ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

Posted by Vidyamaana on 2023-04-27 07:03:32 |

Share: | | | | |


ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಕಾಪು : ರಂಗ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

Posted by Vidyamaana on 2023-12-13 09:16:32 |

Share: | | | | |


ಕಾಪು : ರಂಗ ಕಲಾವಿದ  ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಕಾಪು: ಸಮಾಜ ಸೇವಕ, ಹಿರಿಯ ರಂಗ ಕಲಾವಿದ, ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ (68) ಅವರು ಪತ್ನಿ ವಸುಂಧರಾ ಶೆಟ್ಟಿ (58) ಸಮೇತರಾಗಿ ಮಂಗಳವಾರ ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.



ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ‌ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.


ಸಾವಿನ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿವೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಮುಂದುವರಿಸಿದ್ದಾರೆ.


 ಎಲ್.ಐ.ಸಿ. ಏಜಂಟರಾಗಿ, ಕಲಾ ಸಂಘಟಕ, ಕಲಾಪೋಷಕರಾಗಿದ್ದ ಅವರು ವಿವಿಧ ಕಾರ್ಯಕ್ರಮಗಳ ಆಯೋಜಕರಾಗಿ ಕಲೆ, ಸಂಸ್ಕೃತಿ, ಸಂಸ್ಕಾರ, ಧಾರ್ಮಿಕ, ಜನಪದ, ಶೈಕ್ಷಣಿಕ ಕ್ಷೇತ್ರಗಳ ಪೋಷಕರಾಗಿ ಸ್ಚಾರ್ಥವಿಲ್ಲದೇ, ಕಳಂಕ ರಹಿತರಾಗಿ ಸಮಾಜದಲ್ಲಿ ಗುರುತಿಸಲ್ಪಟ್ಟಿದ್ದರು. ಅವರ ಸೇವೆಗಾಗಿ ಎಲ್ಲರೂ ಅವರನ್ನು ಆತ್ಮೀಯವಾಗಿ ಲೀಲಣ್ಣ ಎಂದೇ ಕರೆಯುತ್ತಿದ್ದರು.

ಉಪವಾಸದ ನಡುವೆಯೂ ನೀರಿಗೆ ಬಿದ್ದವನನ್ನು ರಕ್ಷಿಸಲು ನದಿಗೆ ಜಿಗಿದ ನೇತ್ರಾವತಿ ವೀರರು

Posted by Vidyamaana on 2024-04-01 21:29:03 |

Share: | | | | |


ಉಪವಾಸದ ನಡುವೆಯೂ ನೀರಿಗೆ ಬಿದ್ದವನನ್ನು ರಕ್ಷಿಸಲು ನದಿಗೆ ಜಿಗಿದ ನೇತ್ರಾವತಿ ವೀರರು

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ವೇಳೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ.

  ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ ಪುತ್ರ ಆನುಶ್ ಮೃತಪಟ್ಟ ಯುವಕ.

ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 07:37:52 |

Share: | | | | |


ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?ಸೂಲಿಬೆಲೆ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದ ಮಧು ಬಂಗಾರಪ್ಪ... ಕಾರಣವೇನು ಗೊತ್ತಾ

Posted by Vidyamaana on 2024-02-07 12:40:04 |

Share: | | | | |


ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?ಸೂಲಿಬೆಲೆ ವಿರುದ್ಧ  ಏಕವಚನದಲ್ಲೇ ಹರಿಹಾಯ್ದಿದ್ದ ಮಧು ಬಂಗಾರಪ್ಪ... ಕಾರಣವೇನು ಗೊತ್ತಾ

ಬೆಂಗಳೂರು, ಫೆ 07: ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..? ಇದೇ ತಾನೆ ವಿಷ ಬೀಜ ಬಿತ್ತೋ ಕೆಲಸ..? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.


ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡುವಾಗ ಶೀಕ್ಷಣ ಸಚಿವ ಮಧು ಬಂಗಾರಪ್ಪ, ಸೂಲಿಬೆಲೆ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಮಾಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲೂನ ಮಾಜ್‌ಗಾಗಿ ಪರೀಕ್ಷೆಯ ಸಮಯವೇ ಬದಲು ಮಾಡಿದೆ ಎಂದು ಸುಳ್ಳು ಸುದ್ದಿ ಹಬ್ಬಿದ್ದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದೂರುಗಳು ಬಂದಿವೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ಮಾಧ್ಯಮಗೋಷ್ಠಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, "ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?. ಪುಸ್ತಕದಲ್ಲಿ ಮಕ್ಕಳನ್ನು ದಿಕ್ಕು ತಪ್ಪಿಸುವ ಕೆಲಸ ಬರೆದಿದ್ದರು, ನಾನು ಬಂದಾಗ ಅದಕ್ಕೆ ಹೇಳಿದ್ದು ಅದನ್ನು ಕಿತ್ತು ಬಿಸಾಡುತ್ತೇನೆ ಅಂತ. ಅದು ಕೂಡ ದೊಡ್ಡ ಚರ್ಚೆ ಮಾಡಿದ್ದರು. ಇಂಥದ್ದನ್ನು ಕಿತ್ತು ಬಿಸಾಕದೆ ಇನ್ನೇನು ಮಾಡೋದು? ಹೊಲಸನ್ನು ಮನೆಯಲ್ಲಿ ಇಟ್ಟುಕೊಳ್ತೀರಾ?"ಎಂದು ಸಚಿವರು ಪ್ರಶ್ನಿಸಿದ್ದಾರೆ.


ಅವ ಮತ್ತೆ ಮೊನ್ನೆ ಟ್ವೀಟ್ ಮಾಡಿದ್ದಾನೆ. ಮಾನ ಮರ್ಯಾದೆ ಇಲ್ಲ... ಹತ್ತನೆ ಕ್ಲಾಸ್ ಪರೀಕ್ಷೆ ದಿನ ಒಂಬತ್ತು ಗಂಟೆಗೆ ಮಾಡ್ತಿರಾ ಮಾರ್ಚ್ 1 ಕ್ಕೆ ಶುಕ್ರವಾರ ಯಾಕೆ

ಎರಡು ಗಂಟೆಗೆ... ವೈ ...? ನಮಾಜ್‌ಗಾ? ಅಂತ ಟ್ವಿಟ್ ಮಾಡಿದ್ದಾರೆ. ವಿಷ ಬೀಜ ಬಿತ್ತೋದು ಇಂತಹವರೆ ಅಲ್ವಾ? ದೂರುಗಳು ಬಂದಿವೆ. ಕಂಪ್ಲೈಂಟ್ಸ್ ಹೋಗುತ್ತಿವೆ ಅವರ ಮೇಲೆ" ಎಂದಿದ್ದಾರೆ


ಮಾರ್ಚ್ 1 ರಿಂದ ಸೆಕೆಂಡ್ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಅದೇ ಶಾಲೆಯಲ್ಲಿ ಬೆಳಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಮಧ್ಯಾಹ್ನಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿದೆ. ಪರೀಕ್ಷೆಯನ್ನು ಪುಶ್ ಮಾಡಿರೋದಷ್ಟೆ. ಇವರಿಗೆ ಒಂದು ಕಾಮನ್ ಸೆನ್ಸ್ ಇಲ್ವಲ್ಲ? ಇವರು ಒಂದು ಪಠ್ಯ ಪುಸ್ತಕ ಪರೀಷ್ಕರಣಗೆ ಅಧ್ಯಕ್ಷನೋ ಸುಡುಗಾಡೋ ಆಗಿದ್ದರು. ಮಾನ ಮರ್ಯಾದೆ ಇದೆಯಾ ಇವರಿಗೆ.. ಒಂದು ಕಡೆ ಕೆಲಸ ಮಾಡಿ ಎಲೆಕ್ಷನ್ ಬಂದ ತಕ್ಷಣ ತಲೆ ಎತ್ತುತ್ತವೆ. ಇದೆಲ್ಲಾ ಬಿಟ್ಟು ಬಿಡಿ ಬಿಜೆಪಿ. ಇವು ಯಾವುದು ನಡೆಯುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ.


ಇಡೀ ದೇಶದ ಬಗ್ಗೆ ನಾನು ಮಾತಾಡಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಭಾವನಾತ್ಮಕ ವಿಷಯ ಇಟ್ಟುಕೊಂಡು ಬಂದರೆ ನಡೆಯುವುದಿಲ್ಲ. ನೀವು ವಿಷಯಗಳನ್ನು ಭಾವನಾತ್ಮ ಮಾಡಿದಷ್ಟು ಈ ರಾಜ್ಯದ ಜನ ಮತ್ತಷ್ಟು ಶಿಕ್ಷೆ ಕೊಡ್ತಾರೆ. ಗ್ಯಾರಂಟಿ, ಓಟು, ನಂಬಿಕೆ, ವಿಶ್ವಾಸ ಉಳಿಸಿಕೊಂಡಿರೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ" ಎಂದು ವಿಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.


ಎಸ್‌ಎಸ್‌ಎಲ್‌ಸಿಯ ಎಲ್ಲ ಪರೀಕ್ಷೆಗಳು ಬೆಳಗೆಗ ಒಂಬತ್ತು ಗಂಟೆಗೆ ನಡೆಸಲಾಗುತ್ತಿದೆ. ಆದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ. ಅಂದೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಕೂಡ ಆರಂಭವಾಗಲಿವೆ. ಹಾಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಪುಶ್ ಮಾಡಲಾಗಿದೆ.


ಆದರೆ, ವಿಷಯ ತಿಳಿಯದೇ ನಮಾಜಿಗೋಸ್ಕರ ಪರೀಕ್ಷಾ ಸಮಯವನ್ನೇ ಬದಲಾಯಿಸಲಾಗಿದೆಯೇ ಅಂತ ಚಕ್ರವರ್ತಿ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಈ ಟ್ವೀಟನ್ನು ಉಲ್ಲೇಖಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಅನ್ನು ಟೀಕಿಸಿದೆ.

New Categories
Recent News
Popular News


Leave a Comment: