ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಶಕ್ತಿ ಯೋಜನೆಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-06-11 07:44:01 |

Share: | | | | |


ಶಕ್ತಿ ಯೋಜನೆಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಿದ್ದಾರೆ.

ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಇಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

Posted by Vidyamaana on 2023-04-04 22:43:37 |

Share: | | | | |


ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

ಬೆಳ್ತಂಗಡಿ: ಯುವತಿಯೊಬ್ಬಳೊಂದಿಗೆ ಬಸ್ಸಿನಲ್ಲಿ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4ರಂದು ನಡೆದಿದೆ. ಕಕ್ಕಿಂಜೆ ನಿವಾಸಿ ಸಾಹಿಲ್(22.ವ)ಹಲ್ಲೆಗೊಳಗಾದ ಯುವಕ.ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಹಿಲ್ ಇಂದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಬಸ್ಸಿನಿಂದ ಇಳಿದಿದ್ದಾಳೆ.ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೀಗ ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು,

ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ನೀರಜ್ ಚೋಪ್ರಾಗೆ ಬೆಳ್ಳಿ ಪದಕ; ಪಾಕಿಸ್ತಾನದ ನದೀಮ್‌ಗೆ ಒಲಿಂಪಿಕ್ ದಾಖಲೆಯ ಬಂಗಾರ

Posted by Vidyamaana on 2024-08-09 07:46:30 |

Share: | | | | |


ನೀರಜ್ ಚೋಪ್ರಾಗೆ ಬೆಳ್ಳಿ ಪದಕ; ಪಾಕಿಸ್ತಾನದ ನದೀಮ್‌ಗೆ ಒಲಿಂಪಿಕ್ ದಾಖಲೆಯ ಬಂಗಾರ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್‌ ನ ಬಹುನಿರೀಕ್ಷಿತ ಜಾವೆಲಿನ್ ಥೋನಲ್ಲಿ ಭಾರತದ ನೀರಜ್ ಚೋಪ್ರಾ 89.45 ಮೀಟ‌ರ್ ಎಸೆದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.


ಪಾಕಿಸ್ತಾನದ ನದೀಮ್ ಅರ್ಷದ್ 92.97 ಮೀಟರ್ ದೂರ ಜಾವಲಿನ್ ಎಸೆದು, ಒಲಿಂಪಿಕ್ ರೆಕಾರ್ಡ್ ತನ್ನ ಹೆಸರಿಗೆ ಬರೆಯುವ ಮೂಲಕ ಚಿನ್ನ ಗೆದ್ದ ಸಾಧನೆ ಮಾಡಿದರು. ಈ ಹಿಂದೆ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ನಾರ್ವೆಯ ಆಂಡ್ರಿಯಾಸ್ ಥೋರ್ಕಿಲ್ಡ್ ಸೆನ್ ಅವರು 90.57 ಮೀಟರ್ ದೂರಕ್ಕೆ ಜಾವಲಿನ್‌ ಎಸೆದು ಒಲಿಂಪಿಕ್ ರೆಕಾರ್ಡ್ ಮಾಡಿದ್ದರು.ನೀರಜ್ ಚೋಪ್ರಾ ಅವರು ಈ ಕ್ರೀಡಾಕೂಟದ ಫೈನಲ್ ನಲ್ಲಿ 3 ಫೌಲ್ ಮಾಡಿದರು. ಎರಡು ಎಸೆತ ಮಾತ್ರ ಮಾನ್ಯವಾಗಿತ್ತು.

ಕೈದಿಗಳಿಗೆ ಸಿಹಿ ಸುದ್ದಿ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ : ಸಂಪುಟ ಸಭೆಯಲ್ಲಿ ಒಪ್ಪಿಗೆ

Posted by Vidyamaana on 2023-07-27 15:43:28 |

Share: | | | | |


ಕೈದಿಗಳಿಗೆ ಸಿಹಿ ಸುದ್ದಿ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ : ಸಂಪುಟ ಸಭೆಯಲ್ಲಿ ಒಪ್ಪಿಗೆ

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ವಿವಿಧ ಕಾರಾಗೃಹದಲ್ಲಿರುವ ಸುಮಾರು 67 ಕೈದಿಗಳನ್ನು ಬಿಡುಗಡೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.ಬೆಂಗಳೂರು ಕೇಂದ್ರ ಕಾರಾಗೃಹದ 24 ಕೈದಿಗಳು, ಮೈಸೂರಿನ 8, ಬೆಳಗಾವಿ 2, ಕಲಬುರ್ಗಿ 5 ಶಿವಮೊಗ್ಗ 6 ಬಳ್ಳಾರಿ ಜೈಲಿನ 8 ಕೈದಿಗಳು ಹಾಗೂ ಧಾರವಾಡ ಜಿಲ್ಲಾ ಕಾರಾಗ್ರಹದ ಇಬ್ಬರು ಕೈದಿಗಳ ಬಿಡುಗಡೆ ಸಂಪುಟ ಸಭೆ ತೀರ್ಮಾನಿಸಿದೆ.ಅಲ್ಲದೆ ಸಚಿವ ಸಂಪುಟ ಸಭೆಯಲ್ಲಿ 15 ಪ್ರಮುಖ ವಿಷಯಗಳು ಬಗ್ಗೆ ಚರ್ಚೆ ಮಾಡಲಾಗಿದೆ

ಇನ್ಸ್ಟಾಗ್ರಾಮ್ ಮೂಲಕ ಪರಿಚಯ

Posted by Vidyamaana on 2023-06-29 11:23:59 |

Share: | | | | |


ಇನ್ಸ್ಟಾಗ್ರಾಮ್ ಮೂಲಕ ಪರಿಚಯ

ಮಂಗಳೂರು : ಇನ್​ಸ್ಟಾಗ್ರಾಂನಲ್ಲಿ ಯುವತಿಯನ್ನು ಪರಿಚಯಮಾಡಿಕೊಂಡು ಬಳಿಕ ಪ್ರೀತಿ ಪ್ರೇಮದ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಡಬ ಮೂಲದ ವ್ಯಕ್ತಿ ಅನೀಶ್​ ರೆಹಮಾನ್​ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಅನೀಶ್​ ಇನ್​ಸ್ಟಾಗ್ರಾಂ ಮೂಲಕ ಯುವತಿಯ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಈ ಸ್ನೇಹ ಪ್ರೇಮಕ್ಕೂ ತಿರುಗಿತ್ತು. ಆಕೆಯನ್ನು ಭೇಟಿ ಕೂಡ ಮಾಡಿದ್ದ ಅನೀಶ್​ ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾರೆ. ಹೋಟೆಲ್​​​ನಲ್ಲಿ ಯುವತಿಯೊಂದಿಗೆ ರೂಮ್​ ಮಾಡಿದ್ದ ಈ ಪಾಪಿ ನಿರಂತರ 20 ದಿನಗಳ ಕಾಲ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.ಆದರೆ ಅನೀಶ್​ ತನಗೆ ಮೋಸ ಮಾಡಿದ್ದಾನೆ ಎಂದು ತಿಳಿಯುತ್ತಿದ್ದಂತೆಯೇ ಯುವತಿಯು ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾಳೆ. ಬಂಧಿತ ಅನೀಶ್​ ವಿರುದ್ಧ ಐಪಿಸಿ ಸೆಕ್ಷನ್​ 506, 417 ಹಾಗೂ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೆ ಬಂಧಿತ ಅನೀಶ್​ ರೆಹಮಾನ್​ ಈ ಹಿಂದೆ ಕಾವೂರು ಪೊಲೀಸ್​ ಠಾಣೆಯಲ್ಲಿ ಗಾಂಜಾ ಸೇವನೆ ಪ್ರಕರಣ ಅಡಿಯಲ್ಲಿ ಅರೆಸ್ಟ್​ ಆಗಿದ್ದ ಅನ್ನೋದು ತನಿಖೆ ವೇಳೆ ತಿಳಿದು ಬಂದಿದೆ.

ಕಾಂಗ್ರೆಸ್‌ 2ನೇ ಪಟ್ಟಿ;ಪುತ್ತೂರು ಸಹಿತ ಎಲ್ಲಾ ಅಭ್ಯರ್ಥಿಗಳ ಆಯ್ಕೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

Posted by Vidyamaana on 2023-04-03 15:35:33 |

Share: | | | | |


ಕಾಂಗ್ರೆಸ್‌ 2ನೇ ಪಟ್ಟಿ;ಪುತ್ತೂರು ಸಹಿತ ಎಲ್ಲಾ ಅಭ್ಯರ್ಥಿಗಳ ಆಯ್ಕೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

ಬೆಂಗಳೂರು :ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ. ಬೆಂಗಳೂರು: ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಏಪ್ರಿಲ್ 9ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೋಲಾರಕ್ಕೆ ಭೇಟಿ ನೀಡುತ್ತಿದ್ದು, ಇದಕ್ಕೂ ಮುನ್ನವೇ ಪಟ್ಟಿ ಬಿಡುಗಡೆ ಮಾಡಲು ರಾಜ್ಯ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಇಂದು ಸಂಜೆಯೇ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಮೊಕ್ಕಾಂ ಹೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಸಿದ್ದರಾಮಯ್ಯನವರು ಎರಡನೇ ಕ್ಷೇತ್ರ ಕೋಲಾರದಿಂದ ಸ್ಪರ್ಧಿಸುವ ವಿಚಾರ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರುವ ವದಂತಿ, ಚನ್ನಪಟ್ಟಣ ಸೇರಿದಂತೆ ಪ್ರಮುಖ ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ.ಇದಷ್ಟೇ ಅಲ್ಲದೆ. ಕೆಆರ್ ಪೇಟೆ, ಯಶವಂತಪುರ ಮತ್ತು ಕೆಆರ್ ಪುರಂ ಕ್ಷೇತ್ರಗಳಿಗೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ನಿರ್ಧರಿಸುವ ಸಾಧ್ಯತೆಯಿದೆ. ಸಚಿವರಾದ ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಮತ್ತು ಬೈರತಿ ಬಸವರಾಜ್ ಅವರು ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆಂಬ ಮಾತುಗಳು ಕೇಳಿ ಬಂದಿದ್ದು, ಅವರಿಗೆ ಸ್ಥಾನಗಳ ಕಲ್ಪಿಸುವ ಕುರಿತಂತೆಯೂ ನಾಯಕರು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Recent News


Leave a Comment: