ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

Posted by Vidyamaana on 2023-04-25 16:39:04 |

Share: | | | | |


ನವವಿವಾಹಿತೆ ಹರ್ಷಿತಾ ಆತ್ಮಹತ್ಯೆ

ಪುತ್ತೂರು: ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೆದಿಲದಲ್ಲಿ ನಡೆದಿದೆ.

ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಾಗದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ – ಪುತ್ತಿಲ ಪರಿವಾರದಿಂದ ಖಂಡನೆ

Posted by Vidyamaana on 2024-01-16 20:47:54 |

Share: | | | | |


ಜಾಗದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ – ಪುತ್ತಿಲ ಪರಿವಾರದಿಂದ ಖಂಡನೆ

ಪುತ್ತೂರು : ಜಾಗದ ವಿಚಾರವಾಗಿ ನಡೆದ ತಕರಾರು ಹಲ್ಲೆ ವಿಚಾರದಲ್ಲಿ ಪುತ್ತಿಲ ಪರಿವಾರದ ಹೆಸರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಈ ವಿಚಾರವನ್ನು ಪುತ್ತಿಲ ಪರಿವಾರ ಖಂಡಿಸಿದೆ.


500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ ಅಮೋಘ ಕ್ಷಣ ಜ.22ರ ಅಯೋಧ್ಯೆಯ ಶ್ರೀ ರಾಮಮಂದಿರ ಪ್ರತಿಷ್ಠಾಪನೆ. ಮಂತ್ರಾಕ್ಷತೆ ವಿತರಿಸುವುದು ಸಹಿತ ರಾಮಮಂದಿರಕ್ಕೆ ಶುಭಕೋರಿ ಪುತ್ತೂರಿನಲ್ಲಿ ಪ್ರಪ್ರಥಮ 3ಡಿ ಬ್ಯಾನರ್ ಅಳವಡಿಸಿ ರಾಷ್ಟ್ರೀಯ ಹಬ್ಬದಂತೆ ಮನೆ ಮನೆಗಳಲ್ಲಿ ರಾಮಮಂದಿರ ಪ್ರತಿಷ್ಠಾಪನೆಯನ್ನು ಆಚರಿಸಲು ಪುತ್ತಿಲ ಪರಿವಾರ ಕಾಯುತ್ತಿದೆ.


ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರಾ ಖಂಡನೀಯ.


ಜಾಗದ ಗಲಾಟೆಗೆ ನಡೆದ ಘಟನೆ ಎಂದು ಪೊಲೀಸ್ ಎಫ್ಐಆರ್ ನಲ್ಲೇ ಉಲ್ಲೇಖ ಆಗಿದ್ದು, ಈ ಬಗ್ಗೆ ತಕ್ಷಣ ಸ್ಪಷ್ಟಿಕರಣ ಕೊಟ್ಟು ಗೊಂದಲ ನಿವಾರಿಸಿದ ದಕ್ಷಿಣ ಕನ್ನಡ ಎಸ್ಪಿ ರಿಷ್ಶಂತ್ ಅವರಿಗೆ ಧನ್ಯವಾದ ಎಂದು ಪುತ್ತಿಲ ಪರಿವಾರ ಹೇಳಿದೆ.


ದುರುದ್ದೇಶದಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ, ತೇಜೋವಧೆ, ಧಾರ್ಮಿಕ ಭಾವನೆಗೆ ಧಕ್ಕೆ ತಂದು ಪ್ರಕರಣವನ್ನು ತಿರುಚಿದವರ ವಿರುದ್ದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಪೊಲೀಸ್ ಇಲಾಖೆಯನ್ನು ಪುತ್ತಿಲ ಪರಿವಾರ ವಿನಂತಿಸಿದೆ.

ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ

Posted by Vidyamaana on 2023-07-09 03:31:43 |

Share: | | | | |


ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ವಾರ್ಷಿಕ ಮಹಾ ಸಭೆಯು ಡಾನ್ ಬಾಸ್ಕೊ ಹಾಲ್ ಬಲ್ಮಟ್ಟದಲ್ಲಿ ಜುಲೈ 6 ರಂದು ಸಂಸ್ಥೆಯ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಚುನಾವಣಾ ಉಸ್ತುವಾರಿಗಳಾದ ಶಾಹುಲ್ ಹಮೀದ್ ಕಾಶಿಪಟ್ನಾ ಹಾಗೂ ಫರ್ಝಾನ್ ಸಿದ್ದಕಟ್ಟೆ ಇವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾಗಿ ನವಾಝ್ ಕಲ್ಲರಕೋಡಿ, ಉಪಾಧ್ಯಕ್ಷರಾಗಿ ಅಶ್ರಫ್ ಉಪ್ಪಿನಂಗಡಿ, ಲತೀಫ್ ಎಚ್.ಎಸ್.ಎ ಉಪ್ಪಿನಂಗಡಿ, ಪ್ರದಾನ ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ ಕಾಶಿಪಟ್ನಾ, ಕಾರ್ಯದರ್ಶಿಯಾಗಿ ಫಯಾಝ್ ಮಾಡೂರು, ಜೊತೆ ಕಾರ್ಯದರ್ಶಿ‌ಯಾಗಿ ನಿಸಾರ್ ಉಳ್ಳಾಲ, ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್ ಪಜೀರ್, ಸದಸ್ಯರಾಗಿ ಸಲಾಂ ಚೊಂಬುಗುಡ್ಡೆ, ಅಬ್ದುಲ್ಲಾ ಭವಾನಿ, ಅಫ್ತಾಬ್ ಕುಲಾಯಿ, ಮೊಯಿದು ಸೀತಾಂಗೋಳಿ, ಫರ್ಝಾನ್ ಸಿದ್ದಕಟ್ಟೆ, ಫಾರೂಕ್ ಬಿಗ್ ಗ್ಯಾರೇಜ್, ಮುನಾಫಿಲ್ ಜೆಪ್ಪು, ಮನ್ಸೂರ್ ಕಲ್ಲಡ್ಕ, ಹಕೀಮ್ ಕೆಸಿ ರೋಡ್ ಇವರನ್ನು ಆಯ್ಕೆ ಮಾಡಲಾಯಿತು.

ಕ್ಯಾಂಪ್ ಇನ್ ಚಾರ್ಜ್ ಆಗಿ ಫರ್ಝಾನ್ ಸಿದ್ದಕಟ್ಟೆ, ಮಾಧ್ಯಮ ಉಸ್ತುವಾರಿ ಆಗಿ ಅಫೀಝ್ ಓಮಾನ್, ನಿಝಾಮುದ್ದೀನ್  ತಬೂಕ್, ಝಹೀರ್ ಶಾಂತಿನಗರ ಫಾರೂಕ್(ಫಾದ್) ಇವರನ್ನು ನೇಮಿಸಲಾಯಿತು.

ಗಲ್ಫ್(ಜಿ.ಸಿ. ಸಿ) ಸಮೀತಿ ಅಧ್ಯಕ್ಷರಾಗಿ ನಝೀರ್ ಬಿಕರ್ನಕಟ್ಟೆ ಪುನರಾಯ್ಕೆ ಯಾದರು. ಉಪಾದ್ಯಕ್ಷರಾಗಿ ದಾವೂದ್ ಬಜಾಲ್, ಇಮ್ಮು ಉಳ್ಳಾಲ್, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಸಾಲ್ಮರ, ಕಾರ್ಯದರ್ಶಿಯಾಗಿ ನೌಫಲ್ ಬಜ್ಪೆ ಇವರನ್ನು ಆಯ್ಕೆ ಮಾಡಲಾಯಿತು.

 ಆರ್ಥಿಕ ವ್ಯವಹಾರಗಳ ಇನ್ ಚಾರ್ಜ್ ಆಗಿ ಇರ್ಫಾನ್ ಕಲ್ಲಡ್ಕ, ಮೆಡಿಕಲ್ ಇನ್ ಚಾರ್ಜ್ ಆಗಿ ಜಮಾಲ್ ಕಲ್ಲಡ್ಕ, ಬ್ಲಡ್ ಬ್ಯಾಂಕ್ ಇಂಚಾರ್ಜ್ ಆಗಿ ತೌಫಿಕ್ ಕುಲಾಯಿ, ಸಿರಾಜ್ ಪಜೀರ್,  ಮನ್ಸೂರ್ ಕೋಡಿಜಾಲ್, ಸಮೀರ್ ನಾರಾವಿ, ಮುನೀರ್ ಚೊಂಬುಗುಡ್ಡೆ, ರೌಫ್ ಪಾಲ್ತಾಡ್, ಇಮ್ತಿಯಾಝ್ ಜೋಕಟ್ಟೆಯವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶಾಹುಲ್ ಹಮೀದ್ ಕಾಶಿಪಟ್ನಾ ಇವರು ಸ್ವಾಗತಿಸಿ ವಂದಿಸಿದರು.

ಮಂಗಳೂರು ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

Posted by Vidyamaana on 2023-08-22 10:50:41 |

Share: | | | | |


ಮಂಗಳೂರು  ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಮೂವರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚರಣ್ ರಾಜ್ ( 23), ಸುಮಂತ್ ಬರ್ಮನ್ (24), ಅವಿನಾಶ (24) ಬಂಧಿತ ಆರೋಪಿಗಳು.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬಿಸೀದ್ದಾರೆ. ಈ ವೇಳೆ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿದೆ.


ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

Posted by Vidyamaana on 2023-12-21 15:55:45 |

Share: | | | | |


ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

ಬೆಂಗಳೂರು : ಪ್ರಿಯತಮನಿಗೆ ಪೆಟ್ರೋಲ್ ಸುರಿದು ಪ್ರಿಯತಮೆ ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಬಳಿ ನಡೆದಿದೆ.ಕಾನ್ಸ್ ಟೇಬಲ್ ಸಂಜಯ್ ಮೃತ ದುರ್ದೈವಿ. ಕಾನ್ಸ್ ಟೇಬಲ್ ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬುವವರು ಬೆಂಕಿ ಇಟ್ಟಿದ್ದಾರೆ.ಬೇರೆಯವನ ಜೊತೆ ಲವ್ವಿಡವ್ವಿ ನಡೆಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಹೋಮ್ ಗಾರ್ಡ್ ರಾಣಿ ಈ ಕೃತ್ಯವೆಸಗಿದ್ದಾಳೆ.


ಸಂಜಯ್ ಹಾಗೂ ರಾಣಿ ಇಬ್ಬರೂ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತಿದ್ದರು. ಈ ವೇಳೆ ಸಂಜಯ್ ಹಾಗೂ ರಾಣಿ ನಡುವೆ ಪ್ರೀತಿ ಶುರುವಾಗಿತ್ತು. ವಿವಾಹವಾಗಿದ್ದರೂ ಪಿಸಿ ಸಂಜಯ್ ನನ್ನು ರಾಣಿ ಲವ್ ಮಾಡುತ್ತಿದ್ದಳು. ಇತ್ತೀಚೆಗೆ ಕಾನ್ಸ್ ಟೇಬಲ್ ಸಂಜಯ್ ನನ್ನು ರಾಣಿ ಅವೈಡ್ ಮಾಡುತ್ತಿದ್ದಳು. ಇದರಿಂದ ಬೇಸರಗೊಂಡ ಸಂಜಯ್ ಎರಡು ದಿನಗಳ ಹಿಂದೆ ರಾಣಿ ಮನೆಗೆ ಹೋಗಿದ್ದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಈ ವೇಳೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ.ಗಂಭೀರವಾಗಿ ಗಾಯಗೊಂಡಿರುವ ಕಾನ್ಸ್ ಟೇಬಲ್ ಸಂಜಯ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಬಕಾರಿ ಉಪ ಆಯುಕ್ತ ಸ್ವಪ್ನ ಸೇರಿ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Posted by Vidyamaana on 2023-10-14 21:48:24 |

Share: | | | | |


ಅಬಕಾರಿ ಉಪ ಆಯುಕ್ತ ಸ್ವಪ್ನ ಸೇರಿ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ದಾವಣಗೆರೆ: ಅಬಕಾರಿ ಉಪ ಆಯುಕ್ತೆ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಅವರನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದಿದೆ.


ಹರಿಹರದ ಅಮರಾವತಿ ಬಳಿ ಸಿಎಲ್- 7 ಮದ್ಯದ ಅಂಗಡಿ ಪರವಾನಗಿ ಮಾಡಿಕೊಡಲು ಡಿ.ಜಿ. ರಘುನಾಥ ಎಂಬುವರು ಅರ್ಜಿ ಸಲ್ಲಿಸಿದ್ದರು. ಅಬಕಾರಿಗಳು ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.


ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ನಡೆಸಿದ ಈ ದಾಳಿಯಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಭು ಬ. ಸೂರಿನ, ಮಧುಸೂಧನ್, ಎಚ್.ಎಸ್. ರಾಷ್ಟ್ರಪತಿ, ಹಾವೇರಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಪಂಡಿತ್ ಅವರ ನೇತೃತ್ವದಲ್ಲಿ ಕಾನ್‌ಸ್ಟೆಬಲ್‌ಗಳಾದ ವೀರೇಶಯ್ಯ, ಆಂಜನೇಯ, ಜಂಷಿದಾ ಖಾನಂ, ಧನರಾಜ್, ಮಲ್ಲಿಕಾರ್ಜುನ, ಲಿಂಗೇಶ, ಬಸವರಾಜ, ಗಿರೀಶ್, ವಿನಾಯಕ, ಕೃಷ್ಣನಾಯ್ಕ, ಮೋಹನ್, ಕೋಟಿನಾಯ್ಕ, ಮಾಲತೇಶ ಅರಸೀಕೆರೆ, ಎಸ್.ಎಸ್.ಕಡಕೋಳ, ಮಹಾಂತೇಶ ಕಂಬಳಿ, ಮಹಾಂತೇಶ ಕಂಬಳಿ, ಲಕ್ಷ್ಮವ್ವ ಅನವೇರಿ, ಹರ್ಷಿಯಾ, ಸರೋಜಾ ಕಾರ್ಯಾಚರಣೆಯಲ್ಲಿದ್ದರು.



Leave a Comment: