ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

Posted by Vidyamaana on 2024-03-30 21:05:11 |

Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಬೈಪಾಸ್‌ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು: ಡಿಸಿ ರವಿಕುಮಾರ್ ಸೂಚನೆ

Posted by Vidyamaana on 2023-06-07 10:53:10 |

Share: | | | | |


ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು: ಡಿಸಿ ರವಿಕುಮಾರ್ ಸೂಚನೆ

ಮಂಗಳೂರು:ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ ಹೊಡೆದು ಸಾವರ ಸಾವು ಪ್ರಕರಣ

Posted by Vidyamaana on 2024-03-27 11:57:36 |

Share: | | | | |


ಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ ಹೊಡೆದು ಸಾವರ ಸಾವು ಪ್ರಕರಣ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಮಾ.25 ರಂದು ಎದುರಿನಿಂದ ಬರುತಿದ್ದ  ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸಾವರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19)  ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17)  ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಾ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅಪಘಾತ ಬಳಿಕ ಉಜಿರೆಯ ಪಿಕಪ್ KA-19-AE-3490 ವಾಹನ ಸಮೇತ ಪರಾರಿಯಾಗಿದ್ದು. ಬಳಿಕ ಸಂಜೆ ವೇಳೆ ಸಂಚಾರಿ ಪೊಲೀಸ್ ಠಾಣೆಗೆ ವಾಹನವನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮಂಗಳೂರು ಕೆಡಿಪಿ ಸಭೆ

Posted by Vidyamaana on 2023-08-02 06:36:27 |

Share: | | | | |


ಮಂಗಳೂರು ಕೆಡಿಪಿ ಸಭೆ

ಪುತ್ತೂರು: ಅಡಿಕೆ,ತೆಂಗು,ಮರ ಮತ್ತು ಇನ್ನಿತರ ಕಾರಣಗಳಿಂದ ಮೂಲೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ,ಮನೆಯಲ್ಲಿ ಮಲಗಿದ್ದಲ್ಲೇ ಇರುವವರಿಗೆ ಸರಕಾರ ಮಾಸಾಶನ ನೀಡಬೇಕು, ಅವರು ಅತ್ತ ಸಾವೂ ಇಲ್ಲ ಇತ್ತ ಬದುಕೂ ಇಲ್ಲ  ಎಂಬಂತೆ ಅವರ ಜೀವನ ಇದೆ ಅವರಿಗೆ ನೆರವಾಗಲು ಮಾಸಾಶನ ಕೊಡಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಸೀಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡರು.

ಮಂಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಮಾನವೀಯತೆ ನೆಲೆಯಲ್ಲಿ ಅವರಿಗೆ ಬದುಕಲು ಸಹಾಯ ಮಾಡಬೇಕು, ಇಂಥವರು ಬಹುತೇಕ ಬಡವರೇ ಆಗಿದ್ದಾರೆ, ಅವರಿಗೆ ಸಹಾಯ ಮಾಡಿದರೆ ನಮಗೆ ,ನಮ್ಮ ಸರಕಾರಕ್ಕೆ ಪುಣ್ಯ ಬರುತ್ತದೆ ಎಂದು ಸೀಎಂ ಬಳಿ ಕೇಳಿಕೊಂಡರು. ಶಾಸಕರು ಈ ವಿಚಾರವನ್ನು ಹೇಳುವಾಗ ಸಿದ್ದರಾಮಯ್ಯ ಅವರೂ ಒಂದು ಕ್ಷಣ ಮೌನವಾದರು, ಶಾಸಕರು ಹೇಳಿದ ವಿಚಾರ ಸೀಎಂ ಮನಸ್ಸಿನಲ್ಲಿ ಬೇಸರವಾದಂತೆ ಕಂಡು ಬಂತು, ತಕ್ಷಣವೇ ಈ ವಿಚಾರದ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವಿಚಾರವನ್ನಹ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು ಸೀಎಂ ಗಮನಕ್ಕೆ ತಂದಿದ್ದರು.

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ 2023 ಕ್ಕೆ ಚಾಲನೆ

Posted by Vidyamaana on 2023-02-10 09:55:11 |

Share: | | | | |


ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ 2023 ಕ್ಕೆ ಚಾಲನೆ

ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 5ನೇ ಬೃಹತ್ ಕೃಷಿ ಯಂತ್ರಮೇಳ ಮತ್ತು ಕನಸಿನ ಮನೆ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು. ನಡೆಯಿತು.

ರೈತರಿಗೆ ನೀಡುವ ಸಬ್ಸಿಡಿ ವಿಚಾರದಲ್ಲಿ ಹೊರ ಮಾರ್ಗಸೂಚಿ ತಯಾರಿ : ಶೋಭಾ ಕಂರದ್ಲಾಜೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೃಷಿಯಂತ್ರ ಮೇಳವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ದೇಶದ ಜಿಡಿಪಿಯಲ್ಲಿ ಶೇ.18 ರಷ್ಟು ರೈತರ ಕೊಡುಗೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ತೆರದಿರುವ ಕೃಷಿಯಂತ್ರ ಬಾಡಿಗೆ ಕೇಂದ್ರಗಳಲ್ಲಿ ರೈತರಿಗೆ ನೀಡುವ ಕೃಷಿ ಸಲಕರಣೆಗಳಿಗೆ ಹೆಚ್ಚಿನ ಸಬ್ಸಿಡಿ ಜತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಯನ್ನು ಸರಕಾರದ ವತಿಯಿಂದ ತಯಾರಿಸಲಾಗಿದೆ ಎಂದು ತಿಳಿಸಿದರು.ಪ್ರಸ್ತುತ ಸನ್ನಿವೇಶದಲ್ಲಿ ಎತ್ತುಗಳನ್ನು ಬಳಸಿ ಹೂಡುವ, ಉತ್ತುವ ಪರಿಸ್ಥಿತಿ ಇಲ್ಲ. ಬದಲಾಗಿದೆ. ಕೃಷಿಕರಿಗೆ ಕೃಷಿಯಂತ್ರ ಪ್ರಮುಖವಾಗಿದೆ. ದೇಶಾದ್ಯಂತ ಒಟ್ಟು ರೈತರ ಪೈಕಿ ಸಣ್ಣ ಮತ್ತು ಅತೀ ಸಣ್ಣ ರೈತರ ಸಂಖ್ಯೆ ಜಾಸ್ತಿಯಿದ್ದು, ಕೃಷಿಕರಿಗೆ ಯಂತ್ರೋಪಕರಣಗಳ ಕುರಿತು ಜಾಗೃತಿ ಆಂದೋಲನ ಮಾಡಲಾಗುತ್ತಿದೆ ಎಂದ ಅವರು,  ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯು ಯೋಜನೆಯನ್ವಯ ಹೋಬಳಿ ಕೇಂದ್ರದಲ್ಲಿ ಕಸ್ಟಮರಿಂಗ್ ಕೇಂದ್ರ ತೆತೆಯಲಾಯಿತು. ಈ ಪೈಕಿ ಕೇವಲ 80 ಸಾವಿರ ಕೋಟಿ ಕೇವಲ ಟ್ರಾಕ್ಟರ್‌ಗೆ ಹೋಗುತ್ತಿದೆ. ಉಳಿದದ್ದಕ್ಕೆ  4  ಸಾವಿರ ಕೋಟಿ ಹೋಗುತ್ತದೆ. ಈ ನಿಟ್ಟಿನಲ್ಲಿ ಸಬ್ಸಿಡಿ ವಿಚಾರದಲ್ಲಿ ಹೊಸ ಮಾರ್ಗಸೂಚಿಗಳನ್ನು ತಯಾರಿಸಲಾಗಿದೆ ಎಂದು ಅವರು ಹೇಳಿದರು.


ಹಿಂದಿನಿಂದಲೂ ಕುಚ್ಚಿಲಕ್ಕಿಯನ್ನು ಬಳಸುತ್ತಿರುವ ದ.ಕ., ಉಡುಪಿ ಜಿಲ್ಲೆಯಲ್ಲಿ ಕಚ್ಚಲಕ್ಕಿ ಬೆಳೆಯದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಹವಮಾನಕ್ಕನುಗುಣವಾಗಿ ಬೆಳೆಯುವ ಭತ್ತ ಹಣ್ಣುಗಳು ಹೀಗೆ ಸುಮಾರು 1500 ಜಾತಿಯನ್ನು ಹವಮಾನಾಧಾರಿತ ಬೆಳೆಗಳನ್ನು ಕಂಡು ಹಿಡಿಯಲಾಗಿದೆ. ಮೋದಿ ನೇತೃತ್ವದ ಕೇಂದ್ರ ಸರಕಾರ ಹೊಸ ಸಂಶೋಧನೆಗೆ ಹೆಚ್ಚಿನ ಅನುದಾನ, ಪ್ರೋತ್ಸಾಹ ನೀಡುವ ಕೆಲಸ ಕೇಂದ್ರ ಸರಕಾರ ಮಾಡುತ್ತಿದೆ ಎಂದರು.


ಒಂದೆಡೆ ಅಡಿಕೆಗೆ ರೋಗ ಬಾಧಿಸಿದ್ದು, ಇನ್ನೊಂದೆಡೆ ಅಡಿಕೆ ಹಾನಿಕಾರಕ ಎಂದು ಸುಪ್ರೀಂ ಕೊರ್ಟಿನಲ್ಲಿದೆ. ಈ ಕುರಿತು ಪ್ರಧಾನಮಂತ್ರಿ ಮೋದಿಯವರಲ್ಲಿ ಮನವಿ ಮಾಡಿಕೊಂಡಂತೆ ಅಡಕೆ ಹಾನಿಕಾರಕ ಅಲ್ಲ ಎಂಬುದನ್ನು ಸಾಬೀತು ಪಡಿಸಲು ಮೋದಿಯರು ಒಳ್ಳೆಯ ವಕೀಲರ ತಂಡವನ್ನು ನೇಮಿಸಿ ಅಡಿಕೆಯನ್ನು ರಕ್ಷಿಸುವತ್ತ ಹೊರಟಿದ್ದಾರೆ ಎಂದು ತಿಳಿಸಿದರು.

ಕೃಷಿಯಂತ್ರ ಮೇಳದಿಂದ ರೈತಾಪಿ ವರ್ಗಕ್ಕೆ ಭರಪೂರ ಅನುಕೂಲ : ಸಂಜೀವ ಮಠಂದೂರು

ಮುಖ್ಯ ಅತಿಥಿಯಾಗಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೃಷಿ, ಋಷಿ ಪರಂಪರೆ ಹೊಂದಿದ ನಮ್ಮ ದೇಶದಲ್ಲಿ ಕೃಷಿಯೇ ಪ್ರಧಾನವಾಗಿದೆ. ಈ ನಿಟ್ಟಿನಲ್ಲಿ ರೈತರೊಂದಿಗೆ ನಾವಿದ್ದೇವೆ. ಆಧುನಿಕ ಯಂತ್ರೋಪಕರಣಗಳು ಅಭಿವೃದ್ಧಿಯಾದಂತೆ ರೈತನು ಸ್ವಾವಲಂಬಿ ಜತೆ ಕೃಷಿ ಉತ್ಪನ್ನಗಳ ಬೆಳೆಯುವಿಕೆಯೂ ಜಾಸ್ತಿಯಾಗಿದೆ ಎಂದ ಅವರು ಈಗಾಗಲೇ ಅಡಿಕೆ ಹಾನಿಕಾರ ಎಂದು ಬಿಂಬಿಸಲಾಗಿದೆ. ಅಡಿಕೆ ಮೌಲ್ಯವರ್ಧಿತ ವಸ್ತುಗಳ ಕಜಾನೆ ಎಂಬುದನ್ನು ಸಾಬೀತುಪಡಿಸಲು ಪ್ರಯತ್ನಿಸಲಾಗುವುದು. ಕೃಷಿಯಂತ್ರ ಮೇಳದಿಂದ ಸಾಕಷ್ಟು ರೈತರಿಗೆ ಭರಪೂರ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಕೃಷಿ ಯಂತ್ರೋಪಕರಣಗಳ ಮಳಿಗೆಗಳನ್ನು ತೆರೆಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.


ಕೃಷಿಯಿಂದ ಅಧಿಕ ಉದ್ಯೋಗ ಸೃಷ್ಟಿ : ಕಿಶೋರ್ ಕೊಡ್ಗಿ

ಮುಖ್ಯ ಅತಿಥಿಯಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಮಾತನಾಡಿ, ಪ್ರಸ್ತುತ ಕೃಷಿಯಿಂದಲೇ ಉದ್ಯೋಗ ಸೃಷ್ಟಿಯಾಗುವಂತದ್ದು. ಈ ನಿಟ್ಟಿನಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಮೊರೆ ಹೊಗಬೇಕಾದ ಅಗತ್ಯವಿದೆ. ಕೇವಲ ಆತ್ಮನಿರ್ಭರ ವರದಿಗಷ್ಟೇ ಸೀಮಿತವಾಗಬಾರದು. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕು. ಜತೆಗೆ ಬರ್ಮಾ, ಇಂಡೋನೇಷ್ಯಾ ಮುಂತಾದ ಕಡೆಗಳಿಂದ ಇಂಪೋರ್ಟ್ ಆಗುವ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕಾಗಿದೆ. ಅಲ್ಲದೆ ಸ್ಮಾರ್ಟ್ ವಿಲೇಜ್ ನಿಟ್ಟಿನಲ್ಲಿ ಹಳ್ಳಿಗಳಲ್ಲೂ ಅಭಿವೃದ್ಧಿ ಕಾರ್ಯ ನಡೆಯುವಂತಾಗಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದರು.

ಕ್ಯಾಂಪ್ಕೋ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಎಂ.ಕೃಷ್ಷ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕೃಷಿ ಮಳಿಗೆಗಳನ್ನು ಕಾಸರಗೋಡು ಐಸಿಎಆರ್-ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್ ಉದ್ಘಾಟಿಸಿದರು. ಕನಸಿನ ಮನೆ ಮಳಿಗೆಯನ್ನು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿವಿ ಉಪಕುಲಪತಿ ಡಾ.ಪಿ.ಎಸ್.ಸುಬ್ರಹ್ಮಣ್ಯ ಎಡಪಡಿತ್ತಾಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕ್ಯಾಂಪ್ಕೋ ಉಪಾಧ್ಯಕ್ಷ ಶಂಖರನಾರಾಯಣ ಖಂಡಿಗೆ, ಜನರಲ್ ಮೆನೇಜರ್ ರೇಶ್ಮಾ ಮಲ್ಯ, ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ, ಶಂಬುಲಿಂಗ ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಂ ಸರಳಾಯ, ಪದ್ಮರಾಜ್ ಪಟ್ಟಾಜೆ, ರಾಘವೇಂದ್ರ ಭಟ್, ರಾಧಾಕೃಷ್ಣ ಕೆ., ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ ಪಿ., ರಾಘವೇಂದ್ರ ಎಚ್.ಎಂ., ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಹ್ಮಣ್ಯ ಭಟ್ ಟಿ.ಎಸ್. ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ಪ್ರಣೀತ್, ಅನಘ ಕೆ., ಸಿಂಚನಲಕ್ಷ್ಮೀ, ಸುಮನ ಕೆ., ಹರಿಪ್ರಸಾದ್, ಜೀವನ್್ ಪ್ರಾರ್ಥನೆ ಹಾಡಿದರು.  ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣಡಿ. ಕಲ್ಲಾಜೆ ಸ್ವಾಗತಿಸಿದರು. ಅಧ್ಯಕ್ಷ ವಿಶ್ವಾಸ್  ಶಣೈ ವಂದಿಸಿದರು. ಸೌಮ್ಯ, ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ರಾಜಧಾನಿಯಲ್ಲಿ ಭಾರೀ ಮಳೆ ; ಜಿ20 ಶೃಂಗಸಭೆಯ ಭಾರತ್ ಮಂಟಪ ಜಲಾವೃತ ಅಭಿವೃದ್ಧಿ ಈಜುತ್ತಿದೆ ಎಂದ ಕಾಂಗ್ರೆಸ್

Posted by Vidyamaana on 2023-09-10 18:01:49 |

Share: | | | | |


ರಾಜಧಾನಿಯಲ್ಲಿ ಭಾರೀ ಮಳೆ ; ಜಿ20 ಶೃಂಗಸಭೆಯ ಭಾರತ್ ಮಂಟಪ ಜಲಾವೃತ ಅಭಿವೃದ್ಧಿ ಈಜುತ್ತಿದೆ ಎಂದ ಕಾಂಗ್ರೆಸ್

ನವದೆಹಲಿ: ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಜಿ 20 ಶೃಂಗಸಭೆ ನಡೆದಿರುವ ಪ್ರದೇಶದ ಭಾರತ್ ಮಂಟಪ ಜಲಾವೃತಗೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಟೀಕಾಸ್ತ್ರ ಮೊಳಗಿಸಿದೆ. 


ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಮತ್ತೊಂದು ಅಸ್ತ್ರ ನೀಡಿದಂತಾಗಿದೆ. ಭಾರತ ಮಂಟಪ ಜಲಾವೃತ್ತದ ದೃಶ್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ  ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಕ್ ಪ್ರಹಾರ ನಡೆಸಿದ್ದಾರೆ. 


ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು ಪ್ರಗತಿಯ ಪೊಳ್ಳು ಭರವಸೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. 2,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ವೇದಿಕೆ ಕೇವಲ ಒಂದು ದಿನದ ಮಳೆಗೆ ಜಲಾವೃತ್ತವಾಗಿದೆ ಎಂದು ಟೀಕಿಸಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ, ಕೇಂದ್ರದ ಭರವಸೆಗಳನ್ನು ಉಲ್ಲೇಖಿಸಿ ಅಭಿವೃದ್ಧಿ ಈಜುತ್ತಿದೆ ಎಂದು  ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

Recent News


Leave a Comment: