ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

Posted by Vidyamaana on 2023-12-27 11:22:30 |

Share: | | | | |


ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

ಬೆಂಗಳೂರು: 2023ನೇ ಸಾಲಿನ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಪ್ರಶಸ್ತಿ ಪ್ರಕಟವಾಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಅಲ್ಲದೆ, 29 ಮಂದಿ ಮಾದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.


ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸಾರಥ್ಯವಹಿಸಿ ಪಕ್ಷ ಅಧಿಕಾರ ಸೂತ್ರ ಹಿಡಿಯಲು ಕಾರಣರಾದ ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ ಕ್ಲಬ್‌ ಸದಸ್ಯರು ಆಯ್ಕೆ ಮಾಡಿದ್ದಾರೆ. ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್‌ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ ಎಂದಿದ್ದಾರೆ.ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೆಟ್ ಬಾಲ್ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ ಕ್ಲಬ್‌ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಮಾಧ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಮಂದಿ ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 31 ರಂದು ಬೆಳಗ್ಗೆ 11:30ಕ್ಕೆ ಪ್ರೆಸ್‌ಕ್ಲಬ್‌ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.


ಪ್ರತಾಪ್ ಸಿಂಹ ಪಾಸ್ ಕೊಟ್ಟಿದ್ದರ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Posted by Vidyamaana on 2023-12-15 08:12:04 |

Share: | | | | |


ಪ್ರತಾಪ್ ಸಿಂಹ ಪಾಸ್ ಕೊಟ್ಟಿದ್ದರ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದು ಲೋಕಸಭೆಗೆ ನುಗ್ಗಿ ಆತಂಕ ಸೃಷ್ಟಿಸಿದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಅವರು, ಸಂಸದರು ಯಾವ ಹಿನ್ನೆಲೆಯಲ್ಲಿ ಅವರು ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆಯಾಗಲಿದೆ. ಯಾವುದೇ ಕಾರಣಕ್ಕೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನರು ಬಂದಾಗ ಪಾಸ್ ಕೊಡುವುದು ಸಹಜ. ಪ್ರತಾಪ ಸಿಂಹ ಪಾಸ್ ಕೊಟ್ಟ ವಿಚಾರ ತನಿಖೆಗೆ ಒಳಪಡಲಿದೆ. ಮೂರು ಬಾರಿ ಪಾಸ್ ಪಡೆದಿರುವ ಬಗ್ಗೆ ಗೊತ್ತಿಲ್ಲ. ಮೈಸೂರಿನವರು ಎನ್ನುವ ಕಾರಣಕ್ಕೆ ಪಾಸ್ ಕೊಟ್ಟೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.


ಈ ಘಟನೆ ವಿಷಾದನೀಯ, ಖಂಡನೀಯ. ಘಟನೆ ನಂತರ ಲೋಕಸಭೆ ಸ್ಪೀಕರ್, ಸಭಾ ನಾಯಕರು ಸಭೆ ನಡೆಸಿ ಸಂಸತ್ ನಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಘಟನೆಯಿಂದ ಪಾಠ ಕಲಿತುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲರ ಸಲಹೆ ಪಡೆದು ಸಂಸತ್ ರಕ್ಷಣೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಸಚಿವರು ಹೇಳಿದ್ದಾರೆ.ಇಂತಹ ಘಟನೆಗಳಲ್ಲಿ ಸ್ಪೀಕರ್ ಈ ಹಿಂದೆ ಕೈಗೊಂಡ ಕ್ರಮಗಳಂತೆ ಈ ಬಾರಿಯೂ ಕ್ರಮ ಕೈಗೊಳ್ಳಲಾಗಿದೆ. ಆಯುಧ ಸೇರಿದಂತೆ ಇತರೆ ವಸ್ತು ಪಡೆದು ಗ್ಯಾಲರಿಗೆ ಬರುವುದು ಬೇಡ. ಇಂತಹ ಘಟನೆಯಲ್ಲಿ ಅಂದಿನ ಸ್ಪೀಕರ್ ಕೈಗೊಂಡ ಪರಂಪರೆ ಪರಿಶೀಲಿಸಿ ಅದರಂತೆ ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವಾಲಯಕ್ಕೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಸ್ಪೀಕರ್ ಆದೇಶ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಪ್ರೇಯಸಿಯೊಂದಿಗೆ ಸರಸದಲ್ಲಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿರಾಯ

Posted by Vidyamaana on 2023-06-16 02:01:51 |

Share: | | | | |


ಪ್ರೇಯಸಿಯೊಂದಿಗೆ ಸರಸದಲ್ಲಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿರಾಯ

ಉತ್ತರ ಪ್ರದೇಶದ ಬಹ್ರಿಯಾಚ್‌ ಜಿಲ್ಲೆಯಲ್ಲಿ ಕಿರಿಯ ಅಭಿಯಂತರ (ಜೆಇ) ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಮಡದಿ ಇಲ್ಲದ ವೇಳೆ ಅನ್ಯ ಸ್ತ್ರೀಯೊಂದಿಗೆ ಸಲ್ಲಾಪದಲ್ಲಿ ತೊಡಗಿದ್ದ ವೇಳೆ ಪತ್ನಿ ಹಾಗೂ ಆಕೆಯ ಸಹೋದರರಿಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.ಜೆಇಗೆ ಆತನ ಭಾಮೈದನರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತನ್ನ ಮಡದಿ ತವರಿಗೆ ಹೋಗಿದ್ದೇ ತಡ, ಪ್ರೇಯಸಿಯನ್ನು ಕರೆಯಿಸಿಕೊಂಡ ಈ ಜೆಇ ಆಕೆಯೊಂದಿಗೆ ಸಲ್ಲಾಪದಲ್ಲಿ ಭಾಗಿಯಾಗಿದ್ದ. ಐದು ದಿನಗಳಿಂದ ತನ್ನ ಮನೆಯಲ್ಲಿ ಪರಸ್ತ್ರೀಯೊಬ್ಬಳು ಪತಿಯೊಂದಿಗೆ ವಾಸಿಸುತ್ತಿದ್ದಾಳೆ ಎಂದು ಅರಿತ ಪತ್ನಿ ತನ್ನ ಸಹೋದರರನ್ನು ಕರೆದುಕೊಂಡು ಮನೆಗೆ ಅಚ್ಚರಿಯ ಭೇಟಿ ಕೊಟ್ಟಿದ್ದಾಳೆ.

ಈ ವೇಳೆ ಅನ್ಯ ಸ್ತ್ರೀಯೊಂದಿಗೆ ಇದ್ದ ತನ್ನ ಪತಿಯನ್ನು ಕಂಡು ಕೆಂಡಾಮಂಡಲವಾದ ಪತ್ನಿ ತನ್ನ ಪತಿಗೆ ಚೆನ್ನಾಗಿ ಬೈದಿದ್ದಲ್ಲದೇ ಸಹೋದರರಿಂದ ಧರ್ಮದೇಟು ಹಾಕಿಸಿದ್ದಾಳೆ.

ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ರಾಜಿ ಪಂಚಾಯಿತಿ ಮಾಡಲಾಗಿದ್ದು, ತಾನು ಇನ್ನೆಂದೂ ಆ ಮಹಿಳೆಯೊಂದಿಗೆ ಸೇರುವುದಿಲ್ಲವೆಂದು ಜೆಇ ಮಾತು ಕೊಟ್ಟ ಬಳಿಕ ಆತನೊಂದಿಗೆ ಸಂಸಾರ ಮುಂದುವರೆಸಿಕೊಂಡು ಹೋಗಲು ಮಡದಿ ಒಪ್ಪಿದ್ದಾಳೆ

ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಪ್ರತೀ ಆದಿತ್ಯವಾರ ಸಂದರ್ಶನಕ್ಕೆ ಲಭ್ಯ.

Posted by Vidyamaana on 2023-11-25 02:45:17 |

Share: | | | | |


ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಪ್ರತೀ ಆದಿತ್ಯವಾರ ಸಂದರ್ಶನಕ್ಕೆ ಲಭ್ಯ.

ಪುತ್ತೂರು :ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ 

ಹಲವು ವರ್ಷಗಳಿಂದ ಮಕ್ಕಳ ಒಳರೋಗಿ ಮತ್ತು ಹೊರರೋಗಿ ವಿಭಾಗದ ಮತ್ತು ಎಮರ್ಜೆನ್ಸಿ ವಿಭಾಗದ ಮುಖ್ಯ ವೈದ್ಯರಾಗಿ ಸೇವೆ ಸಲ್ಲಿಸಿರು ಮತ್ತು ಪ್ರಸ್ತುತ ಕಕ್ಕಿಂಜೆಯಲ್ಲಿ ಆಸ್ಪತ್ರೆ ನಡೆಸುತ್ತಿರುವ ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್. ಅವರು  ಪ್ರತೀ ಆದಿತ್ಯವಾರ ಬೆಳಿಗ್ಗೆ 10.30ರಿಂದ 12.30ರವರೆಗೆ ಪುರುಷರಕಟ್ಟೆಯ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಸಂದರ್ಶನಕ್ಕೆ ಲಭ್ಯರಿರುವರು. ಸಂದರ್ಶಿಸಲು ಇಚ್ಚಿಸುವವರು ಮುಂಚಿತವಾಗಿ ಅಪಾಯಿಂಟ್ಮೆಂಟ್ ಪಡೆಯಬೇಕಾಗುತ್ತದೆ ಎಂದು ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕಿನ ಚೀಫ್ ಫಿಸಿಶಿಯನ್ ಮತ್ತು ಆಯುರ್ವೇದ ತಜ್ಞರು ಆಗಿರುವ ಡಾ. ಸುಜಯ್ ತಂತ್ರಿ ಕೆಮ್ಮಿಂಜೆಯವರು ತಿಳಿಸಿದ್ದಾರೆ.

ಮಾಹಿತಿಗೆ ಕರೆ ಮಾಡಿ 9036156242, 9844638242

BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

Posted by Vidyamaana on 2024-06-11 16:20:39 |

Share: | | | | |


BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ.

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

Posted by Vidyamaana on 2023-04-12 05:58:07 |

Share: | | | | |


ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

ಸುಳ್ಯದಲ್ಲಿ‌ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಹಾಲಿ ಸಚಿವ, ಎಸ್ ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು   ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

Recent News


Leave a Comment: