ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

Posted by Vidyamaana on 2023-10-11 14:36:06 |

Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಆಕ್ಟೋಬರ್ 10 ರಂದು ಸಂಜೆ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಮುಂಡೂರಿನ ಆನಂದ ಆಚಾರ್ಯ (38) ಎಂಬಾತನು ಅಕ್ಟೋಬರ್ 10 ರಂದು ಸಂಜೆ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆಸುತ್ತಿದ್ದರು,ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು.ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

Posted by Vidyamaana on 2024-01-20 16:45:29 |

Share: | | | | |


ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

ಹೈದರಬಾದ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟಿದ್ದಾರೆ.


ಇಲಿನೊಯಿಸ್ ಮೂಲದ ಸಿಇಓ ಸಂಜಯ್ ಶಾ (56) ಮೃತರು ಎಂದು ಗುರುತಿಸಲಾಗಿದೆ.


ರಜತ ಮಹೋತ್ಸವವ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು.


ಸಮಾರಂಭಕ್ಕೆ ಚಾಲನೆ ನೀಡಲು ಶಾ ಹಾಗೂ ರಾಜು ಕಬ್ಬಿಣದ ಗೂಡಿನಿಂದ ಕೆಳಗಿಳಿದು ವೇದಿಕೆಗೆ ಬರಬೇಕಿತ್ತು. ಅವರನ್ನು ರೋಪ್ ಬಳಸಿ ಕಬ್ಬಿಣದ ಗೂಡಿನ ಮೂಲಕ ಕೆಳಗಿದ್ದ ವೇದಿಕೆಗೆ ಕರೆತರಲು ಉದ್ದೇಶಿಸಲಾಗಿತ್ತು. ಸಂಗೀತದ ಹಿಮ್ಮೇಳದಲ್ಲಿ ಶಾ ಹಾಗೂ ರಾಜು ಸಿಬ್ಬಂದಿಗೆ ಕೈಬೀಸುತ್ತಾ ಇಳಿಯುತ್ತಿದ್ದರು. ಆದರೆ ದಿಢೀರನೇ ಈ ಕಬ್ಬಿಣದ ಗೂಡಿಗೆ ಜೋಡಿಸಿದ್ದ ಎರಡು ವೈರ್ ಗಳ ಪೈಕಿ ಒಂದು ತುಂಡಾಯಿತು. ಇಬ್ಬರೂ 15 ಅಡಿ ಕೆಳಕ್ಕೆ ಬಿದ್ದು, ಕಾಂಕ್ರಿಟ್ ವೇದಿಕೆಗೆ ಅಪ್ಪಳಿಸಿದರು. ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಯಿತಾದರೂ ಶಾ ಮೃತಪಟ್ಟಿದ್ದಾರೆ.

ಪುತ್ತೂರು : ಬಿಜೆಪಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖ ವಾಗ್ವಾದ ವಿಚಾರ ವೈರಲ್ : ಸತ್ಯಕ್ಕೆ ದೂರವಾದ ವಿಷಯ – ಸಾಜ ರಾಧಾಕೃಷ್ಣ ಆಳ್ವ

Posted by Vidyamaana on 2024-03-21 18:14:24 |

Share: | | | | |


ಪುತ್ತೂರು : ಬಿಜೆಪಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖ ವಾಗ್ವಾದ ವಿಚಾರ ವೈರಲ್  : ಸತ್ಯಕ್ಕೆ ದೂರವಾದ ವಿಷಯ – ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು :ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಯ್ಕೆಯಾದ ನಂತರ ಮತ್ತು ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯ ವಿಚಾರವಾಗಿ ಪುತ್ತೂರಿನ ಹಿರಿಯ-ಕಿರಿಯ ಕಾರ್ಯಕರ್ತರಲ್ಲಿ ಚರ್ಚಿಸಲು ದ.ಕನ್ನಡ ಜಿಲ್ಲಾಧ್ಯಕ್ಷರು ಪಾರ್ಟಿ ಕಛೇರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಕಛೇರಿಗೆ ಬೀಗ ಹಾಕಿದ್ದರು ಮತ್ತು ಸಭೆಯಲ್ಲಿ ವಾಗ್ವಾದಗಳು ಜಿಲ್ಲಾಧ್ಯಕ್ಷರ ಎದುರಿಗೆ ಆಗಿವೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.


ಪಕ್ಷದ ಆಂತರಿಕ ಸಭೆ ಆದ ಕಾರಣ ಪತ್ರಿಕೆ ಮಾದ್ಯಮದವರಿಗೆ ಅಹ್ವಾನ ಇರಲಿಲ್ಲ ಮತ್ತು ಒಟ್ಟು ಪುತ್ತೂರಿನ ರಾಜಕೀಯ ಸಾಧಕ ಮತ್ತು ಭಾದಕಗಳ ಬಗ್ಗೆ ಆರೋಗ್ಯಪೂರ್ಣ ಚರ್ಚೆಯಾಗಿ ಕೊನೆಗೆ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ರವರು ಸೂಕ್ತವಾದ ಸಲಹೆ ಸೂಚನೆಯನ್ನು ನೀಡಿ ಸಭೆ ಸುಖಾಂತ್ಯವಾಗಿದೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಪಾರ್ಟಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ನಿರ್ಧರಿಸಲಾಯಿತು ಎಂದು ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ

ಟ್ರಾಫಿಕ್ ಸಿಗ್ನಲ್ ಲೈಟ್‌ಗೆ ಸೇರ್ಪಡೆಯಾಗಲಿದೆ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?

Posted by Vidyamaana on 2024-08-13 05:40:56 |

Share: | | | | |


ಟ್ರಾಫಿಕ್ ಸಿಗ್ನಲ್ ಲೈಟ್‌ಗೆ ಸೇರ್ಪಡೆಯಾಗಲಿದೆ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?

ಟ್ರಾಫಿಕ್‌ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಸ್ತೆಗಳಲ್ಲಿ ಕೆಂಪು, ಹಸಿರು ಮತ್ತು ಹಳದಿ ಬಣ್ಣದ ಟ್ರಾಫಿಕ್‌ ಲೈಟ್‌ಗಳನ್ನು ಅಳವಡಿಸಿರುತ್ತಾರೆ. ವಿಶ್ವದ ಎಲ್ಲಾ ಕಡೆಯೂ ಇದೇ ಮೂರು ಬಣ್ಣದ ಲೈಟ್‌ಗಳಿರುತ್ತವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ನಾಲ್ಕನೆಯ ಬಣ್ಣ ಬರಲಿದೆಯಂತೆ.ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ. 

ಟ್ರಾಫಿಕ್‌ ಸಿಗ್ನಲ್‌ ದೀಪಗಳು ಕೆಂಪು, ಹಸಿರು ಮತ್ತು ಹಳದಿ ಈ ಮೂರು ಬಣ್ಣದಲ್ಲಿರುತ್ತವೆ. ನಮ್ಮ ಭಾರತವಷ್ಟೇ ಅಲ್ಲ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಇದೇ ಬಣ್ಣದ ದೀಪಗಳಿರುತ್ತವೆ. ಟ್ರಾಫಿಕ್‌ ಸಮಸ್ಯೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಇವುಗಳನ್ನು ಅಳವಡಿಸಲಾಗುತ್ತದೆ. ಶತಮಾನಗಳಿಂದಲೂ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಮೂರು ಬಣ್ಣದ ಲೈಟ್‌ಗಳು ಮಾತ್ರ ಇವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ನಾಲ್ಕನೆಯ ಬಣ್ಣ ಸೇರ್ಪಡೆಯಾಗಲಿದೆಯಂತೆ. ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಮುಕ್ವೆ ನಿವಾಸಿ ಎ.ಕೆ.ಮಮ್ಮುಂಞ ನಿಧನ

Posted by Vidyamaana on 2023-10-23 13:14:43 |

Share: | | | | |


ಮುಕ್ವೆ ನಿವಾಸಿ ಎ.ಕೆ.ಮಮ್ಮುಂಞ ನಿಧನ

ಪುತ್ತೂರು: ಮುಕ್ವೆ ನಿವಾಸಿ ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯಎ.ಕೆ.ಮಮ್ಮುಂಞ (70 ವ.) ಅಲ್ಪಕಾಲದ ಅನಾರೋಗ್ಯದಿಂದ ಅ. 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಮುಕ್ವೆ ನಿವಾಸಿ ರೋಯಲ್ ಉಮ್ಮರ್ ಹಾಜಿ ಮತ್ತು M A ಅಬೂಬಕ್ಕರ್ ಹಾಜಿ ಪುರುಷರ ಕಟ್ಟೆ  ಅವರ ಸಹೋದರಿಯ ಗಂಡ.

ಮೃತರು ಪತ್ನಿ, ಮಕ್ಕಳಾದ ನಾಸೀರ್, ಸಲೀಮ್, ಮನ್ಸೂರ್ ಮತ್ತು ರಿಯಾಝ್ ಅವರನ್ನು ಅಗಲಿದ್ದಾರೆ.

ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ ಕುಖ್ಯಾತ ಕಳ್ಳರಿಬ್ಬರ ಸೆರೆ

Posted by Vidyamaana on 2024-02-24 21:28:02 |

Share: | | | | |


ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ  ಕುಖ್ಯಾತ ಕಳ್ಳರಿಬ್ಬರ ಸೆರೆ

ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.

ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.


ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.



Leave a Comment: