ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

Posted by Vidyamaana on 2024-03-19 21:42:20 |

Share: | | | | |


ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ‌ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ‌ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ ಕ್ಷೇತ್ರವನ್ನು ಮರು ಸಂಪಾದಿಸಿಕೊಳ್ಳುವುದೇ ಕಾಂಗ್ರೆಸ್ ಮುಂದಿರುವ ಬಹುದೊಡ್ಡ ಸವಾಲು.

ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಬಂಡಾಯ ಕಾಂಗ್ರೆಸಿಗೆ ವರದಾನ ಎಂಬ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ಅರುಣ್ ಕುಮಾರ್ ಪುತ್ತಿಲ ಅವರು‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಇನ್ನು ಅಧಿಕೃತ ಮಾಹಿತಿ‌ ಹೊರಹಾಕಿಲ್ಲ.

ಜಾತಿ ಲೆಕ್ಕಾಚಾರ:

ಬಂಟ ಸಮುದಾಯದ ಕ್ಯಾ. ಚೌಟ ಅವರಿಗೆ ಬಿಜೆಪಿ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡನಿಗೆ ಟಿಕೇಟ್ ನೀಡಲು ಯೋಜನೆ ಸಿದ್ಧಪಡಿಸಿಕೊಂಡಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಂಟ ಸಮುದಾಯದ ನಳಿನ್ ಕುಮಾರ್ ಕಟೀಲ್ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಬಂಟ ಸಮುದಾಯದ ಮಿಥುನ್ ರೈ ಕಣಕ್ಕಿಳಿದಿದ್ದರು. ಆದರೆ ಮೋದಿ ಅಲೆಯ ಮುಂದೆ ಎಲ್ಲವೂ ಕೊಚ್ಚಿಕೊಂಡು‌ಹೋಗಿತ್ತು. ಬಂಟ ಸಮುದಾಯದ ಕಾಂಗ್ರೆಸ್ ಲೆಕ್ಕಾಚಾರ ಬುಡಮೇಲಾಗಿತ್ತು.

ಕರಾವಳಿಯಲ್ಲಿ ಬಂಟ, ಬಿಲ್ಲವ ಸಮುದಾಯದ ಸಂಖ್ಯೆ ಹೆಚ್ಚಿದೆ. ಹಾಗಾಗಿ ಬಂಟ ಸಮುದಾಯದ ಪ್ರತಿಸ್ಪರ್ಧಿಯಾಗಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಮಾಹಿತಿ.

ಜನಾರ್ದನ ಪೂಜಾರಿ‌ ಆಪ್ತ!

ಗುರು ಬೆಳದಿಂಗಳು ಕಾರ್ಯಕ್ರಮದ ಮೂಲಕ ಫೇಮಸ್ ಆಗಿರುವ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಎನ್ನುವ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಪದ್ಮರಾಜ್ ಹೆಸರನ್ನೇ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ.



ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

Posted by Vidyamaana on 2023-09-14 16:12:25 |

Share: | | | | |


ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

ಮಲ್ಪೆ, ಸೆ.14: ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುತ್ತಿದ್ದ ವೇಳೆ ಮೈಮೇಲೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.


ಮೃತರನ್ನು ಒರಿಸ್ಸಾದ ಕಾರ್ಮಿಕರಾದ ಬಾಬುಲ್ಲ(35) ಮತ್ತು ಭಾಸ್ಕರ (35) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ನಿರ್ಮಾಣವಾಗುತ್ತಿರುವ ಮನೆ ಯೊಂದಕ್ಕೆ ಕಂಟೈನರ್ ಲಾರಿಯಲ್ಲಿ ತಂದಿದ್ದ ಗ್ರಾನೈಟ್ ಇಳಿಸುತ್ತಿದ್ದಾಗ ಲಾರಿಯೊಳಗೆ ಗ್ರಾನೈಟ್ ಜಾರಿ ಮೈಮೇಲೆ ಬಿದ್ದಿದೆ ಎನ್ನಲಾಗಿದೆ.


ಗಂಭೀರವಾಗಿ ಗಾಯಗೊಂಡ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

Posted by Vidyamaana on 2023-05-16 09:37:41 |

Share: | | | | |


ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ ಬಂದಿಲ್ಲ. ಮುಂದಿನ ದಿನ ಇಂತಹ ಪ್ರತಿಭಟನೆ ಮಾಡಲು ತಯಾರಾಗಬೇಕೆಂಬ ಬಿಜೆಪಿಯ ನಾಯಕರ ಹೇಳಿಕೆ ನಮಗೆ ಪ್ರಯೋಜನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಹತಾಶ ಮನೋಭಾವದಿಂದ ಎನೆನೋ ಹೇಳಲು ಹೊರಟ್ಟಿದ್ದಾರೆ. ಬ್ಯಾನರ್ ಹಾಕಿದ ವಿಚಾರದಲ್ಲಿ ತಪ್ಪಿತಸ್ಥರು ಯಾರೆ ಆದರೂ ಪೊಲೀಸರು ಅವರನ್ನು ಹಿಡಿಯಬೇಕು. ನಾವಂತು ಪಕ್ಷದ ವತಿಯಿಂದ ಬ್ಯಾನರ್ ವಿಚಾರದಲ್ಲಿ ಕೈ ಹಾಕಲಿಲ್ಲ ಎಂದರು.

ಬಿಜೆಪಿ ನೀರಿನಿಂದ ಹೊರ ಬಂದ ಮೀನಿನಂತೆ ಚಡಪಡಿಸುತ್ತಿದೆ:

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಮಾತನಾಡಿ ಸಂಜೀವ ಮಠಂದೂರು ಅವರು ಈಗ ಜೋರಾಗಿದ್ದಾರೆ.ಅವರು ಶಾಸಕರಾಗಿದ್ದಾಗ ಜೋರಾಗಿರುತ್ತಿದ್ದರೆ ಅವರಿಗೆ ಶಾಸಕತ್ವದ ಟಿಕೇಟ್ ಸಿಗುತ್ತಿತ್ತು. ಆದರೆ ಈಗ ಅವರು ಬೀದಿಗೆ ಬಂದಿದ್ದಾರೆ. ಇವತ್ತು ಅಧಿಕಾರ ಬಿಟ್ಟು ನೀರಿನಿಂದ ಹೊರ ಬಂದ ಮೀನಿನಂತೆ ಆಗಿದ್ದಾರೆ. ಯಾಕೆಂದರೆ ಬ್ಯಾನರ್ ಹಾಕಿದ ವಿಚಾರದಲ್ಲಿ ಅವರು ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಹಾಕಿದ್ದು ಯಾಕೆ ಎಂದ ಅವರು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ, ಟೀಕೆ ಮಾಡುವುದು ಬೇಡ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಉಪಸ್ಥಿತರಿದ್ದರು.

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ

Posted by Vidyamaana on 2024-06-14 16:03:17 |

Share: | | | | |


ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕರು ತಮ್ಮ ಆಧಾರ್ ಕಾರ್ಡ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಗಡುವನ್ನು ಭಾರತ ಸರ್ಕಾರ ಸೆಪ್ಟೆಂಬರ್ 14, 2024 ರವರೆಗೆ ವಿಸ್ತರಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಘೋಷಿಸಿದ ಈ ವಿಸ್ತರಣೆಯು ನಿವಾಸಿಗಳಿಗೆ ಯಾವುದೇ ಶುಲ್ಕವಿಲ್ಲದೆ ತಮ್ಮ ಆಧಾರ್ ಮಾಹಿತಿ ಅಪ್ಡೇಟ ಮಾಡಲು ಹೆಚ್ಚುವರಿ ಮೂರು ತಿಂಗಳುಗಳನ್ನು ಒದಗಿಸುತ್ತದೆ.

ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ದತ್ತಾಂಶದ ಆಧಾರದ ಮೇಲೆ ಭಾರತೀಯ ನಿವಾಸಿಗಳಿಗೆ 12 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯಾದ ಆಧಾರ್ ಅನ್ನು ನೀಡಲಾಗುತ್ತದೆ. ಈ ವ್ಯವಸ್ಥೆಯು ನಕಲಿ ಗುರುತುಗಳನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ, ವಿವಿಧ ಸರ್ಕಾರಿ ಮತ್ತು ಹಣಕಾಸು ಸೇವೆಗಳನ್ನು ಪ್ರವೇಶಿಸಲು ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತ ಪ್ರಕ್ರಿಯೆಯನ್ನು ಖಚಿತಪಡಿಸುತ್ತದೆ.

ಆಧಾರ್ ಅನ್ನು ನವೀಕರಿಸುವುದು ಏಕೆ ಮುಖ್ಯ

ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

Posted by Vidyamaana on 2023-04-21 05:11:29 |

Share: | | | | |


ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿತ್ತು.

ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿ ಒಂದು ಬದಲಾವಣೆ ಮಾಡಲಾಗಿದ್ದು, ಮರು ಮೌಲ್ಯಮಾಪನದಲ್ಲಿ ಕನಿಷ್ಠ ಒಂದು ಮಾರ್ಕ್ ಬದಲಾವಣೆಯಾದರೂ ಅದನ್ನು ಮಾರ್ಕ್ ಕಾರ್ಡ್ ನಲ್ಲಿ ಅಳವಡಿಸಲಾಗುವುದುhttps://karresults.nic.in ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಬಹುದು.



Leave a Comment: