ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

Posted by Vidyamaana on 2023-10-19 16:36:35 |

Share: | | | | |


ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

ಪುತ್ತೂರು:ನ.13 ರಂದು ದೀಪಾವಳಿ ಪ್ರಯುಕ್ತ ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು , ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದ್ದು ಕೈಗೊಂಡಿರುವ ಸಿದ್ದತೆಗಳನ್ನು ಶಾಸಕರು ಪರಿಶೀಲನೆ ಮಾಡಿದರು.

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,ರೈ ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ, ನಿವೃತ್ತ ಶಿಕ್ಷಕ ದಯಾನಂದ ರೈ ಕೊರ್ಮಂಡ,ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಹನೀಫ್ ಪುಂಚತ್ತಾರ್, ಇಂಜಿನಿಯರ್ ಸಂತೋಷ್ ಶೆಟ್ಡಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಯೋಗೀಶ್ ಸಾಮಾನಿ, ಟ್ರಸ್ಟ್ ನ ಪ್ರಮುಖರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಮೆ ,ದಾಮೋದರ್ ಕೋಡಿಂಬಾಡಿ ಮತ್ತಿತರರು ಉಪಸ್ಥಿತರಿದ್ದರು.

ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

Posted by Vidyamaana on 2023-04-27 16:30:04 |

Share: | | | | |


ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾಪರಿವಾರ’ ಎ.28 ರಂದು ನಡೆಯಲಿದೆ.ಮಹಿಳಾ ಸಮಾವೇಶ ‘ಸೀತಾಪರಿವಾರ’ ಕಾರ್ಯಕ್ರಮವು ಎ.28 ಸಂಜೆ 4 ಗಂಟೆಗೆ ಮುಕ್ರಂಪಾಡಿಯ ಸುಭದ್ರ ಸಭಾಂಗಣದಲ್ಲಿ ನಡೆಯಲಿದೆ.ಹಿಂದುತ್ವದ ಅಡಿಯಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅವರ ಗೆಲುವು ರಾಜ್ಯದಲ್ಲಿ ಬಿಜೆಪಿಯ ಗೆಲವುವಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಗೆಲುವು ಆಗಲಿದೆ. ಹಾಗಾಗಿ ಮಹಿಳಾ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದು, ಮಹಿಳಾ ಕಾರ್ಯಕರ್ತರು ‘ಸೀತಾಪರಿವಾರ’ ಎಂಬ ಹೆಸರಿನಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ.

ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೀತಾ ಪರಿವಾರ ಸಮಾವೇಶದ ಪ್ರಮುಖರಾಗಿರುವ ವಸಂತ ಲಕ್ಷ್ಮೀ ರವರು ಪತ್ರಿಕಾಗೋಷ್ಠಿ ತಿಳಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭ

Posted by Vidyamaana on 2023-05-20 04:04:58 |

Share: | | | | |


ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ  ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಬಡಗನ್ನೂರು : ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿತ

Posted by Vidyamaana on 2023-11-09 11:26:22 |

Share: | | | | |


ಬಡಗನ್ನೂರು : ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿತ

ಪುತ್ತೂರು : ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ.

ಬಡಗನ್ನೂರಿನ ಶಾಲಾ ಕಾಂಪೌಂಡ್ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಕುಸಿದು ಬಿದ್ದಿದೆ.

ಘಟನೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಎನ್‌ಆರ್‌ಎಲ್‌ಎಂ ವರ್ಕ್ ಶೆಡ್ (ಕಟ್ಟಡ)ಗೆ ಶಾಸಕರಿಂದ ಶಂಕುಸ್ಥಾಪನೆ

Posted by Vidyamaana on 2022-12-15 14:23:48 |

Share: | | | | |


ಎನ್‌ಆರ್‌ಎಲ್‌ಎಂ ವರ್ಕ್ ಶೆಡ್ (ಕಟ್ಟಡ)ಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಎನ್‌ಆರ್‌ಎಲ್‌ಎಂ ಯೋಜನೆಯ ವರ್ಕ್ ಶೆಡ್ (ಕಟ್ಟಡ) ನಿರ್ಮಾಣಕ್ಕೆ ಬನ್ನೂರಿನ ಬೀರಿಗದಲ್ಲಿ ಶನಿವಾರ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು.

ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು. ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟ ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಹಲವು ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಬೀರಿಗದಲ್ಲಿ ವರ್ಕ್ ಶೆಡ್ ನಿರ್ಮಾಣ ಕಾಮಗಾರಿ ನಡೆಯಲಿದೆ. ಸುಮಾರು ೧೮.೫ ಲಕ್ಷ ರೂ. ವೆಚ್ಚದಲ್ಲಿ ಯೋಜನೆಯು ಕಾರ್ಯಗತಗೊಳ್ಳಲಿದೆ.

ಪುಣಚ: ನೇಣು ಬಿಗಿದು ಕೊಲ್ಲಪದವು ನಿವಾಸಿ ಶ್ರೀಕೃಷ್ಣ ಆತ್ಮಹತ್ಯೆ

Posted by Vidyamaana on 2023-10-20 12:28:22 |

Share: | | | | |


ಪುಣಚ: ನೇಣು ಬಿಗಿದು ಕೊಲ್ಲಪದವು ನಿವಾಸಿ ಶ್ರೀಕೃಷ್ಣ ಆತ್ಮಹತ್ಯೆ

ವಿಟ್ಲ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

 ಪುಣಚ ಗ್ರಾಮದ ಕೊಲ್ಲಪದವು ಸಮೀಪ ಚೆಕ್ಕುತ್ತಿ  

ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ.

ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Leave a Comment: