ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Posted by Vidyamaana on 2023-07-27 16:32:20 |

Share: | | | | |


ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಗುರುವಾರ ಜು 27 ರಂದು ಅರಮನೆ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆವಹಿಸಿ ಮಾತನಡಿದ ಅವರು, ಸರಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಜತೆಗೆ, ಶಾಸಕರಲ್ಲಿ ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಸಲಹೆ ನೀಡಿದರು.


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪತ್ರವನ್ನು ತಮ್ಮದಲ್ಲ ಎಂದು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿಹರಡಿದ್ದಾರೆ ಎಂದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡೀ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಸಿದರುಬಿಜೆಪಿ ಸುಳ್ಳಿನ ಕಾರ್ಖಾನೆ: ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದ ಅವರು, ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕೆಂದು ಅವರು ಹೇಳಿದರು.


ಹೊಸ ಸರಕಾರ ಬಂದ ಬಳಿಕ ನಮ್ಮಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು. ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು ಎಂದರು.

BIG NEWS : ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್‌ ನೂತನ ಸಂಸದ ಇ.ತುಕಾರಾಂ

Posted by Vidyamaana on 2024-06-14 18:14:17 |

Share: | | | | |


BIG NEWS : ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್‌ ನೂತನ ಸಂಸದ ಇ.ತುಕಾರಾಂ

ಬೆಂಗಳೂರು : ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್ಸಿನ ಇ.ತುಕಾರಾಂ ಅವರು ಇಂದು ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ಇ. ತುಕಾರಾಮ್ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

Posted by Vidyamaana on 2023-09-08 15:54:34 |

Share: | | | | |


ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

ನವದೆಹಲಿ: ಬಹುನಿರೀಕ್ಷೆಯ ಜಿ20 ಶೃಂಗಸಭೆಯು ಇದೇ ವಾರಾಂತ್ಯದಲ್ಲಿ ಸೆ.9 ಮತ್ತು 10ಎಂದು ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ನಡೆಯಲಿದೆ. ಈ ಸಂಬಂಧ ಅಗತ್ಯ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಶೃಂಗಸಭೆ ಸಲುವಾಗಿ ವಿಶ್ವದ ಕೆಲವು ಶಕ್ತಿಶಾಲಿ ಹಾಗೂ ಪ್ರಭಾವಿ ನಾಯಕರುಗಳು ಭಾರತಕ್ಕೆ ಆಗಮಿಸಲಿದ್ದಾರೆ.ಅಮೆರಿಕಾ (US) ಅಧ್ಯಕ್ಷ ಜೋ ಬೈಡೆನ್, ಇಂಗ್ಲೆಂಡ್ (UK) ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇನ್ನಿತರ ರಾಷ್ಟ್ರಗಳ ಮುಖ್ಯಸ್ಥರು ವರ್ಷದ ಪ್ರಮುಖ ಜಾಗತಿಕ ಕೂಟಗಳಲ್ಲಿ ಒಂದಾಗಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಆರ್ಥಿಕ ಕುಸಿತ, ಇಂದನ ಬೆಲೆ ಸೇರಿದಂತೆ ಜಾಗತಿಕ ವಿಚಾರಗಳ ಕುರಿತು ಎರಡು ದಿನ ಚರ್ಚೆ ನಡೆಸಲಿದ್ದಾರೆ.


ಹಾಗಾದರೆ ಭಾರತದಲ್ಲಿಯ ನಡೆಯುತ್ತಿರುವ ಇಂಥಹ ಮಹತ್ವ ಸಮ್ಮೇಳನಕ್ಕೆ ಯಾವ ಗಣ್ಯರು ಹಾಜರಾಗುತ್ತಾ, ಯಾರು ಗೈರಾಗುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿ ತಿಳಿಯಬಹುದಾಗಿದೆ.

G20 ಶೃಂಗಸಭೆಯಲ್ಲಿ ಭಾಗವಹಿಸುವವರ ವಿವರ

ಅಮೆರಿಕಾ (US) ಜೋ ಬೈಡೆನ್ ಅವರು ಇಂದು ಸೆ. 8ರಂದು ನವದೆಹಲಿಗೆ ಆಗಮಿಸಲಿದ್ದಾರೆ. ಅವರು ಸಮ್ಮೇಳನದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಅವರು ಸಭೆಯಲ್ಲಿ ಉಕ್ರೇನ್‌ನಲ್ಲಿನ ಯುದ್ಧದ ಸಾಮಾಜಿಕ ಪರಿಣಾಮ, ಶುದ್ಧ ಶಕ್ತಿಯ ಪರಿವರ್ತನೆ, ಹವಾಮಾನ ಬದಲಾವಣೆಗಳ ವಿರುದ್ಧದ ಹೋರಾಟ ಹಾಗೂ ಬಡತನದ ನೀಗಿಸಲು ಬಹುಪಕ್ಷೀಯ ಬ್ಯಾಂಕುಗಳ ಸಾಮರ್ಥ್ಯ ಹೆಚ್ಚಳ ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.* ಇಂಗ್ಲೆಂಡ್ (UK) ಅಧ್ಯಕ್ಷ ರಿಷಿ ಸುನಕ್ ಅವರು ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವದೇಶ ಭಾರತಕ್ಕೆ ಆಗಮಿಸುತ್ತಿದ್ದಾರೆ. ಅವರು ನವದೆಹಲಿಯಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.


* ಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಅವರ ಆಗಮನ ಸಹ ಖಚಿತವಾಗಿದೆ. G7 ನ ಪ್ರಸ್ತುತ ಅಧ್ಯಕ್ಷರಾಗಿ ಉಕ್ರೇನ್ ಯುದ್ಧಕ್ಕಾಗಿ ರಷ್ಯಾ ವಿರುದ್ಧ ಅವರು ಟೀಕಿಸುವ ಸಾಧ್ಯತೆಗಳು ಇವೆ.


* ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಆದರೆ G20 ಶೃಂಗಸಭೆಗಾಗಿ ನಾಳೆ ಸೆಪ್ಟೆಂಬರ್ 9ಕ್ಕೆ ಅವರು ಆಗಮಿಸಲಿದ್ದಾರೆ ಎಂದು ಅವರು ಕಚೇರಿ ಮಾಹಿತಿ ನೀಡಿದೆ.


* ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದು ಪಕ್ಕಾ ಆಗಿದೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ.


* ಭಾರತ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ‌ಒಳಗೊಂಡ ಮೂರು ದೇಶಗಳ ಪ್ರವಾಸದ ಭಾಗವಾಗಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದರಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.* ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸಹ ನಾಳೆ ರಾಷ್ಟ್ರ ರಾಜಧಾನಿಗೆ ಬಂದಿಳಿಯಲಿದ್ದಾರೆ. ರಷ್ಯಾ ಹಾಗೂ ಚೀನಾದ ಅನುಪಸ್ಥಿತಿಯ ಹೊರತಾಗಿಯೂ ಶೃಂಗಸಭೆ ಮಹತ್ವ ಪಡೆದುಕೊಂಡಿದೆ.


* ಅಧ್ಯಕ್ಷ ಯೂನ್ ಸುಕ್ ಯೋಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಉತ್ತರ ಕೊರಿಯಾದ ಪರಮಾಣು ಬೆದರಿಕೆ, ಕ್ಷಿಪಣಿ ಪ್ರಚೋದನೆ ಇನ್ನಿತರ ಕುರಿತು ಸದಸ್ಯರ ರಾಷ್ಟ್ರಗಳ ನಾಯಕರನ್ನು ಒತ್ತಾಯಿಸುವ ಸಾಧ್ಯತೆಯಿದೆ.


* ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಹಾಗೂ ಟರ್ಕಿ ದೇಶದ ಅಧ್ಯಕ್ಷರಾದ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಸಹ ಶೃಂಗಸಭೆಗೆ ಹಾಜರಿರಲಿದ್ದಾರೆ.

ಶೃಂಗಸಭೆಗೆ ಗೈರಾಗುವವರ ಮಾಹಿತಿ

* ಶೃಂಗಸಭೆಯಲ್ಲಿ ಗೈರು ಆಗುವವರ ಪೈಕಿ ಗಮನಾರ್ಹ ವ್ಯಕ್ತಿ ಎಂದರೆ ಅದು ಚೀನಾ ಅಧ್ಯಕ್ಷ ಲ್ಲಿ ಕ್ಸಿ ಜಿನ್‌ಪಿಂಗ್. ಚೀನಾ ಅಧ್ಯಕ್ಷರ ಅನುಪಸ್ಥಿತಿಯಲ್ಲಿ, ಸ್ಟೇಟ್ ಕೌನ್ಸಿಲ್‌ನ ಚೀನಾದ ಪ್ರಧಾನ ಮಂತ್ರಿ ಲಿ ಕಿಯಾಂಗ್ ಅವರು ದೇಶದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಚೀನಾ ಗೈರಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.* ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ವರ್ಷ G20 ಶೃಂಗಸಭೆ ಬರಬೇಕಿತ್ತು. ಆದರೆ ರಷ್ಯಾ ಉಕ್ರೇನ್ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ರಷ್ಯಾದ ಅಧ್ಯಕ್ಷರಿಗೆ ಉಕ್ರೇನ್‌ನಲ್ಲಿ ಯುದ್ಧ ಅಪರಾಧಗಳ ಆರೋಪ ಹೊರಿಸಿ ಬಂಧನ ವಾರಂಟ್ ಹೊರಡಿಸಿದೆ. ಹೀಗಾಗಿ ಅವರು ಗೈರಾಗಲಿದ್ದು, ಅವರ ಪರವಾಗಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹಾಜರಿರಲಿದ್ದಾರೆ.


* ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಗುರುವಾರ ನಡೆಸಿದ ಆರೋಗ್ಯ ತಪಾಸಣೆಯಲ್ಲಿ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ಈ ಬಾರಿಗೆ ಜಿ20 ಶೃಂಗಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.


* ಮೆಕ್ಸಿಕೋ ದೇಶದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಈ ಸಮ್ಮೇಳನಕ್ಕೆ ಹಾಜರಾಗುವುದಿಲ್ಲ ಎಂದು ಅವರ ಕಚೇರಿ ಮಾಹಿತಿ ನೀಡಿದೆ.


ಶೃಂಗಸಭೆಯಲ್ಲಿ ಪಾಲ್ಗೊಳ್ಳುವ G20 ಅಲ್ಲದ ಸದಸ್ಯರ ಪಟ್ಟಿಜಿ20 ರಾಷ್ಟ್ರಗಳ ಸದಸ್ಯರ ಜೊತೆಗೆ ಬಾಂಗ್ಲಾದೇಶ, ಈಜಿಪ್ಟ್, ಒಮನ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಸಿಂಗಾಪುರ, UAE ಹಾಗೂ ಸ್ಪೇನ್ ದೇಶಗಳ ನಾಯಕರು ಸಹ ಭಾರತದ ಆಹ್ವಾನದ ಮೇರೆಗೆ ನವದೆಹಲಿಗೆ ಆಗಮಿಸಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.

ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

Posted by Vidyamaana on 2023-07-07 04:08:07 |

Share: | | | | |


ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಲಾಭ ಪಡೆಯಲು ವ್ಯಕ್ತಿಯೋರ್ವ ಬುರ್ಖಾ ಧರಿಸಿದ ಅನುಮಾನ ವ್ಯಕ್ತವಾಗಿದೆ.


ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬುರ್ಖಾ ಹಾಕಿದ ವ್ಯಕ್ತಿ ಪತ್ತೆಯಾಗಿದ್ದು, ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿರುವ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.


ವೀರಭದ್ರಯ್ಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಹೀಗಾಗಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಆದರೆ ಭಿಕ್ಷಾಟನೆ ಮಾಡುವ ಉದ್ದೇಶದಿಂದಾಗಿ ತಾನು ಬುರ್ಖಾ ಧರಿಸಿದ್ದಾಗಿ ವೀರಭದ್ರಯ್ಯ ಹೇಳಿದ್ದಾನೆ.

ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ಭಿಕ್ಷಾಟನೆಗೆ ಬುರ್ಖಾ ಹಾಕಿರುವುದಾಗಿ ವೀರಭದ್ರಯ್ಯ ಹೇಳಿದ್ದಾನೆ

BIGG NEWS:ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

Posted by Vidyamaana on 2024-05-18 15:10:08 |

Share: | | | | |


BIGG NEWS:ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಕಾರವಾರ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಕಂಡು ಬಂದಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು.ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದ್ದು ಇದು ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಇದರ ಬಳಕೆಯನ್ನು ಕೂಡಲೇ ನಿಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಮನವಿ ಮಾಡಿದ್ದಾರೆ.

Recent News


Leave a Comment: