಯೋಗಕ್ಕಾಗಿ ಪ್ರಯತ್ನಿಸುವವರಿಗೆ ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಆಂಡ್ ಟ್ಯಾಕ್ಸೇಶನ್ ಕೋರ್ಸ್ ಗಳನ್ನು ನೀಡಲಾಗುತ್ತದೆ

ಇದೆಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿಯಲ್ಲಿ ಪಡೆಯುವ ಅವಕಾಶ . ಸುಳ್ಯ ಕೊಡಗು ಮಡಿಕೇರಿ ಹಾಗೂ ವಿವಿಧ ತಾಲೂಕು ಹಾಗು ಜಿಲ್ಲೆಗಳ ಕರಾವಳಿ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಲಭಿಸುವಂತಾಗಲು ಪ್ರತೀ ವಿದ್ಯಾರ್ಥಿಯನ್ನು ತಯಾರಿ ಮಾಡುವುದು ಹಾಗೂ ಸರಕಾರಿ ಹುದ್ದೆಗೆ ಆಯ್ಕೆಯಾಗದೆ ಇರುವ ವಿದ್ಯಾರ್ಥಿಗಳನ್ನು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಯನ್ನು ತಯಾರಿ ಮಾಡುವುದು  ವಿದ್ಯಾಮಾತಾ ಅಕಾಡೆಮಿಯ ಉದ್ದೇಶವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ 9620468869 / 9448527606 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆಡಳಿತ ಕಛೇರಿ ಪುತ್ತೂರು  : ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎ.ಪಿ.ಯಂ.ಸಿ ರಸ್ತೆ ಪುತ್ತೂರು

ಸುಳ್ಯ ಶಾಖೆ : TAPCMS ಬಿಲ್ಡಿಂಗ್, ಕಾರ್ ಸ್ಟ್ರೀಟ್, ಸುಳ್ಯ, ದ.ಕ 574239

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

Posted by Vidyamaana on 2023-12-13 11:24:20 |

Share: | | | | |


ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ವಾರಿಜ ಅವರು ದಿನಾಂಕ 12.12.2023 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್ ಆರ್ ಟಿ ಸಿ ಬಸ್ಸು ಹತ್ತುವಾಗ ಯಾರೋ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದಿದ್ದಾರೆ. ಅಷ್ಟರಲ್ಲಿ ಅವರು ಜೋರಾಗಿ ಕಿರುಚಿದ್ದಾರೆ. ಆದರೆ ಯಾರು ಸರ ಕದ್ದಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಚಿನ್ನದ ಸರ 36 ಗ್ರಾಂ ಇದ್ದು ಅಂದಾಜು ಮೌಲ್ಯ 1.44 ಸಾವಿರ ಇರಬಹುದು ಎನ್ನಲಾಗಿದೆ. ಇನ್ನು ವಾರಿಜ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ನಾಪತ್ತೆತೆಯಾಗಿದ್ದ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ

Posted by Vidyamaana on 2024-01-23 15:50:14 |

Share: | | | | |


ನಾಪತ್ತೆತೆಯಾಗಿದ್ದ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ


ಸುಳ್ಯ ; ಕಾಣಿಯೂರು ಖಾಸಗಿ   ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್   (15 ವ ) ಜ .23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

Recent News


Leave a Comment: