ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ವಿಟ್ಲ-ಕೋಡಪದವು: ನಿರಾಶ್ರಿತ ಮೂರು ಮಕ್ಕಳ ವಿದವೆ ಮಹಿಳೆಯ ಕುಟುಂಬಕ್ಕೆ ನೂತನ ಮನೆ ಕೀ ಹಸ್ತಾಂತರ

Posted by Vidyamaana on 2024-07-27 09:16:07 |

Share: | | | | |


ವಿಟ್ಲ-ಕೋಡಪದವು: ನಿರಾಶ್ರಿತ ಮೂರು ಮಕ್ಕಳ ವಿದವೆ ಮಹಿಳೆಯ ಕುಟುಂಬಕ್ಕೆ ನೂತನ ಮನೆ ಕೀ ಹಸ್ತಾಂತರ

ವಿಟ್ಲ :ಎಮರ್ಜೆನ್ಸಿ ಟೀಂ ಕೋಡಪದವು ಹಾಗೂ MNG ಫೌಂಡೇಶನ್ ಮಂಗಳೂರು ಇದರ ವತಿಯಿಂದ ದಿ.ಅಬೂಬಕ್ಕರ್ ಕುಕ್ಕಿಲ  ಕುಟುಂಬಕ್ಕೆ ನಿರ್ಮಿಸಿದ  ನೂತನ ಮನೆಯ ಕೀ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ಇಂದು ಕೋಡಪದವು ಸಮೀಪದ ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊನ್ಯಕುಕ್ಕು ಎಂಬಲ್ಲಿ  ಜರುಗಿತು..

ಇತ್ತೀಚೆಗೆ ಹಠತ್ತಾಗಿ ಮಾರಕ ಕಾಯಿಲೆಯೊಂದಕ್ಕೆ ತುತ್ತಾದ ವಿಟ್ಲಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ  ಪುಟ್ಟ ಮೂರು ಮಕ್ಕಳ ತಂದೆ ಅಬೂಬಕ್ಕರ್ ಎಂಬುವವರು ನಿಧನ ಹೊಂದಿದ್ದು,ಹೆಂಡತಿಯ ತವರು ಮನೆಯಲ್ಲಿ ವಾಸಿಸುತ್ತಿದ್ದರು.ರೋಗಕ್ಕೆ ತುತ್ತಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಹೈರಣಾಗಿದ್ದ ಕುಟುಂಬ ಕಷ್ಟದ ಜೀವನ ನಡೆಸುತ್ತಿತ್ತು‌,ಇದನ್ನು ಮನಗಂಡು ಸ್ಥಳೀಯ ಸಂಘಟನೆಯಾದ ಎಮರ್ಜೆನ್ಸಿ ಟೀಂ ತಂಡ, ಕುಕ್ಕಿಲ ಜಮಾಅತ್ ಅದ್ಯಕ್ಷರೂ,ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷರಾದ ಹಾಜಿ ಅಬ್ದುಲ್ಲಾ ಕುಕ್ಕಿಲ ಮುಖಾಂತರ ಮಾತುಕತೆ ನಡೆಸಿ ಎಮರ್ಜೆನ್ಸಿ ಕೋಡಪದವು ತಂಡ ಮನೆ ನಿರ್ಮಿಸಿ ಕೊಡಲು ತೀರ್ಮಾನಿಸಿತ್ತು.ಅದರಂತೆ MNG ಫೌಂಡೇಶನ್ ಸಹಕಾರದೊಂದಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನೊಳೊಂಗ ಸುಂದರ  ಮನೆ ನಿರ್ಮಿಸಿ ಇಂದು ಅಬೂಬಕ್ಕರ್ ಪತ್ನಿ ಅಸಿಯಮ್ಮ ಹಾಗೂ ಮೂರು ಪುಟಾಣಿ ಮಕ್ಕಳಿಗೆ ಮನೆಯನ್ನು ಹಸ್ತಾಂತರಿಸಲಾಯಿತು..


ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-04-24 04:03:48 |

Share: | | | | |


ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ  ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು

ನೇಹಾ ತಂದೆಗೆ ಕಾಲ್ ಮಾಡಿದ ಸಿಎಂ -ನಾವು ನಿಮ್ಮ ಜೊತೆ ಇರ್ತೀವಿ ಎಂದು ಧೈರ್ಯ ತುಂಬಿದ ಸಿದ್ದರಾಮಯ್ಯ

Posted by Vidyamaana on 2024-04-24 03:39:44 |

Share: | | | | |


ನೇಹಾ ತಂದೆಗೆ ಕಾಲ್ ಮಾಡಿದ ಸಿಎಂ -ನಾವು ನಿಮ್ಮ ಜೊತೆ ಇರ್ತೀವಿ ಎಂದು ಧೈರ್ಯ ತುಂಬಿದ ಸಿದ್ದರಾಮಯ್ಯ

ಹುಬ್ಬಳ್ಳಿ , ಏ.23: ಇತ್ತೀಚೆಗೆ ಕೊಲೆಯಾದ ಕಾಲೇಜು ಯುವತಿ ನೇಹಾ ಅವರ ತಂದೆ ನಿರಂಜನ ಹಿರೇಮಠ ಜೊತೆ ಸಿಎಂ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿ, "ವೆರಿ ಸ್ವಾರಿ. ನಾವು ನಿಮ್ಮ ಜೊತೆ ಇರ್ತೀವಿ" ಎಂದು ಧೈರ್ಯ ತುಂಬಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರು ನಿರಂಜನ ಹಿರೇಮಠ ಅವರ ಮನೆಗೆ ಭೇಟಿ ನೀಡಿದ ವೇಳೆ ಸಿಎಂ ಫೋನ್‌ ಮೂಲಕ ಮಾತನಾಡಿದ್ದಾರೆ.

ಬಳಿಕ ಪ್ರತಿಕ್ರಿಯಿಸಿದ ನಿರಂಜನ ಹಿರೇಮಠ, "ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಕ್ಕೆ ಸಮಾಧಾನವಿದೆ. ಸ್ಪೆಷಲ್ ಕೋರ್ಟ್ ವಿಚಾರಕ್ಕೂ ಸಮಾಧಾನ ತರಿಸಿದೆ. ಸಿಎಂಗೆ ಧನ್ಯವಾದ" ಎಂದರು.

ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿ, ನ್ಯಾಯದಾನ ವಿಳಂಬವಾಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲು ಆಗಿಲ್ಲ. ಹೀಗಾಗಿ, ನಿರಂಜನ್ ಹಿರೇಮಠ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ ಎಂದು ತಿಳಿಸಿದರು.

ತಪ್ಪು ಮಾಹಿತಿಯಿಂದ ಮಾತನಾಡಿದ್ದೇನೆ ;

"ನನ್ನ ಮಗಳ ಕೊಲೆ ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ. ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೆ" ಎಂದು ತಂದೆ ನಿರಂಜನ ಹಿರೇಮಠ ಇದೇ ಸಂದರ್ಭದಲ್ಲಿ ಹೇಳಿದರು.

ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ,ಜಿ.ಜಗನ್ನಾಥ ರೈ ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ,ಕೋಶಾಧಿಕಾರಿಮಹೇಶ್ ಕೆ. ಸವಣೂರು ಆಯ್ಕೆ

Posted by Vidyamaana on 2024-04-06 18:42:37 |

Share: | | | | |


ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ,ಜಿ.ಜಗನ್ನಾಥ ರೈ  ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ,ಕೋಶಾಧಿಕಾರಿಮಹೇಶ್ ಕೆ. ಸವಣೂರು ಆಯ್ಕೆ

ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ  ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು  ಚುನಾಯಿತರಾಗಿದ್ದಾರೆ.

ಏ 6ರಂದು ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆದಿತ್ತು . ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆದಿತ್ತು.

ಕೆಬಿ ಪಿತ್ತಲೆ ಆಂಡ ಇಂಚನೆ - ಒಂಭತ್ತು ಲಕ್ಷ ಕೊಟ್ಟು ಬೆತ್ತಲೆ ಕನ್ನಡಿ ಖರೀದಿಸಿ ಮೋಸ ಹೋದ ಅಜ್ಜ

Posted by Vidyamaana on 2023-08-18 05:58:17 |

Share: | | | | |


ಕೆಬಿ ಪಿತ್ತಲೆ ಆಂಡ ಇಂಚನೆ - ಒಂಭತ್ತು ಲಕ್ಷ ಕೊಟ್ಟು ಬೆತ್ತಲೆ ಕನ್ನಡಿ ಖರೀದಿಸಿ ಮೋಸ ಹೋದ ಅಜ್ಜ

ಲಖನೌ: ಈ ಕನ್ನಡಿಯಲ್ಲಿ ಎಲ್ಲರೂ ಬೆತ್ತಲೆಯಾಗಿ ಕಾಣಿಸುತ್ತಾರೆ ಎಂಬ ಮೋಸದ ಆಶ್ವಾಸನೆ ಬಲೆಗೆ ಬಿದ್ದ 72 ವರ್ಷದ ವೃದ್ಧನೊಬ್ಬ ಬರೋಬ್ಬರಿ 9 ಲಕ್ಷ ರೂ.. ಕೊಟ್ಟು ಮ್ಯಾಜಿಕ್‌ ಕನ್ನಡಿ ಖರೀದಿಸಿ ಮೋಸ ಹೋದ ಚಿತ್ರ ವಿಚಿತ್ರವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಮ್ಯಾಜಿಕ್‌ ಕನ್ನಡಿ ಖರೀದಿಸಿದ ಬಳಿಕ ಇದರಲ್ಲಿ ಯಾವುದೇ ಮ್ಯಾಜಿಕ್‌ ಇಲ್ಲ, ನನಗೇ ಮ್ಯಾಜಿಕ್‌ ಮಾಡಿ ವಂಚಿಸಲಾಗಿದೆ ಎಂಬುದು ವೃದ್ಧನ ಅರಿವಿಗೆ ಬಂದಿದೆ. ವಂಚನೆ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಅವಿನಾಶ್‌ ಕುಮಾರ್‌ ಶುಕ್ಲಾ (72) ಎಂಬ ವೃದ್ಧನಿಗೆ ಪಶ್ಚಿಮ ಬಂಗಾಳದ (West Bengal) ಮೂರು ವ್ಯಕ್ತಿಗಳು ಈ ವಂಚನೆ ಎಸಗಿದ್ದು ಇದು ಮ್ಯಾಜಿಕ್‌ ಕನ್ನಡಿ. ಇದರಲ್ಲಿ ಎಲ್ಲರೂ ಬೆತ್ತಲಾಗಿ ಕಾಣುತ್ತಾರೆ. ಇದು ಭವಿಷ್ಯವನ್ನು ತೋರಿಸುತ್ತದೆ. ಇದನ್ನು ನಾಸಾ ವಿಜ್ಞಾನಿಗಳು (Nasa Scientist) ಬಳಸಿದ್ದಾರೆ ಎಂದು ಸುಳ್ಳು ಹೇಳಿ ಕನ್ನಡಿ ಕೊಳ್ಳುವಂತೆ ಮಾಡಿದ್ದರುಇದನ್ನು ನಂಬಿದ ವೃದ್ಧ 9 ಲಕ್ಷ ರು. ಹಣ ಕೊಟ್ಟು ಕನ್ನಡಿ ಖರೀದಿಸಿ ಮೋಸ ಹೋಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಥ ಸಿಂಗ್ರೇ, ಮೊಲಯ ಸರ್ಕಾರ್‌, ಸುದೀಪ್ತ ಸಿನ್ಹಾ ರಾಯ್‌ ಎಂಬ ಮೂವರು ವಂಚಕರನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತರಿಂದ 5 ಮೊಬೈಲುಗಳು, ಅತಿಂದ್ರೀಯ ಶಕ್ತಿ ಪ್ರದರ್ಶಿಸುವ ವಿಡಿಯೋ 28 ಸಾವಿರ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

Posted by Vidyamaana on 2023-06-17 08:05:29 |

Share: | | | | |


ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

ಬೆಳಗಾವಿ: ಕಾರು ಮತ್ತು ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತದಲ್ಲಿಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ  ಗಂಭೀರ ಗಾಯಗಳಾಗಿವೆ. ಮೃತರಿಬ್ಬರೂ ಸ್ವಾಮೀಜಿಗಳ ಸೇವಕರಾಗಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿಗಳ ಕಾರು, ಕಂಟೇನರ್‌ ಮತ್ತು ಇತರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಸಹಾಯಕರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗಳೊಂದಿಗೆ ಪ್ರಾಣ ಕಳೆದುಕೊಂಡರು.

ಕೂಡಲೇ ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕರೆದೊಯ್ಯುವ ಕೆಲಸವನ್ನು ತ್ವರಿತಗೊಳಿಸಿದರು.

ಸ್ವಾಮೀಜಿಯವರ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ಸೇವಕರ ಹೆಸರು ಇನ್ನೂ ತಿಳಿದುಬಂದಿಲ್ಲ.

ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುತ್ತಿದ್ದರು

ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಆಯೋಜನೆಗೊಂಡಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ.

Recent News


Leave a Comment: