ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

Posted by Vidyamaana on 2024-01-18 07:21:45 |

Share: | | | | |


ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು.  ಈ ಸಂದರ್ಬದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷರಾದ ರಾಮ ಕೆ ಮೇನಾಲ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ ಮಂಗಳೂರು, ಪುತ್ತೂರು ಡ್ಯಾಶ್ ಮಾರ್ಕೆಂಟಿಂಗ್ ವ್ಯವಸ್ಥಾಪಕರಾದ ನಿಹಾಲ್ ಶೆಟ್ಟಿ ಕಲ್ಲಾರೆ, ದೀಕ್ಷಿತ್ ರೈ ಕುತ್ಯಾಳ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಮೇನಾಲ, ಕರ್ನೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ಲ , ವಿಕ್ರಂ ರೈ ಸಾಂತ್ಯ, ಸುರೇಶ್ ಮೇನಾಲ, ಅಬೂ ಮೇನಾಲ, ಎಂ ಪಿ ಅಬ್ದುಲ್ ಕುಂಞಿ ಪಳ್ಳತ್ತೂರು, ಗಿರೀಶ್ ರೈ ಮರ್ಕಡ,ಅಬ್ದುಲ್ ಕುಂಞಿ ಮೇನಾಲ, ಇಬ್ರಾಹಿಂ ಪಳ್ಳತ್ತೂರು ಮೊದಲಾದವರು ಉಪಸ್ತಿತರಿದ್ದರು.


ಇದೇ ಸಂದರ್ಭದಲ್ಲಿ ನೂತನ ದರ್ಗಾ ಕಟ್ಟ ಕಾಮಗಾರಿಗೆ ರೂ. ೫೦ ಸಾವಿರ ಅನುದಾನವನ್ನು ನೀಡುವುದಾಗಿ ಶಾಸಕರು ಭರವಸೆ ನೀಡಿದರು.ಜಮಾತ್ ಕಮಿತಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ನಡೀತಾ ಗ್ಯಾಂಗ್‌ ರೇಪ್‌; 7 ಮಂದಿ ರೇಪ್‌ ಮಾಡಿದ್ದಾರೆಂದು ದೂರು!

Posted by Vidyamaana on 2024-01-11 15:12:04 |

Share: | | | | |


ನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ನಡೀತಾ ಗ್ಯಾಂಗ್‌ ರೇಪ್‌; 7 ಮಂದಿ ರೇಪ್‌ ಮಾಡಿದ್ದಾರೆಂದು ದೂರು!

ಹಾವೇರಿ; ನಿನ್ನೆ ಹಾವೇರಿಯಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣ ಬೆಳಕಿಗೆ ಬಂದಿತ್ತು. ಮುಸ್ಲಿಂ ಸಮುದಾಯದ ವಿವಾಹಿತ ಮಹಿಳೆಯೊಬ್ಬರು, ಅನ್ಯಕೋಮಿನ ವಿವಾಹಿತ ವ್ಯಕ್ತಿ ಜೊತೆ ಲಾಡ್ಜ್‌ನಲ್ಲಿ ಇದ್ದದ್ದನ್ನು ತಿಳಿದ ಮುಸ್ಲಿಂ ಸಮುದಾಯದ ಏಳು ಯುವಕರು, ದಾಳಿ ಮಾಡಿದ್ದರು.ಇಬ್ಬರ ಮೇಲೂ ಹಲ್ಲೆ ಮಾಡಿದ್ದರು. ಇದರ ಎರಡು ವಿಡಿಯೋಗಳು ವೈರಲ್‌ ಆಗಿದ್ದವು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ಕೊಟ್ಟಿದ್ದು, ನನ್ನ ಮೇಲೆ ಹಲ್ಲೆ ಮಾಡಿರುವ ಏಳು ಯುವಕರು, ನನ್ನ ಮೇಲೆ ಸಾಮೂಹಿಮ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿದ್ದಾಳೆ. 


ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಇದನ್ನು ತಿಳಿದ ಕೆಲ ಯುವಕರು ಏಕಾಏಕಿ ದಾಳಿ ನಡೆಸಿ, ಇಬ್ಬರ ಮೇಲೆ ಹಲ್ಲೆ ಮಾಡಿದ್ದರು. ಇದರ ವಿಡಿಯೋಗಳು ವೈರಲ್‌ ಆಗಿದ್ದವು. ಅನಂತರ ಆ ಯುವಕರು, ಮಹಿಳೆಯನ್ನು ಕಾರಿನಲ್ಲಿ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿದ್ದಾರಂತೆ. ಖಾಸಗಿ ಅಂಗವನ್ನು ಘಾಸಿಗೊಳಿಸಿದ್ದೇ ಅಲ್ಲದೆ, ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾಳೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.


ಮಹಿಳೆಯ ಪತಿ ಕೂಡಾ ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಅರಣ್ಯದಲ್ಲಿ ನನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಅದರ ವಿಡಿಯೋ ನನ್ನ ಬಳಿ ಇದೆ ಎಂದು ಮಹಿಳೆಯ ಪತಿ ಹೇಳಿಕೊಂಡಿದ್ದಾರೆ.

ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ

Posted by Vidyamaana on 2023-07-31 05:25:54 |

Share: | | | | |


ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ

ಬಂಟ್ವಾಳ : ಮನುಷ್ಯನ ರಕ್ತವು ಇನ್ನೊಂದು ಜೀವವನ್ನು ಉಳಿಸಲು ಬಳಕೆಯಾಗಬೇಕೇ ವಿನಃ ರಸ್ತೆಯಲ್ಲಿ ಚೆಲ್ಲುವಂತಾಗಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟರು. 


ಅವರು ಕಲ್ಲಡ್ಕ ಝಮಾನ್ ಬಾಯ್ಸ್ ಇದರ ಆಶ್ರಯದಲ್ಲಿ ಬ್ಲಡ್‌ ಡೋನರ್ಸ್ ಮಂಗಳೂರು,   ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಹಾಗೂ ಯೆನೆಪೋಯ ಆಸ್ಪತ್ರೆ ಮಂಗಳೂರು ಇವುಗಳ ಸಹಕಾರದೊಂದಿಗೆ

ಮರ್ಹೂಂ ಬಿ.ಕೆ ಇದ್ದಿನಬ್ಬ ಕಲ್ಲಡ್ಕ ಇವರ ಸ್ಮರಣಾರ್ಥ ಕಲ್ಲಡ್ಕ  ಗಂಗಾಧರ ಸಂಕೀರ್ಣದ  ಮರ್ಹೂಂ ಹಾಜಿ ಅಬ್ದುಲ್ಲಾ , ಮರ್ಹೂಂ ರಾಝಿಕ್ ಕುಪ್ಪೆಟ್ಟಿ ವೇದಿಕೆಯಲ್ಲಿ ಭಾನುವಾರ ನಡೆದ ಸೌಹಾರ್ಧ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು .


    ರಕ್ತದ ಅವಶ್ಯಕತೆ ಬಂದಾಗ ಯಾರೂ ಯಾವ ಜಾತಿ, ಧರ್ಮ, ಪಂಗಡದವನ ರಕ್ತ ಎಂಬುದನ್ನು ನೋಡುವುದಿಲ್ಲವೋ, ಇದೇ ಮನೋಸ್ಥಿತಿಯನ್ನು ನೈಜ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದಾಗ ಭಾರತದ ಭವ್ಯ ಜಾತ್ಯಾತೀತ ಪರಂಪರೆಗೆ ಶಕ್ತಿ ತುಂಬಲಿದೆ ಎಂದರು.


  ಶಿಬಿರವನ್ನು ಕಲ್ಲಡ್ಕ ಮುಹಿಯದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ,

ಉದ್ಘಾಟಿಸಿದರು,  ಇರ್ಶಾದ್ ದಾರಿಮಿ ಅಲ್ ಜಝರಿ ಶುಭ ಹಾರೈಸಿದರು. ಝಮಾನ್ ಬಾಯ್ಸ್ ಅಧ್ಯಕ್ಷ ಮಹಮ್ಮದ್ ಸಜ್ಜಾದ್ ಅಧ್ಯಕ್ಷತೆ ವಹಿಸಿದ್ದರು.


    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಲಡ್ಕ ಗಂಗಾಧರ ಸಂಕೀರ್ಣದ ಮಾಲಕ ಶಾಂತರಾಮ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಸ್.ಡಿ.ಪಿ.ಐ. ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ, ಮಂಗಳೂರು ಬ್ಲಡ್‌ ಡೋನರ್ಸ್ ಅಧ್ಯಕ್ಷ ನವಾಝ್ ನರಿಂಗಾನ, ಗೋಳ್ತಮಜಲು ಹಜಾಜ್ ಸಮೂಹ ಸಂಸ್ಥೆಯ ಪಾಲುದಾರ ಇಮ್ತಿಯಾಝ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ.ಕೆ.ಜಬ್ಬಾರ್ ಬೋಳಿಯಾರ್, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಕೆ.ಸಿ.ರೋಡ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಮಾತನಾಡಿ ಶುಭ ಹಾರೈಸಿದರು.


   ಇದೇ ವೇಳೆ ಶಾಂತರಾಮ ಶೆಟ್ಟಿ, ಸಾಹುಲ್ ಹಮೀದ್ ಕಾಶಿಪಟ್ನ ಹಾಗೂ ಡಾ.ಸಮ್ರೀನಾ,  ಅವರನ್ನು ಸನ್ಮಾನಿಸಲಾಯಿತು.

241 ಮಂದಿ ರಕ್ತದಾನ ಮಾಡಿದರು.


    ಕಲ್ಲಡ್ಕ ಮೆಸ್ಕಾಂ ಶಾಖಾಧಿಕಾರಿ ಮಹಾಬಲ, ಬ್ಲಡ್ ಡೋನರ್ಸ್ ಗೌರವಾಧ್ಯಕ್ಷ ಗೌರವಾಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಉದ್ಯಮಿಗಳಾದ ಜಿ.ಎಸ್.ಸಿದ್ದೀಕ್ ಕಲ್ಲಡ್ಕ, ನವಾಝ್ ಕೆ.ಎನ್, ಬಿ.ಕೆ.ಫೈರೋಝುದ್ದೀನ್ ಬಿ.ಕೆ ನಗರ, ಕೆ.ಎಸ್.ಫೈರೋಝ್ ಕಲ್ಲಡ್ಕ, ಶಾಫಿ ಕಲ್ಲಡ್ಕ , ಎಸ್.ಆರ್. ರಫೀಕ್ ಗೋಳ್ತಮಜಲು, ವಿಟ್ಲ ಪಡ್ನೂರು ಗ್ರಾ.ಪಂ.ಮಾಜಿ ಸದಸ್ಯ ಸಿದ್ದೀಕ್ ಸರವು, ಕಾಂಗ್ರೆಸ್ ಸೇವಾದಳ ಜಿಲ್ಲಾ ಕಾರ್ಯದರ್ಶಿ ವೆಂಕಪ್ಪ ಪೂಜಾರಿ ಮೊದಲಾದವರು ಭಾಗವಹಿಸಿದ್ದರು


    ಇರ್ಫಾನ್ ಕಲ್ಲಡ್ಕ ಸ್ವಾಗತಿಸಿ, ಫಾರೂಕ್ ಎಫ್ ತ್ರೀ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ನಾಪತ್ತೆಯಾದ ನೇಹಾ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆ

Posted by Vidyamaana on 2024-05-29 13:49:17 |

Share: | | | | |


ನಾಪತ್ತೆಯಾದ ನೇಹಾ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆ

ಮಂಗಳೂರು :  ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ  ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parish

non

) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

ನಾಪತ್ತೆಯಾಗಿದ್ದ ಬಾಲಕರು ಪುತ್ತೂರಿನಲ್ಲಿ ಪತ್ತೆ ; ಚಿತ್ರದುರ್ಗಕ್ಕೆ ಹೊರಟಿದ್ದ ಮಕ್ಕಳು ಕಾಸಿಲ್ಲದೆ ಬಾಕಿ

Posted by Vidyamaana on 2023-08-23 04:01:32 |

Share: | | | | |


ನಾಪತ್ತೆಯಾಗಿದ್ದ ಬಾಲಕರು ಪುತ್ತೂರಿನಲ್ಲಿ ಪತ್ತೆ ; ಚಿತ್ರದುರ್ಗಕ್ಕೆ ಹೊರಟಿದ್ದ ಮಕ್ಕಳು ಕಾಸಿಲ್ಲದೆ ಬಾಕಿ

ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.


ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. 

ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.


ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

Posted by Vidyamaana on 2023-12-05 11:56:37 |

Share: | | | | |


ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು,  ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


ಉದ್ಯಮಿ ಗೋವಿಂದ ಬಾಬು ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟೆಂಬರ್ 13 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.


ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಮತ್ತು ಗ್ಯಾಂಗ್ ಹಣ ನೀಡದೇ ವಂಚಿಸಿತ್ತು. ಈ ಬಗ್ಗೆ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.



Leave a Comment: