ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಇಂದು ಏಕರೂಪ ನಾಗರಿಕ ಸಂಹಿತೆ - ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Posted by Vidyamaana on 2023-07-15 01:58:15 |

Share: | | | | |


ಇಂದು ಏಕರೂಪ ನಾಗರಿಕ ಸಂಹಿತೆ - ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಿಂದ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವು ಶನಿವಾರ  ಜ.15ರಂದು ನಡೆಯಲಿದೆ. ಒಂದು ದಿನದ ಈ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕೊಚ್ಚಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಡಾ| ಕೆ. ಸಿ ಸನ್ನಿ ಉದ್ಘಾಟಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ಪುತ್ತೂರಿನ ಹಿರಿಯ ನ್ಯಾಯವಾದಿಗಳಾದ ಎಂ. ರಾಮ್ ಮೋಹನ್ ರಾವ್, ಹೈಕೋರ್ಟ್ ವಕೀಲ ಅರುಣ್ ಶ್ಯಾಮ್, ಹಿರಿಯ ಕಾನೂನು ಪ್ರಾಧ್ಯಾಪಕರಾದ ಡಾ. ಸಾಯಿರಾಂ ಭಟ್ ಹಾಗೂ ಡಾ| ಕೆ. ಆರ್. ಐತಾಳ್ ಏಕರೂಪ ನಾಗರಿಕ ಸಂಹಿತೆ ಕುರಿತಾದ ವಿವಿಧ ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.


ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಕುರಿತಾಗಿ ಅಭಿಪ್ರಾಯಗಳನ್ನು ನೀಡಲು ಭಾರತದ ಕಾನೂನು ಆಯೋಗವು ಅವಕಾಶವನ್ನು ನೀಡಿರುತ್ತದೆ. ಈ ಹಿನ್ನಲೆಯಲ್ಲಿ ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸುತ್ತಿರುವ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯವು ಸಮಾಜದ ಪ್ರಜ್ಞಾವಂತ ನಾಗರಿಕರಿಗೆ ಭಾರತದಲ್ಲಿ ಸಮಾನ ನೀತಿ ಸಂಹಿತೆಯ ಕುರಿತು ಮಾಹಿತಿ ನೀಡುವ ಹಿನ್ನಲೆಯಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಅದರಲ್ಲಿ ಭಾಗವಹಿಸಿ, ಅಲ್ಲಿ ನಡೆಯಲಿರುವ ಚರ್ಚೆಯಲ್ಲಿ ನಾಗರಿಕರಿಗೆ ಅಮೂಲ್ಯ ಸಲಹೆಯನ್ನು ನೀಡಲು ಹಾಗೂ ತಮ್ಮಲ್ಲಿರುವ ಸಂದೇಹಗಳನ್ನು ಬಗೆಹರಿಸಿಕೊಳ್ಳುವ ಅವಕಾಶವಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

Posted by Vidyamaana on 2024-04-24 03:47:23 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.


ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸುವುದು ಮತ್ತು ಇದರ ಜೊತೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಶಿರಾಡಿ ಘಾಟ್ ನಲ್ಲಿ ಆಧುನಿಕ ಮಾದರಿಯಲ್ಲಿ ಸರ್ವಋತು ರಸ್ತೆಯಾಗಿಸುವುದು ಮತ್ತು ಮಂಗಳೂರು- ಬೆಂಗಳೂರು ಮಧ್ಯೆ ಪ್ರತ್ಯೇಕ ರೈಲ್ವೇ ಹಳಿ ನಿರ್ಮಿಸುವ ಗುರಿಯಿದೆ. ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯಾದಲ್ಲಿ ಮಂಗಳೂರು ಅಭಿವೃದ್ಧಿಗೆ ವೇಗ ಸಿಗಲಿದೆ. ಮಂಗಳೂರಿನ ಬಂದರಿನ ಮೂಲಕ ಬೆಂಗಳೂರಿಗೆ ಕನೆಕ್ಟ್ ಆಗಲು ಅವಕಾಶ ಸಿಗಲಿದೆ ಎಂದರು.

ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ


ಪ್ರಮುಖವಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆಗಳ ಸ್ಥಾಪನೆ ಆಗಬೇಕಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ಉತ್ತೇಜನ ನೀಡಿ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳ ವಿಶೇಷ ಕ್ಲಸ್ಟರ್ ಸ್ಥಾಪನೆ, ಮಹಿಳೆಯರು ಮತ್ತು ಮೀನುಗಾರ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಇಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಪಡೆದವರಿಗೆ ಅವಕಾಶ ಒದಗಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳನ್ನು ಸ್ಥಾಪಿಸಲು ಜಾಗತಿಕ ಕಂಪನಿಗಳಿಗೆ ಆಹ್ವಾನ ನೀಡಲಾಗುವುದು.

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಮೇ 27 ರವರೆಗೆ ಪೊಲೀಸ್‌ ಕಸ್ಟಡಿಗೆ

Posted by Vidyamaana on 2024-05-24 17:55:44 |

Share: | | | | |


ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ   ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಮೇ 27 ರವರೆಗೆ ಪೊಲೀಸ್‌ ಕಸ್ಟಡಿಗೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮೂಡಲದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗೆ ಮೇ 27ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ

ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

Posted by Vidyamaana on 2024-04-26 17:36:55 |

Share: | | | | |


ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

ಮಧ್ಯಪ್ರದೇಶ: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ. ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ.

ಅಂಜಲಿ-ಗಿರೀಶ್ ಮೊದಲೇ ಮದುವೆಯಾಗಿತ್ತಾ? - ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Posted by Vidyamaana on 2024-05-17 12:35:57 |

Share: | | | | |


ಅಂಜಲಿ-ಗಿರೀಶ್ ಮೊದಲೇ ಮದುವೆಯಾಗಿತ್ತಾ? - ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ (Hubli Crime) ಅಂಜಲಿಯನ್ನು ಕೊಲೆ (Anjali Murder Case) ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ ಸಾವಂತ್ (Anjali Murder suspect) ಬಂಧನ ಪ್ರಕರಣ ಅನಿರೀಕ್ಷಿತ, ರೋಚಕ ರೀತಿಯಲ್ಲಿ ಸಂಭವಿಸಿದೆ. ರೈಲಿನಲ್ಲಿ ಇತರ ಪ್ರಯಾಣಿಕರಿಂದ (Co passengers) ಥಳಿತಕ್ಕೊಳಗಾದ ಗಿರೀಶ್‌, ಕೊಲೆ ಆರೋಪಿ ಎಂದು ಥಳಿಸಿದವರಿಗೆ ಗೊತ್ತೇ ಇರಲಿಲ್ಲ!


ಇದು ನಡೆದದ್ದು ಹೀಗೆ: ಕೊಲೆ ಆರೋಪಿ ಗಿರೀಶ್ ಸಾವಂತ್ ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ಬರುತ್ತಿದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.


ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆ ಆರೋಪಿ ಎಂದು ಆರಂಭದಲ್ಲಿ ತಿಳಿದಿರಲಿಲ್ಲ. ಬಳಿಕ ಆರೋಪಿಯ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸರು, ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಈತನನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಕಿಮ್ಸ್‌ಗೆ ಆಗಮಿಸಿ ಆರೋಪಿಯನ್ನು ಪರಿಶೀಲಿಸಿದ್ದಾರೆ.

ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

Posted by Vidyamaana on 2023-03-14 09:32:15 |

Share: | | | | |


ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ  ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

ಬಂಟ್ವಾಳ: ಮಹತ್ವದ ಬೆಳವಣಿಗೆಯಲ್ಲಿ ಐತಿಹಾಸಿಕ ಖ್ಯಾತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಲಿನ ೨ ಕಿ.ಮೀ. ಪರಿಸರದಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್ ಗಣಿಗಾರಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶಿಸಿದೆ.

ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ೨ ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳಿಗೆ ಕಾಯ್ದಿರಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಸುತ್ತಲಿನ ೨ ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂದು ಆದೆಶದಲ್ಲಿ ತಿಳಿಸಲಾಗಿದೆ‌.

ಕಳೆದ ಕೆಲ ವರ್ಷಗಳಿಂದ ಈ ಭಾಗದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದಾಗಿ ಧಾರ್ಮಿಕ ಹಾಗೂ ಐತಿಹಾಸಿಕ ಪ್ರಾಧಾನ್ಯತೆ ಹೊಂದಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನ ಅಪಾಯವನ್ನು ಎದುರು ನೋಡುವಂತಾಗಿತ್ತು. ಆದ್ದರಿಂದ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿತ್ತು. ಹಿಂದೂ‌ ಪರ ಸಂಘಟ‌ನೆಗಳು ಹಾಗೂ ಭಕ್ತರು ಹೋರಾಟಕ್ಕೆ ಸಾಥ್ ನೀಡಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಮಸ್ಯೆಯ ಗಂಭೀರತೆ ಅರಿತು, ರಾಜ್ಯ ಸರಕಾರದಿಂದ ಆದೇಶ ಹೊರಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದೀಗ ರಾಜ್ಯ ಸರ್ಕಾರದ ಆದೇಶ ಸ್ಥಳೀಯರಿಗೆ ನಿರಾಳತೆಯನ್ನು ನೀಡಿದೆ.



Leave a Comment: