ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಕಣ್ತೆರೆಯುವ ಮೊದಲೇ ನವಜಾತ ಶಿಶುವಿಗೆ ಆವರಿಸಿದ ಹೃದಯದ ನೋವು

Posted by Vidyamaana on 2024-05-07 16:36:13 |

Share: | | | | |


ಕಣ್ತೆರೆಯುವ ಮೊದಲೇ ನವಜಾತ ಶಿಶುವಿಗೆ ಆವರಿಸಿದ ಹೃದಯದ ನೋವು

ಕಾಸರಗೋಡು: ನವಜಾತ ಶಿಶು ಮೊಹಮ್ಮದ್ ಶೀಸ್ . ಹುಟ್ಟಿ ಇನ್ನು ನಾಲ್ಕು ದಿನ ಆಗಿರಲಿಲ್ಲ. ಅಷ್ಟರಲ್ಲೇ ಹೃದಯದ ನೋವು ಬಾಧಿಸಿದೆ.

ಆ ನೋವಿನ ತೀವ್ರತೆಗೆ ಮಗು ಮಾತ್ರವಲ್ಲ ಮಗುವಿನ  ಮನೆಯವರು ಹೈರಾಣಾಗಿ ಹೋದರು.ಮಗುವಿನ ತಂದೆ ಮೊಹಮ್ಮದ್ ಜಾಯೀದ್ ಅವರು ತಕ್ಷಣ ಕಾಸರಗೋಡಿನ ಚೈತ್ರಾ ಆಸ್ಪತ್ರೆಗೆ ದಾಖಲಿಸಿದರು.

ಮಂಗಳೂರು: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-10-19 08:51:43 |

Share: | | | | |


ಮಂಗಳೂರು: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿಶ್ವ ಹಿಂದೂ ಪರಿಷತ್ನ ದ.ಕ. ಜಿಲ್ಲಾ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.


ಅ.16ರಂದು ಶರಣ್ ಪಂಪ್ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜಗಳನ್ನು ಹಾಕಿ, ಭಕ್ತರು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದನು. ಈ ಕೃತ್ಯವು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಸೈ ಮನೋಹರ್ ಪ್ರಸಾದ್ ರವರ ದೂರಿನ ಮೇಲೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಪುತ್ತೂರು : ಎಐಸಿಸಿ ವೀಕ್ಷಕರು ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಭೇಟಿ

Posted by Vidyamaana on 2023-04-23 10:07:49 |

Share: | | | | |


ಪುತ್ತೂರು : ಎಐಸಿಸಿ ವೀಕ್ಷಕರು  ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಭೇಟಿ

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಚರಣ್ ಸಿಂಗ್ ಸಪ್ರಾ ಹಾಗೂ ಮುಂಬೈ ಕಾಂಗ್ರೆಸ್ ಮುಖಂಡರಾದ ಜಯಪ್ರಕಾಶ್ ಆರ್. ಶೆಟ್ಟಿ ರವರು ಭೇಟಿ ನೀಡಿದರು.ಮೇ. 10 ರಂದು ನಡೆಯುವ ವಿಧಾನಸಭಾ ಚುನಾವಣೆಗೆ

ಸಂಬಂಧಿಸಿದಂತೆ ಅನುಸರಿಸಬೇಕಾದ ಕಾರ್ಯ ತಂತ್ರಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ದರ್ಬೆಯಲ್ಲಿರುವ ಚುನಾವಣಾ ಕಛೇರಿಯಲ್ಲಿ ಮಾತುಕತೆ ನಡೆಯಿತು.

ಎಐಸಿಸಿ ಯಿಂದ ವೀಕ್ಷಕರಾಗಿ ನೇಮಕಗೊಂಡ ಮುಂಬೈ ವಲಯದ ಕಾಂಗ್ರೆಸ್ ನ ಮಾಜಿ ಪರಿಷತ್ ಸದಸ್ಯ ಚರಣ್ ಸಿಂಗ್ ಸಪ್ರ ಮತ್ತು ಮುಂಬೈ ವಲಯದ ಕಾಂಗ್ರೆಸ್ ನ ಕಾರ್ಯದರ್ಶಿ ಜಯಪ್ರಕಾಶ್ ಆರ್ ಶೆಟ್ಟಿ ಮಾತುಕತೆಯಲ್ಲಿ ಭಾಗವಹಿಸಿದರು.ಈ ವೇಳೆ ಹಲವು ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು

ಖಾಸಗಿ ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ವಿದ್ಯಾರ್ಥಿಗಳು ಅಸ್ವಸ್ಥ

Posted by Vidyamaana on 2024-02-08 12:28:27 |

Share: | | | | |


ಖಾಸಗಿ ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ವಿದ್ಯಾರ್ಥಿಗಳು ಅಸ್ವಸ್ಥ

ಮಂಗಳೂರು, ಫೆ.8: ಮಂಗಳೂರು ನಗರ ಹೊರವಲಯದ ವಳಚ್ಚಿಲ್  ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 


ಕಾಲೇಜು ಹಾಸ್ಟೆಲ್ ನಲ್ಲಿ ಮಂಗಳವಾರ ರಾತ್ರಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಬಳಿಕ ತುರ್ತಾಗಿ ತುಂಬೆ ಮತ್ತು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.‌ ರಾತ್ರಿ ಊಟ ಮಾಡಿದ ಬಳಿಕ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. 


ಹೊಟ್ಟೆ ನೋವಿನಿಂದ ನರಳಿದ ಕಾರಣ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ‌ಊಟದಲ್ಲಿ ಹುಳ ಬಿದ್ದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜು ಹಾಸ್ಟೆಲ್ ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಾದವರು ಕೇರಳದ ವಿದ್ಯಾರ್ಥಿಗಳಾಗಿದ್ದು ಬುಧವಾರ ಸಂಜೆ ಹೊತ್ತಿಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ತಿಳಿದುಬಂದಿದೆ. ‌

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

Posted by Vidyamaana on 2023-10-08 21:23:11 |

Share: | | | | |


ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

 ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ.ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.


ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಇದೀಗ ಈ ಸಾಲಿಗೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ ಸೇರಿದ್ದು, ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯಲ್ಲಿನ ಶೇ 75ರಷ್ಟು ಜನರಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪತ್ರಿಕೆಯೊಂದರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ನಿಜ.


ಆದರೆ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸದೆ, ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಚುನಾವಣೆ ಮುಗಿದು ನಾಲ್ಕುತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿತ್ತು.


ಇದೀಗ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗುತ್ತದೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೂ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಪಕ್ಷವು ನನಗೆ ಎಲ್ಲವನ್ನೂ ನೀಡಿದೆ. ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಪಕ್ಷಕ್ಕೆ ಈ ಸ್ಥಿತಿ ಬಂದಿರುವುದರ ಬಗ್ಗೆ ನೋವಿದೆ.


ಅದನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹ. ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಾಸ್ತವ ವಿಚಾರಗಳನ್ನು ಮಾತನಾಡಲು ನನಗೆ ಯಾವ ರೀತಿಯ ಭಯವೂ ಇಲ್ಲ ಎಂದು ಹೇಳಿದರು.

ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

Posted by Vidyamaana on 2023-07-24 15:38:28 |

Share: | | | | |


ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

ಮಂಗಳೂರು: ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ.

ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ ರೂಮ್ (ಲ್ಯಾಂಡ್ ಲೈನ್): 0824-2448888 ಮೊ: 9606595356/9606595394

Recent News


Leave a Comment: