ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

Posted by Vidyamaana on 2024-04-11 07:34:41 |

Share: | | | | |


ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.

ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.

ಸುಳ್ಯ ಒಡಹುಟ್ಟಿದವರಿಂದಲೇ ಕೊಲೆಯಾದ ಉಸ್ಮಾನ್

Posted by Vidyamaana on 2023-07-14 08:18:06 |

Share: | | | | |


ಸುಳ್ಯ ಒಡಹುಟ್ಟಿದವರಿಂದಲೇ ಕೊಲೆಯಾದ ಉಸ್ಮಾನ್

ಸುಳ್ಯ : ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಭೀಕರ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ.


ಆಸ್ತಿ ವಿವಾದ ಹಿನ್ನಲೆಯಲ್ಲಿ ಈ ಹತ್ಯೆ ನಡೆದಿದ್ದು, ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.


ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ.


ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ ಜಾಗವಿದೆ ಎಂದು ತಿಳಿದು ಬಂದಿದೆ. ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಪತ್ನಿಯ ಖಾಸಗಿ ವಿಡಿಯೋ ತೋರಿಸಿ ವೇತನ ನೀಡಲು ಪತ್ನಿಗೆ ಪೀಡಿಸಿದ ಪತಿ!

Posted by Vidyamaana on 2023-10-07 18:09:45 |

Share: | | | | |


ಪತ್ನಿಯ ಖಾಸಗಿ ವಿಡಿಯೋ ತೋರಿಸಿ ವೇತನ ನೀಡಲು ಪತ್ನಿಗೆ ಪೀಡಿಸಿದ ಪತಿ!

ಬೆಂಗಳೂರು: ತನ್ನ ಪತ್ನಿಯ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಪತಿ ಮಹಾಶಯನೊಬ್ಬ ಪತ್ನಿಯ ಬಳಿ 10 ಲಕ್ಷ ರೂ. ಮತ್ತು ವೇತನವನ್ನು ತನಗೆ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ. 28 ವರ್ಷದ ಮಹಿಳೆ ಈ ಸಂಬಂಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪತಿ ಸ್ವರೂಪ್ ಎಂಬಾತನ ವಿರುದ್ಧ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ. ಕಳೆದ ವರ್ಷ ನವಂಬರ್ ನಲ್ಲಷ್ಟೇ ಇಬ್ಬರ ಮದುವೆಯಾಗಿತ್ತು.


ಹನಿಮೂನ್ ಗೆಂದು ಥೈಲ್ಯಾಂಡ್ ಹೋಗಿದ್ದಾಗ ಪತ್ನಿಯ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದ. ಬೆಂಗಳೂರಿಗೆ ವಾಪಸ್ ಆದ ಮೇಲೆ ಪತಿ ನಿರುದ್ಯೋಗಿಯಾಗಿರುವ ವಿಚಾರ ಪತ್ನಿಗೆ ತಿಳಿದುಬಂದಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಸರಿಯಾಗಿ ಉತ್ತರ ನೀಡಿರಲಿಲ್ಲ. ಬಳಿಕ ಖಾಸಗಿ ವಿಡಿಯೋ ತೋರಿಸಿ ವೇತನ ಮತ್ತು ತವರು ಮನೆಯಿಂದ 10 ಲಕ್ಷ ರೂ. ತಂದು ಕೊಡದೇ ಇದ್ದರೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

Posted by Vidyamaana on 2023-12-18 22:10:56 |

Share: | | | | |


ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

ಪುತ್ತೂರು : ಡಿ.22 ರಂದು ನಡೆಯಲಿರುವ ನಗರಸಭೆ ಉಪಚುನಾವಣೆಗೆ ಸಂಬಂಧಿಸಿ ನೆಲ್ಲಿಕಟ್ಟೆ ವಾರ್ಡ್ 11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರವಾಗಿ ಬಿಜೆಪಿಯಿಂದ ಮನೆ ಮನೆ ಭೇಟಿ ಮತಯಾಚನೆ ಆರಂಭಗೊಂಡಿದೆ.ಪುಡಾ ಮಾಜಿ ಅಧ್ಯಕ್ಷ ಎಸ್.ಅಪ್ಪಯ್ಯ ಮಣಿಯಾಣಿ, ಬೂತ್ ಅಧ್ಯಕ್ಷ ಗಣೇಶ್ ಕಾಮತ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯರಾದ ಮಮತಾ ರಂಜನ್, ಪೂರ್ಣಿಮಾ, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಸತೀಶ್ ನ್ಯಾಕ್ ಪರ್ಲಡ್ಕ, ರೋಹಿತ್ ನೆಲ್ಲಿಕಟ್ಟೆ, ಆರ್ಯಾವು ಗ್ರಾ.ಪಂ ಅಧ್ಯಕ್ಷೆ ಗೀತಾ, ನೆಲ್ಲಿಕಟ್ಟೆ ನಿವಾಸಿಗಳಾದ ಗೌತಮ್, ಉಲ್ಲಾಸ್ ಪೈ, ಶೇಖರ್ ಬ್ರಹ್ಮನಗರ, ಅಶೋಕ್ ಬ್ರಹ್ಮನಗರ, ಮೋಹನ್ ಮಡಿವಾಳ, ಸಂಕೇತ್ ಸಹಿತ ಹಲವಾರು ಮಂದಿ ಮನೆಮನೆ ಮತಯಾಚನೆಯಲ್ಲಿ ಭಾಗವಹಿಸಿದ್ದರು.


ವಾರ್ಡ್‌ ವಿವಿಧ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.


ವಾರ್ಡ್ 11 ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರೋಹಿತ್ ನೆಲ್ಲಿಕಟ್ಟೆ ಅವರು ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಲಿಕಟ್ಟೆ ವಾರ್ಡ್-11 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ರೋಹಿತ್ ಅವರು ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದರು. ಆದರೆ ಅವರಿಕೆ ಅವಕಾಶ ದೊರೆಯದೆ ದಾಮೋದರ್ ಭಂಡಾರ್ಕರ್ ಅವರಿಗೆ ಪಕ್ಷ ಅವಕಾಶ ನೀಡಿದೆ. ಇದರಿಂದ ಅಸಮಾಧಾನಗೊಂಡು ರೋಹಿತ್ ಅವರು ಬಿಜೆಪಿ ಅಭ್ಯರ್ಥಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

Posted by Vidyamaana on 2024-05-24 17:22:27 |

Share: | | | | |


ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ  ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ , ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು ಪ್ರಕರಣ ದಾಖಲಿಸಿದ್ದಾರೆ.

ಮಲಪ್ಪುರಂ ದೋಣಿ ದುರಂತ: ಒಂದೇ ಕುಟುಂಬದ 12 ಸದಸ್ಯರು ಸಹಿತ 22 ಮಂದಿ ಮೃತ್ಯು. ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ ಪರಿಹಾರ ಘೋಷಣೆ

Posted by Vidyamaana on 2023-05-08 09:50:17 |

Share: | | | | |


ಮಲಪ್ಪುರಂ ದೋಣಿ ದುರಂತ: ಒಂದೇ ಕುಟುಂಬದ 12 ಸದಸ್ಯರು ಸಹಿತ 22 ಮಂದಿ ಮೃತ್ಯು. ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ ಪರಿಹಾರ ಘೋಷಣೆ

ಮಲಪ್ಪುರಂ: ಮಲಪ್ಪುರಂನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 22 ಮಂದಿಯನ್ನು ಬಲಿ ತೆಗೆದುಕೊಂಡ ಪ್ರವಾಸಿ ದೋಣಿ ದುರಂತದ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ. ಅಲ್ಲದೆ ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನಿರ್ಧರಿಸಿದೆ.ತಿರುರಂಗಂಡಿ ತಾಲೂಕು ಆಸ್ಪತ್ರೆ ಮತ್ತು 12 ಸದಸ್ಯರನ್ನು ಕಳೆದುಕೊಂಡ ಕುನ್ನುಮ್ಮೆಲ್ ಕುಟುಂಬಕ್ಕೆ ಭೇಟಿ ನೀಡಿದ ನಂತರ ಇಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅಪಘಾತವನ್ನು ‘ದುರಂತ’ ಎಂದು ಬಣ್ಣಿಸಿದರು. ಚಿಕಿತ್ಸೆಯಲ್ಲಿರುವವರ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.ತಾನೂರಿನಲ್ಲಿ ನಡೆದ ಸರ್ವಪಕ್ಷಗಳ ಸಭೆಯ ನಂತರ ವಿಜಯನ್ ಅವರು ತನಿಖೆ ಮತ್ತು ಪರಿಹಾರವನ್ನು ಘೋಷಿಸಿದರು. ಸಭೆಯಲ್ಲಿ ವಿರೋಧ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.



Leave a Comment: