ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

Posted by Vidyamaana on 2023-06-09 03:21:43 |

Share: | | | | |


ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ!!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ.

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯ ನಿವಾಸಿ ಬಾಲಕೃಷ್ಣ (58) ಎಂಬವರು ಆತ್ಮಹತ್ಯೆಗೈದ ಚಾಲಕ. ಬಾಲಕೃಷ್ಣ ಗುರುವಾರ(ಜೂ.8) ತಮ್ಮ ಮನೆ ರಾಘವೇಂದ್ರ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ

Posted by Vidyamaana on 2024-08-14 07:32:29 |

Share: | | | | |


ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ

ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಮಂಗಳವಾರ (ಆ.13) ನಡೆದಿದೆ.ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಯುವಕನ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಪಟ್ಟಿ ರಿಲೀಸ್ ಸುದ್ದಿ ಫೇಕ್ – ಈ ಫೆಕ್ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿತ್ತು ಟಿಕೆಟ್!?

Posted by Vidyamaana on 2023-04-04 10:03:55 |

Share: | | | | |


ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಪಟ್ಟಿ ರಿಲೀಸ್ ಸುದ್ದಿ ಫೇಕ್ – ಈ ಫೆಕ್ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿತ್ತು ಟಿಕೆಟ್!?

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಮಧ್ಯೆ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಎದೆಬಡಿತವೂ ನಾರ್ಮಲ್ ಗಿಂತ ಜಾಸ್ತಿನೇ ಇದೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಫರ್ಸ್ಟ್ ಲಿಸ್ಟ್ ಬಿಡುಗಡೆಗೊಳಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಗಳನ್ನು ಬಹುತೇಕ ಫೈನಲ್ ಮಾಡಿದೆ. ಆದ್ರೆ ಕ್ಯಾಡಿಂಡೇಟ್ ಸೆಲೆಕ್ಷನ್ ವಿಚಾರದಲ್ಲಿ ಬಿಜೆಪಿ ಮಾತ್ರ ಅಳೆದು ತೂಗಿ ನೋಡುವುದ್ರಲ್ಲೇ ಇದೆ.


ಈ ನಡುವೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಸಂಚಲನ ಉಂಟಾಯ್ತು. ಭಾರತೀಯ ಜನತಾ ಪಾರ್ಟಿ ವಿಧಾನ ಸಭಾ ಚುನಾವಣೆಗಾಗಿ 100 ಜನರ ಪಟ್ಟಿಯನ್ನು ರಿಲೀಸ್ ಮಾಡಿದ್ದು ವಿವಿಧ ದ.ಕ., ಉಡುಪಿ ಸೇರಿದಂತೆ ರಾಜ್ಯದ ಒಟ್ಟು 100 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯ ಹೆಸರಿರುವ ಪಟ್ಟಿಯ ಪಿಡಿಎಫ್ ಫೈಲೊಂದು ಹರಿದಾಡ್ತಿದೆ. 

ಈ ಪಟ್ಟಿಯಲ್ಲಿರುವಂತೆ ಪುತ್ತೂರಿಗೆ ಸಂಜೀವ ಮಠಂದೂರು, ಸುಳ್ಯ ಕ್ಷೇತ್ರಕ್ಕೆ ಅಂಗಾರ, ಬೆಳ್ತಂಗಡಿಗೆ ಹರೀಶ್ ಪೂಂಜಾ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಹೆಸರುಗಳನ್ನೇ ಫೈನಲ್ ಮಾಡಲಾಗಿದೆ. ಆದ್ರೆ ಸದ್ಯ ಡಾ. ಭರತ್ ಶೆಟ್ಟಿ ಪ್ರತಿನಿಧಿಸ್ತಿರೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ!

ಈ ಪಟ್ಟಿಯಲ್ಲಿರೋ ಇನ್ನೊಂದು ಮೇಜರ್ ಶಾಕ್ ಏನಪ್ಪಾ ಅಂದ್ರೆ ತೀವ್ರ ಕುತೂಹಲ ಕೆರಳಿಸಿದ್ದ ಕಾರ್ಕಳ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಬದಲಿಗೆ ಪ್ರಮೋದ್ ಮುತಾಲಿಕ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಸುನಿಲ್ ಅವರನ್ನು ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇನ್ನುಳಿದಂತೆ ಯಾರ್ಯಾರಿಗೆ ಪಕ್ಷ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ ಎಂಬುದನ್ನು ನೀವೇ ಚೆಕ್ ಮಾಡ್ಕೊಳ್ಳಿ..!

ವಿಶೇಷವಂದ್ರೆ ಬಿಜೆಪಿಯ ಕೇಂದ್ರ ಕಚೇರಿಯ ಹೆಸ್ರಿನಲ್ಲಿ ರಿಲೀಸ್ ಆಗಿರೋ ಈ ಪಟ್ಟಿಯಲ್ಲಿ ಪ್ರತೀ ಪೇಜಿನಲ್ಲಿ ಪಕ್ಷದ ಸೀಲ್ ಮತ್ತು ನ್ಯಾಷನಲ್ ಜನರಲ್ ಸೆಕ್ರೆಟರಿ ಅರುಣ್ ಸಿಂಗ್ ಅವರ ಸಹಿಯೂ ಇದೆ. ಆದರೆ ಈ ಪಟ್ಟಿ ಫೇಕ್ ಎನ್ನಲಾಗುತ್ತಿದ್ದು . ಏನೇ ಆದ್ರೂ ಬಿಜೆಪಿಯ ಒರಿಜಿನಲ್ ಪಟ್ಟಿ ರಿಲೀಸ್ ಆದ್ಮೇಲೆ ಈ ‘ಫೇಕ್’ ಪಟ್ಟಿಯೊಂದಿಗೆ ಕಂಪೇರ್ ಮಾಡ್ಕೊಳ್ಳಿ...!

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

Posted by Vidyamaana on 2023-09-03 01:50:16 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 3 ರಂದು



ಬೆಳಿಗ್ಗೆ 10 ಗಂಟೆಗೆ ದ ಕ ಜಿಲ್ಲಾ ಟ್ಯಾಕ್ಸಿಮೆನ್ ,ಮ್ಯಾಕ್ಸಿಕ್ಯಾಬ್  ಅಸೋಸಿಯೇಶನ್ ಸುರ್ಣಮಹೋತ್ಸವ


ಸ್ಥಳ: ಮಂಗಳೂರು ಪುರಭವನ


11 ಗಂಟೆಗೆ ಕೆಪಿಟಿ ಮಂಗಳೂರಿನಲ್ಲಿ ಅಭಿಮತ ಚಾನೆಲ್ ಉದ್ಘಾಟನೆ


12 ಗಂಟೆಗೆ ಕಂಬಳಬೆಟ್ಟುವಿನಲ್ಲಿ ಸೇವಾ ಸಹಕಾರಿ ಸಂಘ ಉದ್ಘಾಟ‌ನೆ


4 ಗಂಟೆಗೆ ಅಜ್ಜನಡ್ಕ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ 

 ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ

Posted by Vidyamaana on 2024-05-01 16:35:32 |

Share: | | | | |


ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ಮೇ.4 ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ವತಿಯಿಂದ ನೀಡಲಾಗುತ್ತಿರುವ ಸ್ವರ್ಣ ಸಾಧನಾ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದ ಅನನ್ಯ ಸಾಧಕ, ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಹೇಳಿದರು.

ಕಾರ್ಯಕ್ರಮದ ಉದ್ಘಾಟನೆ, ಪ್ರಶಸ್ತಿಪ್ರದಾನವನ್ನು ಕ್ಯಾಂಪ್ಕೋ ನಿವೃತ್ತ ಆಡಳಿತ ನಿರ್ದೇಶಕ ಕೆ. ಪ್ರಮೋದ್ ಕುಮಾರ್ ರೈ ಮಾಡಲಿದ್ದು, ಅಭಿನಂದನಾ ಭಾಷಣವನ್ನು ವಿವೇಕಾನಂದ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ. ಮಾಡಲಿದ್ದಾರೆ. ಸಾಧನೆ ಮಾಡಿದ ಎಸ್. ಆರ್. ಕೆ. ಲ್ಯಾಡರ್ ನ ಕೇಶವ ಅಮೈ, ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ (ಎನ್.ಸಿ.ಸಿ.)

ಗೃಹಜ್ಯೋತಿ ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ ಅಪ್ಲಿಕೇಷನ್‌: ಪೊಲೀಸ್ ಇಲಾಖೆ ಎಚ್ಚರಿಕೆ

Posted by Vidyamaana on 2023-07-17 04:13:00 |

Share: | | | | |


ಗೃಹಜ್ಯೋತಿ  ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ ಅಪ್ಲಿಕೇಷನ್‌: ಪೊಲೀಸ್ ಇಲಾಖೆ ಎಚ್ಚರಿಕೆ

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್‌ ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.


ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ಪ್ ಡೆಸ್ಕ್‌ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.ಸಾರ್ವಜನಿಕರು ಇಂತಹ ನಕಲಿ ‌ಅಪ್ಲಿಕೇಷನ್‌ ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Leave a Comment: