ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ನಿಧನ

Posted by Vidyamaana on 2024-07-31 17:58:59 |

Share: | | | | |


ನಿಧನ

ಮಂಗಳೂರು : ಮರ್ಕಝ್ ಅಲ್ - ಹಿದಾಯ ಸ್ಕೂಲ್ ಇದರ ಸದರ್ ಮುಅಲ್ಲಿಮ್, ಕುಂಪಲ ನೂರಾನಿಯಾ ಯತೀಮ್ ಖಾನ ಮೇಲ್ವಿಚಾರಕರೂ ಆಗಿದ್ದ ಅಬ್ದುಲ್ ರಹ್ಮಾನ್ ಅಹ್ಸನಿ ಜಲಾಳ್ ಬಾಗ್ (40) ಅವರು ಹೃದಯ ಸ್ತಂಭನನದಿಂದ ನಿಧನರಾಗಿದ್ದಾರೆ. ದಿವಂಗತ ಶುಹೈಬ್ ಮುಸ್ಲಿಯಾರ್ ಅವರ ಪುತ್ರರಾದ ಅಬ್ದುಲ್ ರಹ್ಮಾನ್ ಅಹ್ಸನಿ ಅವರು ಮಳಲಿ ನಿವಾಸಿ.

BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

Posted by Vidyamaana on 2024-07-30 17:12:16 |

Share: | | | | |


BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 119 ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಗುಡ್ಡಗಾಡು ಪ್ರದೇಶಗಳಿಂದ ಈವರೆಗೆ 250 ಜನರನ್ನು ರಕ್ಷಿಸಲಾಗಿದೆ.ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ಮತ್ತು ನಾಲ್ಕು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ನೆಲದಲ್ಲಿ ನಿಯೋಜಿಸಲಾಗಿದೆ.

ಮಂಗಳೂರು ರಸ್ತೆಯಲ್ಲಿ ನಮಾಜ್:ಪ್ರಕರಣ ದಾಖಲಿಸಿದ್ದ ಪಿಐಗೆ ಕಡ್ಡಾಯ ರಜೆ

Posted by Vidyamaana on 2024-05-31 06:33:40 |

Share: | | | | |


ಮಂಗಳೂರು  ರಸ್ತೆಯಲ್ಲಿ ನಮಾಜ್:ಪ್ರಕರಣ ದಾಖಲಿಸಿದ್ದ ಪಿಐಗೆ ಕಡ್ಡಾಯ ರಜೆ

ಮಂಗಳೂರು : ಇಲ್ಲಿನ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಜ್ ಮಾಡಿದ್ದರ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡಿದ್ದ ಕದ್ರಿಯ ನಗರ ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರವರಿಗೆ ಕಡ್ಡಾಯ ರಜೆ ನೀಡಲಾಗಿದೆ.

ಸಂಚಾರಕ್ಕೆ ಅಡೆತಡೆ ಮಾಡುವ ಉದ್ದೇಶ ಇಲ್ಲದೆ ನಮಾಜ್ ಮಾಡಿರುವುದರಿಂದ ಈ ಪ್ರಕರಣ ದಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ರಸ್ತೆಯಲ್ಲಿ ನಮಾಜ್‌ ಮಾಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (ಐಪಿಸಿ ಸೆಕ್ಷನ್ 341,283,143,149) ದಾಖಲಿಸಿಕೊಂಡಿದ್ದರು. ಇದಕ್ಕೆ ಮುಸ್ಲಿಂ ಸಂಘಟನೆಗಳವರು, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದವರು ಆಕ್ರೋಶ ವ್ಯಕ್ತಪಡಿಸಿ, ಪ್ರಕರಣ ವಾಪಸ್‌ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಮುಸ್ಲಿಂ ಸಂಘಟನೆಯ ಒತ್ತಡಕ್ಕೆ ಮಣಿದು, ಬಿ ವರದಿ ಸಲ್ಲಿಸಿದ್ದು ಸರಿಯಲ್ಲ ಎಂದು ವಿಎಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಹೇಳಿದ್ದಾರೆ.

BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ

Posted by Vidyamaana on 2024-05-07 20:39:29 |

Share: | | | | |


BREAKING : ಬಿಟ್ ಕಾಯಿನ್ ಹಗರಣ ಕೇಸ್ : ಪ್ರಮುಖ ಆರೋಪಿ ಶ್ರೀಕಿ ಬಂಧನ

ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ ಕಾಯಿನ್ ಕಳುವಾಗಿರುವುದು ದೃಢವಾಗಿದೆ.

ಪುತ್ತೂರು : ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು : ಸೇರಿದ ಜನ - ದೂರು ದಾಖಲು

Posted by Vidyamaana on 2024-05-16 07:59:27 |

Share: | | | | |


ಪುತ್ತೂರು : ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು : ಸೇರಿದ ಜನ - ದೂರು ದಾಖಲು

ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. 

ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಕಕ್ಕೆಪದವು ಪಿಲಿಬೈಲು ನಿವಾಸಿ ಕೃಷ್ಣಪ್ಪ ಗೌಡ ಎನ್ನುವವರು ಜ್ವರ ಹಾಗೂ ನಿಶಕ್ತಿಯಿಂದ ಚಿಕಿತ್ಸೆಗೆ ಇಂದು ಮಧ್ಯಾಹ್ನ ಬಂದಿದ್ದರು. 

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

Posted by Vidyamaana on 2023-04-15 23:28:53 |

Share: | | | | |


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೆ ನಿಗದಿಪಡಿಸಿದ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್‍ ಮಾಡಬೇಕಾದ್ದು ಕಡ್ಡಾಯವಾಗಿದೆ.

ಏ.16 ರಂದು ಕಿರುವಾಳು ಆಗಮನ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಸಂದರ್ಭದಲ್ಲಿ ಸಂಪ್ಯ ಕಡೆಯಿಂದ ಕಬಕ, ಮಂಗಳೂರು ಕಡೆಗೆ ಹೋಗುವ ವಾಹನಗಳು ದರ್ಬೆ ಅಶ್ವಿನಿ ವೃತ್ತ, ಬೆದ್ರಾಳ, ಸಾಲ್ಮರ, ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು, ವಿಟ್ಲ ಕಬಕ ಕಡೆಗಳಿಂದ ಬರುವ ವಾಹನಗಳು ಲಿನೆಟ್ ವೃತ್ತ, ಬೊಳುವಾರು ವೃತ್ತ, ಪಡೀಲ್, ಕೊಟೇಚಾ ಹಾಲ್ ಕ್ರಾಸ್, ಸಾಲ್ಮರ, ಎಪಿಎಂಸಿ ರಸ್ತೆಯಾಗಿ ದರ್ಬೆ‍ ಅಶ್ವಿನಿ ವೃತ್ತವಾಗಿ ಸಂಚರಿಸುವುದು.

ಏ.16 ಹಾಗೂ 17 ರಂದು ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಜೆ 4 ರ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ ಗಳು ಎಂಟಿ ರಸ್ತೆ ಮೂಲಕ ತೆರಳಿ, ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಮಂಗಳೂರು ಕಡೆಯಿಂದ ಬರುವ ಎಲ್ಲಾ ಬಸ್‍ ಗಳು ಬೊಳುವಾರು-ಪಡೀಲ್-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸುವುದು. ಉಪ್ಪಿನಂಗಡಿ ಕಡೆಯಿಂದ ಬರುವ ಬಸ್‍ ಗಳು ಪಡೀಲ್-ಕೊಟೇಚಾ ಹಾಲ್-ಸಾಲ್ಮರ ಕ್ರಾಸ್, ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರುವುದು. ಸುಳ್ಯ, ಮಡಿಕೇರಿ ಕಡೆಯಿಂದ ಬರುವ ಬಸ್ ಗಳು ಮುಖ್ಯರಸ್ತೆಯಿಂದ ಸಾಗಿ ಅರುಣಾ ಚಿತ್ರ ಮಂದಿರದ ಮೂಲಕ ಸಾಗಿ ಬಸ್ ನಿಲ್ದಾಣಕ್ಕೆ ಸಂಚರಿಸುವುದು.

ನೆಹರೂನಗರ, ಬೊಳುವಾರು ಕಡೆಗಳಿಂದ ಬರುವ ಆಟೋ ರಿಕ್ಷಾಗಳು ಮಯೂರ ಇನ್‍ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಾಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋ ರಿ್ಕ್ಷಾಗಳು ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸ್ ಸಂಚರಿಸುವುದು. ಪರ್ಲಡ್ಕ ಕಡೆಯಿಂದ ಬರುವ ರಿ್ಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ಸಂಚರಿಸುವುದು.

ವಾಹನ ಪಾರ್ಕಿಂಗ್ :

ಉಪ್ಪಿನಂಗಡಿ, ಬನ್ನೂರು ಕಡೆಯಿಂದ ಬರುವ ಭಕ್ತರ ವಾಹನಗಳಿಗೆ ಎಪಿಎಂಸಿ ಆವರಣ, ಕೊಂಬೆಟ್ಟು ಸರಕಾರಿ ಪ್ರೌಢಶಾಲಾ ಮೈದಾನ, ಕೊಂಬೆಟ್ಟು ಬಂಟರಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕ್‍ ಮಾಡುವುದು, ಸಂಪ್ಯ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ ಪುರುಷರಕಟ್ಟೆಯಿಂದ ಬರುವ ವಾಹನಗಳಿಗೆ ತೆಂಕಿಲ ಗೌಡ ಸಮುದಾಯ ಭವನ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕಿಲ್ಲೆ ಮೈದಾನದಲ್ಲಿ ಪಾರ್ಕ್ ಮಾಡುವುದು. ವಿಟ್ಲ, ಕಬಕ, ನೆಹರುನಗರದಿಂದ ಬರುವ ವಾಹನಗಳು ಜೈನಭವನದ ಬಳಿ, ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್‍ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.



Leave a Comment: