ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಸುದ್ದಿಗಳು News

Posted by vidyamaana on 2024-07-05 10:22:02 |

Share: | | | | |


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Share: | | | | |


ಬೆಳ್ತಂಗಡಿ : ಗುರುವಾಯನಕೆರೆ ಕಾಲೇಜು ವಿದ್ಯಾರ್ಥಿನಿ ಉಜ್ಮಾ ಅನುಮಾನಸ್ವವಾಗಿ ಸಾವು

Posted by Vidyamaana on 2023-04-28 17:02:00 |

Share: | | | | |


ಬೆಳ್ತಂಗಡಿ : ಗುರುವಾಯನಕೆರೆ ಕಾಲೇಜು ವಿದ್ಯಾರ್ಥಿನಿ ಉಜ್ಮಾ ಅನುಮಾನಸ್ವವಾಗಿ ಸಾವು

ಬೆಳ್ತಂಗಡಿ : ಮೇಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ಬರೆಯಲು ಹಾಸ್ಟೆಲ್ ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಸ್ವದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಏ.28 ರಂದು ಬೆಳಗ್ಗೆ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾಸಂಸ್ಥೆಯ ಹಾಸ್ಟೆಲ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಮೇಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ಮೇ.7 ರಂದು ನಡೆಯಲಿದ್ದು. ನವಂಬರ್ ತಿಂಗಳಲ್ಲಿ ಪೂರ್ವ ತಯಾರಿ ಮಾಡಲು ಎಕ್ಸೆಲ್ ಕಾಲೇಜಿನ ಹಾಸ್ಟೆಲ್ ಗೆ ಬಂದಿದ್ದ ವಿದ್ಯಾರ್ಥಿನಿ ಉಮೆ ಉಜ್ಮಾ (19) ಏ. 28 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಹಾಸ್ಟೆಲ್ ನ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಗಂಭೀರ ಗಾಯಗೊಂಡಿದ್ದು ತಕ್ಷಣ ಆಡಳಿತ ಮಂಡಳಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೆ ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿನಿ ಉಜ್ಮಾ ಸಾವನ್ನಪ್ಪಿದ ಎನ್ನಲಾಗಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು ಸೀಮಾ ಪಾರ್ವಿನ್ ದಂಪತಿಗಳ ಮಗಳಾದ ಉಮೆ ಉಜ್ಮಾ (19) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ.

ವಿದ್ಯಾರ್ಥಿನಿ ಪರೀಕ್ಷೆಯ ವಿಚಾರದಲ್ಲಿ ಭಯದಿಂದ ಮನನೊಂದು ಆತ್ಮಹತ್ಯೆ  ಅಥವಾ ಕಟ್ಟಡದಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಶಂಕೆ ಇದ್ದು ಸೂಕ್ತ ತನಿಖೆ ನಡೆಸಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ತಂದೆ ಸನಾವುಲ್ಲ ದೂರು ನೀಡಿದ್ದಾರೆ.

ಬಗೆಹರಿಯದ ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ;ಇಂದು ದೆಹಲಿಗೆ ಮಾಜಿ ಪ್ರಧಾನಿ ಎಚ್​ಡಿಡಿ

Posted by Vidyamaana on 2024-03-23 08:26:10 |

Share: | | | | |


ಬಗೆಹರಿಯದ ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ;ಇಂದು ದೆಹಲಿಗೆ ಮಾಜಿ ಪ್ರಧಾನಿ ಎಚ್​ಡಿಡಿ

ಬೆಂಗಳೂರು : ಲೋಕಸಭಾ ಚುನಾವಣೆ (Lok sabha Election 2024) ಗೆಲ್ಲಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ ಕರ್ನಾಟಕದಲ್ಲಿ (Karnataka) ಮೈತ್ರಿ ಟಿಕೆಟ್​ ಹಂಚಿಕೆ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ (HD Devegowda) ಅವರು ನವದೆಹಲಿಗೆ ತೆರಳಲಿದ್ದಾರೆ.ಇಂದು ಬೆಳ್ಳಂಬೆಳಗ್ಗೆ ಎಚ್​ಡಿಡಿ, ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಿಂದ ದೆಹಲಿಗೆ (Delhi Visit) ಪ್ರಯಾಣ ಬೆಳಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi), ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಅಂತಿಮ ಮಾತುಕತೆ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಎಚ್​ಡಿ ದೇವೇಗೌಡ ಅವರು ಭೇಟಿಯಾಗುವ ಸಾಧ್ಯತೆ ಇದ್ದು, ಈ ವೇಳೆ ಕೋಲಾರ ಟಿಕೆಟ್ ಗೊಂದಲ ಕುರಿತು ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಚರ್ಚೆ ವೇಳೆ ಎಚ್​ಡಿಡಿ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್​​ ಜೆಡಿಎಸ್​ಗೆ ಬೇಡ ಆ ಬದಲು ಕೋಲಾರ ಕ್ಷೇತ್ರದ ಟಿಕೆಟ್ ಕೊಡಿ ಎಂದು ಬೇಡಿಕೆ ಮುಂದಿಡಲಿದ್ದಾರೆ ಎನ್ನಲಾಗಿದೆ. ಮಾತುಕತೆ ನಡೆಸಿ ಎಚ್​ಡಿಡಿ ಇಂದು ಸಂಜೆಯೇ ಬೆಂಗಳೂರಿಗೆ ವಾಪಾಸ್ ಆಗುವ ನಿರೀಕ್ಷೆ ಇದೆ.


ಇತ್ತ, ಕಾಂಗ್ರೆಸ್‌ನಲ್ಲೂ ಬಿಜೆಪಿಯಲ್ಲೂ ಇದೀಗ ಒಂದೇ ಜಗಳ, ಟಿಕೆಟ್‌ ಗದ್ದಲ. ಬಿಜೆಪಿಗೆ ತುಮಕೂರು, ಕಾಂಗ್ರೆಸ್‌ಗೆ ಬಾಗಲಕೋಟೆಯಲ್ಲಿ ರೆಬೆಲ್‌ಗಳ ಟೆನ್ಷನ್. ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತರ ಒಳೇಟಿನ ಭಯ ಇದ್ದು, ಅತೃಪ್ತರ ಮನವೊಲಿಸುವ ಬಗ್ಗೆ ಬಿಜೆಪಿ ನಾಯಕರಿಂದ ಸಭೆ ನಡೆಯಿತು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪ್ರಮುಖರಿಂದ ಮಾತುಕತೆ ನಡೆಯಿತು.ಅತೃಪ್ತರಿಂದ ಅಭ್ಯರ್ಥಿಗಳಿಗೆ ಹಿನ್ನಡೆ ಭಯ ನಾಯಕರನ್ನು ಕಾಡ್ತಿದೆ. ಹೀಗಾಗೇ ಅತೃಪ್ತರ ಮನವೊಲಿಕೆ ಮಾಡುವ ಕಾರ್ಯತಂತ್ರ ಮಾಡಲಾಗಿದೆ. ಬಂಡಾಯ ಎದ್ದಿರೋರನ್ನು, ಅತೃಪ್ತರನ್ನು ಸಮಾಧಾನ ಮಾಡುವ ಬಗ್ಗೆ ಚರ್ಚೆ ಆಯ್ತು. ಅಭ್ಯರ್ಥಿಗಳಿಗೆ ಒಳೇಟು ಕೊಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳ ಗೆಲುವಿಗೆ ಮಾಡಬೇಕಾದ ತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಸವಾದ್ ನ ಕೊಲೆಗೈದು ಪ್ರಕರಣ

Posted by Vidyamaana on 2023-06-22 06:15:32 |

Share: | | | | |


ಸವಾದ್ ನ ಕೊಲೆಗೈದು  ಪ್ರಕರಣ

ಮೂಡಿಗೆರೆ : ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝನುಲ್ಲಾ ಎಂದು ಗುರುತಿಸಲಾಗಿದೆ. 

ಪ್ರಕರಣದಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಸವಾದ್ ನನ್ನು ಬೆಂಗ್ರೆ ಎಂಬಲ್ಲಿ ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದು ಬಂದಿದೆ. ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಬಳಿಕ ಬಂಟ್ವಾಳ ಮೂಲದ ಸವಾದ್ ಕುಟುಂಬ ಮಗನ ಮೃತದೇಹದ ಗುರುತು ಪತ್ತೆ ಮಾಡಿತ್ತು.

ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ

Posted by Vidyamaana on 2023-11-08 15:46:42 |

Share: | | | | |


ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ

ಪುತ್ತೂರು: ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿ ಜೈಲಲ್ಲಿರುವ ಅಪರಾಧಿ ರವಿ ಎಂಬಾತನನ್ನು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ರಾಡಿ ಅವರ ಮನೆಯಲ್ಲಿ 2 ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ನ್ಯಾಯಾಲಯಿಂದ ಬಾಡಿವಾರಂಟ್ ಮೂಲಕ ಪಡೆದುಕೊಂಡ ಪೊಲೀಸರು ನ.8ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಫಾಝಿಲ್ ಮಸೂದ್ ಜಲೀಲ್ ದೀಪಕ್ ರಾವ್ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ: ಆದೇಶ

Posted by Vidyamaana on 2023-06-16 17:01:20 |

Share: | | | | |


ಫಾಝಿಲ್ ಮಸೂದ್ ಜಲೀಲ್ ದೀಪಕ್ ರಾವ್ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ: ಆದೇಶ

ಮಂಗಳೂರು, ಜೂ.16: ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ



Leave a Comment: