ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ

Posted by Vidyamaana on 2024-08-19 21:26:23 |

Share: | | | | |


ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು  : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ.

ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು.

ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

Posted by Vidyamaana on 2024-03-19 16:11:46 |

Share: | | | | |


ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

ಮೈಸೂರು : ಇನ್‌ಸ್ಟಾಗ್ರಾಂನಲ್ಲಿ(Instagram love) ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ(Suicide attempt) ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31 ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್ ರೆಹಮಾನ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ಲವ್‌ ಆಗಿದ್ದು , ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಹಿಳೆ ರೆಹಮಾನ್‌ನನ್ನು ಭೇಟಿಯಾಗಲಲು ಸೀದಾ ಮೈಸೂರಿಗೆ ಬಂದಿದ್ದಾಳೆ. ಮಹಿಳೆಯನ್ನು ನೋಡುತ್ತಲೇ ಆಸಿಬೂರ್‌ ರೆಹಮಾನ್‌ ವಯಸ್ಸಿನ ಅಂತರ ಹೆಚ್ಚು ಎಂಬ ಕಾರಣ ನೀಡಿ ಮದುವೆಗೆ ಒಲ್ಲೆ ಎಂದಿದ್ದಾನೆ.


ಇದರಿಂದ ಸಿಟ್ಟಾದ ನಾಸೀಂ ಬೇಗಂ ಖಾಸಗಿ ಹೊಟೇಲ್‌ ಬಿಲ್ಡಿಂಗ್ ಏರಿ ಮದುವೆ ಮಾಡಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಆಕೆಯನ್ನು ಕೆಳಗೆ ಇಳಿಸಿ ನಂಜನಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೌಜನ್ಯ ಮನೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

Posted by Vidyamaana on 2023-08-22 04:12:00 |

Share: | | | | |


ಸೌಜನ್ಯ ಮನೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯಾ ಮತ್ತು ಅತ್ಯಾಚಾರ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ನಾಗನ ಗೌಡ ಸೋಮವಾರ ಸೌಜನ್ಯಾ ಮನೆಗೆ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿದರು.



ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನ್ಯಾಯಕ್ಕೆ ಈಡಾದ ಕುಟುಂಬದ ಪರವಾಗಿ ನಿಲ್ಲುವೆವು. ಅನ್ಯಾಯಕ್ಕೊಳಗಾದವರ ಪರವಾಗಿ ಆಯೋಗದಿಂಂದ ಯಾವೆಲ್ಲ ರೀತಿ ಕಾನೂನು ರೀತಿ ಮುಂದುವರಿಯಲು ಸಾಧ್ಯವಿದೆಯೋ ಎಂಬುದನ್ನು ಎಲ್ಲ ಆಯಾಮಗಳಡಿ ಪರಿಶೀಲಿಸ ಲಾಗುವುದು. ಬಳಿಕ ಸರಕಾರದ ಹಾಗೂ ಸಿಎಂ ಗಮನಕ್ಕೆ ತಂದು ಮನವರಿಕೆ ಮಾಡಲಿದ್ದೇವೆ ಎಂದರು.


ಸರಕಾರಿ ಹುದ್ದೆಗೆ ಶಿಫಾರಸು

ಸೌಜನ್ಯಾಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಿ ಶಿಫಾರಸು ಮಾಡಲಾಗುವುದು ಎಂದರು.


ಬಸ್‌, ಅಂಗನವಾಡಿಗೆ ಯೋಚನೆ

ಕೃತ್ಯ ನಡೆದ ಸ್ಥಳದಲ್ಲಿ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದು, ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯವಾಗಿ ಅಂಗನವಾಡಿ ಕೇಂದ್ರದ ಬೇಡಿಕೆ ಬಗ್ಗೆ ಸೌಜನ್ಯಳ ಮನೆಮಂದಿಗೆ ತಿಳಿಸಿದ್ದಾರೆ. ಬಸ್‌ ವ್ಯವಸ್ಥೆ ಮಾಡುವಂತೆ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್‌ಗೆ ಸೂಚಿಸಿದ್ದೇನೆ ಎಂದರು.ಘಟನ ಸ್ಥಳಕ್ಕೆ ಭೇಟಿ

ಇದಕ್ಕೂ ಮುನ್ನ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೆ ಭೇಟಿ ನೀಡಿದ ಅವರು ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಟuಲ ಗೌಡರಿಂದ ಮಾಹಿತಿ ಕಲೆ ಹಾಕಿದರು.

ವಿಟ್ಲದಲ್ಲಿ ದೌರ್ಜನ್ಯಕ್ಕೆ ಈಡಾದ ಮಗುವಿಗೆ ನ್ಯಾಯ ಒದಗಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದ ಅವರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಸಿಡಿಪಿಒ ಪ್ರಿಯಾ ಆ್ಯಗ್ನೆಸ್‌, ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ, ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್‌ ಠಾಣೆ ಉಪನಿರೀಕ್ಷಕರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


ಪ್ರತೀ ಗ್ರಾಮದಲ್ಲಿ ಪೋಕ್ಸೋ ಜಾಗೃತಿ

ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ನಾಗನ ಗೌಡ ಅವರು, ಪೋಕ್ಸೋ ಎಂಬ ಗಂಭೀರ ಕಾನೂನಿನ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಅದರ ಶಿಕ್ಷೆಯ ಪ್ರಮಾಣದ ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೈಕ್‌ ಮೂಲಕ ಮೈಕ್‌ನಲ್ಲಿ ಪ್ರಚಾರ ಮಾಡುವಂತೆ ತಹಶೀಲ್ದಾರ್‌ ಮತ್ತು ತಾ.ಪಂ. ಇಒ, ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು

ಪುತ್ತೂರಿನ ಬಲನಾಡು ನೆಟ್ ವರ್ಕಿಂದ ಹೊರನಾಡು

Posted by Vidyamaana on 2023-06-16 11:20:44 |

Share: | | | | |


ಪುತ್ತೂರಿನ ಬಲನಾಡು ನೆಟ್ ವರ್ಕಿಂದ ಹೊರನಾಡು

ಪುತ್ತೂರು: ಹೇಳಿಕೊಳ್ಳಲು ಪುತ್ತೂರು ಪೇಟೆಯ ತೀರಾ ಸಮೀಪದ ಗ್ರಾಮ. ಆದರೆ ಇಂದಿಗೆ ಅಗತ್ಯಾತಿ ಅಗತ್ಯ ಎನಿಸಿಕೊಳ್ಳುವ ನೆಟ್ ವರ್ಕೇ ಇಲ್ಲಿಲ್ಲ. ಹಾಗಾಗಿ ಇದು ನೆಟ್ ವರ್ಕ್ ವಿಚಾರದಲ್ಲಿ ಕುಗ್ರಾಮ ಎಂದೇ ಹೇಳಬಹುದು.

ಈ ಗ್ರಾಮದ ಹೆಸರು ಬಲ್ನಾಡು. ಒಂದು ಕಾಲದ ಬಲ ನಾಡು. ಅಂದರೆ ಬಲ್ಲಾಳರು ಅಧಿಕಾರ ನಡೆಸುತ್ತಿದ್ದ ಕೇಂದ್ರಸ್ಥಾನವಿದು. ಆದ್ದರಿಂದಲೇ ಇದು ಬಲಯುತವಾದ ನಾಡು. ಅಂದು ಅಧಿಕಾರದಲ್ಲಿ ಮೆರೆದ ನಾಡು, ಇಂದು ಮೂಲಸೌಕರ್ಯ ವಂಚಿತವಾಗಿದೆ.

ತುರ್ತು ಸಂದೇಶ ರವಾನಿಸಬೇಕಿದ್ದರೂ ಫೋನ್ ಮಾಡುವಂತಿಲ್ಲ. ರಾತ್ರಿ ಹೊತ್ತಾದರೂ ಸರಿ, ಮಾತನಾಡಬೇಕು ಎಂದರೆ ಬಾಂಬ್ ಸ್ಕ್ವಾಡ್ ನಂತೆ ಸಿಗ್ನಲ್ ಹುಡುಕುತ್ತಾ ಹೋಗಬೇಕು. ಆನ್ ಲೈನ್ ನಂಬಿಕೊಂಡು ಕ್ಲಾಸ್ ತೆಗೆದುಕೊಂಡರಂತೂ ನಾಪಾಸೇ ಗತಿ. ಪ್ರೇಮಿಗಳ ವಿರಹ ವೇದನೆಯಂತೂ ಹೇಳತೀರದು. ಹೀಗೇ ಇಲ್ಲಿನ ಜನರ ಕಷ್ಟ ಒಂದೇ ಎರಡೇ.

ಬಲ್ನಾಡು ಗ್ರಾಮದಲ್ಲಿ ಘಟಾನುಘಟಿ ನಾಯಕರಿದ್ದಾರೆ. ರಾಜಕೀಯದಲ್ಲೂ ಉನ್ನತ ಸ್ಥಾನ ಅಲಂಕರಿಸಿದವರಿದ್ದಾರೆ. ಆದರೆ ಇವರನ್ನು ಸಂಪರ್ಕಿಸಬೇಕಿದ್ದರೂ, ಹರಸಾಹಸ ಪಡಬೇಕು. ಎಲ್ಲದಕ್ಕೂ ಮೂಲಕಾರಣ ನೆಟ್ ವರ್ಕ್ ಸಮಸ್ಯೆ. ಹಾಗಾಗಿ ಬಲನಾಡಾದರೂ ನೆಟ್ ವರ್ಕಿಂದ ಹೊರನಾಡಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ನೀಡುವವರು ಯಾರು? ಸಂಬಂಧಪಟ್ಟವರು ನ ಹರಿಸುವಿರಾ.

ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು

Posted by Vidyamaana on 2024-04-22 08:58:47 |

Share: | | | | |


ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು

ಕಾರವಾರ: ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು‌‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ.

40 ವರ್ಷದ ನಝೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಮೃತರು. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು.

ಶಾಸಕರ ಇಂದಿನ ಕಾರ್ಯಕ್ರಮ ಜು 31

Posted by Vidyamaana on 2023-07-31 01:59:45 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 31

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 31 ರಂದು


ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯರವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ  ಕಚೇರಿಯಲ್ಲಿ ಸಭೆ


 ಮಧ್ಯಾಹ್ನ 1 ಗಂಟೆಗೆ ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ  

ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ



Leave a Comment: