ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ನವ ದಂಪತಿ ಗಳು ಚಿಲಿಸುತಿದ್ದ ಕಾರಿಗೆ ಟ್ಯಾಂಕರ್ ಢಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ್ಯು

Posted by Vidyamaana on 2023-04-02 05:43:36 |

Share: | | | | |


ನವ ದಂಪತಿ ಗಳು ಚಿಲಿಸುತಿದ್ದ ಕಾರಿಗೆ ಟ್ಯಾಂಕರ್ ಢಿಕ್ಕಿ ಸ್ಥಳದಲ್ಲೇ  ಇಬ್ಬರು ಮೃತ್ಯು

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರ ಬಳಿ ಇರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿಗಗಳು ಸ್ಥಳದಲ್ಲೇ ಸಾವನ್ನಪಿದ್ದು, ಓರ್ವ ಮಹಿಳೆ ಹಾಗೂ ಓರ್ವ ಪುರಷ ಗಂಭೀರ ಗಾಯಗೊಂಡಿ ಘಟನೆ ಶನಿವಾರದ ಸಂಜೆ ನಡೆದಿದೆ.

ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ - ವಿಡಿಯೋ ವೈರಲ್‌

Posted by Vidyamaana on 2024-07-30 07:52:42 |

Share: | | | | |


ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ - ವಿಡಿಯೋ ವೈರಲ್‌

ಬೆಂಗಳೂರು: ಜಾಲಹಳ್ಳಿಯ ಕುವೆಂಪು ವೃತ್ತದ ಕೆಳಸೇತುವೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಟ್ರಾಫಿಕ್‌ ಪೊಲೀಸರೇ ಅವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ವೀಡಿಯೊ ವೈರಲ್ ಆಗಿದೆ.

ರಸ್ತೆ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ಆಕ್ಷನ್‌ಗೆ ಇಳಿದಿದ್ದರು. ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದಲೇ ಮೊಳೆಗಳನ್ನು ರಸ್ತೆಯಲ್ಲಿ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಮೊಳೆಗಳನ್ನು ಸಂಗ್ರಹಿಸಿ ಜಾಗವನ್ನು ಪ್ರಯಾಣಕ್ಕೆ ಸುರಕ್ಷಿತಗೊಳಿಸಿದ್ದಾರೆ. ಇನ್ನೂ ಇರಬಹುದಾದ ಮೊಳೆಗಳ ಬಗ್ಗೆ ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ.

ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದ ಮಳೆ

Posted by Vidyamaana on 2023-03-15 09:47:10 |

Share: | | | | |


ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದ ಮಳೆ

ಪುತ್ತೂರು: ಇಲ್ಲಿನ ಪುಣಚದಲ್ಲಿ ಬುಧವಾರ ಮಧ್ಯಾಹ್ನ‌ ಮಳೆಯಾಗಿದೆ.ಪುತ್ತೂರು ತಾಲೂಕಿನಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಗುಡುಗಿನ‌ ಸದ್ದು ಕೇಳಿಬರುತ್ತಿತ್ತು.

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ. ಇನ್ನು ಕೆಲ ದಿನ ಮಳೆ ಬರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಇತ್ತೀಚೆಗೆ ಹವಾಮಾನ ಇಲಾಖೆ, ಕರಾವಳಿ ಸಹಿತ ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಇದೀಗ, ಹವಾಮಾನ ಇಲಾಖೆಯ ವರದಿ ನಿಜವಾಗಿದೆ.

ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

Posted by Vidyamaana on 2023-08-11 16:23:55 |

Share: | | | | |


ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. 


ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ‌ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 




ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು. 


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್’ಡಿ ದೇವೇಗೌಡ: ರಾಜಕಾರಣದಲ್ಲಿ ತೀವ್ರ ಕುತೂಹಲ

Posted by Vidyamaana on 2023-12-15 15:03:14 |

Share: | | | | |


ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್’ಡಿ ದೇವೇಗೌಡ: ರಾಜಕಾರಣದಲ್ಲಿ ತೀವ್ರ ಕುತೂಹಲ

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.ಸಂಸತ್ ಭವನದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.

ಕಾಶ್ಮೀರ: ರಜೆ ಮೇಲೆ ಮನೆಗೆ ಬಂದಿದ್ದ ಸೈನಿಕ ಜಾವೇದ್ ನಾಪತ್ತೆ - ಕಾರಿನಲ್ಲಿ ರಕ್ತದ ಕಲೆ ಪತ್ತೆ

Posted by Vidyamaana on 2023-07-30 05:54:23 |

Share: | | | | |


ಕಾಶ್ಮೀರ: ರಜೆ ಮೇಲೆ ಮನೆಗೆ ಬಂದಿದ್ದ ಸೈನಿಕ ಜಾವೇದ್ ನಾಪತ್ತೆ - ಕಾರಿನಲ್ಲಿ ರಕ್ತದ ಕಲೆ ಪತ್ತೆ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ರಜೆಯ ಮೇಲೆ ಮನೆಗೆ ಬಂದಿದ್ದ 25 ವರ್ಷದ ಯೋಧನನ್ನು ಆತನ ವಾಹನದಿಂದ ಅಪಹರಿಸಲಾಗಿದೆ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.


ಯೋಧ ಜಾವೇದ್ ಅಹ್ಮದ್ ವಾನಿ ಕುಲ್ಲಾಮ್ ಜಿಲ್ಲೆಯ ಅಚಾತಲ್ ಪ್ರದೇಶದ ನಿವಾಸಿಯಾಗಿದ್ದಾರೆ. ರೈಫಲ್ ಮ್ಯಾನ್ ಜಾವೇದ್ ಅಹ್ಮದ್ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್ವೆಂಟ್ರಿ ರೆಜಿಮೆಂಟ್ ಗೆ ಸೇರಿದ್ದು, ಕೆಲವು ದಿನಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದರು.


ಜಾವೇದ್ ಅಹ್ಮದ್ ವಾನಿ ಅವರನ್ನು ಲೇಹ್ (ಲಡಾಖ್) ನಲ್ಲಿ ನಿಯೋಜಿಸಲಾಗಿತ್ತು ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆ ಪರಾನ್ ಹಾಲ್ ನಲ್ಲಿ ಅವರ ಕಾರು ಪತ್ತೆಯಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.



Leave a Comment: