ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2024-02-27 18:09:20 |

Share: | | | | |


ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು.ಇನ್ನೂ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನಿಂದ ಜಿಸಿ ಚಂದ್ರಶೇಖರ್‌, ನಾಸೀರ್‌ ಹುಸೇನ್‌, ಅಜಯ್‌ ಮಾಕೇನ್‌ ಸ್ಪರ್ಧಿಸಿ ಗೆಲುವು ಕಂಡರೇ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರಾಯಣಸಾ ಭಾಂಡಗೆ ಅವರು ಗೆಲವು ಕಂಡಿದ್ದಾರೆ.ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರು, ಆದರೆ ಅವರು ಸೋಲನ್ನು ಕಂಡಿದ್ದಾರೆ.


ಅಜಯ್ ಮಾಕನ್ -47, ನಾಸೀರ್ ಹುಸೇನ್ - 46, ಜಿ.ಸಿ. ಚಂದ್ರಶೇಖರ - 45, ನಾರಾಯಣಸಾ ಭಾಂಡಗೆ - 48, ಕುಪೇಂದ್ರ ರೆಡ್ಡಿ - 35 ಮತಗಳನ್ನು ಗಳಿಸಿದ್ದಾರೆ.


ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ 6, ಪಶ್ಚಿಮ ಬಂಗಾಳ 5, ಮಧ್ಯ ಪ್ರದೇಶ 5, ಗುಜರಾತ್ 4, ಆಂಧ್ರ ಪ್ರದೇಶ 3, ತೆಲಂಗಾಣ 3, ರಾಜಸ್ಥಾನ 3, ಕರ್ನಾಟಕ 4, ಉತ್ತರಾಖಂಡ 1, ಛತ್ತೀಸ್‌ಗಢ 1, ಒಡಿಶಾ 3, ಹರ್ಯಾಣ 1 ಹಾಗೂ ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಕ್ಕೆ ಚುನಾವಣೆ ನಡೆದಿದೆ.


ಈ ನಡುವೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಜಿ.ಪಾಟೀಲ್, ಈ ಬಗ್ಗೆ ಪಕ್ಷ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ. ದೊಡ್ಡನಗೌಡ ಜಿ.ಪಾಟೀಲ್ ಮಾತನಾಡಿ, ಬಿಜೆಪಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿದೆ. ಏನು ಮಾಡಬಹುದು ಮತ್ತು ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಚರ್ಚಿಸುತ್ತಿದ್ದೇವೆ" ಎಂದು ಅವರು ಹೇಳಿದರು. ಮತ ಚಲಾಯಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, "ನನ್ನ ಕ್ಷೇತ್ರದ ನೀರು ಮತ್ತು ಇತರ ನಿರ್ವಹಣೆಗೆ ಅವರು ಹಣ ನೀಡುತ್ತಾರೆ ಎಂಬ ಭರವಸೆ ನೀಡುವವರ ಪರವಾಗಿ ನಾನು ಮತ ಚಲಾಯಿಸುತ್ತೇನೆ" ಎಂದು ಹೇಳಿದರು

ರಾಜ್ಯದಲ್ಲಿ ಬರವಿದ್ಧಾಗಲೂ ಅಧಿಕಾರಕ್ಕಾಗಿ ಕಾಂಗ್ರೆಸ್ ಕಿತ್ತಾಟ: ನಳಿನ್ ಕಟೀಲ್

Posted by Vidyamaana on 2023-11-04 16:13:11 |

Share: | | | | |


ರಾಜ್ಯದಲ್ಲಿ ಬರವಿದ್ಧಾಗಲೂ ಅಧಿಕಾರಕ್ಕಾಗಿ ಕಾಂಗ್ರೆಸ್ ಕಿತ್ತಾಟ: ನಳಿನ್ ಕಟೀಲ್

ವಿಜಯಪುರ: ಅಧಿಕಾರಕ್ಕಾಗಿ ಕಚ್ಚಾಟ ನಡೆಸಿರುವ ಕಾಂಗ್ರೆಸ್ ಸರ್ಕಾರ ಭೀಕರ ಬರದ ಸಂಕಷ್ಟದಲ್ಲಿರುವ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಇನ್ನೂ ಆಡಳಿತ ನಡೆಸುವ ವಿಧಾನ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.



ಶನಿವಾರ ಬಿಜೆಪಿ ಬರ ಅಧ್ಯಯನಕ್ಕಾಗಿ ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನಿಗೆ ಭೇಟಿ ನೀಡಿದ ಬಳಿಕ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಭೀಕರ ಬರದಿಂದ ಕಂಗೆಟ್ಟಿರುವ ಈ ಹಂತದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸಿದ್ದು, ರಾಜ್ಯದ ಜನ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಟೀಕಾ ಪ್ರಹಾರ ನಡೆಸಿದರು.


ರಾಜ್ಯದ ಬರದಂಥ ಸಂಕಷ್ಟದ ಸಂದಭದಲ್ಲೂ ಸಿದ್ಧರಾಮಯ್ಯ ಅವರು ರಾಜಕೀಯ ಮಾಡಲು ಹೊರಟಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾದಾಗ ಕೇಂದ್ರದ ಪರಹಾರ ನಿಧಿ ಬಿಡುಗಡೆ ಆಗುವವರೆಗೆ ಕಾಯದೆ, ಎನ್‍ಡಿಆರ್‍ಎಫ್ ನಿಮಯ ಅಂತೆಲ್ಲ ಸಮಯ ವ್ಯರ್ಥ ಮಾಡದೆ ತುರ್ತಾಗಿ ಸಂತ್ರಸ್ಥರ ನೆರವಿಗೆ ಧಾವಿಸಿದ್ದರು. ಆದರೆ ಸಿದ್ಧರಾಮಯ್ಯ ಇನ್ನಾದರೂ ರಾಜಕಾರಣ ಮಾಡುವುದನ್ನು ನಿಲ್ಲಿಸಿ ಬರದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.


ಕೇಂದ್ರ ಸರ್ಕಾರ ಕೂಡ ತನ್ನ ಅಧಿಕಾರಿಗಳ ತಂಡವನ್ನು ಕಳಿಸಿ ಅಧ್ಯಯನ ನಡೆಸಿದೆ. ಆದರೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಭಿಕರ ಬರದಿಂದಾಗಿ ಆಗಿರುವ ಒಟ್ಟು ನಷ್ಟದ ಕುರಿತು ವಿವರವನ್ನೇ ಈವರೆಗೆ ಕೇಂದ್ರಕ್ಕೆ ನೀಡಿಲ್ಲ. ಆದರೂ ಕೇಂದ್ರದ ವಿರುದ್ಧ ನೆರವು ನೀಡಿಲ್ಲ ಎಂದು ಆರೋಪಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.ವಿಜಯಪುರ ಜಿಲ್ಲೆಯನ್ನೇ ಅವಲೋಕಿಸಿದರೆ ರಾಜ್ಯದ ಪ್ರಭಾವಿ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ತಿಕೋಟ ತಾಲೂಕನ್ನೇ ಬರ ಪೀಡಿತ ಘೋಷಿತ ತಾಲೂಕ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿರಲಿಲ್ಲ. ತಮ್ಮದೇ ಕ್ಷೇತ್ರವನ್ನು ಬರ ಪೀಡಿತ ಎಂದು ಘೋಷಿಸುವಲ್ಲೂ ಜಿಲ್ಲೆಯ ಸಚಿವರಿಗೆ ಸಾಧ್ಯವಾಗಿರಲಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿರುದ್ಧ ಟೀಕಾ ಪ್ರಹಾರ ನಡೆಸಿದರು.ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಪಂಪ್‍ಸೆಟ್ ಆಧಾರಿತ ರೈತರು ಬೆಳೆ ಬೆಳೆಯಲು ಈ ಸರ್ಕಾರ ಸೂಕ್ತ ಹಾಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಅಲ್ಪಸರ್ವಲ್ಪ ಬೆಳೆ ಬೆಳೆದುಕೊಂಡಿರುವ ತಮ್ಮ ಬೆಳೇ ಉಳಿಸಿ ಎಂದು ಪಂಪ್‍ಸೆಟ್ ಇರುವ ರೈತರು ಗೋಗರೆದರೂ ಅವರ ಬೇಡಿಕೆಗೆ ಸ್ಪಂದಿಸುವ ಸೌಜನ್ಯ ತೋರದ ಈ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.


ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದ ಬಳಿಕ ಬಿಜೆಪಿ ತಂಡಗಳು ಬರ ಪರಿಸ್ಥಿತಿ ಕುರಿತು ಕೋರ ಸಮಿತಿ ಸಭೆಯಲ್ಲಿ ಚರ್ಚಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಲಿದೆ. ಅಲ್ಲದೇ ತುರ್ತಾಗಿ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸುತ್ತದೆ ಎಂದರು.


ಈ ಹಂತದಲ್ಲಿ ರೈತರು ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು, ಬರ ಬಿದ್ದಿರುವ ಈಗ ಈರುಳ್ಳಿ, ಟೊಮ್ಯಾಟೋ ಬೆಲೆ ಏರಿಸಿದ್ದಾರೆ. ಹೋಟೆಲ್‍ಗಳಲ್ಲಿ ದರ ಏರಿಕೆ ಮಾಡಿದರೂ ರೈತರ ಬೆಳೆಗಳಿಗೆ ಬೆಲೆ ಇಲ್ಲವಾಗಿದೆ. ಕನಿಷ್ಟ ಉತ್ತಮ ವಿದ್ಯುತ್ ನೀಡುತ್ತಿಲ್ಲ ಎಂದು ಅಶ್ಲೀಲ ಶಬ್ಧಗಳಿಂದಲೇ ನಿಂದಿಸಿ ಆಕ್ರೋಶ ಹೊರ ಹಾಕಿದಾಗ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ರೈತನ ಹೆಗಲು ನೇವರಿಸಿ ಸಮಾಧಾನಿಸಿದರು.


ಇದೇ ವೇಳೆ ಸ್ಥಳದಲ್ಲಿದ್ದ ಮಹಿಳೆಯರು ಉಚಿತ ಬಸ್ ಎಂದು ನಿತ್ಯ ಕೆಲಸ ಬಿಟ್ಟು ಊರೂರಿಗೆ ತಿರುಗಲು ಆಗುತ್ತಾ? ಮಾನ ಇರುವ ಯಾರೂ ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.


ಅವಳಿ ಜಿಲ್ಲೆಗಳ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ಮಾಜಿ ಸಚಿವ ಮುರುಗೇಶ ನಿರಾಣಿ,ಬೆಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಶಾಸಕರಾದ ರಮೇಶ ಭೂಸನೂರು, ಸೋಮನಗೌಡ ಸಾಸನೂರು, ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಉಮೇಶ ಕಾರಜೋಳ, ಸುರೇಶ ಬಿರಾದಾರ, ಬಸವರಾಜ ಬಿರಾದಾರ ಇತರರು ಉಪಸ್ಥಿತರಿದ್ದರು.

ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್

Posted by Vidyamaana on 2023-04-24 16:53:50 |

Share: | | | | |


ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್‌ ಮುಖಂಡ ಅಲ್ತಾಫ್‌ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದರು.

ಜೆಡಿಎಸ್ ನಾಯಕರ ಪ್ರಕಾರ, ಅಲ್ತಾಫ್‌ ಅವರು ತಮ್ಮ ಮೊಬೈಲ್ ಫೋನನ್ನು ಸಹ ಸ್ವಿಚ್ ಆಫ್ ಮಾಡಿದ್ದರು, ಅವರ ನಿರ್ಧಾರ ಪಕ್ಷದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ಬಿ ಫಾರಂ ಪಡೆಯಲು ಶಾಸಕ ಬಿ ಎಂ ಫಾರೂಕ್ ಅವರಿಗೆ ಅಲ್ತಾಫ್ ಮನವರಿಕೆ ಮಾಡಿದ್ದರು. ಆದರೆ, ನಾಮಪತ್ರ ಸಲ್ಲಿಸಿದ ಬಳಿಕ ಪಕ್ಷದ ಮುಖಂಡರ ಜತೆ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.ಎಪ್ರಿಲ್ 22 ರಂದು ಅವರು ನಾಮಪತ್ರ ಹಿಂತೆಗೆದುಕೊಳ್ಳುವ ಸೂಚನೆಯನ್ನು ಪೋಸ್ಟ್ ಮಾಡಲಾಗಿದ್ದು, ಸ್ಥಳೀಯರು ಈ ವಿಷಯದ ಬಗ್ಗೆ ಜೆಡಿಎಸ್ ಮುಖಂಡರಿಗೆ ತಿಳಿಸಿದ್ದಾರೆ. ಕುಂಪಲ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಫೋನ್ ಎರಡು ದಿನಗಳ ಕಾಲ ಸ್ವಿಚ್ ಆಫ್ ಆಗಿದೆ.ಈ ಹಿಂದೆ ಎಸ್‌ಎಸ್‌ಎಫ್‌ನಲ್ಲಿ ಸಕ್ರಿಯರಾಗಿದ್ದ ಕುಂಪಲ ಅವರು ಜೆಡಿಎಸ್‌ಗೆ ಸೇರಿ ಕಣದಿಂದ ಹಿಂದೆ ಸರಿದಿರುವುದು ಹಲವರನ್ನು ಅಚ್ಚರಿಗೊಳಿಸಿದೆ.

ಪುತ್ತೂರು : ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

Posted by Vidyamaana on 2024-06-21 16:24:10 |

Share: | | | | |


ಪುತ್ತೂರು : ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಪುತ್ತೂರು :ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಜೂ. 21:ರಂದು ಆಚರಿಸಲಾಯಿತು. ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ,

ಬಡಗನ್ನೂರು ದರೋಡೆ ಪ್ರಕರಣ

Posted by Vidyamaana on 2023-09-08 22:22:32 |

Share: | | | | |


ಬಡಗನ್ನೂರು ದರೋಡೆ ಪ್ರಕರಣ

ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿಯಲ್ಲಿ ತಾಯಿ,ಮಗನನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣವನ್ನು ಬೇದಿಸಿ ಆರೋಪಿಗಳನ್ನು ಬಂಧಿಸುವಂತೆ  ಪೊಲೀಸ್ ಅಧಿಕಾರಿಗಳಿಗೆ ಶಾಸಕರಾದ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.

ಒಂಟಿ ಮನೆ ಇರುವ ಕಡೆಗಳಲ್ಲಿ ಇಂಥಹ ಘಟನೆಗಳು ಹೆಚ್ಚು ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ದರೋಡೆ ತಂಡದವರನ್ನು ಪತ್ತೆ ಮಾಡುವ ಮೂಲಕ ಇಲಾಖೆ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಧೈರ್ಯ  ತುಂಬುವ ಕೆಲಸವನ್ನು ಪೊಲೀಸ್  ಇಲಾಖೆ ಮಾಡಬೇಕು ಎಂದು ಪಶ್ಚಿಮ ವಲಯ ಐಜಿಯವರಿಗೆ ದೂರವಾಣಿ ಮೂಲಕ ಸೂಚನೆಯನ್ನು ನೀಡಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಇಂಥಹ ಕೃತ್ಯಗಳು ನಡೆದಾಗ ಜನ ಭಯಭೀತರಾಗುತ್ತಾರೆ. ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡುವ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟುವ ಕೆಲಸವನ್ನು ಇಲಾಖೆ ಮಾಡಬೇಕಿದ್ದು ಇದಕ್ಕೆ ಬೇಕಾದ ಪೂರ್ಣ ಸಹಕಾರವನ್ನು ನೀಡುವುದಾಗಿ ಶಾಸಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ,ದರೋಡೆ ,ಕಳವು ಕೃತ್ಯಗಳು ನಡೆಯದಂತೆ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಶಾಸಕರು ಸೂಚನೆ ನೀಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಕಾರಣ ಶಾಸಕರಯ ದೂರವಾಣಿ ಮೂಲಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ದೂರವಾಣಿ ಜೊತೆ ಸಂಪರ್ಕಿಸಿ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

Posted by Vidyamaana on 2023-04-19 04:11:13 |

Share: | | | | |


ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

ಪುತ್ತೂರು: ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾನಾವು ( 79) ಎ.18 ರಂದು ರಾತ್ರಿ ನಿಧನರಾದರು.ಮೃತರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಮೊಕ್ತೇಸರರಾಗಿ ಸೇರಿದಂತೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರಿ, ಪುತ್ರರಾಗಿರುವ ಕಾನಾವು ಕ್ಲಿನಿಕ್ ನ ವೈದ್ಯ ಡಾ.ನರಸಿಂಹ ಶರ್ಮಾ ಕಾನಾವು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಎ.19 ರಂದು ಬೆಳಗ್ಗಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.



Leave a Comment: