ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಪುತ್ತೂರು : ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

Posted by Vidyamaana on 2024-06-24 06:06:05 |

Share: | | | | |


ಪುತ್ತೂರು : ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು :ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರು ಇಲ್ಲಿನ ರಕ್ಷಕ - ಶಿಕ್ಷಕ   ಸಂಫದ ಮಹಾಸಭೆಯು  ಜೂ 22 ನೇ ಶನಿವಾರದಂದು ಶಾಲಾ ಸಭಾಂಗಣದಲ್ಲಿ ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು.

     ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು ಇಲ್ಲಿನ ಉಪನ್ಯಾಸಕರಾಗಿರುವ ಪ್ರೋ. ಸೆವ್ರಿನ್ ಪಿಂಟೊರವರು ಮಾತನಾಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಎರಡು ಕಂಬಗಳಿದ್ದಂತೆ. ಎರಡು ಕಂಬಗಳಲ್ಲಿ ಒಂದು ಅಲ್ಲಾಡಿದರೂ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯಪ್ರವೃತ್ತರಾಗಬೇಕು,



ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-09-30 22:09:16 |

Share: | | | | |


ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು

ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

Posted by Vidyamaana on 2023-08-30 23:08:16 |

Share: | | | | |


ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.

ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ.

ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಬಳಿಕ ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆ ಯಲ್ಲಿ ಮರಣೋತ್ತರ ಪರೀಕ್ಷೆ ಗಾಗಿ ಕೊಂಡೋಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಸಾವಿನ ಸ್ಪಷ್ಟವಾದ ಕಾರಣ ಸಿಗಬಹುದು.ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಕ್ರಿಯಾಶೀಲೆ ಯುವತಿ ಓಂಕಾರ ಫ್ರೆಂಡ್ಸ್ (ರಿ) ಮದ್ವ ಇದರ ಮಹಿಳಾ ಘಟಕದ ಸದಸ್ಯೆಯಾಗಿರುವ ಮಿತ್ರ ಶೆಟ್ಟಿ ಬಿಸಿರೋಡಿನ ವಕೀಲರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅತ್ಯಂತ ಕ್ರಿಯಾಶೀಲ ಯುವತಿಯಾಗಿದ್ದು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದಳು

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಕೇಂದ್ರ ಸರಕಾರದಿಂದಲೇ ರಿಯಾಯಿತಿ ದರದಲ್ಲಿ ಟೊಮೆಟೋ ಮಾರಾಟ… ಕೆಜಿಗೆ ಎಷ್ಟು ಗೊತ್ತಾ?

Posted by Vidyamaana on 2023-07-15 03:23:16 |

Share: | | | | |


ಕೇಂದ್ರ ಸರಕಾರದಿಂದಲೇ ರಿಯಾಯಿತಿ ದರದಲ್ಲಿ ಟೊಮೆಟೋ ಮಾರಾಟ… ಕೆಜಿಗೆ ಎಷ್ಟು ಗೊತ್ತಾ?

ನವದೆಹಲಿ: ದೇಶದೆಲ್ಲೆಡೆ ಟೊಮ್ಯಾಟೋ ಭಾರಿ ಸದ್ದು ಮಾಡುತ್ತಿದೆ, ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದೆ 150 ಇದ್ದ ಬೆಲೆ ಇದೀಗ ಇನ್ನೂರರ ಗಡಿ ದಾಟಿದೆ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಹೊಸ ನಿಯಮವೊಂದನ್ನು ತಂದಿದ್ದು ಟೊಮ್ಯಾಟೋ ಖರೀದಿಸಿ ಅದನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಯೋಜನೆಯನ್ನು ಶುಕ್ರವಾರ ಆರಂಭಿಸಿದೆ.ಈಗಾಗಲೇ ದೆಹಲಿ ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಟೊಮ್ಯಾಟೋ ಮಾರಾಟ ಆರಂಭವಾಗಿದ್ದು ವಾಹನಗಳ ಮೂಲಕ ಮಾರಾಟ ಮಾಡುವ ಕಾರ್ಯ ನಡೆಯುತ್ತಿದೆ.


ಸಹಕಾರ ಒಕ್ಕೂಟವಾದ ಎನ್‌ಸಿಸಿಎಫ್‌, ಟೊಮೆಟೋಗಳನ್ನು ತನ್ನದೇ ಆದ ಮೊಬೈಲ್‌ ವ್ಯಾನ್‌ಗಳಲ್ಲಿ ಮಾರಲು ಮುಂದಾಗಿದೆ.


ಸದ್ಯ ಚಿಲ್ಲರೆ ಅಂಗಡಿಗಳಲ್ಲಿ 150 ರು.ಗೆ ಕೇಜಿಯಂತೆ ಟೊಮ್ಯಾಟೋ ಮಾರಾಲಾಗುತ್ತಿದ್ದು, ಶುಕ್ರವಾರದಿಂದ ಇದನ್ನು 90 ರೂ..ಗೆ ಮಾರಾಟ ಮಾಡಲು ಎನ್‌ಸಿಸಿಎಫ್‌ ನಿರ್ಧರಿಸಿದೆ. ದಿಲ್ಲಿ ಮಾತ್ರವಲ್ಲ, ಲಖನೌ, ಕಾನ್ಪುರ ಹಾಗೂ ಜೈಪುರದಲ್ಲೂ ರಿಯಾಯ್ತಿ ದರದಲ್ಲಿ ಟೊಮೆಟೋ ಮಾರಲಾಗುತ್ತದೆ.ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮ್ಯಾಟೋ ತರಿಸಲಾಗುತ್ತಿದ್ದು. ದಿಲ್ಲಿ ಸೇರಿ ಐದು ರಾಜ್ಯಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೊಗಳನ್ನು ಮಾರಾಟ ಮಾಡಲು ಸರ್ಕಾರ ಸೂಚನೆಯನ್ನು ನೀಡಿದೆ



Leave a Comment: