ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

Posted by Vidyamaana on 2024-08-29 06:24:03 |

Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ.33 ವರ್ಷದ ಸಾರಾ ಬಂಗಾಳಿ ಭಾಷೆಯ ಸುದ್ದಿವಾಹಿನಿಯ ನ್ಯೂಸ್‍ರೂಂ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ರಾಜ್ಯ ಸರ್ಕಾರ ಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ

Posted by Vidyamaana on 2024-02-29 15:37:23 |

Share: | | | | |


ರಾಜ್ಯ ಸರ್ಕಾರ ಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಇಂತಹ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದರು.ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು.ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು.


ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಜಾತಿಗಣತಿ ವರದಿಯಲ್ಲಿ ಏನಿದೆ.?

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವಂತ ಜಾತಿಗಣತಿ ವರದಿಯಲ್ಲಿ ಜಾತಿವಾರು ಸಂಖ್ಯೆಯನ್ನು ನಮೂದಿಸಲಾಗಿದೆ ಎನ್ನಲಾಗುತ್ತಿದೆ.ಈ ವರದಿಯಲ್ಲಿ ಎಸ್ಸಿ, ಎಸ್ಟಿ ಹೊರತುಪಡಿಸಿ ಜಾತಿವಾರು ಲಕ್ಷಣಗಳನ್ನು ಸಮೀಕ್ಷೆ ಮಾಡಿ ನೀಡಲಾಗಿದೆ. ಎಸ್ಸಿ ವರ್ಗದ ಪ್ರಮುಖ ಲಕ್ಷಣಗಳು ವರದಿಯಲ್ಲಿವೆ ಎನ್ನಲಾಗುತ್ತಿದೆ.

ಇದಲ್ಲದೇ ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆಯ ಸೇರಿದಂತೆ ರಾಜ್ಯದ ವಿವಿಧ ಜಾತಿಗಳ ಬಗ್ಗೆ ವರದಿಯಲ್ಲಿ ಮಹತ್ವದ ಅಂಶಗಳನ್ನು ವಿವರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ವರದಿ ಬಹಿರಂಗಗೊಂಡ ನಂತ್ರ ಖಚಿತ ಮಾಹಿತಿ ಹೊರಬೀಳಬೇಕಿದೆ.

WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-04-29 13:35:21 |

Share: | | | | |


WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸೋಷಿಯಲ್ ಮೀಡಿಯಾದಲ್ಲಿ ಬಹಳ ಆತಂಕಕಾರಿ ವೀಡಿಯೊ ವೈರಲ್ ಆಗಿದ್ದು, ಇದನ್ನು ನೋಡಿದ ಯಾರ ರಕ್ತವನ್ನು ಕುದಿಯುವಂತೆ ಮಾಡುತ್ತದೆ ಕೂಡ. ವೈರಲ್‌ ವಿಡಿಯೋದಲ್ಲಿ ಯುವಕನೊಬ್ಬ ತನ್ನ ವಯಸ್ಸಾದ ತಂದೆಯನ್ನು ಕ್ರೂರವಾಗಿ ಹೊಡೆಯುವುದನ್ನು ಕಾಣಬಹುದು. ಮಗ ತನ್ನ ತಂದೆಯ ಮುಖಕ್ಕೆ ಹೊಡೆದ ರೀತಿಯನ್ನು ನೋಡಿದರೆ, ನೀವು ಕೋಪಗೊಳ್ಳವುಉದು ಸಹಜ, ಘಟನೆಯಲ್ಲಿ ವೃದ್ಧರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

Posted by Vidyamaana on 2023-08-24 13:18:04 |

Share: | | | | |


ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

ಪುತ್ತೂರು: ಪುತ್ತೂರಿನಲ್ಲಿ ಯುವತಿಯೋರ್ವಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಒಂದೂವರೆಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ.

ಪುತ್ತೂರು ನಗರದಲ್ಲಿ ಹಾಡುಹಗಲೇ ನಡೆಯಬಾರದ ಘಟನೆ ನಡೆದಿರುವುದು ಅತ್ಯಂತ ದುಖದ ವಿಚಾರವಾಗಿದೆ. ಇಂಥಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರದಿಂದ ಇರಬೇಕಾಗುತ್ತದೆ. ತಮ್ಮ ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ನಾನು ಸಾಂತ್ವನವನ್ನು ಹೇಳುತ್ತಿದ್ದೇನೆ. ಪುತ್ತೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಅಪರಾಧ ಚಟವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ಸದಾ ಎಚ್ಚರದಿಂದ ಇದ್ದರೂ ಈ ಕೃತ್ಯ ನಡೆದಿದೆ. ಆರೋಪಿಯನ್ನು ಬಂಧಿಸುವಲ್ಲಿ ಮುತುವರ್ಜಿವಹಿಸಿದ ಜಿಲ್ಲಾ ಎಸ್ ಪಿ ಸಿ ಬಿ ರಿಷ್ಯಂತ್ ಹಾಗೂ ಡಿವೈಎಸ್‌ಪಿ ಗಾಣಾ ಪಿ ಕುಮಾರ್ ಹಾಗೂ ಪೊಲೀಸ್ ಇಲಾಖೆಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಶಾಸಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಅರೆಸ್ಟ್

Posted by Vidyamaana on 2023-11-14 19:01:09 |

Share: | | | | |


ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಅರೆಸ್ಟ್

ಬೆಳಗಾವಿ/ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ  ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್​​ ಏರ್​ಪೋರ್ಟ್​ ಸೆಕ್ಯೂರಿಟಿಯಲ್ಲಿಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌ ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. . ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.


ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು,  ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.


ನವೆಂಬರ್​ 12ರಂದು ನೇಜಾರಿನ ತೃಪ್ತಿ ಲೇಔಟ್‌ ನಲ್ಲಿರುವ  ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.

SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

Posted by Vidyamaana on 2023-08-08 11:28:41 |

Share: | | | | |


SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್​ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.


ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. 


ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.


ಪ್ರಕರಣದ ಹಿನ್ನೆಲೆ : ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿ ಮತ್ತು ನಿರಂತರ ಕಿರುಕುಳ ನೀಡಲಾಗುತ್ತಿದೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಖಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.



Leave a Comment: