ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಕಡಬ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ನಿಶಾಂತ್ ಬಂಧನ

Posted by Vidyamaana on 2023-07-10 16:23:37 |

Share: | | | | |


ಕಡಬ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ನಿಶಾಂತ್ ಬಂಧನ

ಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ನಿಶಾಂತ್ (20 ) ಬಂಧಿತ ಆರೋಪಿ . ಆತನ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ.


ನಿಶಾಂತ್ ತನ್ನ ಸೋದರ ಸಂಬಂಧಿ 14 ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿದ್ದ ಪರಿಣಾಮ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ. ತಾಯಿ ಜೊತೆ ಬಾಲಕಿ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಈ ಘಟನೆ ಬೆಳಕಿಗೆ ಬಂದಿದೆ.


ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವಕನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ

ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ನೂತನ ಕೊಠಡಿ ಉದ್ಘಾಟನೆ

Posted by Vidyamaana on 2023-05-31 10:00:14 |

Share: | | | | |


ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ನೂತನ ಕೊಠಡಿ ಉದ್ಘಾಟನೆ

ಪುತ್ತೂರು: ಪ್ರತೀ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಸಿ  ಆಂಗ್ಲ ಶಿಕ್ಷಕರನ್ನು ನೀಡುವ ಯೋಜನೆಯಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಅವರು ಬುಧವಾರ ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲಾ ಅಭಿವೃದ್ಧಿಯಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆ ಜತೆಗೆ ಸರಕಾರ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲು ಮಕ್ಕಳ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ತನ್ನ ಕೆಲಸ ಬಗ್ಗೆ ಜವಾಬ್ದಾರಿಯುತವಾಗಿ ಗಮನ ನೀಡಬೇಕು. ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಸರಕಾರದಿಂದ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದ ಅವರು ಶಾಲೆಯ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂಬುದು ನನ್ನ ಆಶಯ ಎಂದರು.ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿದ್ಯಾರ್ಥಿ ಜೀವನ ಪವಿತ್ರವಾಗಿದ್ದು, ವಿದ್ಯಾರ್ಥಿಗಳು ಒಳ್ಳೆಯ ಜೀವ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ನಗರಸಭೆ ಸದಸ್ಯೆ ಪ್ರೇಮಲತಾ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಎಸ್‍ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ಅಕ್ಷರ ದಾಸೋಹ ಇಲಾಖೆಯ ನವೀನ್ ವೇಗಸ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ.ಕುಕ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಣಾಧಿಕಾರಿ ಲೋಕೇಶ್ ಎಸ್‍. ಆರ್. ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಶಾಸಕರು ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರಗಳನ್ನು ಸಾಂಕೇತಿಕವಾಗಿ ವಿತರಿಸಿದರು. ನೂತನ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.

ಸಂಸದರ ಸಾಧನೆಗೆ ಹೊಸ ಗರಿ ಮೂಡಿಸಿದ ಬಳ್ಪ - ಸಂಸದರ ಆದರ್ಶ ಗ್ರಾಮ ಯೋಜನೆ

Posted by Vidyamaana on 2023-11-10 07:41:02 |

Share: | | | | |


ಸಂಸದರ ಸಾಧನೆಗೆ ಹೊಸ ಗರಿ ಮೂಡಿಸಿದ ಬಳ್ಪ - ಸಂಸದರ ಆದರ್ಶ ಗ್ರಾಮ ಯೋಜನೆ

ಮಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರಾಗಬಹುದೆಂಬ ಚರ್ಚೆಗಳೂ ಸಹ ಗರಿಗೆದರಿದೆ.

ಒಂದು ಮೂಲಗಳ ಪ್ರಕಾರ ಹ್ಯಾಟ್ರಿಕ್ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೇ ಈ ಬಾರಿ ಪಕ್ಷ ಮಣೆ ಹಾಕುವ ಸಾಧ್ಯತೆಗಳು ದಟ್ಟವಾಗಿದೆ. ಹಾಲಿ ಸಂಸದರೂ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಬಗೆಗಿನ ಪರ ವಿರೋಧದ ಚರ್ಚೆಯ ನಡುವೆ ನಳಿನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಸಮರ್ಪಕವಾಗಿ ಬಳಸಿ ಗುರಿ ಮುಟ್ಟಿದ ರಾಜ್ಯದ ಸಂಸದರ ಪೈಕಿ ಮಂಗಳೂರು ಸಂಸದರು ಪ್ರಥಮ ಸ್ಥಾನದಲ್ಲಿದ್ದಾರೆ ಎಂದು ಸಂಸದರ ಆದರ್ಶ ಗ್ರಾಮದ ಯೋಜನಾ ನಿರ್ದೇಶಕರು ಹೇಳಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಪ ಗ್ರಾಮವನ್ನು ಸಂಸದರು ಆಯ್ಕೆ ಮಾಡಿಕೊಂಡಿದ್ದು ಈ ಗ್ರಾಮದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಾಲೆ, ಆಸ್ಪತ್ರೆ, ಸಾರಿಗೆ ವ್ಯವಸ್ಥೆ, ನೆಟ್ವರ್ಕ್ ವ್ಯವಸ್ಥೆ ಸೇರಿದಂತೆ 55 ಕೋಟಿ ರೂಪಾಯಿ ಅನುದಾನವನ್ನು ಒಂದು ಗ್ರಾಮಕ್ಕೆ ಒದಗಿಸಿ ಆ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದು, ಸತತ ನಾಲ್ಕನೇ ಬಾರಿ ಸಂಸದ ಸ್ಥಾನದ ಮೇಲೆ ಕಣ್ಣಿಟ್ಟಿರುವ ನಳಿನ್ ಕುಮಾರ್ ಕಟೀಲ್ ಅವರ ಉಮೇದುವಾರಿಕೆಗೆ ಇನ್ನಷ್ಟು ಬಲ ತುಂಬಲಿದೆ ಎಂಬ ಲೆಕ್ಕಾಚಾರ ಪಕ್ಷದಲ್ಲಿ ನಡೆಯುತ್ತಿದೆ.

ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

Posted by Vidyamaana on 2024-01-17 09:31:21 |

Share: | | | | |


ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

ಹೊಸದಿಲ್ಲಿ: ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯವಾಗಲಿವೆ ಎಂದು ಈಗಾಗಲೇ ಎನ್‌ಎಚ್‌ಎಐ ಎಚ್ಚರಿಸಿದೆ. ಫಾಸ್ಟಾಗ್‌ಗೆ ಕೆವೈಸಿ ಪೂರ್ಣಗೊಂಡಿದೆಯೇ, ಇಲ್ಲವೇ ಎಂಬ ಸ್ಥಿತಿಗತಿ ತಿಳಿಯುವುದು ಹೇಗೆ ಹಾಗೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಪರಿಶೀಲನೆ ಹೇಗೆ?

ಬಳಕೆದಾರರು https://fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಲಾಗಿನ್‌ ಆಗಲು ನೋಂದಾಯಿತ ಮೊಬೈಲ್‌ ಸಂಖ್ಯೆ, ಪಾಸ್‌ವರ್ಡ್‌ ಮತ್ತು ಬಳಿಕ ಮೊಬೈಲ್‌ಗೆ ಬರುವ ಒಟಿಪಿ ಬೇಕಾಗಲಿದೆ.

ಒಮ್ಮೆ ಲಾಗಿನ್‌ ಆದ ಅನಂತರ, ಡ್ಯಾಶ್‌ಬೋರ್ಡ್‌ಗೆ ತೆರಳಿ, “ಮೈ ಪ್ರೊಫೈಲ್‌’ ವಿಭಾಗದ ಮೇಲೆ ಕ್ಲಿಕ್‌ ಮಾಡಬೇಕು.

ಇಲ್ಲಿ ನಿಮ್ಮ ಕೈವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಸ್ಥಿತಿಗತಿ ಹಾಗೂ ನೀವು ಸಲ್ಲಿಸಿರುವ ಪ್ರೊಫೈಲ್‌ ವಿವರ ಸಿಗಲಿದೆ.

ಪೂರ್ಣಗೊಳ್ಳದಿದ್ದರೆ ಏನು ಮಾಡಬೇಕು?

ಪ್ರೊಫೈಲ್‌ ವಿಭಾಗದಲ್ಲಿ, ಕೆವೈಸಿ ಎಂಬ ಉಪ ವಿಭಾಗವಿದೆ. ಅಲ್ಲಿ ಕ್ಲಿಕ್‌ ಮಾಡಿ ನೀವು ನಿಮ್ಮ ಕೆವೈಸಿ ಅಪ್‌ಡೇಟ್‌ ಮಾಡಬಹುದು.

ಬಳಕೆದಾರರು ಗುರುತು, ವಿಳಾಸದ ದಾಖಲೆಗಳನ್ನು ಸಲ್ಲಿಸಬೇಕು. ಪಾಸ್‌ಪೋರ್ಟ್‌ ಗಾತ್ರದ ಫೋಟೋ ಕೂಡ ಅಗತ್ಯ.

ಒಮ್ಮೆ ಪರಿಶೀಲಿಸಿ, ಅನಂತರ ದೃಢೀಕರಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ, “ಪ್ರೊಸೀಡ್‌’ ಕ್ಲಿಕ್‌ ಮಾಡಿ ದರೆ ಕೈವೈಸಿ ಪೂರ್ಣಗೊಳ್ಳಲಿದೆ.

ಮೈಸೂರು ಭೇಟಿ ವೇಳೆ ಝಿರೋ ಟ್ರಾಫಿಕ್ ಮಾಡಿದ್ದಕ್ಕೆ ಗರಂ ಆದ ಸಿಎಂ

Posted by Vidyamaana on 2023-06-10 14:17:25 |

Share: | | | | |


ಮೈಸೂರು ಭೇಟಿ ವೇಳೆ ಝಿರೋ ಟ್ರಾಫಿಕ್ ಮಾಡಿದ್ದಕ್ಕೆ ಗರಂ ಆದ ಸಿಎಂ

ಮೈಸೂರು : ತಮ್ಮ ಪ್ರಯಾಣದ ವೇಳೆ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಯಾಕಾಗಿ ಝೀರೋ ಟ್ರಾಫಿಕ್ ಮಾಡಿದ್ದೀರಾ? ಎಂದು ಮೈಸೂರು ಪೊಲೀಸ್ ಆಯುಕ್ತರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಆಗಮಿಸಿದ್ದರು.ಈ ವೇಳೆ ಅವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿ, ನಿಮಗೆ ಗೊತ್ತಿದೆಯಾ, ನಾನು ಝೀರೋ ಟ್ರಾಫಿಕ್ ಮಾಡಬೇಡಿ ಎಂದು ಹೇಳಿದ್ದೇನೆ. DONT DO THAT ಎಂದು ಹೇಳುತ್ತಾ ಖಡಕ್ ವಾರ್ನಿಂಗ್ ನೀಡಿದ ಘಟನೆ ಜಿ.ಪಂ ಆವರಣದಲ್ಲಿ ನಡೆದಿದೆ.ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸುತ್ತಿದ್ದಂತೆ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್​ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದರು.ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಸಚಿವರಾದ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್‌ ಸೇಠ್, ಶ್ರೀವತ್ಸ, ರವಿಶಂಕರ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್‌ ಗೌಡ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.

ಗೃಹಜ್ಯೋತಿ ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ ಅಪ್ಲಿಕೇಷನ್‌: ಪೊಲೀಸ್ ಇಲಾಖೆ ಎಚ್ಚರಿಕೆ

Posted by Vidyamaana on 2023-07-17 04:13:00 |

Share: | | | | |


ಗೃಹಜ್ಯೋತಿ  ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ ಅಪ್ಲಿಕೇಷನ್‌: ಪೊಲೀಸ್ ಇಲಾಖೆ ಎಚ್ಚರಿಕೆ

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್‌ ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.


ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ಪ್ ಡೆಸ್ಕ್‌ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.ಸಾರ್ವಜನಿಕರು ಇಂತಹ ನಕಲಿ ‌ಅಪ್ಲಿಕೇಷನ್‌ ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Recent News


Leave a Comment: