ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

Posted by Vidyamaana on 2023-03-18 05:19:48 |

Share: | | | | |


ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ :ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.

ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎಂದರು

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

Posted by Vidyamaana on 2022-11-17 12:35:37 |

Share: | | | | |


ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷೆ ದೀಕ್ಷಾ ಪೈ ಮತ್ತು ಸದಸ್ಯ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ವರದಿ ವಾಚಿಸಿದರು. ಭೂಮಿಕ ಪ್ರಾರ್ಥಿಸಿದರು. ಉಪನ್ಯಾಸಕಿ ಚಿತ್ರಲೇಖಾ ಕೆ. ಸ್ವಾಗತಿಸಿದರು. ಅಶೋಕ ಪಿ. ವಂದಿಸಿದರು ಶೋಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ಕೆ, ಗ್ರೀಷ್ಮಾ, ಧನ್ಯಶ್ರೀ ಪಿ. ಮತ್ತು ದಾಮೋದರ ವಿಜೇತರ ಪಟ್ಟಿ ವಾಚಿಸಿದರು. ಭೋಜರಾಜ ಆಚಾರಿ ಕೆ.ರವರು ದತ್ತಿ ನಿಧಿ ನಗದು ಬಹುಮಾನ ಪಡೆದ ವಿದ್ಯಾರ್ಥಿನಿಯರ ಪಟ್ಟಿ ವಾಚಿಸಿದರು.

ಆಶೀರ್ವಾದ ಗಿಫ್ಟ್ ಸ್ಕೀಂನ ಮೊದಲ ಕಂತಿನ ಉಚಿತ ಡ್ರಾ ವಿಜೇತರಿಗೆ ಬಹುಮಾನ ಹಸ್ತಾಂತರ

Posted by Vidyamaana on 2024-02-20 22:31:18 |

Share: | | | | |


ಆಶೀರ್ವಾದ ಗಿಫ್ಟ್ ಸ್ಕೀಂನ ಮೊದಲ ಕಂತಿನ ಉಚಿತ ಡ್ರಾ ವಿಜೇತರಿಗೆ ಬಹುಮಾನ ಹಸ್ತಾಂತರ

ಪುತ್ತೂರು: ಇಲ್ಲಿನ ಮೊಯಿದೀನ್ ಬಿಲ್ಡಿಂಗಿನಲ್ಲಿರುವ ಆಶೀರ್ವಾದ ಗಿಪ್ಟ್ ಸ್ಕೀಂ ಕಚೇರಿಯಲ್ಲಿ ಅತಿಥಿಗಳ ಸಮ್ಮುಖದಲ್ಲಿ ಮೊದಲ ಕಂತಿನ ಉಚಿತ ಡ್ರಾ ಫೆ. 15ರಂದು ನಡೆಯಿತು.

ಎರಡು ಬಂಪರ್ ಡ್ರಾದಲ್ಲಿ ಆ್ಯಕ್ಸಸ್ 125 ಅನ್ನು ಅಕ್ಷತಾ ಸುಳ್ಯ (ನಂ. 3091) ಹಾಗೂ 1 ಲಕ್ಷ ರೂ.ವನ್ನು ದಯಾನಂದ ಕಾಸರಗೋಡು (ನಂ. 2326) ಪಡೆದುಕೊಂಡರು.

ಉಳಿದಂತೆ ಅದೃಷ್ಟವಂತ 50 ಜನರು ಆಕರ್ಷಕ ಗಿಫ್ಟ್ ಆಗಿ ಚಿನ್ನದ ಕಾಯ್ನ್ ವಿಜೇತರಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


 ಸ್ಕೀಮಿಗೆ ಸೇರಲು ಅವಕಾಶ ಇದ್ದು ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಿ


https://chat.whatsapp.com/JKb4VrhBUhl0vSlIV1zvlK

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

Posted by Vidyamaana on 2024-05-04 21:54:38 |

Share: | | | | |


ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಸಾಧು ಸ್ವಭಾವದ ‘ಅಣ್ಣು’ ಎಂಬ ಹೆಸರಿನ ಹೋರಿಯೊಂದು ನಾಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ.ಎ.30ರಿಂದ ಈ ಹೋರಿ ನಾಪತ್ತೆಯಾಗಿದೆ ಎನ್ನಲಾಗುತ್ತಿದೆ.

ಚಳಿಗಾಲದಲ್ಲಿ ಆರೋಗ್ಯದ ರಕ್ಷಣೆ ಹೇಗೆ? ಇಲ್ಲಿದೆ ನೋಡಿ ಟಿಪ್ಸ್…

Posted by Vidyamaana on 2023-01-19 09:36:46 |

Share: | | | | |


ಚಳಿಗಾಲದಲ್ಲಿ ಆರೋಗ್ಯದ ರಕ್ಷಣೆ ಹೇಗೆ? ಇಲ್ಲಿದೆ ನೋಡಿ ಟಿಪ್ಸ್…

    ಚಳಿಗಾಲದಲ್ಲಿ ಸಹಜವಾಗಿಯೇ ವಾತಾವರಣದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ದೇಹದ ಉಷ್ಣತೆ ದೇಹದಲ್ಲೇ ಉಳಿಯುತ್ತದೆ. ಈ ಕಾಲದಲ್ಲಿ ಜೀರ್ಣಶಕ್ತಿ ಹೆಚ್ಚಾಗಿ ಹಸಿವು ಹೆಚ್ಚಾಗುತ್ತದೆ. ಈ ಕಾಲದಲ್ಲಿ ಸಿಹಿ, ಹುಳಿ, ಉಪ್ಪು ಇರುವ ಆಹಾರ ಹೆಚ್ಚು ಸೇವಿಸಬೇಕು. ಬಿಸಿಯಾದ ಆಹಾರ ಸೇವನೆ ಅವಶ್ಯಕ. 

ದ್ವಿದಳ ಧಾನ್ಯ  

ಹೊಸ ಅಕ್ಕಿ, ಗೋಧಿ, ರಾಗಿ ಮತ್ತು ಬೇಳೆಕಾಳುಗಳ ಬಳಕೆ ಸೂಕ್ತ, ಹೊಸ ಅಕ್ಕಿ, ಗೋಧಿಯಿಂದ ತಯಾರಿಸಿದ ಇಡ್ಲಿ, ದೋಸೆ, ಚಪಾತಿ, ವಡೆ, ಪೂರಿಗಳನ್ನು ಸೇವಿಸಬಹುದು. ಉದ್ದಿನಿಂದ ತಯಾರಿಸಿದ ಉಂಡೆ ಹೆಚ್ಚು ಪುಷ್ಟಿಕರವಾಗಿರುತ್ತವೆ. ಉದ್ದಿನಬೇಳೆಯನ್ನು  ಸಣ್ಣಗಿನ ಉರಿಯ ಮೇಲೆ ಚೆನ್ನಾಗಿ ಹುರಿದು ಪುಡಿ ಮಾಡಿಕೊಳ್ಳಬೇಕು. ಇದಕ್ಕೆ ತುಪ್ಪ, ಸಕ್ಕರೆ ಪುಡಿ, ಏಲಕ್ಕಿ, ದ್ರಾಕ್ಷಿ, ಬಾದಾಮಿ ಕೇಸರಿ ಹಾಕಿ ಉಂಡೆ ಕಟ್ಟಬೇಕು. ಎಳ್ಳು ಹಾಕಿ ತಯಾರಿಸಿದ ಚಕ್ಕುಲಿ, ಕಜ್ಜಾಯ, ಎಳ್ಳುಂಡೆ ಪುಳಿಯೊಗರೆ, ತಂಬುಳಿಗಳ ಬಳಕೆಯು ಒಳ್ಳೆಯದು. ತರಕಾರಿ

ಎಲ್ಲ ಬಗೆಯ ಸೊಪ್ಪುಗಳು, ಸೋರೆಕಾಯಿ, ಬೂದಗುಂಬಳ, ಎಲಕೋಸು, ಬೆಂಡೆಕಾಯಿ, ಹೂಕೋಸು, ಸೀಮೆ ಬದನೆಕಾಯಿ ಸೇವಿಸಬೇಕು. ಕಡಲೆಕಾಯಿ, ಅವರೆಕಾಯಿ, ಆಲುಗೆಡ್ಡೆ, ಗೆಣಸು, ತೊಗರಿಕಾಯಿಗಳು ನಿಸರ್ಗವೇ ನಮಗೆ ಕೊಟ್ಟಂತಹ ವರ. ಇವುಗಳಲ್ಲಿರುವ ಜಿಡ್ಡಿನ ಅಂಶವು ದೇಹಕ್ಕೆ ಅವಶ್ಯವಿರುವ ಜಿಡ್ಡಿನಾಂಶವನ್ನು ಪೂರೈಸುತ್ತದೆ. ಅವರೆಕಾಯಿಯಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಬಿಸಿಯಾಗಿಯೇ ತಿನ್ನಬೇಕು. ಅವರೆ ಜೀರ್ಣಕ್ಕೆ ಕಷ್ಟಕರವಾದ್ದರಿಂದ ಇದನ್ನು ತಿಂದ ನಂತರ ದೈಹಿಕ ಶ್ರಮವೂ ಅಗತ್ಯ.

ಹಣ್ಣು 

ದ್ರಾಕ್ಷಿ, ಕಿತ್ತಳೆ, ಸೀಬೆ, ಸೇಬುಗಳು, ಎಲಚಿಗಳು ಚಳಿಗಾಲದಲ್ಲಿ ದೊರೆಯುವ ಹಣ್ಣುಗಳು, ಕಿತ್ತಲೆ, ಸೀಬೆಯಲ್ಲಿ ಜೀವಸತ್ವ ‘ಸಿ’ ಹೆಚ್ಚಾಗಿರುತ್ತದೆ. ಶೀತದಿಂದ ಉಂಟಾಗುವ ತೊಂದರೆಗಳನ್ನು ದೂರಮಾಡುತ್ತವೆ. ಸೇಬಿನಲ್ಲಿ ‘ಬಿ’ ಜೀವಸತ್ವ, ರಂಜಕ, ಪೊಟ್ಯಾಸಿಯಂ ಹೆಚ್ಚಿನ ಪ್ರಮಾಣದಲ್ಲಿದೆ. ಇವು ನರಗಳ ಸಹಜ ಕ್ರಿಯೆಗೆ ಪೂರಕ. ಆದ್ದರಿಂದ ನರದೌರ್ಬಲ್ಯವಿರವವರಿಗೆ ಸೇಬು ಅತ್ಯುತ್ತಮ.

ಹುಗ್ಗಿ

ಚಳಿಗಾಲದಲ್ಲಿ ಹೆಸರು ಬೇಳೆಯಿಂದ ತಯಾರಿಸಿದ ಹುಗ್ಗಿಯ ಸೇವನೆ ತುಂಬ ರುಚಿಕರ ಮತ್ತು ಪುಷ್ಟಿಕರ. ಹೆಸರುಬೇಳೆಯನ್ನು ತುಪ್ಪದಲ್ಲಿ ಹುರಿದುಕೊಳ್ಳಬೇಕು. 1/2 ಭಾಗ ಹೆಸರುಬೇಳೆಗೆ 1 ಭಾಗ ಅಕ್ಕಿ ಹಾಕಿ ಬೇಯಿಸಬೇಕು. ಜೀರಿಗೆ, ಮೊಸರು, ಶುಂಠಿ, ಕರಿಬೇವು ಹಾಕಿ ತುಪ್ಪದ ಒಗ್ಗರಣೆ ಹಾಕಿ ಹುಗ್ಗಿ ತಯಾರಿಸಬೇಕು ಗೋಧಿ ಚಿತ್ರಾನ್ನ 

ಗೋಧಿಯನ್ನು ಒಡಕಲಾಗಿ ಕುಟ್ಟಿ ತರಿ ಮಾಡಿಕೊಳ್ಳಬೇಕು. ಒಂದು ಭಾಗ ಗೋಧಿ ತರಿಗೆ 5ರಷ್ಟು ನೀರು ಹಾಕಿ ಉರಿಯ ಮೇಲೆ ಬೇಯಿಸಿಕೊಳ್ಳಬೇಕು. ಗಂಜಿ ನೀರನ್ನು ಬಸಿದುಕೊಂಡು ಅದನ್ನು ಸಾರು ತಯಾರಿಸಲು ಬಳಸಬೇಕು. ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ, ಸಾಸುವೆ ಒಗ್ಗರಣೆ ಹಾಕಿ  ಅದಕ್ಕೆ ಕಾಳು ಮೆಣಸು ಇಲ್ಲವೇ ಒಣಮೆಣಸಿನಕಾಯಿ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಬೇಯಿಸಿದ ಗೋಧಿ ತರಿ ಹಾಕಿ ಚೆನ್ನಾಗಿ ಬೆರೆಸಬೇಕು. ನಂತರ ನಿಂಬರಸ, ಕೊತ್ತಂಬರಿ ಸೊಪ್ಪು ಹಾಕಬೇಕು. ಗೋಧಿ ಚಿತ್ರಾನ್ನ ಉಬ್ಬಸ ರೋಗಿಗಳಿಗೆ ಮತ್ತು ಬಹುಮೂತ್ರ ಪ್ರವೃತ್ತಿ ಇರುವವರಿಗೆ ತುಂಬ ಉತ್ತಮವಾದದು.

ಉಸಲಿ (ಗುಗ್ಗರಿ)

ಹೆಸರುಕಾಳು ಅಥವಾ ಮಡಕೆ ಕಾಳು ನೆನೆಯಿಸಿ, ಬೇಯಿಸಿ, ಸಾಸುವೆ, ಒಣಮೆಣಸಿನಕಾಯಿ ಒಗ್ಗರಣೆ ಹಾಕಿ ಉಸುಲಿ ತಯಾರಿಸಬೇಕು. ಒಣಕೊಬ್ಬರಿ ತುರಿಯನ್ನು ಮೇಲೆ ಹಾಕಬೇಕು.

ಕೆಂಡದ ರೊಟ್ಟಿ

ಒಂದು ಭಾಗ ಗೋಧಿ ಹಿಟ್ಟಿಗೆ 1/8 ಭಾಗ ಕಡಲೆ ಹಿಟ್ಟು ಬೆರೆಸಿ, ಓಮ, ಹಿಂಗು, ಉಪ್ಪು, ತುಪ್ಪಹಾಕಿ ನೀರಿನಲ್ಲಿ ಹಿಟ್ಟನ್ನು ಚೆನ್ನಾಗಿ ಕಲೆಸಿಕೊಳ್ಳಬೇಕು. ನಂತರ ದುಂಡನೆಯ ಉಂಡೆ ಮಾಡಿ ಲಟ್ಟಿಸಿ, ಕೆಂಡದಲ್ಲಿ ಸುಡಬೇಕು. ಚಳಿಗಾಲದಲ್ಲಿ ಇದನ್ನು ತಿಂದಲ್ಲಿ ತುಂಬ ಹಿತಕರ. ಇದು ಬಲವನ್ನು ಹೆಚ್ಚಿಸುವುದಲ್ಲದೆ ಜೀರ್ಣಕ್ಕೆ ಸುಲಭ ಮತ್ತು ಕಫ ಹೆಚ್ಚಾಗಿರುವ ಕೆಮ್ಮು, ನೆಗಡಿ, ಉಬ್ಬಸ ರೋಗಿಗಳಿಗೆ ವಾರರೋಗಗಳಿಂದ ಬಳಲುವವರಿಗೆ ಹೃದ್ರೋಗಿಗಳಿಗೆ ತುಂಬ ಉತ್ತಮವಾದುದು.

ಕಷಾಯದ ಪುಡಿ

ಧನಿಯ 100 ಗ್ರಾಂ. ಸುಗಂಧಿ ಬೇರು 50 ಗ್ರಾಂ, ಜೀರಿಗೆ 50 ಗ್ರಾಂ, ಕಾಳುಮೆಣಸು 50 ಗ್ರಾಂ, ಜೇಷ್ಠಮಧು 50 ಗ್ರಾಂ, ಹಿಪ್ಪಲಿ 50 ಗ್ರಾಂ, ದಾಲ್ಚಿನ್ನಿ 25 ಗ್ರಾಂ, ಒಣಶುಂಠಿ, ಏಲಕ್ಕಿ ಜಾಪತ್ರೆ, ಜಾಕಾಯಿ 10 ಗ್ರಾಂ ಎಲ್ಲವನ್ನೂ ಸೇರಿಸಿ ನುಣ್ಣಗಿನ ಪುಡಿ ಮಾಡಿಟ್ಟುಕೊಳ್ಳಬೇಕು. ಬೇಕೆನಿಸಿದಾಗ ಕಷಾಯ ತಯಾರಿಸಿ ಕುಡಿಯಬಹುದು, ಒಂದು ಲೋಟ ನೀರಿಗೆ ಅರ್ಧ ಚಮಚೆ ಪುಡಿ ಹಾಕಿ ಸಣ್ಣಗಿನ ಉರಿಯಲ್ಲಿ ಕಾಯಿಸಬೇಕು. ಮೂರ್ನಾಲ್ಕು ನಿಮಿಷಗಳ ಕುದಿತದ ನಂತರ ಬೆಲ್ಲ ಅಥವಾ ಸಕ್ಕರೆ ಬೆರೆಸಿ ಇಳಿಸಿ, ಬೇಕೆನಿಸದಲ್ಲಿ ಹಾಲು ಬೆರೆಸಬಹುದು.

ಜೇಷ್ಠಮಧು ಸೂಪ್

ಹೆಸರುಬೇಳೆ 2 ಚಮಚೆ, ತೊಗರಿಬೇಳೆ 2 ಚಮಚೆ, ಟೊಮೊಟೋ ಹಣ್ಣು 2, ಜೇಷ್ಠಮಧು 100 ಗ್ರಾಂ, ಉಪ್ಪು ರುಚಿಗೆ ತಕ್ಕಷ್ಟು, ಬೆಲ್ಲದ ಪುಡಿ ಸ್ವಲ್ಪ, ಕಾಳು ಮೆಣಸಿನ ಪುಡಿ ರುಚಿಗೆ ತಕ್ಕಷ್ಟು ಇರಲಿ. ಜೇಷ್ಠಮಧುವನ್ನು ಜಜ್ಜಿ ಹೆಸರುಬೇಳೆ, ತೊಗರಿಬೇಳೆ ಮತ್ತು ಟೊಮೊಟೋ ಹಣ್ಣನೊಂದಿಗೆ ಸಾಕಷ್ಟು ನೀರಿನಲ್ಲಿ ಬೇಯಿಸಬೇಕು. ಬೆಂದಿರುವ ಜೇಷ್ಠಮಧುವಿನಿಂದ ರಸ ಹಿಂಡಿ ತೆಗೆದು ನಾರಿನಂತಹ ಭಾಗವನ್ನು ಎಸೆದು ಬಿಡಬೇಕು. ನಂತರ ಬೆಂದಿರುವ ಎಲ್ಲ ಪದಾರ್ಥವನ್ನು ನುಣ್ಣಗೆ ರುಬ್ಬಿಕೊಳ್ಳಬೇಕು. ಇದಕ್ಕೆ ಎರಡು ಬಟ್ಟಲು ನೀರು ಸೇರಿಸಿ ಉಪ್ಪು, ಬೆಲ್ಲ ಸೇರಿಸಿ ಮತ್ತೆ ಒಲೆಯ ಮೇಲಿಟ್ಟು ಕುದಿಸಬೇಕು. ಕುದಿದ ನಂತರ ಒಲೆಯಿಂದ ಇಳಿಸಿ, ಕಾಳು ಮೆಣಸಿನ ಪುಡಿ ಬೆರೆಸಿ ಬಿಸಿಯಾಗಿರುವಾಗಲೇ ಕುಡಿಯಬೇಕು. ಚಳಿಗಾಲದಲ್ಲಿ ಸೂಪ್ ಅತ್ಯುತ್ತಮ ಪಾನೀಯ.

ಚಳಿಗಾಲದಲ್ಲಿ ಮಾಂಸಾಹಾರ ಜೀರ್ಣಶಕ್ತಿ ಚಳಗಾಲದಲ್ಲಿ ತೀಕ್ಷ್ಣವಾಗಿರುವ ಕಾರಣ ಬೇರೆ ಕಾಲಕ್ಕಿಂತ ಹೆಚ್ಚು ಮಾಂಸಾಹಾರ ಬಳಸಬಹುದು.

ಚಳಿಗಾಲದಲ್ಲಿ ಈ ಆಹಾರಗಳಿಂದ ದೂರವಿರಿ

ಚಳಿಗಾಲವು ಅನಾರೋಗ್ಯವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ ಅತ್ಯಂತ ಜಾಗುರೂಕತೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಹೊಣೆಯಾಗಿರುತ್ತದೆ. ಚಳಿಗಾಲದಲ್ಲಿ ಶೀತ, ಜ್ವರ, ಕೆಮ್ಮು ಸಾಮಾನ್ಯವಾಗಿದ್ದರೂ ಕೂಡ ಹೊಸ ಹೊಸ ಸೋಂಕಿನ ಪರಿಣಾಮ ಅನುಮಾನ ಹಾಗು ಗೊಂದಲಗಳು ಹೆಚ್ಚಾಗುತ್ತದೆ.

ದೈಹಿಕವಾಗಿಯೇ ಅಲ್ಲದೇ ಮಾನಸಿಕವಾಗಿಯೂ ಕೂಡ ಸೋಂಕುಗಳು ಕುಗ್ಗಿಸುವುದರಿಂದ, ಈ ಋತುವಿನಲ್ಲಿ ಪೋಷಕಾಂಶವುಳ್ಳ ಆಹಾರವನ್ನು ಸೇವಿಸುವುದು ಅತಿಮುಖ್ಯವಾದುದು.

ಈ ಋತುಮಾನದಲ್ಲಿ ಕೆಲವು ಅನಾರೋಗ್ಯಕರವಾದ ಆಹಾರದಿಂದ ದೂರ ಉಳಿಯಲೇಬೇಕು. ಇದರ ಕುರಿತು ಸಂಪೂರ್ಣವಾದ ಮಾಹಿತಿ ಇಲ್ಲಿದೆ ಓದಿ.

ತಂಪು ಪಾನೀಯ

ಈ ಚಳಿಗಾಲದಲ್ಲಿ ಬಹುತೇಕರು ತಂಪು ಪಾನೀಯಗಳು, ಐಸ್ ಕ್ರೀಮ್ ಗಳು, ತಂಪಾಗಿರುವ ಆಹಾರಗಳನ್ನು ಸೇವಿಸುತ್ತಾರೆ. ಇದರಿಂದ ದೇಹದ ರಕ್ಷಣಾ ವ್ಯವಸ್ಥೆಗೆ ದೊಡ್ಡ ಪೆಟ್ಟಾಗುತ್ತದೆ. ಮುಖ್ಯವಾಗಿ ಚಳಿಗಾಲದಲ್ಲಿ ದೇಹವನ್ನು ತಂಪಾಗಿಸಬಾರದು, ಬದಲಿಗೆ ಹೆಚ್ಚು ಉಷ್ಣವನ್ನು ಹೊಂದಿರುವ ಆಹಾರಗಳನ್ನು ಸೇವಿಸಬೇಕು ಎಂದು ಪೌಷ್ಟಿಕ ತಜ್ಞರೇ ಹೇಳುತ್ತಾರೆ. ಚಳಿಗಾಲದಲ್ಲಿ ತಂಪಾದ ಆಹಾರದ ಸೇವನೆಯು, ದೇಹವನ್ನು ಮತ್ತಷ್ಟು ತಂಪಾಗಿಸಿ ಅನೇಕ ರೋಗಗಳಿಗೆ ನಾಂದಿಯಾಗುತ್ತದೆ.

ಕುರುಕುಲು ತಿಂಡಿ

ಚಳಿಗಾಲದಲ್ಲಿ ಕುರುಕುಲು ತಿಂಡಿಗಳನ್ನು ತಿನ್ನಲು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಮೆಣಸಿನಕಾಯಿ ಬಜ್ಜಿ, ಎಣ್ಣೆಯಲ್ಲಿ ಕರಿದ ಖಾರದ ಆಹಾರಗಳನ್ನು ಚಳಿಗಾಲದಲ್ಲಿಯೇ ಹೆಚ್ಚಾಗಿ ತಯಾರಿಸುತ್ತಾರೆ. ಇಂತಹ ಆಹಾರ ಸಹಜವಾಗಿಯೇ ದೇಹದ ತೂಕವನ್ನು ಹೆಚ್ಚಿಸುತ್ತದೆ. ಕೊಬ್ಬಿನಾಂಶ ಹೆಚ್ಚಾಗಿರುವ ಇಂತಹ ಆಹಾರದಲ್ಲಿ ಬೊಜ್ಜಿನ ಸಮಸ್ಯೆ ಕಾರಣವಾಗಬಹುದು. ಇದರ ಪರಿಣಾಮ ಉರಿಯೂತದ ಸಮಸ್ಯೆ ಕಾಡಬಹುದು.

ಸಿಹಿ ತಿಂಡಿ

ಕುರುಕುಲು ತಿಂಡಿಯಂತೆಯೇ ಚಳಿಗಾಲದಲ್ಲಿ ಸಿಹಿ ತಿಂಡಿಗೂ ಡಿಮ್ಯಾಂಡ್ ಜಾಸ್ತಿ. ಚುಮು ಚುಮು ಚಳಿಯಲ್ಲಿ ಸಿಹಿತಿಂಡಿಗಳನ್ನು ಬಹುತೇಕರು ಕಡೆಗಣಿಸುವುದಿಲ್ಲ. ಸಕ್ಕರೆ ಭರಿತವಾಗಿರುವ ಈ ಆಹಾರಗಳು ಅತಿ ಹೆಚ್ಚಿನ ಕ್ಯಾಲೋರಿ ಹೊಂದಿದ್ದು, ತೂಕವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಸಕ್ಕರೆಯಿಂದ ತಯಾರಿಸಿದ ಪಾನೀಯಗಳು, ಸಕ್ಕರೆ ಹೆಚ್ಚಾಗಿರುವ ಆಹಾರಗಳು ಅನಾರೋಗ್ಯವನ್ನು ಉಲ್ಭಣಿಸಬಹುದು. ಸಿಹಿ ಖಾದ್ಯಗಳು ರಕ್ತದಲ್ಲಿ ಸಕ್ಕರೆಯ ಅಂಶವನ್ನು ಹೆಚ್ಚಿಸಿ, ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ.

ಬೇಕರಿ ಮತ್ತು ಡೈರಿ ಫುಡ್

ಚಳಿಗಾಲದಲ್ಲಿ ಬೇಕರಿಯಲ್ಲಿ ಸಂಸ್ಕರಿಸಿದ ಆಹಾರಗಳಿಂದ ದೂರ ಉಳಿಯಲೇಬೇಕು. ಏಕೆಂದರೆ ಮೈದಾದಿಂದ ತಯಾರು ಮಾಡಿರುವ ಇಂತಹ ಆಹಾರಗಳು ಜೀರ್ಣಕ್ರಿಯೆಯನ್ನು ತಗ್ಗಿಸುತ್ತದೆ. ಇದರ ಪರಿಣಾಮ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸಿ, ಮಲಬದ್ಧತೆಯನ್ನು ಉಂಟು ಮಾಡುತ್ತದೆ.

ಅದೇ ರೀತಿ, ಹಾಲು, ಬೆಣ್ಣೆ ನಂತಹ ಡೈರಿ ಉತ್ಫನ್ನಗಳಿಂದ ಕೂಡ ದೂರವಿರಲು ವೈದ್ಯರು ಸಲಹೆ ನೀಡುತ್ತಾರೆ. ಚಳಿಗಾಲದಲ್ಲಿ ಇಂತಹ ಆಹಾರವು ಗಂಟಲು, ಕೆಮ್ಮು ಅಥವಾ ಶೀತದಂತಹ ಸಮಸ್ಯೆ ಹೆಚ್ಚಿಸುತ್ತದೆ.

ಸಲಾಡ್ ಗಳನ್ನು ತಪ್ಪಿಸಿ

ಕೆಲವು ಪೌಷ್ಟಿಕ ತಜ್ಞರ ಪ್ರಕಾರ, ಚಳಿಗಾಲದಲ್ಲಿ ಸಲಾಡ್ ಗಳನ್ನು ಸೇವಿಸುವುದನ್ನು ತಪ್ಪಿಸುವುದೇ ಉತ್ತಮ. ತಂಪು ಆಹಾರಗಳು ಆಮ್ಲೀಯತೆಯನ್ನು ಹೊಂದಿದ್ದು, ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ. ಸಲಾಡ್ ಗಳನ್ನು ಆದಷ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ.

ಮಾಂಸ ಆಹಾರದಿಂದ ದೂರವಿರಿ

ಮಾಂಸ ಆಹಾರವು ಭಾರವಾದ ಆಹಾರವಾಗಿದ್ದು, ಜೀರ್ಣ ಮಾಡಿಕೊಳ್ಳಲು ಹೆಚ್ಚು ಸಮಯ ಬೇಕಾಗುತ್ತದೆ. ಇದು ನಿಮ್ಮ ಜೀರ್ಣಕ್ರಿಯೆಯ ಮೇಲೆ ನೇರವಾಗಿ ಪರಿಣಾಮ ಬೀರಿ, ಮಲಬದ್ಧತೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಯಾವ ಸಮಯದಲ್ಲಿ ಹಾಗು ಎಷ್ಟು ಪ್ರಮಾಣದಲ್ಲಿ ಮಾಂಸಾಹಾರವನ್ನು ಸೇವಿಸಬೇಕು ಎಂಬುದರ ಮೇಲೆ ಗಮನವಿರಲಿ. ನಿಮ್ಮ ಆರೋಗ್ಯಕರವಾದ ಜೀವನಕ್ಕೆ, ಚಳಿಗಾಲದಲ್ಲಿ ಈ ಆಹಾರಗಳ ಬದಲಾವಣೆ ಅತಿ ಮುಖ್ಯವಾದುವು.

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ; ಗೃಹ ಸಚಿವರ ಹೇಳಿಕೆ

Posted by Vidyamaana on 2023-06-01 11:25:25 |

Share: | | | | |


ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ; ಗೃಹ ಸಚಿವರ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ ಮಾಡುತ್ತೇವೆ. ಅಂತಹ ಕೆಲಸ ಮಾಡದೇ ಇದ್ದರೆ ಸುಮ್ಮನೆ ಯಾಕೆ ಬ್ಯಾನ್ ಮಾಡುತ್ತೇವೆ. ನಿಷೇಧ ಮಾಡುವ ಸಂದರ್ಭ ಬರಬಾರದು ಅಂತಾ ಅನಿಸುತ್ತದೆ ಎಂದಿದ್ದಾರೆ.ನೈತಿಕ ಪೊಲೀಸ್ ಗಿರಿ, ಕೋಮು ಚಟುವಟಿಕೆ ನಾವು ಸಹಿಸುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪಿಎಸ್ ಐ ಹಗರಣದ ಪ್ರಕರಣ ಹೈಕೋರ್ಟ್ ನಲ್ಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.



Leave a Comment: