ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್

Posted by Vidyamaana on 2024-06-14 17:55:32 |

Share: | | | | |


ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ.

ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ ; ತೊಕ್ಕೊಟ್ಟಿನ ಹೊಟೇಲ್ ಮಾಲಕರ ಮನೆ ಆವರಣದ ಬಾವಿಗೆ ಹಾರಿದ ನಾಗೇಶ್

Posted by Vidyamaana on 2023-09-27 20:54:00 |

Share: | | | | |


ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ ; ತೊಕ್ಕೊಟ್ಟಿನ ಹೊಟೇಲ್ ಮಾಲಕರ ಮನೆ ಆವರಣದ ಬಾವಿಗೆ ಹಾರಿದ ನಾಗೇಶ್

ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ. 


ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.  ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ

ತೊಕ್ಕೊಟ್ಟಿನ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ತಡೆಬೇಲಿಯಿಂದ ನದಿಗೆ ಹಾರಿದ ಉದ್ಯಮಿ ಪ್ರಸನ್ನ

Posted by Vidyamaana on 2023-10-30 16:32:20 |

Share: | | | | |


ತೊಕ್ಕೊಟ್ಟಿನ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ತಡೆಬೇಲಿಯಿಂದ ನದಿಗೆ ಹಾರಿದ ಉದ್ಯಮಿ ಪ್ರಸನ್ನ

ಉಳ್ಳಾಲ: ಕಾಫಿಡೇ ಮಾಲೀಕ ಸಿದ್ದಾರ್ಥ ಸಾವಿಗೆ ಶರಣಾದ ಸ್ಥಳದಲ್ಲಿಯೇ ಮತ್ತೊಬ್ಬ ಉದ್ಯಮಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.


ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.




ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ತೊಕ್ಕೊಟ್ಟಿನಿಂದ ಮಾಡಿಕೊಂಡ ಯುವಕನಾಗಿದ್ದಾನೆ. ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.

ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

Posted by Vidyamaana on 2023-09-02 05:48:16 |

Share: | | | | |


ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

ಆದಿಲಾಬಾದ್​: ಮದುವೆಯಾದ ಮೂರ್ನಾಲ್ಕು ತಿಂಗಳಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಆತನು ಸಹ ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್’ನಲ್ಲಿ ನಡೆದಿದೆ.


ಪತ್ನಿ ದೀಪಾಳನ್ನು ಕೊಲೆಗೈದು ಬೈಕಿನಲ್ಲಿ ಠಾಣೆಗೆ ತೆರಳಿದ ಅರುಣ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಈ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಪೊಲೀಸ್​ ಅಧಿಕಾರಿ ಎಂ.ಅಶೋಕ್ ಹಾಗೂ ಸ್ಥಳೀಯರ ಪ್ರಕಾರ, ಮೇ 11ರಂದು ನಿಜಾಮಾಬಾದ್ ಜಿಲ್ಲೆಯ ಬಾಲ್ಕೊಂಡದ ಚೌಹಾಣ್ ಲಕ್ಷ್ಮಿ ಮತ್ತು ಗೋಪಿಚಂದ್ ಅವರ ಕಿರಿಯ ಪುತ್ರಿ ದೀಪಾ ಅವರು ಆದಿಲಾಬಾದ್ ಉಪನಗರ ಬಂಗಾರಗುಡ್ಡದ ಮೋಹಿತೆ ಅರುಣ್ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ ಒಂದು ವಾರದ ಬಳಿಕ ಅರುಣ್ ಪತ್ನಿಗೆ ಅನುಮಾನದಿಂದ ಕಿರುಕುಳ ನೀಡಲಾರಂಭಿಸಿದ್ದ. ಆಗಾಗ ಜಗಳ ಮಾಡುತ್ತಿದ್ದರು. ದೀಪಾ ತನ್ನ ತಂದೆಗೆ ಕರೆ ಮಾಡಿ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಹೀಗಾಗಿ ಅವರ ತಂದೆ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆಗಸ್ಟ್​ 28ರಂದು ಅರುಣ್ ತನ್ನ ಅತ್ತೆ ಮನೆಗೆ ತೆರಳಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿ ಆದಿಲಾಬಾದ್‌ಗೆ ಕರೆತಂದಿದ್ದ.ಶುಕ್ರವಾರ ಬೆಳಗ್ಗೆ ಅರುಣ್ ತನ್ನ ಪತ್ನಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ. ಆಕೆಯ ಕುತ್ತಿಗೆ ಕೊಯ್ದು, ತಲೆಯನ್ನು ಮಂಚಕ್ಕೆ ಜಜ್ಜಿದ್ದರಿಂದ ಗೃಹಿಣಿ ಸಾವನ್ನಪ್ಪಿದ್ದಾಳೆ. ಬಳಿಕ ಅರುಣ್​ ಅದಿಲಾಬಾದ್ ಗ್ರಾಮಾಂತರ ಪೊಲೀಸರಿಗೆ ಶರಣಾಗಲು ತೆರಳಿದ್ದನು. ಅರುಣ್​ ತಂದೆ ಜೈವಂತ್ ರಾವ್ ತನ್ನ ಮಗನ ಬೈಕ್ ಪತ್ತೆಯಾಗದ ಕಾರಣ ಮಗನಿಗೆ ಕರೆ ಮಾಡಿದ್ದಾರೆ. ಆಗ ಅರುಣ್​ ನಾನು ನನ್ನ ಪತ್ನಿಯನ್ನು ಕೊಂದಿದ್ದು, ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ತಂದೆ ಜೈವಂತ್ ರಾವ್​ಗೆ ತಿಳಿಸಿದ್ದಾನೆ. ಕೂಡಲೇ ನೀನು ಮನೆಗೆ ಬರುವಂತೆ ಜೈವಂತ್ ರಾವ್ ಮಗನಿಗೆ ಸೂಚಿಸಿದ್ದಾರೆ. ಅಪ್ಪನ ಮಾತಿನಂತೆ ಮಗ ಅರುಣ್​ ಮನೆಗೆ ಹಿಂತಿರುಗುವಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಅರುಣ್​ ತಂದೆ ಜೈವಂತ್​ ರಾವ್​ಗೆ ತಿಳಿಸಿದ್ದಾರೆ. ನಂತರ ಜೈವಂತ್ ರಾವ್ ತನ್ನ ಸೊಸೆಯನ್ನು ನನ್ನ ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಮೃತ ಗೃಹಿಣಿ ದೀಪಾ ಅವರ ತಾಯಿ ಲಕ್ಷ್ಮಿ ಅವರ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸರು ಮೃತ ಅರುಣ್ ಅವರ ತಂದೆ ಜೈವಂತ್ ರಾವ್ ಮತ್ತು ತಾಯಿ ಪದ್ಮಾ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅದಿಲಾಬಾದ್ ಎರಡನೇ ನಗರ ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹತ್ತೂರ ಒಡೆಯನ ಜಾತ್ರೋತ್ಸವ ಸಂದರ್ಭದಲ್ಲಿ ಯುವಶಕ್ತಿ ಸೇವಾಪಥ ಸ್ವಚ್ಛತಾ ಶಪಥ

Posted by Vidyamaana on 2024-04-12 07:03:49 |

Share: | | | | |


ಹತ್ತೂರ ಒಡೆಯನ ಜಾತ್ರೋತ್ಸವ ಸಂದರ್ಭದಲ್ಲಿ ಯುವಶಕ್ತಿ ಸೇವಾಪಥ ಸ್ವಚ್ಛತಾ ಶಪಥ

ಪುತ್ತೂರು :ಯುವಶಕ್ತಿ ಸೇವಾಪಥ ದ.ಕ ವತಿಯಿಂದ ಹತ್ತೂರ ಒಡೆಯ ಪುತ್ತೂರು‌ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಸ್ವಚ್ಚ ದೇಗುಲ ಅಭಿಯಾನ ಇದೇ ಬರುವ ರವಿವಾರ ಎಪ್ರಿಲ್ 14 ರಂದು ಬೆಳಗ್ಗೆ 7.30 ರಿಂದ ಮದ್ಯಾಹ್ನ 12 ರವರೆಗೆ ಶ್ರೀ ಕ್ಷೇತ್ರದಲ್ಲಿ ಶ್ರಮದಾನ ಸೇವೆ ನೆರವೇರಲಿದೆ.

ಸಮಾಜದಲ್ಲಿ ಅಶಕ್ತರಿಗೆ ನೆರವಾಗುವ ಮೂಲಕ ಸುಮಾರು 70 ಲಕ್ಷ ಸೇವಾನಿಧಿ ಸಮರ್ಪಿಸುವ ಮೂಲಕ ಚಿರಪರಿಚಿತ ಸಂಸ್ಥೆ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾಚಟುವಟಿಕೆಗಳನ್ನು ನಡೆಸುವ ಮೂಲಕ ಸೇವಾಭಿಯಾನ ಮುಂದುವರೆಸುತ್ತಿದೆ.

ಸ್ವಂತ ಮನೆಯೂ ಇಲ್ಲ ಕಾರೂ ಇಲ್ಲ ಇಲ್ಲಿದೆ ಸೋನಿಯಾ ಗಾಂಧಿ ಆಸ್ತಿ ವಿವರ

Posted by Vidyamaana on 2024-02-17 13:31:37 |

Share: | | | | |


ಸ್ವಂತ ಮನೆಯೂ ಇಲ್ಲ  ಕಾರೂ ಇಲ್ಲ  ಇಲ್ಲಿದೆ ಸೋನಿಯಾ ಗಾಂಧಿ ಆಸ್ತಿ ವಿವರ

ಜೈಪುರ; ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬುಧವಾರ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ, ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಾವು ಭಾರತದಲ್ಲಿ ಯಾವುದೇ ಮನೆ ಹೊಂದಿಲ್ಲ, ತಮ್ಮ ಬಳಿ ಯಾವುದೇ ವಾಹನ ಕೂಡಾ ಇಲ್ಲ.

ಆದರೆ ಇಟಲಿಯಲ್ಲಿ ಪೂರ್ವಜರಿಂದ ಬಂದ ಒಂದು ಮನೆಯಿದೆ. ತಮ್ಮ ಒಟ್ಟು ಆಸ್ತಿ 12.53 ಕೋಟಿ ರು.ನಷ್ಟಿದೆ ಎಂದು ಘೋಷಿಸಿಕೊಂಡಿದ್ದಾರೆ.

ಏನೇನು ಆಸ್ತಿ?: ಇಟಲಿಯಲ್ಲಿ ನನ್ನ ತಂದೆಯಿಂದ ಬಂದ 27 ಲಕ್ಷ ರೂ. ಮೌಲ್ಯದ ಮನೆ ಇದೆ. ಅದನ್ನು ಹೊರತುಪಡಿಸಿದರೆ ಭಾರತದಲ್ಲಿ ಯಾವುದೇ ಮನೆ, ವಾಹನ ಇಲ್ಲ. 1.07 ಕೋಟಿ ರು. ಮೌಲ್ಯದ 88 ಕೆ.ಜಿ ಬೆಳ್ಳಿ, 49.95 ಲಕ್ಷ ರು. ಮೌಲ್ಯದ 1.267 ಕೆ.ಜಿ. ಚಿನ್ನ, ನವದೆಹಲಿಯ ದೇರಾಮಂಡಿ ಗ್ರಾಮದಲ್ಲಿ 2529.28 ಚದರ ಮೀಟರ್ ವಿಸ್ತೀರ್ಣದ 5.88 ಕೋಟಿ ರು. ಬೆಲೆಬಾಳುವ ಭೂಮಿ ಇದೆ ಎಂದು ಹೇಳಿಕೊಂಡಿದ್ದಾರೆ.

72 ಲಕ್ಷ ರು. ಏರಿಕೆ: 2019ರ ಲೋಕಸಭಾ ಚುನಾವಣೆ ಸಮಯಕ್ಕೆ ಹೋಲಿಸಿದೆ 2024ರಲ್ಲಿ ಸೋನಿಯಾ ಆಸ್ತಿಯಲ್ಲಿ 72 ಲಕ್ಷ ರು. ಏರಿಕೆ ಕಂಡುಬಂದಿದೆ. ಆಗ ಸೋನಿಯಾ ತಮ್ಮ ಬಳಿ 11.82 ಕೋಟಿ ರು. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇನ್ನು 2014ರಲ್ಲಿ ಸೋನಿಯಾ 9.29 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದರು.



Leave a Comment: