ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಮಂಗಳೂರು | ಜನತಾ ದರ್ಶನದಲ್ಲಿ‌ 366 ಅರ್ಜಿ ಸ್ವೀಕಾರ: ದಿನೇಶ್ ಗುಂಡೂರಾವ್

Posted by Vidyamaana on 2023-09-25 20:27:18 |

Share: | | | | |


ಮಂಗಳೂರು | ಜನತಾ ದರ್ಶನದಲ್ಲಿ‌ 366 ಅರ್ಜಿ ಸ್ವೀಕಾರ: ದಿನೇಶ್ ಗುಂಡೂರಾವ್

ಮಂಗಳೂರು: ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ‌ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.


ಜನತಾ ದರ್ಶನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು, ಆ ಅರ್ಜಿಗಳಿಗೆ ಸಕಾಲಕ್ಕೆ ಪರಿಹಾರ ನೀಡುವ ಮೂಲಕ ಜನರಿಗೆ ಸ್ಪಂದಿಸಬೇಕು. ಆದಾಗ ಮಾತ್ರ ಅವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ‌ ಎನ್ನುವ ಭಾವನೆ ಬರುತ್ತದೆ, ಅದಕ್ಕೆ ಪ್ರಮಾಣಿಕ ಯತ್ನ ಮಾಡುವಂತೆ ಅವರು ಕಿವಿಮಾತು ಹೇಳಿದರು.


ಸ್ವೀಕರಿಸಲಾದ ಎಲ್ಲಾ‌ 366 ಅರ್ಜಿಗಳಿಗೆ ಯಾವ ಕ್ರಮವಹಿಸಬೇಕೆಂಬುದನ್ನು ಅರ್ಜಿ ಮೇಲೆ ನಮೂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಜನತಾ ದರ್ಶನ‌ ಮಾಡಲಾಗುವುದು, ಇದರ‌ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಕೊಡುವುದು ಹಾಗೂ ಅವರ ಕಾನೂನು ಬದ್ದ ಬೇಡಿಕೆಯನ್ನು ಈಡೇರಿಸುವುದಾಗಿದೆ, ಇಲ್ಲಿ ವಿಳಂಬ ಆಗಬಾರದು, ಜನರ ಕೆಲಸ ಕಾರ್ಯಗಳಿಗೆ ಅವರನ್ನು ವೃಥಾ ಓಡಾಡಿಸಬಾರದು,‌ ಜನರಿಗೆ ಕಿರುಕುಳ, ತೊಂದರೆ‌ ಆಗದಂತೆ ಕ್ರಮವಹಿಸಬೇಕು ಎಂದರು.


 ಮುಖ್ಯಮಂತ್ರಿಗಳು ಈ ಜನ ಸ್ಪಂದನ ಕಾರ್ಯಕ್ರಮವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ತೆಗೆದುಕೊಂಡಿದ್ದು, ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಯತ್ನಿಸಿದ್ದಾರೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ,‌ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ‌ ಇಲಾಖೆಗಳ ಅಧಿಕಾರಿಗಳುನುತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.


ವಿಧಾನ ಸಭಾ ಸದಸ್ಯರಾದ ಅಶೋಕ್ ಕುಮಾರ್‌ ರೈ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್,‌ ಜಿ.ಪಂ. ಸಿಇಒ ಡಾ. ಆನಂದ್,‌‌ ನಗರ‌ ಪೊಲೀಸ್ ಆಯುಕ್ತ ಅನುಪಮ್‌ ಅರ್ಗವಾಲ್, ಎಸ್ಪಿ ರಿಷ್ಯಂತ್ ಸಿ.ಬಿ., ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನೂರಾರು ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಟ್ಲದಲ್ಲಿ ಅಶೋಕ್ ರೈಗೆ ಸನ್ಮಾನ, ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆ

Posted by Vidyamaana on 2023-05-30 14:14:58 |

Share: | | | | |


ವಿಟ್ಲದಲ್ಲಿ ಅಶೋಕ್ ರೈಗೆ ಸನ್ಮಾನ, ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆ

ಪುತ್ತೂರು: ಚುನಾವಣಾ ಪೂರ್ವದಲ್ಲಿ ಹೇಳಿರುವಂತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ. ಅಧಿಕಾರಿಗಳನ್ನು ಕೈಹಿಡಿದು ಗ್ರಾಮ ಗ್ರಾಮಗಳಿಗೆ ಕರೆತಂದು 94 ಸಿ, ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಿಸುತ್ತೇನೆ. ಆದ್ದರಿಂದ ಸರ್ಕಾರಿ ಸೌಲಭ್ಯ ಪಡೆಯಲು ಲಂಚವಾಗಿ ಹಣ ನೀಡದಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ಮಂಗಳವಾರ ಸಂಜೆ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈಗೆ ಸನ್ಮಾನ ಹಾಗೂ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.


ಅಶೋಕ್ ರೈಯನ್ನು ಶಾಸಕರಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಾಗೆಂದು ಸರ್ಕಾರದ ಸೌಲಭ್ಯಗಳನ್ನು ನನ್ನ ಕ್ಷೇತ್ರದ ಎಲ್ಲಾ ಜನರಿಗೂ ತಲುಪಿಸುವ ಕೆಲಸ ಮಾಡುತ್ತೇನೆ. ಯಾಕೆಂದರೆ ನನ್ನ ಕ್ಷೇತ್ರದ ಎಲ್ಲಾ ಜನರ ಶಾಸಕ. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ, ಮುಂದಿನ ಚುನಾವಣೆಯಲ್ಲಿ ಇತರ ಪಕ್ಷದ ಕಾರ್ಯಕರ್ತರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಮಾಡುತ್ತೇನೆ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಮಾತನಾಡಲು ಇರುವ ಏಕೈಕ ಶಾಸಕ ಅಶೋಕ್ ಕುಮಾರ್ ರೈ ಅವರು. ಯು.ಟಿ.ಖಾದರ್ ಇದ್ದರೂ ಅವರು ಸ್ಪೀಕರ್ ಆಗಿದ್ದಾರೆ.‌ ಆದ್ದರಿಂದ ಉಭಯ ಜಿಲ್ಲೆಗಳ ಜನರ ಅಹವಾಲು ಸ್ವೀಕರಿಸಲು ಉದಾರ ಮನಸ್ಸಿನ, ಸೇವಾ ಮನೋಭಾವದ ಅಶೋಕ್ ರೈ ಅವರು ಶಾಸಕರಾಗಿ ನಮ್ಮ‌ ಜೊತೆಗಿದ್ದಾರೆ. ಇದು ನಮ್ಮ ಭಾಗ್ಯವೂ ಹೌದು ಎಂದರು.


ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಚುನಾವಣೆಯಲ್ಲಿ ಉಳ್ಳಾಲ ಮತ್ತು ಪುತ್ತೂರು ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದಿದೆ. ಪಕ್ಷದ ಮೇಲೆ ನಂಬಿಕೆಯಿಟ್ಟು, ಅಶೋಕ್ ಕುಮಾರ್ ರೈ ಅವರ ಮೇಲೆ ವಿಶ್ವಾಸವಿಟ್ಟು ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿದರು, ಜನರು ಮತ ಹಾಕಿದರು. 

ಎಂ.ಎಸ್. ಮಹಮ್ಮದ್ ಮಾತನಾಡಿದರು. ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ. ಅಧ್ಯಕ್ಷತೆ ವಹಿಸಿದ್ದರು.

ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ನಿಷೇಧ

Posted by Vidyamaana on 2023-06-25 05:25:56 |

Share: | | | | |


ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ನಿಷೇಧ

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಐತಿಹಾಸಿಕ ಪರಶುರಾಮ ಥೀಂ ಪಾರ್ಕ್‌ ನಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆಇಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕ ಅಳವಡಿಕೆ, ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಅತೀ ಅಗತ್ಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅಧಿಕಾರಿಗಳು ಕೈಗೊಂಡಿದ್ದಾರೆ.

ಜೂ. 26 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್‌ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

Posted by Vidyamaana on 2023-09-30 12:45:02 |

Share: | | | | |


ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.



ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು.

ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ

Posted by Vidyamaana on 2023-10-05 20:33:27 |

Share: | | | | |


ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ


ಪುತ್ತೂರು: ಇಲ್ಲಿನ ಪಡೀಲ್ ನಿವಾಸಿ, ರೀಮಾ ಪುಟ್ ವೇರ್ ಮಾಲಕ ಖಾಸೀಂ ಅವರು ಹೃದಯಾಘಾತದಿಂದ ನಿಧನರಾದರು.

ನಾಳೆ (ಅ. 6) ಖಾಸಿಂ ಅವರ ಮನೆಯಲ್ಲಿ ಮೌಲೀದ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕೆ ಆಮಂತ್ರಿಸಲು ನೆರೆಹೊರೆ, ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆಯಂತೆ ಮಂಗಳೂರಿಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ಹಲವಾರು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಕಟ್ಲೇರಿ ಅಂಗಡಿ ವ್ಯಾಪಾರಸ್ತರಾಗಿದ್ದ ಮರ್ಹೂಮ್ ಇಸ್ಮಾಯಿಲ್ ಅವರ ಮಗ. ಖಾಸೀಂ ಅವರು ಪುತ್ತೂರಿನ  ಶ್ರೀಧರ ಭಟ್ ಬ್ರದರ್ಸ್ ಮೆಡಿಕಲ್‌ ಶಾಪ್ ನ ಮುಂಭಾಗ ರೀಮಾ ಪುಟ್ ವೇರ್ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

Posted by Vidyamaana on 2023-03-24 10:00:18 |

Share: | | | | |


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

ನವದೆಹಲಿ, ಮಾ 24 : ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ಸಿನ ಪರಮೋಚ್ಚ ನಾಯಕ ರಾಹುಲ್    ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶಿಸಲಾಗಿದೆ.2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿ

ಸಂಸದರಾಗಿ ಆಯ್ಕೆಯಾಗಿದ್ದರು.ಕಳೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಕೇರಳದಲ್ಲಿ ಪ್ರಧಾನಿಯವರ ಸರ್ ನೇಮ್ ಕುರಿತು ರಾಹುಲ್ ನೀಡಿದ ಹೇಳಿಕೆ ಅವರಿಗೆ ಮುಳುವಾಗಿದೆ. ಈ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಗುಜರಾತ್ ರಾಜ್ಯದ ಸೂರತ್ ನ ಕೋರ್ಟ್ ರಾಹುಲ್ ಅವರನ್ನು ದೋಷಿ ಎಂದು ಪರಿಗಣಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.. ಆದರೆ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಜಾಮೀನು ಕೂಡ ದೊರೆದಿತ್ತು. ಎರಡು ಅಥವಾ ಅದಕ್ಕಿಂತ ಹೆಚ್ಚಿನ ವರ್ಷದ ಶಿಕ್ಷೆಗೆ ಒಳಗಾದರೆ ಲೋಕ ಸಭೆ ಸದಸ್ಯತ್ವವನ್ನು

ಅನರ್ಹಗೊಳಿಸಬಹುದು ಎಂಬ ನಿಯಮವಿದ್ದು, ಅದರಂತೆ ಅವರನ್ನು ಇದೀಗ ಅನರ್ಹಗೊಳಿಸಲಾಗಿದೆ.

Recent News


Leave a Comment: