ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 31

Posted by Vidyamaana on 2023-07-31 01:59:45 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 31

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 31 ರಂದು


ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯರವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ  ಕಚೇರಿಯಲ್ಲಿ ಸಭೆ


 ಮಧ್ಯಾಹ್ನ 1 ಗಂಟೆಗೆ ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ  

ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

Posted by Vidyamaana on 2023-05-03 10:05:42 |

Share: | | | | |


ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

ಪುತ್ತೂರು: ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ  ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೆತ್ರವನ್ನು ಅಭಿವೃದ್ದಿ ಮಡುವುದಕ್ಕೋಸ್ಕರವಾಗಿದ್ದು ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ವಿಟ್ಲದ ಚಂದಳಿಕೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಕಳೆದ ಚುನಾವಣೆಯ ಸಮಯದಲ್ಲಿ ಬಿಜೆಪಿ ನೀಡಿದ ಆಶ್ವಾಸನೆ ಈಡೇರಿಸಿಲ್ಲ. ಪುತ್ತೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು ಮಾಡಿಲ್ಲ, ಪುತ್ತೂರಿನಲ್ಲಿ ರಿಂಗ್ ರೋಡ್ ಮಾಡುವುದಾಗಿ ಹೇಳಿದ್ದರು, ಬ್ರಹ್ಮನಗರದಲ್ಲಿ ಫ್ಲ್ಯಾಟ್ ನಿರ್ಮಿಸಿವುದಾಗಿ ಹೇಳಿದ್ದರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದಾಗಿ ಹೇಳಿದ್ದರು, ವಿಟ್ಲದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು, ಉಪ್ಪಿನಂಗಡಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಾಗಿ ಮಾತುಕೊಟ್ಟಿದ್ದರು, ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು ಇದರಲ್ಲಿ ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದ ಅಶೋಕ್ ರೈ ರಸ್ತೆಗೆ ಅಷ್ಟು ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಫ್ಲೆಕ್ಸ್ ಹಾಕಿಸಿ ಕಳಪೆ ಕಾಮಗಾರಿ ನಡೆಸಿ ಅದರ ಮೂಲಕ ೬೦ % ಕಮಿಷನ್ ಹೊಡೆದದ್ದನ್ನು ಬಿಟ್ಟರೆ ಏನೂ ಮಾಡಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ವರ್ಷಕ್ಕೆ ನೂರಾರು ಮನೆಗಳನ್ನು ಬಡವರಿಗೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ನೀಡಿಲ್ಲ. ಶಾಲಾ ಮಕ್ಕಳ ಶೂ ಭಾಗ್ಯ, ಕ್ಷೀರ ಭಾಗ್ಯ, ಮೊಟ್ಟೆ ಭಾಗ್ಯ , ಇಂದಿರಾ ಕ್ಯಾಂಟೀನ್ ಎಲ್ಲವನ್ನೂ ಬಂದ್ ಮಡಿದ್ದೇ ಬಿಜೆಪಿ ಸರಕಾರದ ಸಾಧನೆಯಾಗಿದೆ. ಕಾಂಗ್ರೆಸ್ ಸರಕಾರ ಬಡವರಿಗೆ ನೆರವು ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ಅದೆಲ್ಲವನ್ನೂ ಬಿಜೆಪಿ ಕೈ ಬಿಟ್ಟು ಕೇವಲ ಭಾಷಣದಲ್ಲಿ ಮಾತ್ರ ಬಡವರ ಬಾಯಿಗೆ ಸಿಹಿ ಹಂಚುವ ಕೆಲಸವನ್ನು ಮಾಡಿದೆ ಎಂದು ಅಶೋಕ್ ರೈ ಹೇಳಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಬಂಟ್ವಾಳ: ಅಕ್ರಮ ಮದ್ಯ ಮಾರಾಟ:ಜಾರಂದಗುಡ್ಡೆ ನಿವಾಸಿ ಅಶೋಕ ಬಂಧನ

Posted by Vidyamaana on 2023-03-03 06:02:41 |

Share: | | | | |


ಬಂಟ್ವಾಳ: ಅಕ್ರಮ ಮದ್ಯ ಮಾರಾಟ:ಜಾರಂದಗುಡ್ಡೆ ನಿವಾಸಿ ಅಶೋಕ ಬಂಧನ

ಬಂಟ್ವಾಳ: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ರವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ.ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

Posted by Vidyamaana on 2023-06-15 15:59:55 |

Share: | | | | |


ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ  “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಜೊತೆಗೆ ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳ ಗಿಡಗಳು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿವಿಧ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ಹಲಸುಗಳನ್ನು ಸುಲಭವಾಗಿ ಕಟ್ಟ ಮಾಡುವ ಮೆಷಿನ್‍ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎಂದು ತಿಳಿಸಿದರುಮೇಳದಲ್ಲಿ ಹಲಸಿನ ಹಣ್ಣಿನಿಂದ ತಯಾರಿಸಿದ ಹಲಸಿನ ಉಂಡ್ಲಕಾಳು, ಚಿಪ್ಸ್ , ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ಸೇಮಿಗೆ, ಬನ್ಸ್, ಪವಾಲ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಐಸ್ ಕ್ರೀಂ, ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಹೀಗೆ ಹತ್ತು ಹಲಸು ಬಗೆಯ ಖಾದ್ಯಗಳನ್ನು ಸವಿಯುವ ಅವಕಾಶವನ್ನು ಹಲಸು ಪ್ರಿಯರಿಗೆ ಒಂದೇ ಸೂರಿನಡಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು.ಜೂ.17 ಶನಿವಾರ ಬೆಳಿಗ್ಗೆ 8.30 ಕ್ಕೆ ಮೇಳದಲ್ಲಿ ತೆರೆಯುವ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ಉದ್ಘಾಟಿಸಲಿದ್ದು, 10 ಗಂಟೆಗೆ ಬೆಂಗಳೂರು ಐಐಎಚ್ ಆರ್ ನಿರ್ದೇಶಕ ಡಾ.ಸಂಜಯ ಕುಮಾರ್ ಸಿಂಗ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರು ಸುದಾನ ಶಾಲಾ ಸಂಚಾಲಕ ರೆ.ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಐಐಎಚ್ ಆರ್ ಪ್ರಾಜೆಕ್ಟ್ ಕೋಆರ್ಡಿನೇಟರ್ ಡಾ.ಪಿ.ಸಿ.ಪಾಟೇಲ್, ಪುತ್ತೂರು ನ್ಯಾಯವಾದಿ ಫಝ್ಲುಲ್ ರಹಿಮಾನ್, ವಲಯ ಜೆಸಿಐ ಕಾರ್ಯಕ್ರಮ ನಿರ್ದೇಶಕಿ ಜೇಸಿ ಅಕ್ಷತಾ ಗಿರೀಶ್, ರೋಟರಿ ಕ್ಲಬ್ ಪುತ್ತೂರು ಯುವ ನಿಯೋಜಿತ ಅಧ್ಯಕ್ಷ ಪಶುಪತಿ ಶರ್ಮ ಪಾಲ್ಗೊಳ್ಳಲಿದ್ದು, ಪುತ್ತೂರು ಜೆಸಿಐ ಅಧ್ಯಕ್ಷ ಸುಹಾಸ್ ಮರಿಕೆ ಉಪಸ್ಥಿತರಿರುವರು ಎಂದು ತಿಳಿಸಿದರು.

ಬಳಿಕ 11 ಗಂಟೆಗೆ ನಡೆಯುವ ಹಲಸು-ಸಂವಹನ ಸಮಾವೇಶದಲ್ಲಿ ಬೆಂಗಳೂರು ಐಐಎಚ್ ಆರ್ ವಿಜ್ಞಾನಿ ಡಾ.ಕರುಣಾಕರ್, ಬೆಂಗಳೂರು ಮಾ ಇಂಟಿಗ್ರೇಟರ್ಸ್ ನ ಅಶೋಕ್ ಕುಮಾರ್ ಕರಿಕ್ಕಳ, ಭಟ್ & ಭಟ್ ಯೂಟ್ಯೂಬ್ ಚಾನೆಲ್‍ನ ಸುದರ್ಶನ ಭಟ್ ಬೆದ್ರಾಡಿ, ಬೆಳ್ಳಾರೆ ಕುರಿಯಾಜೆ ಫಾರ್ಮ್ಸ್ ನ ಕುರಿಯಾಜೆ ತಿರುಮಲೇಶ್ವರ ಭಟ್, ಆಲಂಗಾರು ರಾಘವೇಂದ್ರ ನರ್ಸರಿಯ ಕೃಷ್ಣ ಕೆದಿಲಾಯ ಪಾಲ್ಗೊಳ್ಳಲಿದ್ದಾರೆ. ಸಮನ್ವಯಕಾರರಾಗಿ ವೇಣುಗೋಪಾಲ್ ಎಸ್‍.ಜಿ. ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.


ಜೂ.18 ಭಾನುವಾರ ಸಂಜೆ 4 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳಲಿದ್ದು, ಸಾವಯವ ಕೃಷಿಕ ಎ.ಪಿ.ಸದಾಶಿವ ಮರಿಕೆ ಸಮಾರೋಪ ಭಾಷಣ ಮಾಡುವರು. ಅನಂತಪ್ರಸಾದ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಜೇಸಿಐ ಅಧ್ಯಕ್ಷ ಸುಹಾಸ್ ಮರಿಕೆ ಮಾತನಾಡಿ, ಕಾರ್ಯಕ್ರಮದಲ್ಲಿ ಹಲಸಿನ ಹಣ್ಣಿನ ಮೌಲ್ಯವರ್ಧನೆ ಕುರಿತು ಬಹಳಷ್ಟು ಚರ್ಚೆಗಳು ನಡೆಯಲಿವೆ. ಮೇಳದಲ್ಲಿ ಮುಖ್ಯವಾಗಿ ಕಾರ್ಕಳದ ಹಲಸಿನ ವಿವಿಧ ಖಾದ್ಯ ಸಹಿತ ಮಂಚೂರಿ ತಯಾರಿಕೆ ತಂಡ, ರಾಮಚಂದ್ರಾಪುರ ಮಠದಿಂದ ಹಲಸಿನ ಖಾದ್ಯ ತಯಾರಿಸುವ ಮಹಿಳೆಯರ ತಂಡವೊಂದು ಆಗಮಿಸಲಿದೆ. ಮೇಳದಲ್ಲಿ ಹಲಸಿನ ಕುರಿತು ಚಿತ್ರಕಲೆ, ಪ್ರಬಂಧ ಮುಂತಾದ ಹತ್ತು ಹಲವು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಥಳದಲ್ಲೇ ಬಹುಮಾನ ನೀಡಲಾಗುವುದು. ಒಟ್ಟಾರೆಯಾಗಿ ಹಲಸು ಮನೆ ಮನೆಯಲ್ಲಿ ಬಳಕೆ ಆಗಬೇಕು ಎಂಬ ನಿಟ್ಟಿನಲ್ಲಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಹಕಾರ ನೀಡುವ ಸಂಸ್ಥೆಗಳು :

ಕಾರ್ಯಕ್ರಮಕ್ಕೆ ಮಂಗಳೂರು ಭಾರತ ಅಟೋಕಾರ್ಸ್ ಪ್ರೈ.ಲಿ., ವಿಟ್ಲ ಪಿಂಗಾರ ರೈತೋತ್ಪಾದನಾ ಸಂಸ್ಥೆ,  ಪುತ್ತೂರು ಎಸ್‍ ಆರ್‍ ಕೆ. ಲ್ಯಾಡರ್ಸ್, ಸಾಯ ಎಂಟರ್ ಪ್ರೈಸಸ್‍, ಉಪ್ಪಿನಂಗಡಿ ಅಕ್ಷ ಕಾಟೇಜ್ ಇಂಡಸ್ಟ್ರೀಸ್, ಪುತ್ತೂರು ನವನೀತ ಫಾರ್ಮ್ ನರ್ಸರಿ, ಏಳ್ಮುಡಿ ಮರಿಕೆ ಸಾವಯವ ಮಳಿಗೆ ಹಾಗೂ ಪುತ್ತೂರು ಯುವ ರೋಟರಿ ಕ್ಲಬ್ ಸಹಕಾರ ನೀಡಲಿದೆ.

ಪತ್ರಿಕಾಗೋಷ್ಠಿಯಲ್ಲಿ ನವನೀತ್ ಫಾರ್ಮ್ ನರ್ಸರಿಯ ವೇಣುಗೋಪಾಲ್ ಉಪಸ್ಥಿತರಿದ್ದರು.

ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

Posted by Vidyamaana on 2024-06-11 17:30:29 |

Share: | | | | |


ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

ಹೊಸದಿಲ್ಲಿ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಒಂಬತ್ತು ಮಂದಿ ಇತರರು ಇಂದು ವಿಮಾನ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆಂದು ದೇಶದ ಅಧ್ಯಕ್ಷರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.ಸೌಲೋಸ್‌ ಮತ್ತಿತರರು ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆಯಾಗಿತ್ತೆಂದು ಈ ಹಿಂದೆ ವರದಿಯಾಗಿತ್ತು.

ಪುತ್ತೂರು; ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ - ತಪ್ಪಿದ ಬಾರಿ ದುರಂತ

Posted by Vidyamaana on 2023-12-23 04:37:41 |

Share: | | | | |


ಪುತ್ತೂರು; ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ - ತಪ್ಪಿದ ಬಾರಿ ದುರಂತ

ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.


ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ನಂದಿಸುವ ಕೆಲಸ ವಾಗಿದೆ.


ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, " ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಶಾಸಕ ಅಶೋಕ್‌ ರೈಯವರು ಧಾವಿಸಿದ್ದಾರೆ. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು, ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೋಡ್ಡ ಅನಾಹುತ ತಪ್ಪಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಅಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೋಠಡಿಯಿಂದ ತೆರವುವಗೊಳಿಸಿದ್ದರು .


ವಿಷಯ ತಿಳಿದ ತಕ್ಷಣವೇ ಪುತ್ತೂರು ವಿಶ್ವಹಿಂದೂ ಪರಿಷದ್‌ ಕಾರ್ಯಲಾಯದಲ್ಲಿ ಇದ್ದ ಬಜರಂಗದಳದ ದತ್ತ ಮಾಲಾದರಿಗಳು ಸ್ಥಳಕ್ಕೆ ಅಗಮಿಸಿ ಇಡಿ ಅಸ್ಪತ್ರೆಯಲ್ಲಿ ಬೂದಿಗಳಿಂದ ಕೂಡಿದ ಕೊಠಡಿಗಳನ್ನು ನೀರಿನಿಂದ ಸ್ವಚ್ಚಗೊಳಿಸಿದ್ದಾರೆ.ಮಂಗಳೂರಿನಲ್ಲಿದ್ದ ಪುತ್ತೂರಿನ ಶಾಸಕರಿಗೆ ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ಪುತ್ತೂರು ಸರಕಾರಿ ಅಸ್ಪತ್ರೆಗೆ ಅಶೋಕ್ ರೈ ದೌಡಯಿಸಿದ್ದಾರೆ

Recent News


Leave a Comment: