ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

Posted by Vidyamaana on 2023-10-17 17:21:46 |

Share: | | | | |


ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ 

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.

ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

Posted by Vidyamaana on 2024-05-19 17:56:29 |

Share: | | | | |


ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

ಮಂಗಳೂರು : ಪ್ರತಿವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದ ಭಾಗದ ಎಲ್ಲಾ ವಿದ್ಯಾರ್ಥಿಗಳು ಮಾಸ್ ಕಾಪಿ ಮಾಡುತ್ತಿದ್ದರು ಎಂದು ಎಂಎಲ್ಸಿ ಬೋಜೆ ಗೌಡ ಗಂಭೀರವಾದಂತ ಆರೋಪವನ್ನು ಮಾಡಿದ್ದಾರೆ.ಮಂಗಳೂರಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು.ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

Posted by Vidyamaana on 2024-06-15 15:55:40 |

Share: | | | | |


ಭಕ್ತಕೋಡಿ ಹರೀಶ ರವರ ಪತ್ನಿ ದೀಪಿಕಾ ನಾಪತ್ತೆ

ಪುತ್ತೂರು : ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ (28) ರವರ ಪತ್ನಿಯಾದ ದೀಪಿಕಾ(23) ನಾಪತ್ತೆಯಾದವರು.

ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ.. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Posted by Vidyamaana on 2024-04-18 09:48:31 |

Share: | | | | |


ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಚಾಲಕನ ಅಜಾಗರೂಕತೆಯಿಂದಾಗಿ ಪಿಕಪ್‌ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರುಕ್ಮ ಮುಗೇರ ಮೃತ ವ್ಯಕ್ತಿ. ಶಿಬಾಜೆ ಬಳಿ ಪಿಕಪ್ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ

Posted by Vidyamaana on 2023-09-06 09:08:36 |

Share: | | | | |


ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಕಡಿತಗೊಳಿಸಲಾಗಿತ್ತು.ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತ ನೀತಿ ಅನುಸರಿಸುತ್ತಿದೆ.


ಸಾಮಾನ್ಯ ಶಾಲೆಗಳಿಗೆ ಆ.8 ರಿಂದ 24 ಕ್ಕೆ ಸೀಮಿತಗೊಂಡಿದ್ದು, ವಿಶೇಷ ಶಾಲೆ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

ಜುಲೈ 25: ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಗಳ ಪದವಿ ಪರೀಕ್ಷೆ ಮುಂದೂಡಿಕೆ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರ ಆದೇಶ

Posted by Vidyamaana on 2023-07-24 14:19:15 |

Share: | | | | |


ಜುಲೈ 25: ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಗಳ ಪದವಿ ಪರೀಕ್ಷೆ ಮುಂದೂಡಿಕೆ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರ ಆದೇಶ

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜುಲೈ 25ರಂದು ರಜೆ ನೀಡಲಾಗಿದೆ. ಆದ್ದರಿಂದ ಆ ದಿನದ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ತಿಳಿಸಲಾಗಿದೆ. ಉಳಿದಂತೆ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ.

ಮುಂದೂಡಿರುವ ಪರೀಕ್ಷೆಗಳ ದಿನಾಂಕವನ್ನು ಮುಂದೆ ಮರುನಿಗದಿ ಮಾಡಿ, ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.



Leave a Comment: