ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಉಳ್ಳಾಲ: ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರ ವಾಪಾಸ್ - ಜೆಡಿಎಸ್ ಅಭ್ಯರ್ಥಿ ನಾಪತ್ತೆ.

Posted by Vidyamaana on 2023-04-24 07:54:19 |

Share: | | | | |


ಉಳ್ಳಾಲ: ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರ ವಾಪಾಸ್ - ಜೆಡಿಎಸ್ ಅಭ್ಯರ್ಥಿ ನಾಪತ್ತೆ.

ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಅಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ.

ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬ್ಲ್ಯಾಕ್ ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು. ಈ ಕುರಿತು ಎ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

Posted by Vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

Posted by Vidyamaana on 2024-04-24 04:30:45 |

Share: | | | | |


ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಪುತ್ತೂರು : 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

ಮೇ.20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ :


ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು

ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

Posted by Vidyamaana on 2024-05-19 12:02:11 |

Share: | | | | |


ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ.

ಪುದುಚೇರಿ- ದಾದರ್ ಎಕ್ಸ್‌ಪ್ರೆಸ್‌ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ ಆರೋಪಿ ಪರಾರಿಯಾದ. ಎಸ್‌-8 ಬೋಗಿಯಿಂದ ಇಳಿದುಹೋಗಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾನಾಪುರದಿಂದ ಎಲ್ಲಿಗೆ ಪರಾರಿಯಾಗಿದ್ದಾನೆ ಎಂಬುದರ ತನಿಖೆ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಶೇರ್ ಯುವರ್ ಗ್ಲೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Posted by Vidyamaana on 2023-08-18 14:58:21 |

Share: | | | | |


ಶೇರ್ ಯುವರ್ ಗ್ಲೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಾಮಾಜಿಕ ಜಾಲತಾಣದಲ್ಲಿ ಆಯೋಜಿಸಿದ `ಶೇರ್ ಯುವರ್ ಗ್ಲೋ’ ಫೊಟೋ ಸ್ಪರ್ಧೆಯಲ್ಲಿ ವಿಜೇತರಾದ ಧನ್ಯ ಕಿರಣ್ ಶೆಟ್ಟಿ ಅವರಿಗೆ ಸಂಸ್ಥೆಯ ಆಡಳಿತ ನಿರ್ದೇಶಕರಾದ ಜಿ.ಎಲ್. ಬಲರಾಮ್ ಆಚಾರ್ಯ ಅವರು 5000 ರೂ. ಮೌಲ್ಯದ ಗಿಫ್ಟ್ ವೋಚರ್ ನೀಡಿ ಅಭಿನಂದಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ಗ್ಲೋ 2k 23 ಮೀಲಾದ್ ಆರ್ಟ್ ಫೆಸ್ಟ್ ಲೋಗೋ ಅನಾವರಣ

Posted by Vidyamaana on 2023-09-27 17:46:44 |

Share: | | | | |


ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ಗ್ಲೋ 2k 23 ಮೀಲಾದ್ ಆರ್ಟ್ ಫೆಸ್ಟ್ ಲೋಗೋ ಅನಾವರಣ

ಪುತ್ತೂರು : ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್,  ಪಿ.ಯು.ಕಾಲೇಜ್ ನಲ್ಲಿ ಈದ್ ಮೀಲಾದ್ ಪ್ರಯುಕ್ತ ಕಾಲೇಜ್ ವಿದ್ಯಾರ್ಥಿನಿಯರ ಮೀಲಾದ್ ಆರ್ಟ್ ಫೆಸ್ಟ್ ನ  ಗ್ಲೋ-2k 23 ಲೋಗೋವನ್ನು ಕಾಲೇಜ್ ಸಭಾಂಗಣದಲ್ಲಿ ಅನಾವರಣ ಗೊಳಿಸಲಾಯಿತು.

    ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೋಡಿಂಬಾಡಿ ಜುಮ್ಮಾ ಮಸೀದಿಯ ಅಧ್ಯಕ್ಷ ಉದ್ಯಮಿ ಯು.ಕೆ.ಉಮರ್ ಹಾಜಿ ಕೋಡಿಂಬಾಡಿ ಮತ್ತು ಕೆಮ್ಮಾಯಿ ಜುಮ್ಮಾ ಮಸೀದಿಯ ಅಧ್ಯಕ್ಷ ಉದ್ಯಮಿ ಬಶೀರ್ ಹಾಜಿ ದಾರಂದಕುಕ್ಕು ಅವರು ಲೋಗೋವನ್ನು ಅನಾವರಣ ಗೊಳಿಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ   ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್ ಅವರು ಪ್ರವಾದಿಯವರು ಕಲಿಸಿ ಕೊಟ್ಟ ಮಾದರಿಯಲ್ಲಿ ಬದುಕು ಕಟ್ಟಿ ಬದುಕು ಬೆಳಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.

‌   ಮೌಂಟನ್ ವ್ಯೂ ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಮಾತನಾಡಿ ಪ್ರವಾದಿಯವರ ಸಂದೇಶವನ್ನು ಬದುಕಲ್ಲಿ ಅಳವಡಿಸಿ ಕೊಂಡರೆ ಇಹಪರ ಯಶಸ್ಸು ಸಾಧ್ಯ ಎಂದರು. 

  ದಾರುಲ್ ಫಲಾಹ್ ಮದ್ರಸ ಶಿಕ್ಷಕರಾದ ನಝೀರ್ ಅರ್ಶದಿ, ಮೌಂಟನ್ ವ್ಯೂ ಶಾಲಾ ದೈಹಿಕ ಶಿಕ್ಷಕ ಅಶ್ರಫ್ , ಕಾರ್ಯಾಲಯ ನಿರ್ವಾಹಕರಾದ ಯೂಸುಫ್ ಕೂಟತ್ತಾನ, ಹಮೀದ್   ಮೊದಲಾದವರು ಉಪಸ್ಥಿತರಿದ್ದರು. 

    ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ. ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಸ್ವಾಗತಿಸಿ ಪ್ರವಾದಿಯವರ ಬದುಕು,ಬೋಧನೆ ಯ ಬಗ್ಗೆ ವಿವರಿಸಿದರು. 

     ಶಾಲಾ ಶಿಕ್ಷಕ ರವೂಫ್ ವಿವಿಧ ಕಾರ್ಯಕ್ರಮ ನಿರ್ವಹಿಸಿ ಕೊನೆಗೆ ವಂದಿಸಿದರು. 

   ಮದ್ರಸ ವಿದ್ಯಾರ್ಥಿಗಳಿಂದ ಬುರ್ಧಾ ಮಜ್ಲಿಸ್ ನಡೆಯಿತು.

    ಕಾರ್ಯಕ್ರಮದ ಬಳಿಕ ಕಾಲೇಜ್ ಉಪಾನ್ಯಾಸಕಿಯರಾದ ಸಾಜಿದಾ, ಮಿಶ್ರಿಯಾ ಅಸ್ವಾಲಿಹಾ ಮತ್ತು ಫಾರಿಶಾ ಅಸ್ವಾಲಿಹಾ ಅವರ ನೇತೃತ್ವದಲ್ಲಿ ಕಾಲೇಜ್ ನ ಒಳಾಂಗಣದಲ್ಲಿ ವಿದ್ಯಾರ್ಥಿನಿಯರಿಂದ ವಿವಿಧ ಸಾಹಿತ್ಯ ಕಲಾ ಸ್ಪರ್ಧಾ ಕಾರ್ಯಕ್ರಮ ನಡೆಯಿತು.



Leave a Comment: