ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಧರ್ಮಸ್ಥಳ :ಲಾರಿ ಬೈಕ್ ಡಿಕ್ಕಿ ಪ್ರಸಾದ್ ಶೆಟ್ಟಿ ಮೃತ್ಯು :ಮತ್ತೋರ್ವ ಗಂಭೀರ

Posted by Vidyamaana on 2023-03-29 12:58:46 |

Share: | | | | |


ಧರ್ಮಸ್ಥಳ :ಲಾರಿ ಬೈಕ್ ಡಿಕ್ಕಿ ಪ್ರಸಾದ್ ಶೆಟ್ಟಿ ಮೃತ್ಯು :ಮತ್ತೋರ್ವ ಗಂಭೀರ

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

ಬೆಳ್ತಂಗಡಿ ಸರ್ವೆ ಇಲಾಖೆಯ ಸರ್ವೆ ಇದ್ದ ಕಾರಣ ಕರ್ತವ್ಯ ಮುಗಿಸಿ ವಾಪಸ್ ಅಗಿವ ವೇಳೆ ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಚೈನರ್ ಅಗಿರುವ ಪ್ರಸಾದ್ ಶೆಟ್ಟಿ(27) ಸಾವನ್ನಪ್ಪಿದ್ದು , ಸಹಸವಾರ ಸರ್ವೆಯರ್ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

Posted by Vidyamaana on 2023-06-09 00:42:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 9 ರಂದು  ಬೆಳಿಗ್ಗೆ 10 ಗಂಟೆಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮ ಭಾಗಿ.

ಅಪರಾಹ್ನ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಭಾಗಿಯಾಗುವರು.

ಸುರತ್ಕಲ್ ನಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಖದೀಮರು

Posted by Vidyamaana on 2023-06-26 09:11:18 |

Share: | | | | |


ಸುರತ್ಕಲ್ ನಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಖದೀಮರು

ಪುತ್ತೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೃಷ್ಣಾಪುರ ಮೂಲದ ಹಬೀಬ್ ಹಸನ್, (ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ) ಮತ್ತು ಉಳ್ಳಾಲದ ಮೊಹಮ್ಮದ್ ಫೈಝಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಈ ಹಿಂದೆ ಮಂಗಳೂರು ಮತ್ತು ಕಾರವಾರ ಮತ್ತು ಮಂಗಳೂರು ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಹಬೀಬ್ ಹಸನ್ ವಿರುದ್ಧ ಒಟ್ಟು 35ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಝಲ್ ವಿರುದ್ಧ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 15 ಪ್ರಕರಣಗಳು ದಾಖಲಾಗಿವೆ.ಇವರ ಬಂಧನಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು.ಕಳವುಗೈದ ಮೋಟರ್ ಬೈಕ್ ಮತ್ತು ಸ್ಕೂಟರ್ ನಲ್ಲಿ ಅಲ್ಲಲ್ಲಿ ಕಳ್ಳತನ ಮಾಡುತ್ತಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ , ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿತ್ತು. ಹೀಗಾಗಿ ಮಾದವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಿದ 13 ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಆರೋಪಿಗಳಿಂದ ಒಟ್ಟು 12ಲಕ್ಷದ 48 ಸಾವಿರದ 550 ಮೌಲ್ಯದ ಚಿನ್ನಾಭರಣಗಳನ್ನು 1ಲಕ್ಷದ 34ಸಾವಿರ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು.ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್ ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

Posted by Vidyamaana on 2024-05-20 15:33:02 |

Share: | | | | |


ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್  ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

Posted by Vidyamaana on 2024-01-12 13:00:12 |

Share: | | | | |


ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

ಆಂಧ್ರ ಪ್ರದೇಶ: ಮನೆಯಲ್ಲಿ ಆಟವಾಡುತ್ತಾ ಮಗುವೊಂದು ನಿಂಬೆಹಣ್ಣು  ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆದಿದೆ.ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯದ ಸಾಕಿದೀಪ ಮತ್ತು ಗೋವಿಂದರಾಜ್​​​​ ದಂಪತಿಯ  ಜಸ್ವಿತಾ (9 ತಿಂಗಳು) ಮೃತ ಮಗು.ಎಂದಿನಂತೆ ಮನೆಯಲ್ಲಿ ಆಡುತ್ತಾ ಮನೆಯಲ್ಲಿತ್ತು. ತಾಯಿ ಮಗುವನ್ನು ನೋಡುತ್ತಾ , ಮತ್ತೊಂದು ಕಡೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಜಗಲಿಯಲ್ಲಿದ್ದ ನಿಂಬೆಹಣ್ಣನ್ನು ಹಿಡಿದು ನುಂಗಿದೆ. ಆ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಆಗಿದೆ. ಕೂಡಲೇ ತಾಯಿ ಗಂಟಲಿನಲ್ಲಿ ಸಿಲುಕಿದ್ದ ನಿಂಬೆಹಣ್ಣನ್ನು ತೆಗೆಯಲು ಯತ್ನಿಸಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರಿಕ್ಷೀಸಿದ ಬಳಿಕ ಆದಾಗಲೇ ಮಗು ಮೃತಪಟ್ಟಿದೆ ಎಂದಿದ್ದಾರೆ. ಸಾಕಿದೀಪ ಮತ್ತು ಗೋವಿಂದರಾಜ್ ದಂಪತಿಗೆ ಮದುವೆಯಾದ 7 ವರ್ಷದ ಬಳಿಕ ಮಗು ಜನಿಸಿತ್ತು. ಆದರೆ ಇಂತಹ ಆಕಸ್ಮಿಕ ದುರಂತದಲ್ಲಿ ಮಗು ಮೃತಪಟ್ಟಿರುವುದಕ್ಕೆ ಇಡೀ ಕುಟುಂಬವೇ ಶೋಕದಲ್ಲಿ ಮುಳುಗಿದೆ.

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

Posted by Vidyamaana on 2024-06-24 14:11:13 |

Share: | | | | |


ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು : ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಪ್ರಮಾಣ ವಚನ (MLC Oath Ceremony) ಬೋಧಿಸಿದರು

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.

Recent News


Leave a Comment: