ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 30

Posted by Vidyamaana on 2023-09-30 07:25:57 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 30

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 30 ರಂದು

ಬೆಳಿಗ್ಗೆ 10. ಗಂಟೆಗೆ ಪ್ರೋ ಕಬಡ್ಡಿ ಅಹರ್ನಿಶಿ ಮಾದರಿಯ ಕಬಡ್ಡಿ ಪಂದ್ಯಾಟ ಕಾರ್ಯಕ್ರಮ 

ಸ್ಥಳ; ಕಿಲ್ಲೆ ಮೈದಾನ ಪುತ್ತೂರು


11 ಗಂಟೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ


ಮಧ್ಯಾಹ್ನ 3 ಗಂಟೆಗೆ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ಕಂಬಳ ಕೋಣದ ಯಜಮಾನರುಗಳ ( ಮಾಲಕರ) ಸಭೆಯಲ್ಲಿ ಭಾಗವಹಿಸಲಿದ್ದಾರೆ

ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

Posted by Vidyamaana on 2023-07-31 13:11:07 |

Share: | | | | |


ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್‌ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ವಿಟ್ಲದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ನಗರದ ವೆಬ್‌ಸೈಟ್‌ ಒಂದರ ಯುವ ವರದಿಗಾರ ಅಭಿಜಿತ್ ಅವರು, ಜು. 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ, ನೀನು ಬ್ಯಾರಿಯ ಇಲ್ಲಿಂದ ಹೊರಡು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ದೈಜಿವರ್ಲ್ಡ್ ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ದಗಳಿಂದ ಆ ಅಪರಿಚಿತ ವ್ಯಕ್ತಿಈ ಬಗ್ಗೆ ಅಭಿಜಿತ್ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ

ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Posted by Vidyamaana on 2024-04-28 08:30:33 |

Share: | | | | |


ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ತೆಕ್ಕಟ್ಟೆ :ಇಲ್ಲಿನ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಮಧ್ಯಾಹ್ನ 2.30ರ ಸುಮಾರಿಗೆ ಸಂಭವಿಸಿದೆ.ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಉದ್ಯಮಿಗೆ ನಂಬಿಸಲು ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ

Posted by Vidyamaana on 2023-09-17 16:45:52 |

Share: | | | | |


ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಉದ್ಯಮಿಗೆ ನಂಬಿಸಲು ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ

ಬೆಂಗಳೂರು, (ಸೆಪ್ಟೆಂಬರ್ 17): ಚೈತ್ರಾ ಕುಂದಾಪುರ(Chaitra Kundapura) ಹಿಂದೂ ಫೈರ್ ಬ್ರ್ಯಾಂಡ್. ರಾಜ್ಯದ ಉದ್ದಗಲಕ್ಕೂ ಪ್ರಚೋದನಾಕಾರಿ ಭಾಷಣ ಬಿಗಿಯುತ್ತಿದ್ದಾ ಚೈತ್ರಾ ಕುಂದಾಪುರ ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆ ಎಂದು ಗೋವಿಂದ್‌ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ನಾಮ ಹಾಕಿದ್ದು, ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರಾ, ಗೋವಿಂದ್‌ ಬಾಬು ಅವರ ಹಣ ದೋಚಲು ಆರ್​ಎಸ್​ಎಸ್​, ಬಿಜೆಪಿ ಚುನಾವಣಾ ಮುಖ್ಯಸ್ಥರ ವೇಷ ಹಾಕಿಸಿ ಯಾಮಾರಿಸಿದ್ದಾರೆ. ಇದೀಗ ಇದೇ ಪ್ರಕರಣದಲ್ಲಿ ಚೈತ್ರಾ, ಗಗನ್ ಗ್ಯಾಂಗ್​ ಸಾಲುಮರದ ತಿಮ್ಮಕ್ಕಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.ಹೌದು… ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾಲುಮರದ ತಿಮ್ಮಕ್ಕಗೆ ಸರ್ಕಾರ ನೀಡಿರುವ ಸರ್ಕಾರಿ ಕಾರು, ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ, ಗಗನ್ ಗ್ಯಾಂಗ್ ದುರ್ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ಬಳಸಿದ್ದ ಸರ್ಕಾರಿ ಕಾರು ಸಾಲುಮರದ ತಿಮ್ಮಕ್ಕನಿಗೆ ನೀಡಿದ್ದ ಸರ್ಕಾರಿ ಕಾರು ಎಂದು ತಿಳಿದುಬಂದಿದೆ.ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ರೂಮ್ , ವಿಧಾನಸೌಧಕ್ಕೆ ಪ್ರವೇಶಿಸಲು ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರು ಎನ್ನುವುದು ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನ ನಂಬಿಸಲು ಸರ್ಕಾರಿ ಕಾರು ಬಳಕೆ ಮಾಡಿದ್ದಾರೆ ಎಂದು ಎನ್ನಲಾಗಿದೆ.


ಆರೋಪಿ ಗಗನ್ ಕಡೂರು, ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್ ಜೊತೆ ಆತ್ಮೀಯ. ಉಮೇಶ್, ಸಾಲುಮರದ ತಿಮ್ಮಕ್ಕನ ಜೊತೆ ಗಗನ್ ಕಡೂರು ಮದುವೆಗೆ ಬಂದಿದ್ದ. ಅಷ್ಟೊಂದು ಇಬ್ಬರ ಮಧ್ಯೆ ಆತ್ಮಯತೆ ಇದೆ. ಹೀಗಾಗಿ ಉಮೇಶ್ ಸ್ನೇಹ ಬಳಸಿ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಂಪೂರ್ಣ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿರುವ ಶಂಕಿಸಲಾಗಿದೆ.


ವಿಧಾನಸೌಧದ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಕೊಠಡಿಯ ನವೀಕರಣದ ಸಂಪೂರ್ಣ ಜವಾಬ್ದಾರಿಯನ್ನು ಗಗನ್ ಕಡೂರು ಹೊತ್ತುಕೊಂಡಿದ್ದಅಲ್ಲದೇ ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್​, ಗೃಹ ಸಚಿವ ಜಿ.ಪರಮೇಶ್ವರ್​ಗೆ ಆಪ್ತರಾಗಿದ್ದು, ಕಳೆದ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದರು. ಗಗನ್ ಸಹ ಪರಮೇಶ್ವರ್ ಪರ ಚುನಾವಣಾ ಪ್ರಚಾರಕ್ಕೂ ಉಮೇಶ್ ಜೊತೆ ತೆರಳಿದ್ದ ಎನ್ನುವುದು ಗೊತ್ತಾಗಿದೆ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ದೀಪಿಕಾ ಸುಳ್ಯದಲ್ಲಿ ಪತ್ತೆ

Posted by Vidyamaana on 2024-05-10 07:20:16 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ  ದೀಪಿಕಾ ಸುಳ್ಯದಲ್ಲಿ ಪತ್ತೆ

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ

Posted by Vidyamaana on 2024-08-20 12:23:11 |

Share: | | | | |


ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ

ಮಂಗಳೂರು: ಫುಟ್‌ ಬಾಲ್‌ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್‌ ಬಾಲ್‌ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಲ ವಿದ್ಯಾರ್ಥಿಗಳು ಎದುರಾಳಿ ತಂಡವನ್ನು ಬೆಂಬಲಿಸಿದ ಕಾರಣದಿಂದಾಗಿ ಎರಡು ತಂಡಗಳ ನಡುವೆ ಜಗಳ ಉಂಟಾಗಿತ್ತು.

ಇದೇ ವಿಚಾರವನ್ನಿಟ್ಟುಕೊಂಡು ಸೋಮವಾರ(ಆ.19ರಂದು) ಸಂಜೆ 6:15ರ ಹೊತ್ತಿಗೆ ಪಾಂಡೇಶ್ವರ ಫೋರಂ ಮಾಲ್ ಬಳಿ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ಹುಡುಗನ ಮೇಲೆ ದಿಯಾನ್, ತಸ್ಲಿಮ್, ಸಲ್ಮಾನ್ ಮತ್ತು ಇತರ ಇಬ್ಬರು 17 ವರ್ಷದ ಅಪ್ರಾಪ್ತ ಹುಡುಗರು ಹಲ್ಲೆ ಮಾಡಿದ್ದರು.

17 ವರ್ಷದ ಅಪ್ರಾಪ್ತ ಹುಡುಗ ಹಾಗೂ ಆತನ ಸ್ನೇಹಿತರನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಕೈ ಕಾಲಿನಿಂದ ಹಲ್ಲೆಗೈದಿದ್ದಾರೆ. ಮಹಾಕಾಳಿ ಪಡ್ಪು, ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ.



Leave a Comment: