ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಬೆಳ್ತಂಗಡಿ ವಿವಾಹಿತ ಮಹಿಳೆ ಕಾವ್ಯ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-01-18 20:24:06 |

Share: | | | | |


ಬೆಳ್ತಂಗಡಿ  ವಿವಾಹಿತ ಮಹಿಳೆ ಕಾವ್ಯ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.


ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

Posted by Vidyamaana on 2024-04-27 16:51:17 |

Share: | | | | |


ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

ಕಾಸರಗೋಡು : ನಟಿ ಸನ್ನಿ ಲಿಯೋನ್ ಕಾಸರಗೋಡಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾರೆ.ನೆಚ್ಚಿನ ತಾರೆಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

ನಿಲ್ಲದ ಮಳೆ: ನಾಳೆ (07) ದ.ಕ. ಜಿಲ್ಲಾ ಶಾಲಾ-PU ಕಾಲೇಜುಗಳಿಗೆ ರಜೆ ಘೋಷಣೆ

Posted by Vidyamaana on 2023-07-06 15:15:50 |

Share: | | | | |


ನಿಲ್ಲದ ಮಳೆ: ನಾಳೆ (07) ದ.ಕ. ಜಿಲ್ಲಾ ಶಾಲಾ-PU ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 7 ರಂದು ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.


ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

 ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

 ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

 ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

Posted by Vidyamaana on 2024-01-25 15:54:27 |

Share: | | | | |


ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ 

 ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.


ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್


ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.


ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

Posted by Vidyamaana on 2024-04-03 16:49:20 |

Share: | | | | |


ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಮಹಾನಗರಿಯಲ್ಲಿ ನ್ಯಾಟ್ ಕಾನ್ – 2024 : ಪುತ್ತೂರಿನ 15 ಇಂಜಿನಿಯರ್ಸ್ ಗಳ ನಿಯೋಗ ಭಾಗಿ

Posted by Vidyamaana on 2024-08-14 21:39:58 |

Share: | | | | |


ಮಹಾನಗರಿಯಲ್ಲಿ ನ್ಯಾಟ್ ಕಾನ್ – 2024 : ಪುತ್ತೂರಿನ 15 ಇಂಜಿನಿಯರ್ಸ್ ಗಳ ನಿಯೋಗ ಭಾಗಿ

ಪುತ್ತೂರು : ಮಹಾನಗರಿ ಮುಂಬಯಿಯ ಸಹಾರಾ ಸ್ಟಾರ್ ಹೊಟೇಲ್ ನಲ್ಲಿ ಇದೇ ತಿಂಗಳ 16 ಮತ್ತು 17ರಂದು ನಡೆಯಲಿರುವ ನ್ಯಾಟ್ ಕಾನ್-2024 ಅಂತರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಕೇಂದ್ರದ 15 ಸದಸ್ಯರು ನೋಂದಾಯಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಇಂಜಿನಯರ್ ಪ್ರಮೋದ್, ಇಂಜಿನಿಯರ್ ವಿನೋದ್, ಇಂಜಿನಿಯರ್ ಚೇತನ್, ಇಂಜಿನಿಯರ್ ಶಿವರಾಮ್, ಇಂಜಿನಿಯರ್ ಹೆಚ್. ಅಜಿತ್, ಇಂಜಿನಿಯರ್ ಬಾಲಕೃಷ್ಣ, ಇಂಜಿನಿಯರ್ ಎಲ್.ಸಿ. ಸಿಕ್ವೇರಾ, ಇಂಜಿನಿಯರ್ ಹರೀಶ್, ಇಂಜಿನಿಯರ್ ಆದರ್ಶ, ಇಂಜಿನಿಯರ್ ರಾಜಶೇಖರ್, ಇಂಜಿನಿಯರ್ ಕನಿಷ್ಕ, ಇಂಜಿನಿಯರ್ ಪ್ರಸನ್ನ, ಇಂಜಿನಿಯರ್ ಲೋಕೇಶ್, ಇಂಜಿನಿಯರ್ ದೇವಿಪ್ರಸಾದ್, ಇಂಜಿನಿಯರ್ ಚಂದ್ರಶೇಖರ್ ಈ ಪ್ರತಿಷ್ಟಿಿತ ಸಮಾವೇಶದಲ್ಲಿ ಪುತ್ತೂರು ಕೇಂದ್ರವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

Recent News


Leave a Comment: