ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಆ.11ಕ್ಕೆ ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

Posted by Vidyamaana on 2024-08-10 22:18:07 |

Share: | | | | |


ಆ.11ಕ್ಕೆ  ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮೂಲಕ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆ.11ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯುವ ಆಟಿದ ನೆಂಪುದ ಕೂಟ ಕಾರ್ಯಕ್ರಮದಲ್ಲಿ ನಡೆಯಲಿದೆ ಕಾರ್ಯಕ್ರಮದಲ್ಲಿ ಕುಟುಂಬವನ್ನೇ ಸನ್ಮಾನಿಸುವ ಚಿಂತನೆಗೆ ಪ್ರಥಮ ಹೆಜ್ಜೆ ಬಿಲ್ಲವ ಸಂಘ ಇಟ್ಟಿದೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಆ.11ಕ್ಕೆ ವಿಶೇಷ ರೀತಿಯಲ್ಲಿ ಆಟಿದ ನೆಂಪುದ ಕೂಟ ಎಂಬ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ತನಕ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣಗುರುಗಳು ವಿದ್ಯೆಗೆ ಆದ್ಯತೆ ನೀಡಿದಂತೆ ಸಂಘದ ವಿದ್ಯಾರ್ಥಿವೇತನ ಪಡೆದು ಉನ್ನತ ಉದ್ಯೋಗ ಪಡೆದದವರನ್ನು ಕುಟುಂಬ ಸಮೇತ ಸನ್ಮಾನಿಸಲಾಗುವುದು.

ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Posted by Vidyamaana on 2024-02-23 18:47:27 |

Share: | | | | |


ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಪುರುಷರಕಟ್ಟೆ ಟೈ ಬ್ರೇಕರ್ಸ್ ನೇತೃತ್ವದಲ್ಲಿ 25ನೇ ವರ್ಷದ ಹೊನಲು ಬೆಳಕಿನ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನರಿಮೊಗರು ಶಾಲಾ ಮೈದಾನದಲ್ಲಿ ಫೆ. 24, 25ರಂದು ನಡೆಯಲಿದೆ.

ಪ್ರಕಾಶ್ ಪುರುಷರಕಟ್ಟೆ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾಟ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಫೆ. 24ರಂದು ಬೆಳಿಗ್ಗೆ ಪಂದ್ಯ ಉದ್ಘಾಟನೆಗೊಳ್ಳಲಿದೆ.

8 ತಂಡಗಳ ಕ್ರಿಕೆಟ್ ಪಂದ್ಯ ಇದಾಗಿದ್ದು, ಪ್ರಥಮ 50025 ರೂ. ಹಾಗೂ ದ್ವಿತೀಯ 25025 ರೂ. ನಗದು ಬಹುಮಾನ ನೀಡಲಾಗುವುದು. ವಿಜೇತ ತಂಡದ ಮಾಲಕರಿಗೆ ಫ್ರಿಡ್ಹ್ ಬಹುಮಾನವಾಗಿ ಲಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಕೂಟರಿನಲ್ಲಿ ಡ್ರಗ್ಸ್ ಮಾರಾಟ ; ಮಂಗಳೂರು ಮೂಲದ ಇಬ್ಬರ ಬಂಧನ

Posted by Vidyamaana on 2024-01-03 10:19:19 |

Share: | | | | |


ಸ್ಕೂಟರಿನಲ್ಲಿ ಡ್ರಗ್ಸ್ ಮಾರಾಟ ; ಮಂಗಳೂರು ಮೂಲದ ಇಬ್ಬರ ಬಂಧನ

ಮಂಗಳೂರು: ಸರಿಪಳ್ಳ ಬಳಿ ಸ್ಕೂಟರಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 


ಕಾಟಿಪಳ್ಳ ನಿವಾಸಿ ಉಮರ್ ಫಾರೂಕ್ (26), ಫೈಸಲ್ ನಗರ ನಿವಾಸಿ ಜುಟ್ಟು ಅಶ್ಫಕ್ (27) ಬಂಧಿತರು. ಇವರಿಂದ 19 ಗ್ರಾಂ ಎಂಡಿಎಂಎ ಡ್ರಗ್ಸ್ ಮತ್ತು ಕಪ್ಪು ಬಣ್ಣದ ಹೊಂಡಾ ಏಕ್ಟಿವಾ ಸ್ಕೂಟರ್ ಅನ್ನು ವಶಕ್ಕೆ ಪಡೆಯಲಾಗಿದೆ. 


ಉಮರ್ ಫಾರೂಕ್ ವಿರುದ್ಧ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಶಿರ್ವ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕೊಲೆಯತ್ನ, ಸುಲಿಗೆ, ವಾಹನ ಕಳವು, ದೊಂಬಿ ಸೇರಿದಂತೆ 25 ಪ್ರಕರಣ ದಾಖಲಾಗಿದೆ. ಅಶ್ಫಕ್ ವಿರುದ್ಧ ಮಂಗಳೂರು ಗ್ರಾಮಾಂತರ, ಸುರತ್ಕಲ್, ಬಂದರು ಠಾಣೆಗಳಲ್ಲಿ 11 ಕೇಸುಗಳಿವೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಎರಡು ಅರೆಸ್ಟ್ ವಾರೆಂಟ್ ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

Posted by Vidyamaana on 2023-12-15 15:30:12 |

Share: | | | | |


ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ನಡೆಯಲಿದೆ.ಈ ಹಿನ್ನೆಲೆ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.ಮಾಜಿ ಶಾಸಕ ಸಂಜೀವ ಮಠಂದೂರು, ಜೀವಂಧರ್ ಜೈನ್ ಸಹಿತ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದ ಸಂದರ್ಭದಲ್ಲಿ ಅವರ ಜತೆಗೆ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಸುರೇಶ್ ಪುತ್ತೂರಾಯ ಅವರು ದಿಢೀರ್ ಆಗಿ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ 


ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

Posted by Vidyamaana on 2024-04-24 03:47:23 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.


ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸುವುದು ಮತ್ತು ಇದರ ಜೊತೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಶಿರಾಡಿ ಘಾಟ್ ನಲ್ಲಿ ಆಧುನಿಕ ಮಾದರಿಯಲ್ಲಿ ಸರ್ವಋತು ರಸ್ತೆಯಾಗಿಸುವುದು ಮತ್ತು ಮಂಗಳೂರು- ಬೆಂಗಳೂರು ಮಧ್ಯೆ ಪ್ರತ್ಯೇಕ ರೈಲ್ವೇ ಹಳಿ ನಿರ್ಮಿಸುವ ಗುರಿಯಿದೆ. ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯಾದಲ್ಲಿ ಮಂಗಳೂರು ಅಭಿವೃದ್ಧಿಗೆ ವೇಗ ಸಿಗಲಿದೆ. ಮಂಗಳೂರಿನ ಬಂದರಿನ ಮೂಲಕ ಬೆಂಗಳೂರಿಗೆ ಕನೆಕ್ಟ್ ಆಗಲು ಅವಕಾಶ ಸಿಗಲಿದೆ ಎಂದರು.

ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ


ಪ್ರಮುಖವಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆಗಳ ಸ್ಥಾಪನೆ ಆಗಬೇಕಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ಉತ್ತೇಜನ ನೀಡಿ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳ ವಿಶೇಷ ಕ್ಲಸ್ಟರ್ ಸ್ಥಾಪನೆ, ಮಹಿಳೆಯರು ಮತ್ತು ಮೀನುಗಾರ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಇಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಪಡೆದವರಿಗೆ ಅವಕಾಶ ಒದಗಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳನ್ನು ಸ್ಥಾಪಿಸಲು ಜಾಗತಿಕ ಕಂಪನಿಗಳಿಗೆ ಆಹ್ವಾನ ನೀಡಲಾಗುವುದು.

ಕುಮಾರಧಾರೆಯ ಒಡಲಿಂದ ಅಕ್ರಮ ಮರಳು ತೆಗದು ಸಾಗಾಟದ ಆರೋಪ

Posted by Vidyamaana on 2024-05-11 22:37:29 |

Share: | | | | |


ಕುಮಾರಧಾರೆಯ ಒಡಲಿಂದ ಅಕ್ರಮ ಮರಳು ತೆಗದು ಸಾಗಾಟದ ಆರೋಪ

ಕಾಣಿಯೂರು: ಕುಮಾರಧಾರ ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಟಿಪ್ಪರ್‌ಗಳಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದುದನ್ನು ವಿವಿಧ ಕಡೆಗಳಲ್ಲಿ ಪತ್ತೆ ಮಾಡಿರುವ ಬೆಳ್ಳಾರೆ ಪೊಲೀಸರು ಈ ಸಂಬಂಧ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು 70 ಲಕ್ಷ ರೂ.ಮೌಲ್ಯದ 6 ಟಿಪ್ಪರ್, 1 ಇಟಾಚಿ ಮತ್ತು 60 ಸಾವಿರ ರೂ.ಮೌಲ್ಯದ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.



Recent News


Leave a Comment: