ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

Posted by Vidyamaana on 2023-07-26 01:56:16 |

Share: | | | | |


ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಕುಸಿದು ಬಿದ್ದ ಚೈತ್ರಾ ಕುಂದಾಪುರ – ಎಮರ್ಜೆನ್ಸಿ ವಾರ್ಡ್‌ಗೆ ಶಿಫ್ಟ್‌

Posted by Vidyamaana on 2023-09-15 09:58:06 |

Share: | | | | |


ಕುಸಿದು ಬಿದ್ದ ಚೈತ್ರಾ ಕುಂದಾಪುರ – ಎಮರ್ಜೆನ್ಸಿ ವಾರ್ಡ್‌ಗೆ ಶಿಫ್ಟ್‌

ಬೆಂಗಳೂರು : ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.


ವಿಚಾರಣೆ ವೇಳೆ ಮೂರ್ಛ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.

ಉತ್ತರ ಪ್ರದೇಶ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌, ಸಹೋದರನ ಗುಂಡಿಕ್ಕಿ ಹತ್ಯೆ

Posted by Vidyamaana on 2023-04-16 02:53:05 |

Share: | | | | |


ಉತ್ತರ ಪ್ರದೇಶ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌, ಸಹೋದರನ ಗುಂಡಿಕ್ಕಿ ಹತ್ಯೆ

ಪ್ರಯಾಗ್‌ರಾಜ್: ಉತ್ತರಪ್ರದೇಶದ ಮಾಜಿ ಸಂಸದ, ಗ್ಯಾಂಗ್ ಸ್ಟರ್ ಅತೀಕ್‌ ಅಹ್ಮದ್‌ ಹಾಗೂ ಅವರ ಸಹೋದರ ಅಶ್ರಫ್‌ ಅಹ್ಮದ್‌ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. 

ಉತ್ತರ ಪ್ರದೇಶದ ಪ್ರಯಾಗರಾಜ್ ನಗರದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಅತೀಕ್‌ ಸಹೋದರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.  

ಫುಲ್ಪುರ್ ಕ್ಷೇತ್ರದ ಮಾಜಿ ಸಂಸದ ಅತೀಕ್ ಅಹ್ಮದ್ ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಿಗಿ ಭದ್ರತೆಯ ಜೈಲಿನಲ್ಲಿ ಇರಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಪೊಲೀಸ್ ರಕ್ಷಣೆಯಲ್ಲಿ ಪ್ರಯಾಗ್‌ರಾಜ್‌ಗೆ ಕರೆತರುವಾಗ ಅವರನ್ನು ಹತ್ಯೆಗೈಯಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಘಟನಾ ಸ್ಥಳದಿಂದ ಇಬ್ಬರು ಶೂಟರ್‌ ಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ.

ಗುರುವಾರವಷ್ಟೇ, ಪೊಲೀಸರು ಎನ್‌ಕೌಂಟರ್‌ನಲ್ಲಿ ಅತೀಕ್‌ ಪುತ್ರನನ್ನು ಹತ್ಯೆಗೈದಿದ್ದರು.

ಅತಿಕ್‌ ಪುತ್ರ ಹಾಗೂ ಆತನ ಸಹಚರರನ್ನು ಪೊಲೀಸ್‌ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ ಮಾಡಲಾಗಿದೆ ಎಂದು ಯುಪಿ ಪೊಲೀಸರು ತಿಳಿಸಿದ್ದರು. ಶನಿವಾರ ಪುತ್ರನ ಅಂತಿಮ ಸಂಸ್ಕಾರ ನಡೆದಿದ್ದು, ಅಂದೇ ಅತೀಕ್‌ ಅವರ ಹತ್ಯೆ ನಡೆದಿದೆ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Posted by Vidyamaana on 2024-05-23 17:53:31 |

Share: | | | | |


ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು,ಶಾಸಕ ಹರೀಶ್ ಪೂಂಜ ಪೊಲೀಸರು, ತಹಸೀಲ್ದಾರನ್ನು ನಿಂದಿಸಿ ಬೆಳ್ತಂಗಡಿ ನಾಗರಿಕರಿಗೆ ಅವಮಾನ ಮಾಡಿದ್ದಾರೆ. ರೌಡಿಯಂತೆ ವರ್ತಿಸಿ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ. ರೌಡಿ ರೀತಿ ವರ್ತಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ. ತಾಕತ್ತಿದ್ದರೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಜನರಿಂದ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಹರೀಶ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ಕ್ಷೇತ್ರವನ್ನು ರತ್ನವರ್ಮ ಹೆಗ್ಗಡೆ, ವೈಕುಂಠ ಬಾಳಿಗಾ, ಸುಬ್ಬಯ್ಯ ಹೆಗಡೆ, ವಸಂತ ಬಂಗೇರರಂತವರು ಪ್ರತಿನಿಧಿಸಿದ್ದರು. ವಸಂತ ಬಂಗೇರ ಐದು ಬಾರಿ ಶಾಸಕರಾಗಿ ಗೌರವ ತಂದುಕೊಟ್ಟಿದ್ದಾರೆ. ಹರೀಶ್ ಪೂಂಜ ಈಗ ವಸಂತ ಬಂಗೇರ ಮಾಡಲು ಹೋಗಿ ಎಲ್ಲೆ ಮೀರಿ ವರ್ತಿಸಿದ್ದಾರೆ. ಬಂಗೇರ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದವರು, ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಟ್ಟು ಕೆಲಸ ಮಾಡುತ್ತಿದ್ದರು. ಯಾವತ್ತೂ ಭ್ರಷ್ಟಾಚಾರಿ, ರೌಡಿಗಳ ಪರ ಕೆಲಸ ಮಾಡಿದವರಲ್ಲ.

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

Posted by Vidyamaana on 2023-12-04 16:58:53 |

Share: | | | | |


ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

ಚಾಮರಾಜನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.


ಇಂದು ಬೆಳಗ್ಗೆ ಅವರ ಕಾರು ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಡಿಸೆಂಬರ್ 1ರ ರಾತ್ರಿ ಮಹದೇವಯ್ಯ ಅವರು ಚನ್ನಪಟ್ಟಣ ತೋಟದ ಮನೆಯಲ್ಲಿದ್ದರು. ಮಧ್ಯರಾತ್ರಿ 12 ಗಂಟೆಗೆ ತೋಟದ ಮನೆಗೆ ನುಗ್ಗಿದ ಮೂವರು ಅಪರಿಚಿತರು, ಬಳಿಕ ಮನೆಯಲ್ಲಿ ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು.

Recent News


Leave a Comment: