ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಎಂಎಂವೈಸಿ ಇಫ್ತಾರ್ ಕೂಟ: ರಾಮಲಿಂಗ ರೆಡ್ಡಿ ಭಾಗಿ

Posted by Vidyamaana on 2023-04-14 21:57:18 |

Share: | | | | |


ಎಂಎಂವೈಸಿ ಇಫ್ತಾರ್ ಕೂಟ: ರಾಮಲಿಂಗ ರೆಡ್ಡಿ ಭಾಗಿ

ಬೆಂಗಳೂರು: ಎಂ.ಎಂ.ವೈ.ಸಿ. ಬೆಂಗಳೂರು ಇದರ ಹತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಇಫ್ತಾರ್ ಕೂಟ ನಡೆಯಿತು.

ಸಮಾರಂಭಕ್ಕೆ ಆಗಮಿಸಿದ ಮಾಜಿ ಗೃಹ ಸಚಿವ ರಾಮಲಿಂಗ ರೆಡ್ಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮುದಾಯಕ್ಕೆ ಕೆಟ್ಟ ಹೆಸರು ಬಾರದಂತೆ ನೋಡಿಕೊಳ್ಳಿ:

ತನ್ನ ಪಾಡಿಗೆ ತಾನು ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಮಲಗಿದ್ದ ಸ್ಥಿತಿಯಲ್ಲೇ ಸಾವು

Posted by Vidyamaana on 2023-05-24 08:40:50 |

Share: | | | | |


ತನ್ನ ಪಾಡಿಗೆ ತಾನು ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಮಲಗಿದ್ದ ಸ್ಥಿತಿಯಲ್ಲೇ ಸಾವು

ಪುತ್ತೂರು: ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿರುವ ಘಟನೆ ಕಲ್ಲಾರೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಪ್ಪಿನಂಗಡಿ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದ್ದು ಇಲ್ಲಿನ ನವಾಜ್ ಕಾಂಪ್ಲೆಕ್ಸ್ ಹಿಂಭಾಗ ಮಂಜುನಾಥ್ ಮೃತದೇಹ ಪತ್ತೆಯಾಗಿದೆ.

ಪ್ರತೀನಿತ್ಯ ನಗರದ ವಿವಿಧ ಕಡೆಗಳಲ್ಲಿ ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಬಳಿಕ ಪ್ರತೀದಿನ ಈ ಕಟ್ಟಡದ ಬಳಿಯಲ್ಲೇ ಮಲಗುತ್ತಿದ್ದರು. ನಿರುಪದ್ರವಿಯಾಗಿ ತಮ್ಮ ಪಾಡಿಗೆ ತಾವು ಗುಜುರಿ ಹೆಕ್ಕಿಕೊಂಡು ಜೀವನ ಸಾಗಿಸುತ್ತಿದ್ದ ಮಂಜುನಾಥ್ ಇದೀಗ ಯಾರಿಗೂ ತೊಂದರೆ ಕೊಡದ ಸ್ಥಿತಿಯಲ್ಲಿ ಮಲಗಿದಲ್ಲೇ ಇಹಲೋಕದ ಯಾತ್ರೆಯನ್ನು ಮುಗಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದಿದರು.

ನದಿಯಲ್ಲಿ ತೇಲಿ ಹೋದ ಗ್ಯಾಸ್‌ ಟ್ಯಾಂಕ‌ರ್; ಸೋರಿಕೆ ಸಾಧ್ಯತೆ

Posted by Vidyamaana on 2024-07-17 08:26:09 |

Share: | | | | |


ನದಿಯಲ್ಲಿ ತೇಲಿ ಹೋದ ಗ್ಯಾಸ್‌ ಟ್ಯಾಂಕ‌ರ್; ಸೋರಿಕೆ ಸಾಧ್ಯತೆ

ಅಂಕೋಲಾ : ತಾಲೂಕಿನಲ್ಲಿ ಕಳೆದೆರಡು ದಿನದಿಂದ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆಗಳಿದ್ದು, ಗಂಗಾವಳಿ ನದಿ ಸುತ್ತಮುತ್ತಲಿನ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ತುಂಬು ಗರ್ಭಿಣಿಯಾಗಿದ್ದ ಮಲಯಾಳಂ ಕಿರುತೆರೆ ನಟಿ ಡಾ. ಪ್ರಿಯಾ ಹೃದಯಾಘಾತಕ್ಕೆ ಬಲಿ

Posted by Vidyamaana on 2023-11-01 13:31:52 |

Share: | | | | |


ತುಂಬು ಗರ್ಭಿಣಿಯಾಗಿದ್ದ ಮಲಯಾಳಂ ಕಿರುತೆರೆ ನಟಿ ಡಾ. ಪ್ರಿಯಾ ಹೃದಯಾಘಾತಕ್ಕೆ ಬಲಿ

ಕೇರಳ : ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಮಂಗಳವಾರ (ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಟ ಕಿಶೋರ್ ಸತ್ಯ ಅಭಿಮಾನಿಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ.


ಹೃದಯಾಘಾತದಿಂದ ಡಾ. ಪ್ರಿಯಾ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ನವಜಾತ ಶಿಶುವನ್ನು ಐಸಿಯುನಲ್ಲಿ ಇಡಲಾಗಿದೆ. ಪ್ರಿಯಾಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ತಮ್ಮ ದಿನನಿತ್ಯದ ಚೆಕಪ್ ಗಾಗಿ ಆಸ್ಪತ್ರೆಗೆ ಬಂದಿದ್ದ ಅವರಿಗೆ ಹೃದಯ ಸ್ತಂಭನವಾಗಿದೆ. ಕುಟುಂಬಕ್ಕೆ ಹೇಗೆ ಸಾಂತ್ವಾನ ಹೇಳಲಿ ಎಂದು ತಿಳಿಯುತ್ತಿಲ್ಲ ಎಂದು ನಟ ಕಿಶೋರ್ ಸತ್ಯ ದುಃಖ ಹಂಚಿಕೊಂಡಿದ್ದಾರೆ.ಡಾ. ಪ್ರಿಯಾ ಮಲಯಾಳಂ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದಿದ್ದರು. ಕಿಶೋರ್ ಅವರ ಜೊತೆ ಕರುತಮುತ್ತು ಕಾರ್ಯಕ್ರಮದಲ್ಲಿ ಅಭಿನಯಿಸಿದ್ದರು. ಮದುವೆ ಬಳಿಕ ಕಿರುತೆರೆ ಉದ್ಯಮದಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದರು. ಅಷ್ಟೇ ಅಲ್ಲ ಪ್ರಿಯಾ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದರು.

ಸುಳ್ಯ ಸಮಾವೇಶದಲ್ಲಿ ಸಚಿವರ ಮುಂದೆಯೇ ಸೋತ ಅಭ್ಯರ್ಥಿ ಕಿರಿಕ್

Posted by Vidyamaana on 2024-03-10 14:19:35 |

Share: | | | | |


ಸುಳ್ಯ ಸಮಾವೇಶದಲ್ಲಿ ಸಚಿವರ ಮುಂದೆಯೇ ಸೋತ ಅಭ್ಯರ್ಥಿ ಕಿರಿಕ್

ಸುಳ್ಯ : ಕಾರ್ಯಕ್ರಮದ ಕುರಿತು ತನಗೆ ಮಾಹಿತಿ ನೀಡಿಲ್ಲವೆಂದು ವಿಧಾನಸಭಾ ಪರಾಜಿತ ಅಭ್ಯರ್ಥಿ ಕೃಷ್ಣಪ್ಪ ಅವರು ಸಮಾವೇಶದ ಆರಂಭದಲ್ಲಿಯೇ ಕಿರಿಕ್ ಮಾಡಿದ ಪ್ರಸಂಗ ನಡೆಯಿತು.ಸಮಾವೇಶ ಆರಂಭಗೊಂಡು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ ಸ್ವಾಗತ ಭಾಷಣ ಮಾಡುವ ಸಂದರ್ಭ ಎದುರು ಸಭಾಂಗಣದಲ್ಲಿ ಆಸೀನರಾಗಿದ್ದ ಕೃಷ್ಣಪ್ಪರವರು ಅಲ್ಲಿಂದಲೇ ಗಟ್ಟಿ ಧ್ವನಿಯಲ್ಲಿ ತನ್ನ ಅಸಹನೆ ವ್ಯಕ್ತಪಡಿಸುತ್ತಿದ್ದುದು ಕಂಡುಬಂತು. ಸ್ವಲ್ಪ ಹೊತ್ತಿನಲ್ಲಿ ಸೀದಾ ವೇದಿಕೆಗೆ ಹೋಗಿ ವಿಧಾನಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿಯವರಲ್ಲಿ ಮತ್ತು ಸಚಿವ ದಿನೇಶ್ ಗುಂಡೂರಾವ್ ರವರಲ್ಲಿ ತಾನು ಡಿಫೀಟೆಡ್ ಕ್ಯಾಂಡಿಡೇಟ್ ಅಲ್ವಾ? ನನಗೆ ಕಾರ್ಯಕ್ರಮದ ಬಗ್ಗೆ ಯಾಕೆ ಯಾವ ಮಾಹಿತಿಯನ್ನೂ ನೀಡಿಲ್ಲ ಎಂದು ಪ್ರಶ್ನಿಸತೊಡಗಿದರು. ಕಾರ್ಯಕ್ರಮ ಒಂದು ಕ್ಷಣ ಸ್ತಬ್ಧವಾಯಿತು. ಒಂದೆರಡು ನಿಮಿಷ ಈ ಹೈಡ್ರಾಮ ಮುಂದುವರಿಯಿತು. ಮಂಜುನಾಥ ಭಂಡಾರಿಯವರು ಅವರನ್ನು ಸಮಾಧಾನಪಡಿಸಿದರು. ಇತರ ಕೆಲವು ನಾಯಕರು ಕೂಡಾ ವೇದಿಕೆಗೆ ತೆರಳಿ ಪಕ್ಕದ ಕೊಠಡಿಗೆ ಅವರನ್ನು ಕರೆದೊಯ್ದರು. ಬಳಿಕ ಕಾರ್ಯಕ್ರಮ ಮುಂದುವರಿಯಿತು. ಸ್ವಲ್ಪ ಹೊತ್ತಿನಲ್ಲಿ ಕೃಷ್ಣಪ್ಪರವರು ಸಮಾವೇಶದ ಎದುರು ಬಂದು ಕುಳಿತರು

ಡೀಪ್‌ ಫೇಕ್‌ ಕಂಟಕ ; ಭಾರತೀಯ ವ್ಯವಸ್ಥೆಯ ಅತ್ಯಂತ ದೊಡ್ಡ ಬೆದರಿಕೆ ಇದು ಬಹಳ ಜಾಗರೂಕರಾಗಿರಬೇಕು ಎಂದ ಪ್ರಧಾನಿ ಮೋದಿ

Posted by Vidyamaana on 2023-11-17 19:56:03 |

Share: | | | | |


ಡೀಪ್‌ ಫೇಕ್‌ ಕಂಟಕ ; ಭಾರತೀಯ  ವ್ಯವಸ್ಥೆಯ ಅತ್ಯಂತ ದೊಡ್ಡ ಬೆದರಿಕೆ ಇದು ಬಹಳ ಜಾಗರೂಕರಾಗಿರಬೇಕು ಎಂದ ಪ್ರಧಾನಿ ಮೋದಿ

ಹೊಸದಿಲ್ಲಿ, ನ.17: ಡೀಪ್‌ ಫೇಕ್‌ ಗಳು ಪ್ರಸ್ತುತ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.


ಇದು ಸಮಾಜದಲ್ಲಿ ಅವ್ಯವಸ್ಥೆಯನ್ನು ಉಂಟುಮಾಡಬಹುದು. ಹೆಚ್ಚುತ್ತಿರುವ ಸಮಸ್ಯೆಯ ಬಗ್ಗೆ ಜನರಿಗೆ ಶಿಕ್ಷಣ ನೀಡಬೇಕು ಎಂದು ಪ್ರಧಾನಿ ಮಾಧ್ಯಮಗಳಿಗೆ ಒತ್ತಾಯಿಸಿದರು.


ದೆಹಲಿಯ ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ಬಿಜೆಪಿಯ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಡೀಪ್‌ ಫೇಕ್‌ ಗಳಿಗಾಗಿ ಕೃತಕ ಬುದ್ಧಿಮತ್ತೆಯನ್ನು ದುರುಪಯೋಗಪಡಿಸಿಕೊಳ್ಳುವಾಗ ನಾಗರಿಕರು ಮತ್ತು ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು ಎಂದು ಹೇಳಿದರು.


ಪ್ರಜಾಪ್ರಭುತ್ವದ ಸಮಗ್ರತೆಗೆ ಡೀಪ್‌ಫೇಕ್‌ಗಳು ಹೇಗೆ ಗಣನೀಯ ಸವಾಲುಗಳನ್ನು ಒಡ್ಡುತ್ತಿವೆ? ನಕಲಿ ಮತ್ತು ನೈಜ ಕ್ಲಿಪ್‌ಗಳ ನಡುವೆ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟಕರವಾಗಿದೆ. ಇದು ಇತ್ತೀಚೆಗೆ ರಾಜಕಾರಣಿಗಳನ್ನೂ ಗುರಿ ಮಾಡಲಾಗುತ್ತಿದೆ, ಕೃತಕ ವಾಯ್ಸ್‌ಓವರ್‌, ನಕಲಿ ವೀಡಿಯೋ ಕ್ಲಿಪ್‌ಗಳನ್ನು ಬಳಸಿ ರಾಜಕಾರಣಿಗಳನ್ನ ಗುರಿಯಾಗಿಸಲಾಗುತ್ತಿದೆ. ಇಂತಹ ಎಲ್ಲ ಸಮಸ್ಯೆಗಳ ಬಗ್ಗೆ ಅರಿತುಕೊಂಡು ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.


ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗರ್ಬಾ ನೃತ್ಯ ಮಾಡುತ್ತಿರುವ ಡೀಪ್‌ ಫೇಕ್‌ ವಿಡಿಯೋ ಉಲ್ಲೇಖಿಸಿ ಮಾತನಾಡಿದ್ದು, ತಾನು ಚಿಕ್ಕಂದಿನಿಂದಲೂ ಗರ್ಬಾ ನೃತ್ಯ ಮಾಡಿಲ್ಲ ಎಂದು ಹೇಳಿದ್ದಾರೆ.


ವೈರಲ್‌ ವೀಡಿಯೋದಲ್ಲಿ ಪ್ರಧಾನಿಯನ್ನೇ ಹೋಲುವ ವ್ಯಕ್ತಿಯೊಬ್ಬರು ಕೆಲ ಮಹಿಳೆಯರೊಂದಿಗೆ ನೃತ್ಯ ಮಾಡುವುದು ಕಂಡುಬಂದಿತ್ತು. ಆದ್ರೆ ಮಾಧ್ಯಮ ಸಂಸ್ಥೆಯೊಂದು ಅದನ್ನು ಫ್ಯಾಕ್ಟ್‌ಚೆಕ್‌ಗೆ ಒಳಪಡಿಸಿದಾಗ ವೀಡಿಯೋದಲ್ಲಿದ್ದ ವ್ಯಕ್ತಿ ಪ್ರಧಾನಿಯಲ್ಲ, ವಿಕಾಸ್‌ ಮಹಂತೆ ಎನ್ನುವ ನಟ‌ ಎಂದು ತಿಳಿದುಬಂದಿತ್ತು.


ಇತ್ತೀಚೆಗೆ ಡೀಪ್‌ ಫೇಕ್‌ ವೀಡಿಯೋಗಳು ಹೆಚ್ಚಾಗುತ್ತಿದ್ದು, ಸಹಜವಾಗಿಯೇ ನಟಿಯರಿಗೆ ಆತಂಕ ಹೆಚ್ಚಿಸಿದೆ. ಇಂತಹ ವಿಡಿಯೋಗಳನ್ನು ಮಾಡುವವರ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮಕ್ಕೆ ಮುಂದಾಗಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನಟಿ ರಶ್ಮಿಕಾ ಮಂದಣ್ಣ ಅವರ ಬಳಿಕ ಕಾಜೋಲ್, ಕತ್ರಿನಾ ಕೈಫ್‌ ಅವರ ಡೀಪ್‌ಫೇಕ್ ವೀಡಿಯೋಗಳೂ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ



Leave a Comment: