ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಸುಳ್ಯ : ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಗತಿ ಉದ್ಘಾಟನೆ

Posted by Vidyamaana on 2023-07-21 02:41:25 |

Share: | | | | |


ಸುಳ್ಯ : ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಗತಿ ಉದ್ಘಾಟನೆ

ಸುಳ್ಯ: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. ದೀಪ ಬೆಳಗಿಸಿ ಅಬಾಕಸ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 

ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಮಾತನಾಡಿ, ಅಬಾಕಸ್ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು.

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಪುತ್ತೂರು ಮತ್ತು ಸುಳ್ಯ ಇದರ ಸಿಇಓ ಪ್ರಫುಲ್ಲ ಗಣೇಶ್, ಅಬಾಕಸ್ ತರಗತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 

ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಉಜ್ವಲ್ ಯು.ಜೆ. ಶುಭಹಾರೈಸಿದರು.

ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ನಿರ್ದೇಶಕ ಗಣೇಶ್ ಕೈಂದಾಡಿ, ತರಬೇತುದಾರರಾದ ನಿಕ್ಷಿತಾ ಮತ್ತು ಹರ್ಷಿತಾ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು.

ಹೆಚ್ಚು ಮತದಾರರಾಗಿರುವ ಮಹಿಳೆಯರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಅನಿತಾ ಹೇಮನಾಥ ಶೆಟ್ಟಿ

Posted by Vidyamaana on 2024-04-23 21:56:48 |

Share: | | | | |


ಹೆಚ್ಚು ಮತದಾರರಾಗಿರುವ ಮಹಿಳೆಯರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಅನಿತಾ ಹೇಮನಾಥ ಶೆಟ್ಟಿ

ಪುತ್ತೂರು : ಮಹಿಳೆಯರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳು ಮಹಿಳೆಯರಿಗೆ ಶಕ್ತಿ ತುಂಬಿದೆ. ಪ್ರಚಾರದ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳ ಮಹಿಳೆಯರಲ್ಲಿ ಖುಷಿ ಕಾಣಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಹೇಳಿದ್ದಾರೆ.

ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.

ಅಕ್ಕನ ಪ್ರಾಣ ಉಳಿಸಲು ಲಿವರ್ ದಾನ ಮಾಡಿದ ತಂಗಿ

Posted by Vidyamaana on 2024-01-24 20:53:41 |

Share: | | | | |


ಅಕ್ಕನ ಪ್ರಾಣ ಉಳಿಸಲು ಲಿವರ್ ದಾನ ಮಾಡಿದ ತಂಗಿ

ಪುತ್ತೂರು: ಪುತ್ತೂರಿನಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಲಿವರ್‌ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲಕಾರಿಯಾಗದೇ ಅಕ್ಕ ಸಾವನ್ನಪ್ಪಿದಘಟನೆ ಪುತ್ತೂರು ನೆಹರೂ ನಗರದಲ್ಲಿ ನಡೆದಿದೆ. ಪುತ್ತೂರು ನೆಹರೂ ನಗರದ ದಿ.ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(೨೯) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ.


ಯುವತಿ ಐಶ್ವರ್ಯ ಅವರಿಗೆ ಜಾಂಡೀಸ್‌ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಐಶ್ವರ್ಯ ಅವರ ಲಿವರ್‌ ಡ್ಯಾಮೇಜ್‌ ಆಗಿದ್ದು, ಲಿವರ್‌ ಟ್ರಾನ್ಸ್‌ ಪ್ಲಾಂಟ್‌ ಮಾಡಬೇಕು ಎಂದು ತಿಳಿಸಿದ್ದರು. ಅದರಂತೆ ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ, ಅಕ್ಕರೆ ಹೊಂದಿದ್ದ ಬ್ಯಾಂಕ್‌ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಕ ಐಶ್ವರ್ಯ ಅಕ್ಕನನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕೆಂದು ಪಣತೊಟ್ಟಿದ್ದ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್‌ ದಾನ ಮಾಡಿದ್ದರೂ ಕೂಡ. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಅಕ್ಕ ಐಶ್ವರ್ಯ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಮನೆ ಮಂದಿಗೆ ಬರಸಿಡಿಲಿನಂತೆ ಎರಗಿತ್ತು. ಬದುಕಿ ಬಾಳಿ ಬೆಳಗಬೇಕಾಗಿದ್ದ ಯುವತಿಯ ವಿಚಾರದಲ್ಲಿ ವಿಧಿಯಾಟ ಬೇರೆಯದೇ ಆಗಿದ್ದು, ಇದೀಗ ಈ ದುಃಖದ ವಿಷಯ ಮನೆಮಂದಿಯನ್ನು ಕಣ್ಣೀರಿನಲ್ಲಿ ತೋಯುವಂತೆ ಮಾಡಿದೆ. ಇದೇ ವೇಳೆ ಲಿವರ್‌ ದಾನ ಮಾಡಿದ ಐಶ್ವರ್ಯ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿಯೂ ನೆರವು ಯಾಚಿಸಲಾಗಿತ್ತು. ಮೃತರು ತಾಯಿ ವಿಮಲ, ತಂಗಿ ಅನುಷಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಐಶ್ವರ್ಯ ತಂದೆ ಈ ಮೊದಲೇ ತೀರಿಕೊಂಡಿದ್ದು, ಈಗ ಐಶ್ವರ್ಯ ಅವರ ಸಾವು ಕುಟುಂಬ ಸದಸ್ಯರನ್ನು ಶೋಕದ ಕಡಲಲ್ಲಿ ಮುಳುಗಿಸಿದೆ.

ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

Posted by Vidyamaana on 2024-02-02 14:36:15 |

Share: | | | | |


ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

ಕಾಸರಗೋಡು, ಫೆ.2 ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  

ಕೋಜಿಕ್ಕೋಡ್ ಮೂಲದ ಎಂ.ಪಿ‌.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್‌ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್‌. ಸಿದ್ದಿಕ್‌ (48), ಮಾಂಗಾಡ್‌ನ‌ ದಿಲ್ಶಾದ್‌ (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ರಿಯ (40), ಮಾಂಗಾಡ್‌ನ‌ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ‌ ರಫೀಕ್‌ ಮಹಮ್ಮದ್ (42) ಬಂಧಿತ ಆರೋಪಿಗಳು. 

ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು. 

ಲ್ಯಾಪ್‌ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು. 

ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್‌ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-08-10 13:56:28 |

Share: | | | | |


ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.

ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು.



Leave a Comment: