ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


BREAKING : ಭಾರತ ಸೇರಿ ವಿಶ್ವದಾದ್ಯಂತ ಪೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2024-03-20 22:29:59 |

Share: | | | | |


BREAKING : ಭಾರತ ಸೇರಿ ವಿಶ್ವದಾದ್ಯಂತ ಪೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ : ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಬುಧವಾರ ಇದ್ದಕ್ಕಿದ್ದಂತೆ ವಿಶ್ವದಾದ್ಯಂತ ಅನೇಕ ಜನರಿಗೆ ಕೆಲಸ ಮಾಡುವುದನ್ನ ನಿಲ್ಲಿಸಿದೆ. ಬಳಕೆದಾರರು ಲಾಗ್ ಇನ್ ಮಾಡಲು ಅಥವಾ ತಮ್ಮ ಇನ್ಸ್ಟಾಗ್ರಾಮ್ ಫೀಡ್ಗಳನ್ನ ತಾಜಾ ಮಾಡಲು ಸಾಧ್ಯವಾಗುತ್ತಿಲ್ಲ.ಕೆಲವರನ್ನ ತಮ್ಮ ಪಾಸ್ ವರ್ಡ್ಗಳನ್ನ ಬದಲಾಯಿಸಲು ಸಹ ಕೇಳಲಾಯಿತು. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳು ಮತ್ತು ಇತರ ಹಲವಾರು ಪ್ಲಾಟ್ಫಾರ್ಮ್ಗಳು ಭಾರಿ ಸ್ಥಗಿತಗೊಂಡ ಕೆಲವೇ ವಾರಗಳ ನಂತರ ಇದು ಬಂದಿದೆ.


ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ ಎರಡೂ ಮೆಟಾ ಅಪ್ಲಿಕೇಶನ್ಗಳಲ್ಲಿ ಕ್ರ್ಯಾಶ್ಗಳು ಮತ್ತು ಲಾಗಿನ್ ಸಮಸ್ಯೆಗಳನ್ನು ಅನುಭವಿಸುವ ಬಗ್ಗೆ ತಮ್ಮ ಹತಾಶೆಯನ್ನ ವ್ಯಕ್ತಪಡಿಸಲು ಭಾರತ ಮತ್ತು ಪ್ರಪಂಚದಾದ್ಯಂತದ ಜನರು ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಕಡೆಗೆ ತಿರುಗಿದರು. ಹೆಚ್ಚುವರಿಯಾಗಿ, ಮೆಸೆಂಜರ್ ಅಪ್ಲಿಕೇಶನ್ ಬಳಸುವಾಗ ಕೆಲವು ಬಳಕೆದಾರರು ತೊಂದರೆಗಳನ್ನು ಎದುರಿಸಿದ್ದಾರೆ.ಬಳಕೆದಾರರೊಬ್ಬರು ಎಕ್ಸ್ನಲ್ಲಿ "ಇದು ನಾನು ಮಾತ್ರವೇ ಅಥವಾ ಎಲ್ಲರೂ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ 🤔 #facebookdown #instagramdown ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ.

ವಿಟ್ಲ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಮೃತ್ಯು

Posted by Vidyamaana on 2023-09-24 10:44:51 |

Share: | | | | |


ವಿಟ್ಲ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಮೃತ್ಯು

ವಿಟ್ಲ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಭಾನುವಾರ ಮುಂಜಾನೆ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ.ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Posted by Vidyamaana on 2022-12-15 14:18:07 |

Share: | | | | |


ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ೨೦೨೨-೨೩ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿ ಮಾತನಾಡಿ, ಒಂದು ಹಣತೆಯಿಂದ ಸಾವಿರಾರು ಹಣತೆಗಳನ್ನು ಹಚ್ಚಬಹುದು. ಹಾಗೆಯೇ ನಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿದಲ್ಲಿ ಮಾತ್ರ ಅದು ವೃದ್ಧಿಯಾಗುತ್ತದೆ. ಜ್ಞಾನವನ್ನು ತಲೆಯಲ್ಲಿಟ್ಟು ಮೆರೆಯದೆ ಹೃದಯದಲ್ಲಿಟ್ಟು ವಿನಮ್ರವಾಗಿ ನಡೆದುಕೊಂಡರೆ ಜೀವನ ಸಾರ್ಥಕವಾಗುವುದು. ನಾಯಕರು ಅನುಯಾಯಿಗಳನ್ನು ಸೃಷ್ಠಿಸುವ ಬದಲು ನಾಯಕರನ್ನು ಸೃಷ್ಠಿಸಬೇಕು. ವ್ಯಕ್ತಿಗಳನ್ನು ಹಾಗೂ ವ್ಯಕ್ತಿತ್ವಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ. ಯುವಕರು ಒಂದು ಹೆಜ್ಜೆ ಮುಂದೆ ಇಡುವ ಮುನ್ನ ಇಟ್ಟ ಹೆಜ್ಜೆ ಸರಿಯಾಗಿದೆಯೇ ಎಂದು ಪರಾಮರ್ಶಿಸಬೇಕು. ಬದುಕಿನ ಜಂಜಾಟಗಳ ನಡುವೆ ನಮಗೆ ಬರಬಹುದಾದ ಅದ್ಭುತ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.

ಅಧ್ಯ÷ಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜೆರೋಮ್ ಲಾರೆನ್ಸ್ ಮಸ್ಕರೇಞಸ್, ವಿದ್ಯಾರ್ಥಿ ಸಮೂಹಕ್ಕೆ ಒಳಿತನ್ನು ಮಾಡಲು ನಾಯಕರನ್ನು ಚುನಾಯಿಸಲಾಗಿದೆ. ನೀವು ಯಾರಾದರೊಬ್ಬ ವ್ಯಕ್ತಿಯನ್ನು ಪ್ರೀತಿಸಿದಲ್ಲಿ ಅವರ ಒಳಿತು ಹಾಗೂ ಸಂತೋಷಕ್ಕಾಗಿ ಸದಾ ಶ್ರಮಿಸುತ್ತೀರಿ. ನಿಮ್ಮ ಹೆತ್ತವರನ್ನು ಪ್ರೀತಿಸಿದಂತೆಯೇ ಕಲಿತ ವಿದ್ಯಾಸಂಸ್ಥೆಯನ್ನೂ ಪ್ರೀತಿಸಿರಿ. ನಾಯಕರು ತಮ್ಮ ಜವಾಬ್ದಾರಿಗಳನ್ನು ಪ್ರೀತಿಯಿಂದಲೇ ನಿರ್ವಹಿಸಿದಲ್ಲಿ ಸಂಸ್ಥೆಯನ್ನು ಸುಲಭವಾಗಿ ಮುನ್ನಡೆಸಬಹುದಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರಿಸ್ ಮಸ್ಕರೇಞಸ್, ವಿದ್ಯಾರ್ಥಿ ಸಂಘದ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಹಿರಿಯವಿದ್ಯಾರ್ಥಿ ಸಂಘದ ಅಧ್ಯಕ್ಷ ಎ. ಜಗಜೀವನ್ ದಾಸ್ ರೈ ಶುಭಹಾರೈಸಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಪ್ರೌಢಶಾಲಾ ಮುಖ್ಯಶಿಕ್ಷಕಿ ಕಾರ್ಮಿನ್ ಪಾಯಸ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ವಿ.ಜೆ. ಫೆರ್ನಾಂಡಿಸ್, ಕ್ಸೇವಿಯರ್ ಡಿಸೋಜ ಉಪಸ್ಥಿತರಿದ್ದರು.

ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಆಶಿಕ್ ಸ್ವಾಗತಿಸಿದರು. ಕಾರ್ಯದರ್ಶಿ ಅನುಶ್ರೀ ಅತಿಥಿಗಳನ್ನು ಪರಿಚಯಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿ ಜೋನ್ ವಿಸ್ಟನ್ ಟೈಟಸ್ ಡಯಾಸ್ ಅತಿಥಿಗಳನ್ನು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಶಿವಾನಿ ವಂದಿಸಿದರು. ತೃತೀಯ ಬಿಎಸ್ಸಿ ವಿದ್ಯಾರ್ಥಿ ನಿರಕ್ಷಾ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಕೆ., ಭಾರತಿ ಎಸ್. ರೈ ಉಪಸ್ಥಿತರಿದ್ದರು.

ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

Posted by Vidyamaana on 2024-07-14 14:01:05 |

Share: | | | | |


ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ವರುಣಾರ್ಭಟಕ್ಕೆ ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡ ಕುಸಿತವುಂತಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

Posted by Vidyamaana on 2023-09-27 04:40:42 |

Share: | | | | |


ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

ಉಪ್ಪಿನಂಗಡಿಯ ಮೇಸ್ತ್ರಿಗೆ  ಅದೃಷ್ಟವೊಂದು ಒಲಿದು ಬಂದಿದೆ. ಕೇರಳ ರಾಜ್ಯ ಲಾಟರಿಯಲ್ಲಿ ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಅವರು 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ.


ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ 500 ಬೆಲೆಯ ಸೆ.20 ರಂದು ಡ್ರಾ ಇದ್ದ ಓಣಂ ಬಂಪರ್ ಲಾಟರಿ ಟಿಕೇಟ್ ಖರೀದಿಸಿದ್ದರು. ಇವರು ಖರೀದಿಸಿದ ಟಿಕೆಟ್‌ಗೆ ಬಂಪರ್ ಬಹುಮಾನವಾಗಿ 50ಲಕ್ಷ ರೂ. ಬಂದಿದೆ.

ಈ ಹಿಂದೆ ಇದೇ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯ ಮೂಲಕ

ಟಿಕೆಟ್ ಖರೀದಿಸಿದ ಉಪ್ಪಿನಂಗಡಿ ಕೆಂಪಿಮಜಲು ಎಂಬಲ್ಲಿನ

ಆನಂದ ಟೈಲರ್ (72) ಎಂಬವರಿಗೆ 80 ಲಕ್ಷ

ರೂ.ಬಹುಮಾನ ಬಂದಿತ್ತು. ಇದೀಗ ಎರಡನೇ ಬಾರಿಗೆ

ಉಪ್ಪಿನಂಗಡಿಗೆ ಅದೃಷ್ಟ ಲಕ್ಷ್ಮೀ ಒಲಿದಿದ್ದು ಅಚ್ಚರಿ

ಮೂಡಿಸಿದೆ.

ಪುತ್ತೂರು : ಪ್ರಜ್ವಲ್‌ ರೈ ಪಾತಾಜೆ ಗಡಿಪಾರಿಗೆ ಎಸಿ ಶಿಫಾರಸ್ಸು

Posted by Vidyamaana on 2024-04-07 07:54:48 |

Share: | | | | |


ಪುತ್ತೂರು : ಪ್ರಜ್ವಲ್‌ ರೈ ಪಾತಾಜೆ ಗಡಿಪಾರಿಗೆ ಎಸಿ ಶಿಫಾರಸ್ಸು

ಪುತ್ತೂರು : ಎ.ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರ ಗಡಿಪಾರಿಗೆ ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿ ಏ.2ರಂದು ಆದೇಶಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿದೆ.

Recent News


Leave a Comment: